< ಕೀರ್ತನೆಗಳು 22 >

1 ಸಂಗೀತ ನಿರ್ದೇಶಕನಿಗಾಗಿರುವ ಕೀರ್ತನೆ. “ಉದಯದ ಜಿಂಕೆ” ಎಂಬ ರಾಗದ ಮೇಲೆ ಹಾಡತಕ್ಕದ್ದು; ದಾವೀದನ ಕೀರ್ತನೆ. ನನ್ನ ದೇವರೇ, ನನ್ನ ದೇವರೇ, ಏಕೆ ನನ್ನನ್ನು ಕೈಬಿಟ್ಟಿದ್ದೀರಿ? ನನ್ನನ್ನು ರಕ್ಷಿಸದೆ ಏಕೆ ದೂರವಾಗಿದ್ದೀರಿ? ನನ್ನ ನರಳುವಿಕೆಯ ಮೊರೆಗೆ ಉತ್ತರ ಕೊಡದೆ ಏಕೆ ದೂರವಾಗಿದ್ದೀರಿ?
לַ֭מְנַצֵּחַ עַל־אַיֶּ֥לֶת הַשַּׁ֗חַר מִזְמ֥וֹר לְדָוִֽד׃ אֵלִ֣י אֵ֭לִי לָמָ֣ה עֲזַבְתָּ֑נִי רָח֥וֹק מִֽ֝ישׁוּעָתִ֗י דִּבְרֵ֥י שַׁאֲגָתִֽי׃
2 ಓ ನನ್ನ ದೇವರೇ, ಹಗಲಿನಲ್ಲಿ ಕರೆಯುತ್ತೇನೆ, ಆದರೆ ನೀವು ಉತ್ತರ ಕೊಡುವುದಿಲ್ಲ; ರಾತ್ರಿಯಲ್ಲಿಯೂ ನನಗೆ ವಿಶ್ರಾಂತಿ ಇರುವುದಿಲ್ಲ.
אֱֽלֹהַ֗י אֶקְרָ֣א י֭וֹמָם וְלֹ֣א תַעֲנֶ֑ה וְ֝לַ֗יְלָה וְֽלֹא־דֽוּמִיָּ֥ה לִֽי׃
3 ನೀವು ಪರಿಶುದ್ಧರು; ನೀವು ಇಸ್ರಾಯೇಲರ ಸ್ತೋತ್ರ ಸಿಂಹಾಸನದಲ್ಲಿರುವಿರಿ.
וְאַתָּ֥ה קָד֑וֹשׁ י֝וֹשֵׁ֗ב תְּהִלּ֥וֹת יִשְׂרָאֵֽל׃
4 ನಿಮ್ಮಲ್ಲಿಯೇ ನಮ್ಮ ಪಿತೃಗಳು ಭರವಸೆಯಿಟ್ಟರು; ಅವರು ಭರವಸೆಯಿಟ್ಟಿದ್ದರಿಂದ ನೀವು ಅವರನ್ನು ವಿಮೋಚಿಸಿದಿರಿ.
בְּ֭ךָ בָּטְח֣וּ אֲבֹתֵ֑ינוּ בָּ֝טְח֗וּ וַֽתְּפַלְּטֵֽמוֹ׃
5 ಅವರು ನಿಮಗೆ ಮೊರೆಯಿಟ್ಟದ್ದರಿಂದ ನೀವು ಅವರನ್ನು ರಕ್ಷಿಸಿದಿರಿ; ನಿಮ್ಮಲ್ಲಿ ಭರವಸೆಯಿಟ್ಟಿದ್ದರಿಂದ ಅವರು ಅಪಮಾನಕ್ಕೆ ಗುರಿಯಾಗಲಿಲ್ಲ.
אֵלֶ֣יךָ זָעֲק֣וּ וְנִמְלָ֑טוּ בְּךָ֖ בָטְח֣וּ וְלֹא־בֽוֹשׁוּ׃
6 ಆದರೆ ನಾನು ಹುಳದಂಥವನೇ ಹೊರತು ಮನುಷ್ಯನಲ್ಲ; ನಾನು ಮನುಷ್ಯರಿಂದ ನಿಂದೆ ಹಾಗು ತಿರಸ್ಕಾರಕ್ಕೆ ಗುರಿಯಾಗಿದ್ದೇನೆ.
