< ಕೀರ್ತನೆಗಳು 32 >
1 ದಾವೀದನ ಕೀರ್ತನೆ. ಮಾಸ್ಕಿಲ ಪದ್ಯ. ಯಾರ ಉಲ್ಲಂಘನೆಗಳು ಕ್ಷಮಿಸಲಾಗಿವೆಯೋ, ಯಾರ ಪಾಪಗಳು ಮುಚ್ಚಲಾಗಿವೆಯೋ ಅವರೇ ಧನ್ಯರು.
Davidov. Poučna pjesma. Blažen onaj kome je grijeh otpušten, kome je zločin pokriven!
2 ಯೆಹೋವ ದೇವರು ಯಾರ ಅನ್ಯಾಯವನ್ನು ಎಣಿಸುವುದಿಲ್ಲವೋ, ಯಾರ ಆತ್ಮದಲ್ಲಿ ವಂಚನೆ ಇರುವುದಿಲ್ಲವೋ ಆ ಮನುಷ್ಯನು ಧನ್ಯನು.
Blago čovjeku kome Jahve ne ubraja krivnju i u čijemu duhu nema prijevare!
3 ನಾನು ನನ್ನ ಪಾಪವನ್ನು ಅರಿಕೆ ಮಾಡದೆ ಇದ್ದಾಗ, ದಿನವೆಲ್ಲಾ ನರಳುವುದರಿಂದ ನನ್ನ ಎಲುಬುಗಳು ಸವೆದು ಹೋದವು.
Prešutjet' sam htio, al' kosti mi klonuše od neprestana jecanja.
4 ದೇವರೇ, ರಾತ್ರಿ ಹಗಲು ನಿಮ್ಮ ಕೈ ನನ್ನ ಮೇಲೆ ಭಾರವಾಗಿತ್ತು; ನನ್ನ ಬಲವು ಬೇಸಿಗೆಯ ಬಿಸಿಲಿನಲ್ಲಿ ಕುಂದಿಹೋಗುವಂತೆ ಆಯಿತು.
Danju i noću ruka me tvoja tištala, snaga mi se trošila k'o za ljetnih žega.
5 ನನ್ನ ಪಾಪವನ್ನು ನಿಮಗೆ ತಿಳಿಸಿ, ನನ್ನ ಅನ್ಯಾಯವನ್ನು ಮರೆಮಾಡದೆ, “ನನ್ನ ಉಲ್ಲಂಘನೆಗಳನ್ನು ಯೆಹೋವ ದೇವರಿಗೆ ಅರಿಕೆ ಮಾಡುವೆನು,” ಎಂದು ಹೇಳಿದೆನು; ಆಗ, ನೀವು ನನ್ನ ಪಾಪದ ಅಪರಾಧವನ್ನು ಪರಿಹರಿಸಿದಿರಿ.
Tad grijeh svoj tebi priznah i krivnju svoju više ne skrivah. Rekoh: “Priznat ću Jahvi prijestup svoj”, i ti si mi krivnju grijeha oprostio.
6 ಆದುದರಿಂದ ಭಕ್ತರೆಲ್ಲರು ನೀವು ಸಿಕ್ಕುವ ಕಾಲದಲ್ಲಿ ನಿಮಗೆ ಪ್ರಾರ್ಥನೆ ಮಾಡಲಿ; ನಿಶ್ಚಯವಾಗಿ ನೀರಿನ ಮಹಾಪ್ರವಾಹಗಳು ಅವರ ಸಮೀಪಕ್ಕೆ ಬರುವುದಿಲ್ಲ.
Zato nek' ti se moli pobožnik svaki u času nevolje. Kad bujice silne navale, njega neće stići.
7 ನೀವು ನನಗೆ ಮರೆಮಾಡುವ ಸ್ಥಳವಾಗಿರುವಿರಿ; ಇಕ್ಕಟ್ಟಿನಿಂದ ನನ್ನನ್ನು ಕಾಯುತ್ತೀರಿ; ವಿಮೋಚನಾ ಧ್ವನಿಗಳಿಂದ ನೀವು ನನ್ನನ್ನು ಸುತ್ತುವರಿಯುತ್ತೀರಿ.
Utočište ti si moje, od tjeskobe ti ćeš me sačuvat', odjenut' me radošću spasenja.
8 ಯೆಹೋವ ದೇವರು ಹೇಳುವುದೇನೆಂದರೆ: ನಾನು ನಿನಗೆ ಬುದ್ಧಿ ಹೇಳಿ, ನೀನು ಹೋಗತಕ್ಕ ಮಾರ್ಗವನ್ನು ನಿನಗೆ ಬೋಧಿಸುವೆನು; ನನ್ನ ಮೆಚ್ಚುಗೆಯಿಂದ ನಿನ್ನನ್ನು ನಡೆಸುವೆನು.
Učit ću te, put ti kazat' kojim ti je ići, svjetovat ću te, oko će moje bdjeti nad tobom.
9 ವಿವೇಕವಿಲ್ಲದ ಕುದುರೆಯ ಹಾಗೆಯೂ, ಹೇಸರಗತ್ತೆಯ ಹಾಗೆಯೂ ಇರಬೇಡಿರಿ; ಬಾರಿನಿಂದಲೂ, ಕಡಿವಾಣದಿಂದಲೂ ಅವುಗಳನ್ನು ನಿಯಂತ್ರಿಸಬೇಕು, ಇಲ್ಲದಿದ್ದರೆ ಅವು ನಿಮ್ಮ ಅಧೀನಕ್ಕೆ ಬರುವುದಿಲ್ಲ.
Ne budite kao konj ili mazga bez razuma: divljinu im krotiš vođicama i uzdom, inače im se ne primiči!
10 ದುಷ್ಟರಿಗೆ ವ್ಯಥೆಗಳು ಬಹಳ; ಆದರೆ ಯೆಹೋವ ದೇವರಲ್ಲಿ ಭರವಸವಿಡುವವನನ್ನು ಅದರ ಒಂಡಬಡಿಕೆಯ ಪ್ರೀತಿಯು ಸುತ್ತುವರಿಯುವುದು.
Bezbožnika taru mnoge nevolje, a tko se uzda u Jahvu, njega okružuje milost.
11 ನೀತಿವಂತರೇ, ಯೆಹೋವ ದೇವರಲ್ಲಿ ಸಂತೋಷಿಸಿರಿ, ಉಲ್ಲಾಸಪಡಿರಿ; ಯಥಾರ್ಥ ಹೃದಯ ಉಳ್ಳವರೇ, ಜಯಗೀತೆ ಹಾಡಿರಿ.
Radujte se Jahvi i kličite, pravedni, kličite svi koji ste srca čestita!