< ಕೀರ್ತನೆಗಳು 30 >
1 ದೇವಾಲಯದ ಸಮರ್ಪಣೆಗಾಗಿ ದಾವೀದನು ಸಂಯೋಜಿಸಿದ ಹಾಡು. ದಾವೀದನ ಕೀರ್ತನೆ. ಯೆಹೋವ ದೇವರೇ, ನಿಮ್ಮನ್ನು ಕೊಂಡಾಡುವೆನು; ನೀವು ನನ್ನ ಶತ್ರುಗಳು ನನ್ನ ವಿಷಯದಲ್ಲಿ ಸಂತೋಷಪಡದಂತೆ ಮಾಡಿದ್ದೀರಿ. ನನ್ನನ್ನು ಮೇಲಕ್ಕೆ ಎತ್ತಿದ್ದೀರಿ.
A psalm of a canticle, at the dedication of David’s house. I will extol thee, O Lord, for thou hast upheld me: and hast not made my enemies to rejoice over me.
2 ನನ್ನ ದೇವರಾದ ಯೆಹೋವ ದೇವರೇ, ಸಹಾಯಕ್ಕಾಗಿ ನಿಮಗೆ ಮೊರೆಯಿಡಲು, ನನ್ನನ್ನು ಸ್ವಸ್ಥಮಾಡಿದ್ದೀರಿ.
O Lord my God, I have cried to thee, and then hast healed me.
3 ಯೆಹೋವ ದೇವರೇ, ನನ್ನ ಪ್ರಾಣವನ್ನು ಪಾತಾಳದೊಳಗಿಂದ ಎತ್ತಿದ್ದೀರಿ; ನಾನು ಸಮಾಧಿ ಸೇರದ ಹಾಗೆ ನನ್ನನ್ನು ಬದುಕಿಸಿದ್ದೀರಿ. (Sheol )
Thou hast brought forth, O Lord, my soul from hell: thou hast saved me from them that go down into the pit. (Sheol )
4 ಯೆಹೋವ ದೇವರ ವಿಶ್ವಾಸಿಗಳೇ ಅವರನ್ನು ಕೊಂಡಾಡಿರಿ; ಅವರ ಪರಿಶುದ್ಧ ನಾಮವನ್ನು ಕೊಂಡಾಡಿರಿ.
Sing to the Lord, O ye his saints: and give praise to the memory of his holiness.
5 ಅವರ ಕೋಪವು ಕ್ಷಣಮಾತ್ರವೇ; ಆದರೆ ಅವರ ದಯೆಯು ಜೀವಮಾನವೆಲ್ಲಾ ಇರುತ್ತದೆ; ರಾತ್ರಿಯಲ್ಲಿ ದುಃಖ ಬಂದಿದ್ದರೂ; ಬೆಳಿಗ್ಗೆ ಆನಂದವು ಬರುವುದು.
For wrath is in his indignation; and life in his good will. In the evening weeping shall have place, and in the morning gladness.
6 ನಾನು ಸುರಕ್ಷಿತನಾಗಿದ್ದಾಗ, “ನಾನೆಂದೂ ಕದಲುವುದಿಲ್ಲ,” ಎಂದು ಹೇಳಿಕೊಂಡೆನು.
And in my abundance I said: I shall never be moved.
7 ಯೆಹೋವ ದೇವರೇ, ನಿಮ್ಮ ದಯೆಯಿಂದ ನನ್ನ ರಾಜ ಬೆಟ್ಟವು ಸ್ಥಿರವಾಗಿ ನಿಲ್ಲುವಂತೆ ಮಾಡಿದ್ದೀರಿ ಆದರೆ ನೀವು ನಿಮ್ಮ ಮುಖವನ್ನು ಮರೆಮಾಡಲು ನಾನು ಕಳವಳಗೊಂಡೆನು.
O Lord, in thy favour, thou gavest strength to my beauty. Thou turnedst away thy face from me, and I became troubled.
8 ಯೆಹೋವ ದೇವರೇ, ನಾನು ನಿಮಗೆ ಮೊರೆಯಿಟ್ಟೆನು; ಕರುಣೆಗಾಗಿ ಯೆಹೋವ ಕರ್ತ ಆಗಿರುವವರಿಗೆ ಬಿನ್ನವಿಸಿದೆನು.
To thee, O Lord, will I cry: and I will make supplication to my God.
9 ನಾನು ಸಮಾಧಿಯಲ್ಲಿ ಇಳಿದು ಹೋಗಿ ನಾಶವಾದರೆ, ಅದರಿಂದ ನಿಮಗೆ ಆಗುವ ಲಾಭವೇನು? ಧೂಳು ನಿಮ್ಮನ್ನು ಸ್ತುತಿಸುವುದೋ? ಅದು ನಿಮ್ಮ ನಂಬಿಗಸ್ತಿಕೆಯನ್ನು ಪ್ರಕಟಿಸುವುದೋ?
What profit is there in my blood, whilst I go down to corruption? Shall dust confess to thee, or declare thy truth?
10 ಯೆಹೋವ ದೇವರೇ, ಲಾಲಿಸು; ನನ್ನನ್ನು ಕರುಣಿಸಿರಿ; ಯೆಹೋವ ದೇವರೇ, ನನಗೆ ಸಹಾಯಕರಾಗಿರಿ.
The Lord hath heard, and hath had mercy on me: the Lord became my helper.
11 ನೀವು ನನ್ನ ಗೋಳಾಟವನ್ನು ಕುಣಿದಾಟಕ್ಕೆ ತಿರುಗಿಸಿದ್ದೀರಿ; ನೀವು ನನ್ನ ಗೋಣಿತಟ್ಟನ್ನು ತೆಗೆದುಹಾಕಿ ಹರ್ಷವಸ್ತ್ರವನ್ನು ನನಗೆ ಧರಿಸಿದ್ದೀರಿ.
Thou hast turned for me my mourning into joy: thou hast cut my sackcloth, and hast compassed me with gladness:
12 ಆದ್ದರಿಂದ ನನ್ನ ಹೃದಯವು ಮೌನವಿರದೆ ನಿಮ್ಮನ್ನು ಯುಗಯುಗಕ್ಕೂ ಕೊಂಡಾಡುತ್ತಿರುವುದು. ನನ್ನ ದೇವರಾದ ಯೆಹೋವ ದೇವರೇ, ನಾನು ನಿಮ್ಮನ್ನು ಸದಾಕಾಲವೂ ಸ್ತುತಿಸುವೆನು.
To the end that my glory may sing to thee, and I may not regret: O Lord my God, I will give praise to thee for ever.