וְאָנֹכִ֣י תוֹלַ֣עַת וְלֹא־אִ֑ישׁ חֶרְפַּ֥ת אָ֝דָ֗ם וּבְז֥וּי עָֽם׃
7 ನನ್ನನ್ನು ನೋಡುವವರೆಲ್ಲರೂ ನನ್ನನ್ನು ಗೇಲಿಮಾಡುತ್ತಾರೆ. ಅವರು ತಲೆ ಆಡಿಸುತ್ತಾ ಹೀಗೆ ಅವಮಾನಪಡಿಸುತ್ತಾರೆ:
כָּל־רֹ֭אַי יַלְעִ֣גוּ לִ֑י יַפְטִ֥ירוּ בְ֝שָׂפָ֗ה יָנִ֥יעוּ רֹֽאשׁ׃
8 “ಆತನು ಯೆಹೋವ ದೇವರ ಮೇಲೆ ಭರವಸೆಯಿಟ್ಟಿದ್ದಾನಲ್ಲಾ, ಯೆಹೋವ ದೇವರೇ ಆತನನ್ನು ಕಾಪಾಡಲಿ. ಯೆಹೋವ ದೇವರು ಆತನಲ್ಲಿ ಹರ್ಷಿಸುವುದಾದರೆ, ಅವರೇ ಆತನನ್ನು ಬಿಡಿಸಲಿ.”
גֹּ֣ל אֶל־יְהוָ֣ה יְפַלְּטֵ֑הוּ יַ֝צִּילֵ֗הוּ כִּ֘י חָ֥פֵֽץ בּֽוֹ׃
9 ತಾಯಿಯ ಗರ್ಭದೊಳಗಿಂದ ನನ್ನನ್ನು ಹೊರತಂದವರು ನೀವು; ನನ್ನ ತಾಯಿಯ ಎದೆಯಲ್ಲಿ ಇದ್ದಾಗಲೇ ನಾನು ನಿಮ್ಮಲ್ಲಿ ಭರವಸೆಯಿಡುವಂತೆ ಮಾಡಿದಿರಿ.
כִּֽי־אַתָּ֣ה גֹחִ֣י מִבָּ֑טֶן מַ֝בְטִיחִ֗י עַל־שְׁדֵ֥י אִמִּֽי׃
10 ಹುಟ್ಟಿದಂದಿನಿಂದಲೇ ನೀವೇ ನನಗೆ ಆಧಾರ ನನ್ನ ತಾಯಿಯ ಗರ್ಭದಿಂದಲೇ ನೀವು ನನ್ನ ದೇವರು.
עָ֭לֶיךָ הָשְׁלַ֣כְתִּי מֵרָ֑חֶם מִבֶּ֥טֶן אִ֝מִּ֗י אֵ֣לִי אָֽתָּה׃
11 ನನ್ನಿಂದ ದೂರವಾಗಿರಬೇಡಿರಿ, ಏಕೆಂದರೆ ಇಕ್ಕಟ್ಟು ಸಮೀಪವಾಗಿದೆ, ಸಹಾಯಕರು ನನಗೆ ಯಾರೂ ಇಲ್ಲ.
אַל־תִּרְחַ֣ק מִ֭מֶּנִּי כִּי־צָרָ֣ה קְרוֹבָ֑ה כִּי־אֵ֥ין עוֹזֵֽר׃
12 ಬಹಳ ಹೋರಿಗಳು ನನ್ನನ್ನು ಸುತ್ತಿಕೊಂಡಿವೆ; ಬಾಷಾನಿನ ಬಲವಾದ ಹೋರಿಗಳು ನನ್ನನ್ನು ಮುತ್ತಿಕೊಂಡಿವೆ.
סְ֭בָבוּנִי פָּרִ֣ים רַבִּ֑ים אַבִּירֵ֖י בָשָׁ֣ן כִּתְּרֽוּנִי׃
13 ಹರಿದು ಬಿಡುವ ಗರ್ಜಿಸುವ ಸಿಂಹದ ಹಾಗೆ ನನ್ನ ಮೇಲೆ ತಮ್ಮ ಬಾಯಿತೆರೆದಿದ್ದಾರೆ.
