< ಕೀರ್ತನೆಗಳು 27 >
1 ದಾವೀದನ ಕೀರ್ತನೆ. ಯೆಹೋವ ದೇವರು ನನ್ನ ಬೆಳಕೂ ನನ್ನ ರಕ್ಷಣೆಯೂ ಆಗಿದ್ದಾರೆ. ನಾನು ಯಾರಿಗೂ ಭಯಪಡೆನು? ಯೆಹೋವ ದೇವರು ನನ್ನ ಜೀವದ ಭದ್ರಾಶ್ರಯವಾಗಿದ್ದಾರೆ. ನಾನು ಯಾರಿಗೂ ಹೆದರೆನು?
上主是我的光明,我的救援,我還畏懼何人﹖ 上主是我生命穩固的保障,我還害怕何人﹖
2 ದುಷ್ಟರು ನನ್ನನ್ನು ಬೀಳಿಸಬೇಕೆಂದು ನನಗೆ ವಿರೋಧವಾಗಿ ಸಮೀಪಿಸುವಾಗ, ನನ್ನ ವೈರಿಗಳು ತಾವೇ ಎಡವಿಬಿದ್ದರು.
當惡人前來攻擊我,要吃我的肉時,我的對手,我的仇敵,反而跌倒斷氣。
3 ನನಗೆ ವಿರೋಧವಾಗಿ ಇಳಿದರೂ ನನ್ನ ಹೃದಯವು ಭಯಪಡದು; ನನ್ನ ಮೇಲೆ ಯುದ್ಧ ಸೈನ್ಯವು ನಡೆದರೂ ನಾನು ಭರವಸೆಯಿಂದಿರುವೆನು.
雖有大軍向我進攻,我的心毫不戰慄;雖然戰爭向我迫近,我依然滿懷依恃。
4 ಯೆಹೋವ ದೇವರ ಮನೆಯಲ್ಲಿ ನಾನು ಜೀವಮಾನವೆಲ್ಲಾ ವಾಸಮಾಡುತ್ತಾ, ಅದರ ದಯೆಯನ್ನು ನೋಡುತ್ತಾ ಅವರ ಮಂದಿರದಲ್ಲಿ ಅವರನ್ನೇ ಧ್ಯಾನಿಸುತ್ತಾ ಇರಬೇಕೆಂಬ ಒಂದೇ ವರವನ್ನು ಯೆಹೋವ ದೇವರಿಂದ ಕೇಳಿಕೊಂಡು ಅದನ್ನೇ ಹುಡುಕುತ್ತಿರುವೆನು.
我有一事祈求上主,我要懇切請求此事:使我一生的歲月,常居住在上主的殿裏,欣賞上主的甘飴慈祥,瞻仰上主聖所的堂皇。
5 ಕೇಡಿನ ಸಮಯದಲ್ಲಿ ಯೆಹೋವ ದೇವರು ನನ್ನನ್ನು ತಮ್ಮ ಗುಡಾರದಲ್ಲಿ ಬಚ್ಚಿಡುವರು. ತಮ್ಮ ಪರಿಶುದ್ಧ ಗುಡಾರದಲ್ಲಿ ನನ್ನನ್ನು ಮರೆಮಾಡುವರು. ಎತ್ತರವಾದ ಬಂಡೆಯ ಮೇಲೆ ನನ್ನನ್ನು ನಿಲ್ಲಿಸುವರು.
因為在我困難的時他日,祂將我藏在祂的帳棚裏;將我藏在祂帳幕的深處,並將我高舉放在磐石。
6 ಈಗ ನನ್ನ ತಲೆಯು ನನ್ನ ಸುತ್ತಲಿರುವ ನನ್ನ ಶತ್ರುಗಳ ಮೇಲೆ ಎತ್ತಲಾಗಿರುವುದು, ಆದ್ದರಿಂದ ದೇವರ ಗುಡಾರದಲ್ಲಿ ಉತ್ಸಾಹದಿಂದ ಬಲಿಗಳನ್ನು ಅರ್ಪಿಸುವೆನು; ಯೆಹೋವ ದೇವರಿಗೆ ಹಾಡಿ ಕೊಂಡಾಡುವೆನು.
