< ಕೀರ್ತನೆಗಳು 26 >
1 ದಾವೀದನ ಕೀರ್ತನೆ. ಯೆಹೋವ ದೇವರೇ, ನನ್ನನ್ನು ನಿರ್ದೋಷನನ್ನಾಗಿ ನಿರ್ಣಯಿಸಿರಿ, ನಾನು ದೋಷವಿಲ್ಲದ ಜೀವನ ನಡೆಸಿದ್ದೇನೆ; ನಾನು ಯೆಹೋವ ದೇವರಲ್ಲಿ ಕದಲದೆ ಭರವಸೆ ಇಟ್ಟಿದ್ದೇನೆ.
上主求你替我主持正義,因我行動無辜,我曾毫不猶豫地全心依賴了上主。
2 ಯೆಹೋವ ದೇವರೇ, ನನ್ನನ್ನು ಶೋಧಿಸಿ, ಪರೀಕ್ಷಿಸಿರಿ; ನನ್ನ ಅಂತರಿಂದ್ರಿಯಗಳನ್ನೂ ನನ್ನ ಹೃದಯವನ್ನೂ ಶೋಧಿಸಿರಿ.
上主,你儘管對我試驗,對我查考,你儘管對我的五內和心臟探討;
3 ನಿಮ್ಮ ಒಡಂಬಡಿಕೆಯ ಪ್ರೀತಿಯು ಯಾವಾಗಲೂ ನನ್ನ ಮನಸ್ಸು ತುಂಬ ಇದೆ; ನಿಮ್ಮ ನಂಬಿಗಸ್ತಿಕೆಯಲ್ಲಿ ನಾನು ಬಾಳುತ್ತಿದ್ದೇನೆ.
原來你的受常擺在我眼前,我常遵照你的真理行走盤桓。
4 ಮೋಸಗಾರರ ಸಂಗಡ ನಾನು ಕುಳಿತುಕೊಳ್ಳಲಿಲ್ಲ; ವಂಚಕರ ಸಂಗಡ ನಾನು ಹೋಗುವುದಿಲ್ಲ.
我決不與虛偽的人同坐,也決不與欺詐的人合作;
5 ದುರ್ಮಾರ್ಗಿಗಳ ಸಭೆಯನ್ನು ದ್ವೇಷಿಸಿದ್ದೇನೆ; ದುಷ್ಟರ ಸಂಗಡ ಕುಳಿತುಕೊಳ್ಳುವುದಿಲ್ಲ.
我常痛恨敗類的集會,我也決不與惡人同席。
6 ನನ್ನ ಕೈಗಳನ್ನು ನಿರ್ಮಲವಾಗಿ ತೊಳೆದುಕೊಂಡು, ಯೆಹೋವ ದೇವರೇ, ನಿಮ್ಮ ಬಲಿಪೀಠವನ್ನು ಸುತ್ತುತ್ತಾ,
上主我要洗手表明無罪,我要走在你的祭壇周圍,
7 ಸ್ತೋತ್ರ ಧ್ವನಿಯೆತ್ತಿ ಸಾರುತ್ತಾ ನಿಮ್ಮ ಅದ್ಭುತಗಳನ್ನೆಲ್ಲಾ ತಿಳಿಸುವೆನು.
為能高聲向你稱揚讚頌,傳述你的一切奇妙化工。
8 ಯೆಹೋವ ದೇವರೇ, ನೀವು ವಾಸಿಸುವ ಆಲಯವನ್ನೂ, ನಿಮ್ಮ ಮಹಿಮೆಯ ನಿವಾಸವನ್ನೂ ಪ್ರೀತಿಸುತ್ತೇನೆ.
上主,我喜愛你所住的殿堂,就是你那榮耀寄居的地方。
9 ಪಾಪಿಗಳ ಸಂಗಡ ನನ್ನ ಪ್ರಾಣವನ್ನೂ, ರಕ್ತಸುರಿಸುವವರ ಸಂಗಡ ನನ್ನ ಜೀವವನ್ನೂ ತೆಗೆಯಬೇಡಿರಿ.
求你不要把我的靈魂和罪人們一起收去;求你不要把我的生命與流血者一起剷除。
10 ಅವರ ಕೈಗಳಲ್ಲಿ ಕೇಡು ಇದೆ; ಅವರ ಬಲಗೈ ಲಂಚಗಳಿಂದ ತುಂಬಿದೆ.
因為他們的手中盡是罪污,他們的右手滿是賄賂;
11 ನಾನಾದರೋ ನನ್ನ ಯಥಾರ್ಥತೆಯಲ್ಲಿ ನಡೆಯುತ್ತೇನೆ; ನನ್ನನ್ನು ವಿಮೋಚಿಸಿರಿ; ನನಗೆ ಕರುಣೆಯುಳ್ಳವರಾಗಿರಿ.
我卻一向行動無辜,求你救我,求你憐恤。
12 ನನ್ನ ಪಾದವು ಸಮ ನೆಲದಲ್ಲಿ ನಿಂತಿದೆ; ನಾನು ಮಹಾಸಭೆಯಲ್ಲಿ ಯೆಹೋವ ದೇವರನ್ನು ಸ್ತುತಿಸುವೆನು.
我的腳站立於平坦大路,在集會中我要讚頌上主。