פָּצ֣וּ עָלַ֣י פִּיהֶ֑ם אַ֝רְיֵ֗ה טֹרֵ֥ף וְשֹׁאֵֽג׃
14 ನಾನು ಚೆಲ್ಲಿದ ನೀರಿನಂತಿದ್ದೇನೆ, ನನ್ನ ಎಲುಬುಗಳೆಲ್ಲಾ ಕೀಲು ತಪ್ಪಿ ಹೋಗಿದೆ. ನನ್ನ ಹೃದಯವು ಮೇಣದ ಹಾಗೆ ನನ್ನೊಳಗೆ ಕರಗಿಹೋಗಿದೆ.
כַּמַּ֥יִם נִשְׁפַּכְתִּי֮ וְהִתְפָּֽרְד֗וּ כָּֽל־עַצְמ֫וֹתָ֥י הָיָ֣ה לִ֭בִּי כַּדּוֹנָ֑ג נָ֝מֵ֗ס בְּת֣וֹךְ מֵעָֽי׃
15 ನನ್ನ ಬಾಯಿ ಬೋಕಿಯ ಹಾಗೆ ಒಣಗಿಹೋಗಿದೆ, ನನ್ನ ನಾಲಿಗೆ ಅಂಗಳಕ್ಕೆ ಹತ್ತಿದೆ, ನೀವು ನನ್ನನ್ನು ಮಣ್ಣಿಗೆ ಸೇರಿಸುವಿರಿ.
יָ֘בֵ֤שׁ כַּחֶ֨רֶשׂ ׀ כֹּחִ֗י וּ֭לְשׁוֹנִי מֻדְבָּ֣ק מַלְקוֹחָ֑י וְֽלַעֲפַר־מָ֥וֶת תִּשְׁפְּתֵֽנִי׃
16 ನಾಯಿಗಳು ನನ್ನನ್ನು ಸುತ್ತಿಕೊಂಡಿವೆ; ದುರ್ಮಾರ್ಗಿಗಳ ಗುಂಪು ನನ್ನನ್ನು ಮುತ್ತಿಕೊಂಡಿದೆ; ಅವರು ನನ್ನ ಕೈಗಳನ್ನೂ ಕಾಲುಗಳನ್ನೂ ತಿವಿದಿದ್ದಾರೆ.
כִּ֥י סְבָב֗וּנִי כְּלָ֫בִ֥ים עֲדַ֣ת מְ֭רֵעִים הִקִּיפ֑וּנִי כָּ֝אֲרִ֗י יָדַ֥י וְרַגְלָֽי׃
17 ನನ್ನ ಎಲುಬುಗಳನ್ನೆಲ್ಲಾ ಎಣಿಸುವಂತಾಗಿದೆ; ಅವರು ನನ್ನನ್ನು ಕಂಡು ಹಿಗ್ಗುತ್ತಾರೆ.
אֲסַפֵּ֥ר כָּל־עַצְמוֹתָ֑י הֵ֥מָּה יַ֝בִּ֗יטוּ יִרְאוּ־בִֽי׃
18 ನನ್ನ ಬಟ್ಟೆಯನ್ನು ಅವರು ತಮ್ಮೊಳಗೆ ಪಾಲು ಮಾಡಿಕೊಳ್ಳುತ್ತಾರೆ; ನನ್ನ ಅಂಗಿಗೋಸ್ಕರ ಚೀಟು ಹಾಕುತ್ತಾರೆ.
יְחַלְּק֣וּ בְגָדַ֣י לָהֶ֑ם וְעַל־לְ֝בוּשִׁ֗י יַפִּ֥ילוּ גוֹרָֽל׃
19 ಆದರೆ ಯೆಹೋವ ದೇವರೇ, ನೀವು ನನ್ನಿಂದ ದೂರವಾಗಿರಬೇಡಿರಿ; ನೀವು ನನ್ನ ಬಲವಾಗಿದ್ದೀರಿ, ನನ್ನ ಸಹಾಯಕ್ಕೆ ಬೇಗ ಬನ್ನಿರಿ.
