< ಕೀರ್ತನೆಗಳು 29 >

1 ದಾವೀದನ ಕೀರ್ತನೆ. ದೇವದೂತರೇ, ಬಲವು ಯೆಹೋವ ದೇವರದೇ, ಮಹಿಮೆ ಯೆಹೋವ ದೇವರದೇ ಎಂದು ಹೇಳಿ ಕೊಂಡಾಡಿರಿ.
מִזְמוֹר לְדָוִד הָבוּ לַיהֹוָה בְּנֵי אֵלִים הָבוּ לַיהֹוָה כָּבוֹד וָעֹֽז׃
2 ಯೆಹೋವ ದೇವರ ನಾಮಕ್ಕೆ ಸಲ್ಲತಕ್ಕ ಘನವನ್ನು ಸಲ್ಲಿಸಿರಿ; ಪರಿಶುದ್ಧತ್ವವೆಂಬ ವಸ್ತ್ರದೊಡನೆ ಯೆಹೋವ ದೇವರನ್ನು ಆರಾಧಿಸಿರಿ.
הָבוּ לַיהֹוָה כְּבוֹד שְׁמוֹ הִשְׁתַּחֲווּ לַיהֹוָה בְּהַדְרַת־קֹֽדֶשׁ׃
3 ಯೆಹೋವ ದೇವರ ಧ್ವನಿಯು ಜಲರಾಶಿಗಳ ಮೇಲೆ ಇದೆ; ಮಹಿಮೆಯ ದೇವರು ಇದ್ದಾರೆ; ಯೆಹೋವ ದೇವರು ಮಹಾಸಾಗರಗಳ ಮೇಲೆ ಇದ್ದಾರೆ.
קוֹל יְהֹוָה עַל־הַמָּיִם אֵֽל־הַכָּבוֹד הִרְעִים יְהֹוָה עַל־מַיִם רַבִּֽים׃
4 ಯೆಹೋವ ದೇವರ ಧ್ವನಿಯು ಶಕ್ತಿಯುಳ್ಳದ್ದು; ಯೆಹೋವ ದೇವರ ಧ್ವನಿಯು ವೈಭವವುಳ್ಳದ್ದು.
קוֹל־יְהֹוָה בַּכֹּחַ קוֹל יְהֹוָה בֶּהָדָֽר׃
5 ಯೆಹೋವ ದೇವರ ಧ್ವನಿಯು ದೇವದಾರು ವೃಕ್ಷಗಳನ್ನು ಮುರಿಯುತ್ತದೆ; ಯೆಹೋವ ದೇವರು ಲೆಬನೋನಿನ ದೇವದಾರು ವೃಕ್ಷಗಳನ್ನು ಮುರಿಯುತ್ತಾರೆ.
קוֹל יְהֹוָה שֹׁבֵר אֲרָזִים וַיְשַׁבֵּר יְהֹוָה אֶת־אַרְזֵי הַלְּבָנֽוֹן׃
6 ಲೆಬನೋನ್ ಪರ್ವತವು ಕರುವಿನ ಹಾಗೆಯೂ ಸಿರ್ಯೋನ್ ಬೆಟ್ಟವು ಎಳೆಯ ಕಾಡುಕೋಣದ ಹಾಗೆಯೂ ಹಾರಾಡುವಂತೆ ಮಾಡುತ್ತಾರೆ.
וַיַּרְקִידֵם כְּמוֹ־עֵגֶל לְבָנוֹן וְשִׂרְיֹן כְּמוֹ בֶן־רְאֵמִֽים׃
7 ಯೆಹೋವ ದೇವರ ಧ್ವನಿಯು ಸಿಡಿಲಿನ ಮಿಂಚಿನಂತೆ ಅಪ್ಪಳಿಸುತ್ತದೆ.
קוֹל־יְהֹוָה חֹצֵב לַהֲבוֹת אֵֽשׁ׃
8 ಯೆಹೋವ ದೇವರ ಶಬ್ದವು ಮರುಭೂಮಿಯನ್ನು ನಡುಗಿಸುತ್ತದೆ; ಯೆಹೋವ ದೇವರು ಕಾದೇಶ್ ಮರುಭೂಮಿಯನ್ನು ನಡುಗಿಸುತ್ತಾರೆ.
קוֹל יְהֹוָה יָחִיל מִדְבָּר יָחִיל יְהֹוָה מִדְבַּר קָדֵֽשׁ׃
9 ಯೆಹೋವ ದೇವರ ಧ್ವನಿಯು ಜಿಂಕೆಗಳು ಈಯುವಂತೆ ಮಾಡಿ ಅಡವಿಗಳನ್ನು ಬಯಲು ಮಾಡುತ್ತದೆ; ದೇವರ ಮಂದಿರದಲ್ಲಿ ಪ್ರತಿಯೊಬ್ಬರೂ “ಮಹಿಮೆ!” ಎಂದು ಘೋಷಿಸುತ್ತಾರೆ.
קוֹל יְהֹוָה ׀ יְחוֹלֵל אַיָּלוֹת וַֽיֶּחֱשֹׂף יְעָרוֹת וּבְהֵיכָלוֹ כֻּלּוֹ אֹמֵר כָּבֽוֹד׃
10 ಯೆಹೋವ ದೇವರು ಪ್ರಳಯದ ಮೇಲೆ ಕುಳಿತುಕೊಳ್ಳುತ್ತಾರೆ; ಯುಗಯುಗಕ್ಕೂ ಯೆಹೋವ ದೇವರು ಅರಸರಾಗಿ ಕುಳಿತುಕೊಂಡಿದ್ದಾರೆ.
יְהֹוָה לַמַּבּוּל יָשָׁב וַיֵּשֶׁב יְהֹוָה מֶלֶךְ לְעוֹלָֽם׃
11 ಯೆಹೋವ ದೇವರು ತಮ್ಮ ಜನರಿಗೆ ಬಲವನ್ನು ಕೊಡುವರು; ಯೆಹೋವ ದೇವರು ತಮ್ಮ ಜನರನ್ನು ಸಮಾಧಾನದಿಂದ ಆಶೀರ್ವದಿಸುವರು.
יְֽהֹוָה עֹז לְעַמּוֹ יִתֵּן יְהֹוָה ׀ יְבָרֵךְ אֶת־עַמּוֹ בַשָּׁלֽוֹם׃

< ಕೀರ್ತನೆಗಳು 29 >