現在我可昂首抬頭,卑視我周圍的仇人;我要在上主的帳幕裏,奉獻歡樂之祭,要向上主歡唱讚美的詩詞。
7 ಯೆಹೋವ ದೇವರೇ, ನಾನು ಕೂಗುವ ಸ್ವರವನ್ನು ಕೇಳಿರಿ; ನನ್ನನ್ನು ಕರುಣಿಸಿ ಉತ್ತರವನ್ನು ಕೊಡಿರಿ.
上主,求你俯聽我的呼號,上主,求你憐憫我,垂允我。
8 ನಿಮ್ಮ ಬಗ್ಗೆ ನನ್ನ ಹೃದಯವು ಹೀಗೆ ಹೇಳುತ್ತದೆ: “ದೇವರ ಮುಖವನ್ನು ಹುಡುಕು,” ಆದ್ದರಿಂದ ಯೆಹೋವ ದೇವರೇ, ನಿಮ್ಮ ಮುಖವನ್ನೇ ಹುಡುಕುತ್ತಿರುವೆನು.
論及你,我心中時常在想:你應該尋求祂的儀容。
9 ನಿಮ್ಮ ಮುಖವನ್ನು ನನಗೆ ಮರೆಮಾಡಬೇಡಿರಿ; ನಿಮ್ಮ ಸೇವಕನಾದ ನನ್ನನ್ನು ತಳ್ಳಬೇಡಿರಿ; ನೀವೇ ನನಗೆ ಸಹಾಯಕರಾಗಿದ್ದೀರಿ; ನನ್ನ ರಕ್ಷಕ ಆಗಿರುವ ದೇವರೇ, ನನ್ನನ್ನು ತ್ಯಜಿಸಬೇಡಿರಿ. ನನ್ನನ್ನು ಬಿಟ್ಟುಬಿಡಬೇಡಿರಿ.
求你不要向我掩住你的臉,你發怒時不要趕散你僕人。你向來就是我唯一的救援;救我的天主,不要棄我不管。
10 ನನ್ನ ತಂದೆತಾಯಂದಿರು ನನ್ನನ್ನು ಬಿಟ್ಟುಬಿಟ್ಟರೂ, ಯೆಹೋವ ದೇವರು ನನ್ನನ್ನು ಸೇರಿಸಿಕೊಳ್ಳುವರು.
我的父母雖捨棄了我,然而上主卻收留了我。
11 ಯೆಹೋವ ದೇವರೇ, ನಿಮ್ಮ ಮಾರ್ಗವನ್ನು ನನಗೆ ಬೋಧಿಸಿರಿ; ನನ್ನ ವಿರೋಧಿಗಳ ನಿಮಿತ್ತ ಸಮಹಾದಿಯಲ್ಲಿ ನನ್ನನ್ನು ನಡೆಸಿರಿ.
上主,求你給我指示你的正路,為了我的仇敵,我踏上了坦途。
12 ನನ್ನ ವೈರಿಗಳ ವಶಕ್ಕೆ ನನ್ನನ್ನು ಕೊಡಬೇಡಿರಿ; ಸುಳ್ಳುಸಾಕ್ಷಿಗಳೂ ಕ್ರೂರ ನಿಂದಕರೂ ನನಗೆ ವಿರೋಧವಾಗಿ ಎದ್ದಿದ್ದಾರೆ.
求你不要將我交於仇人的私慾,因為殘暴的假見證來向我攻擊。
13 ಇದೊಂದು ನನ್ನ ಭರವಸೆಯಾಗಿರುವುದು: ನಾನಂತೂ ಯೆಹೋವ ದೇವರ ಒಳಿತನ್ನು ಜೀವಿತರ ದೇಶದಲ್ಲಿ ಕಾಣುವೆನು.
我深信在此活人的地區,必定會享見上主的幸福。
14 ಯೆಹೋವ ದೇವರಿಗಾಗಿ ಕಾದಿರು, ಧೈರ್ಯವಾಗಿರು; ಅವರು ನಿನ್ನ ಹೃದಯವನ್ನು ದೃಢಪಡಿಸುವರು; ಯೆಹೋವ ದೇವರಿಗಾಗಿ ಕಾದಿರು.
你要鼓起勇氣,期望上主!你要振作精神,期望上主!