וְאַתָּ֣ה יְ֭הוָה אַל־תִּרְחָ֑ק אֱ֝יָלוּתִ֗י לְעֶזְרָ֥תִי חֽוּשָׁה׃
20 ನನ್ನ ಪ್ರಾಣವನ್ನು ಖಡ್ಗದಿಂದಲೂ ನನ್ನ ಅಮೂಲ್ಯ ಜೀವವನ್ನು ನಾಯಿಗಳ ಬಲದಿಂದಲೂ ಬಿಡಿಸಿರಿ.
הַצִּ֣ילָה מֵחֶ֣רֶב נַפְשִׁ֑י מִיַּד־כֶּ֝֗לֶב יְחִידָתִֽי׃
21 ಸಿಂಹಗಳ ಬಾಯಿಂದ ನನ್ನನ್ನು ರಕ್ಷಿಸಿರಿ; ಕಾಡುಕೋಣಗಳ ಕೊಂಬುಗಳಿಂದ ನನ್ನನ್ನು ತಪ್ಪಿಸಿರಿ.
ה֭וֹשִׁיעֵנִי מִפִּ֣י אַרְיֵ֑ה וּמִקַּרְנֵ֖י רֵמִ֣ים עֲנִיתָֽנִי׃
22 ನಾನು ನಿಮ್ಮ ಹೆಸರನ್ನು ನನ್ನ ಸಹೋದರರಿಗೆ ಸಾರುವೆನು; ಸಭಾ ಮಧ್ಯದಲ್ಲಿ ನಿಮ್ಮನ್ನು ಸ್ತುತಿಸುವೆನು.
אֲסַפְּרָ֣ה שִׁמְךָ֣ לְאֶחָ֑י בְּת֖וֹךְ קָהָ֣ל אֲהַלְלֶֽךָּ׃
23 ಯೆಹೋವ ದೇವರಿಗೆ ಭಯಪಡುವವರೇ, ಅವರನ್ನು ಸ್ತುತಿಸಿರಿ; ಯಾಕೋಬನ ಎಲ್ಲಾ ಸಂತತಿಯವರೇ, ಅವರನ್ನು ಕೊಂಡಾಡಿರಿ; ಇಸ್ರಾಯೇಲರ ಎಲ್ಲಾ ಸಂತತಿಯವರೇ, ಅವರಲ್ಲಿ ಭಯಭಕ್ತಿಯುಳ್ಳವರಾಗಿರಿ.
יִרְאֵ֤י יְהוָ֨ה ׀ הַֽלְל֗וּהוּ כָּל־זֶ֣רַע יַעֲקֹ֣ב כַּבְּד֑וּהוּ וְג֥וּרוּ מִ֝מֶּ֗נּוּ כָּל־זֶ֥רַע יִשְׂרָאֵֽל׃
24 ಏಕೆಂದರೆ ಸಂಕಟಪಡುವವನ ಸಂಕಟವನ್ನು ಅವರು ತಿರಸ್ಕರಿಸಲಿಲ್ಲ, ಅಸಹ್ಯಪಡಲಿಲ್ಲ; ತಮ್ಮ ಮುಖವನ್ನು ಅವನಿಂದ ಮರೆಮಾಡಲಿಲ್ಲ; ಆದರೆ ಆತನು ಮೊರೆ ಇಡಲು, ಅವರು ಕೇಳಿದರು.
כִּ֤י לֹֽא־בָזָ֨ה וְלֹ֪א שִׁקַּ֡ץ עֱנ֬וּת עָנִ֗י וְלֹא־הִסְתִּ֣יר פָּנָ֣יו מִמֶּ֑נּוּ וּֽבְשַׁוְּע֖וֹ אֵלָ֣יו שָׁמֵֽעַ׃
25 ಮಹಾಸಭೆಯಲ್ಲಿ ನಿಮ್ಮನ್ನು ಕುರಿತು ನನ್ನ ಸ್ತೋತ್ರವು ನಿಮ್ಮಿಂದ ಬರುವುದು; ನನ್ನ ಹರಕೆಗಳನ್ನು ನಿಮಗೆ ಭಯಪಡುವವರ ಮುಂದೆ ಸಲ್ಲಿಸುವೆನು.
