< ಕೀರ್ತನೆಗಳು 24 >

1 ದಾವೀದನ ಕೀರ್ತನೆ. ಭೂಮಿಯೂ ಅದರಲ್ಲಿರುವ ಸಮಸ್ತವೂ ಯೆಹೋವ ದೇವರದ್ದೇ; ಲೋಕವೂ ಅದರ ನಿವಾಸಿಗಳೂ ಅವರಿಗೇ ಸೇರಿದ್ದು.
Псалом Давидів.
2 ಏಕೆಂದರೆ ಅವರು ಸಮುದ್ರಗಳ ಮೇಲೆ ಅದನ್ನು ಸ್ಥಾಪಿಸಿ ಪ್ರವಾಹಗಳ ಮೇಲೆ ಅದನ್ನು ಸ್ಥಿರಪಡಿಸಿದ್ದಾರೆ.
бо заклав Він її на моря́х, і на річках її встанови́в.
3 ಯೆಹೋವ ದೇವರ ಪರ್ವತವನ್ನು ಹತ್ತುವವನು ಯಾರು? ಅವರ ಪರಿಶುದ್ಧ ಸ್ಥಳದಲ್ಲಿ ನಿಲ್ಲುವವನು ಯಾರು?
Хто зі́йде на го́ру Господню, і хто бу́де стояти на місці святому Його? —
4 ಶುದ್ಧಹಸ್ತಗಳೂ ನಿರ್ಮಲವಾದ ಹೃದಯವೂ ಉಳ್ಳವನಾಗಿದ್ದು; ವಂಚನೆಯಿಂದ ಮುಕ್ತನಾಗಿ, ಮೋಸದಿಂದ ಆಣೆ ಇಡದೆಯೂ ಇರುವವನೇ.
У кого́ чисті руки та щиреє серце, і хто не нахиля́в на марно́ту своєї душі, і хто не присягав на обма́ну,
5 ಇಂಥವರೇ ಯೆಹೋವ ದೇವರಿಂದ ಆಶೀರ್ವಾದವನ್ನು ಹೊಂದುವರು. ತಮ್ಮ ರಕ್ಷಕ ಆಗಿರುವ ದೇವರಿಂದಲೇ ನಿರ್ದೋಷಿಯಾಗುವರು.
нехай но́сить він благослове́ння від Господа, а праведність — від Бога спасі́ння свого!
6 ಇಂಥವರೇ ದೇವರನ್ನು ಹುಡುಕುವ ಸಂತತಿಯು; ಯಾಕೋಬನ ದೇವರೇ, ನಿಮ್ಮನ್ನು ಹುಡುಕುವವರು ಇಂಥವರೇ.
Таке поколі́ння усіх, хто шукає Його́, хто пра́гне обличчя Твого́, Боже Яковів! (Се́ла)
7 ದ್ವಾರಗಳೇ ತಲೆ ಎತ್ತಿ ನೋಡಿರಿ, ಪುರಾತನ ದ್ವಾರಗಳೇ, ತೆರೆದುಕೊಳ್ಳಿರಿ; ಮಹಿಮೆಯ ಅರಸ ಒಳಗೆ ಬರಲಿದ್ದಾರೆ.
Піднесі́те верхи́ свої, брами, і будьте відчи́нені, вхо́ди відві́чні, — і вві́йде Цар слави!
8 ಈ ಮಹಿಮೆಯ ಅರಸ ಯಾರು? ಬಲವೂ ಪರಾಕ್ರಮವೂ ಉಳ್ಳ ಯೆಹೋವ ದೇವರೇ ಆಗಿರುತ್ತಾರೆ. ಯೆಹೋವ ದೇವರು ಯುದ್ಧದಲ್ಲಿ ಪರಾಕ್ರಮವುಳ್ಳವರು ಆಗಿರುತ್ತಾರೆ.
Хто ж то Цар слави? — Господь си́льний й могу́тній, Господь, що поту́жний в бою́!
9 ದ್ವಾರಗಳೇ, ತಲೆ ಎತ್ತಿ ನೋಡಿರಿ, ಪುರಾತನ ದ್ವಾರಗಳೇ, ತೆರೆದುಕೊಳ್ಳಿರಿ; ಮಹಿಮೆಯ ಅರಸ ಒಳಗೆ ಬರಲಿದ್ದಾರೆ.
Піднесіте верхи́ свої, брами, і піднесіте, вхо́ди відві́чні, — і вві́йде Цар слави!
10 ಮಹಿಮೆಯ ಅರಸ ಯಾರು? ಸೇನಾಧೀಶ್ವರ ಯೆಹೋವ ದೇವರೇ ಆಗಿರುತ್ತಾರೆ. ಇವರೇ ಮಹಿಮೆಯ ಅರಸರು.
Хто ж то Він, той Цар слави? Господь Савао́т — Він Цар слави! (Се́ла)

< ಕೀರ್ತನೆಗಳು 24 >