< ಕೀರ್ತನೆಗಳು 28 >

1 ದಾವೀದನ ಕೀರ್ತನೆ. ಯೆಹೋವ ದೇವರೇ, ನೀವು ನನಗೆ ಸಂರಕ್ಷಿಸುವ ಬಂಡೆಯಾಗಿದ್ದೀರಿ. ನಿಮ್ಮನ್ನು ಬೇಡಿಕೊಳ್ಳುತ್ತಿದ್ದೇನೆ, ಮೌನವಾಗಿರಬೇಡಿರಿ; ನೀವು ಸುಮ್ಮನಿದ್ದರೆ ನಾನು ಸಮಾಧಿಯಲ್ಲಿದ್ದವನಿಗೆ ಸಮಾನನಾಗುವೆನು.
לדוד אליך יהוה אקרא צורי אל תחרש ממני פן תחשה ממני ונמשלתי עם יורדי בור׃
2 ನಾನು ನಿಮಗೆ ಮೊರೆಯಿಡುವಾಗ, ನನ್ನ ಕೈಗಳನ್ನು ನಿಮ್ಮ ಮಹಾಪರಿಶುದ್ಧ ಸ್ಥಳದ ಕಡೆಗೆ ಎತ್ತುವಾಗ ನನ್ನ ವಿಜ್ಞಾಪನೆಯನ್ನು ಲಾಲಿಸಿರಿ.
שמע קול תחנוני בשועי אליך בנשאי ידי אל דביר קדשך׃
3 ದುಷ್ಟರ ಸಂಗಡವೂ ಅಪರಾಧ ಮಾಡುವವರ ಸಂಗಡವೂ ನನ್ನನ್ನು ಎಳೆಯಬೇಡಿರಿ; ಅವರು ತಮ್ಮ ನೆರೆಯವರೊಂದಿಗೆ ಸಮಾಧಾನವಾಗಿ ಮಾತನಾಡುತ್ತಾರೆ; ಆದರೆ ಕೇಡು ಅವರ ಹೃದಯದಲ್ಲಿ ಇದೆ.
אל תמשכני עם רשעים ועם פעלי און דברי שלום עם רעיהם ורעה בלבבם׃
4 ಅವರ ಕೃತ್ಯಗಳ ಪ್ರಕಾರವಾಗಿಯೂ, ಅವರ ಕೆಟ್ಟತನಗಳ ಪ್ರಕಾರವಾಗಿಯೂ ಅವರಿಗೆ ಪ್ರತಿಫಲಕೊಡಿರಿ; ಅವರ ಕೈಕೃತ್ಯಗಳ ಪ್ರಕಾರವಾಗಿ ಅವರಿಗೆ ಕೊಡಿರಿ, ಅರ್ಹತೆಗೆ ತಕ್ಕಂತೆಯೇ ಅವರಿಗೆ ಬರಮಾಡಿರಿ.
תן להם כפעלם וכרע מעלליהם כמעשה ידיהם תן להם השב גמולם להם׃
5 ಅವರು ಯೆಹೋವ ದೇವರ ಕೃತ್ಯಗಳನ್ನೂ, ಅವರ ಕೈಗಳ ಕೆಲಸವನ್ನೂ ಲಕ್ಷಿಸುವುದಿಲ್ಲ; ಆದ್ದರಿಂದ ದೇವರು ಅವರನ್ನು ವೃದ್ಧಿಗೊಳಿಸದೆ ದಂಡಿಸುವರು.
כי לא יבינו אל פעלת יהוה ואל מעשה ידיו יהרסם ולא יבנם׃
6 ಯೆಹೋವ ದೇವರಿಗೆ ಸ್ತುತಿಯುಂಟಾಗಲಿ; ಕರುಣೆಗಾಗಿ ನನ್ನ ಮೊರೆಯನ್ನು ಅವರು ಕೇಳಿದ್ದಾರೆ.
ברוך יהוה כי שמע קול תחנוני׃
7 ಯೆಹೋವ ದೇವರು ನನ್ನ ಬಲವೂ, ನನ್ನ ಗುರಾಣಿಯೂ ಆಗಿದ್ದಾರೆ; ನನ್ನ ಹೃದಯವು ಅವರಲ್ಲಿ ಭರವಸೆ ಇಟ್ಟದ್ದರಿಂದ ನಾನು ಸಹಾಯ ಹೊಂದಿದೆನು; ನನ್ನ ಹೃದಯವು ಬಹಳವಾಗಿ ಉತ್ಸಾಹಪಡುವುದು; ನನ್ನ ಕೀರ್ತನೆಯಿಂದ ಅವರನ್ನು ಕೊಂಡಾಡುವೆನು.
יהוה עזי ומגני בו בטח לבי ונעזרתי ויעלז לבי ומשירי אהודנו׃
8 ಯೆಹೋವ ದೇವರು ತಮ್ಮ ಜನರಿಗೆ ಬಲವಾಗಿದ್ದಾರೆ; ತಮ್ಮ ಅಭಿಷಿಕ್ತನಿಗೆ ರಕ್ಷಣೆಯ ಕೋಟೆ ಆಗಿದ್ದಾರೆ.
יהוה עז למו ומעוז ישועות משיחו הוא׃
9 ನಿಮ್ಮ ಜನರನ್ನು ರಕ್ಷಿಸಿರಿ; ನಿಮ್ಮ ವಾರಸುದಾರರನ್ನು ಆಶೀರ್ವದಿಸಿರಿ; ನೀವು ಅವರ ಕುರುಬ ಆಗಿದ್ದು; ಅವರನ್ನು ಯಾವಾಗಲೂ ಮುನ್ನಡೆಸಿರಿ.
הושיעה את עמך וברך את נחלתך ורעם ונשאם עד העולם׃

< ಕೀರ್ತನೆಗಳು 28 >