מֵ֥אִתְּךָ֗ תְֽהִלָּ֫תִ֥י בְּקָהָ֥ל רָ֑ב נְדָרַ֥י אֲ֝שַׁלֵּ֗ם נֶ֣גֶד יְרֵאָֽיו׃
26 ದೀನರು ಉಂಡು ತೃಪ್ತರಾಗುವರು; ಯೆಹೋವ ದೇವರನ್ನು ಹುಡುಕುವವರು ಅವರನ್ನು ಸ್ತುತಿಸುವರು; ಅಂಥವರ ಹೃದಯವು ಎಂದೆಂದಿಗೂ ಚೈತನ್ಯ ಹೊಂದಲಿ.
יֹאכְל֬וּ עֲנָוִ֨ים ׀ וְיִשְׂבָּ֗עוּ יְהַֽלְל֣וּ יְ֭הוָה דֹּ֣רְשָׁ֑יו יְחִ֖י לְבַבְכֶ֣ם לָעַֽד׃
27 ಲೋಕದಲ್ಲಿರುವ ಎಲ್ಲರೂ ಎಚ್ಚರವಾಗಿ ಯೆಹೋವ ದೇವರ ಕಡೆಗೆ ತಿರುಗಿಕೊಳ್ಳುವರು; ಜನಾಂಗಗಳ ಕುಟುಂಬಗಳೆಲ್ಲಾ ದೇವರ ಮುಂದೆ ಅಡ್ಡಬೀಳುವವು.
יִזְכְּר֤וּ ׀ וְיָשֻׁ֣בוּ אֶל־יְ֭הוָה כָּל־אַפְסֵי־אָ֑רֶץ וְיִֽשְׁתַּחֲו֥וּ לְ֝פָנֶ֗יךָ כָּֽל־מִשְׁפְּח֥וֹת גּוֹיִֽם׃
28 ಏಕೆಂದರೆ ರಾಜ್ಯವು ಯೆಹೋವ ದೇವರದೇ; ಜನಾಂಗಗಳನ್ನು ಆಳುವವರು ಅವರೇ.
כִּ֣י לַ֭יהוָה הַמְּלוּכָ֑ה וּ֝מֹשֵׁ֗ל בַּגּוֹיִֽם׃
29 ಭೂಮಿಯ ಶ್ರೀಮಂತರೆಲ್ಲರು ಉಂಡು ಆರಾಧಿಸುವರು; ತಮ್ಮ ಪ್ರಾಣವನ್ನು ಬದುಕಿಸಲಾರದೆ ಧೂಳಿನಲ್ಲಿ ಇಳಿಯುವವರೆಲ್ಲರು ಅವರ ಮುಂದೆ ಅಡ್ಡಬೀಳುವರು.
אָכְל֬וּ וַיִּֽשְׁתַּחֲוּ֨וּ ׀ כָּֽל־דִּשְׁנֵי־אֶ֗רֶץ לְפָנָ֣יו יִ֭כְרְעוּ כָּל־יוֹרְדֵ֣י עָפָ֑ר וְ֝נַפְשׁ֗וֹ לֹ֣א חִיָּֽה׃
30 ಸಂತಾನವು ದೇವರನ್ನು ಸೇವಿಸುವುದು; ಮುಂದಿನ ಸಂತತಿಗಳಿಗೆ ಯೆಹೋವ ದೇವರ ಬಗ್ಗೆ ಹೇಳಲಾಗುವುದು.
זֶ֥רַע יַֽעַבְדֶ֑נּוּ יְסֻפַּ֖ר לַֽאדֹנָ֣י לַדּֽוֹר׃
31 ಆ ಸಂತತಿಯವರು ದೇವರ ನೀತಿಯನ್ನು ಇನ್ನೂ ಜನಿಸದ ಜನಾಂಗಕ್ಕೆ ಸಾರಿ ತಿಳಿಸುವರು, ಏಕೆಂದರೆ ಇದನ್ನೆಲ್ಲ ಮಾಡಿದವರು ದೇವರೇ!
יָ֭בֹאוּ וְיַגִּ֣ידוּ צִדְקָת֑וֹ לְעַ֥ם נ֝וֹלָ֗ד כִּ֣י עָשָֽׂה׃

< ಕೀರ್ತನೆಗಳು 22 >