< ಕೀರ್ತನೆಗಳು 34 >

1 ದಾವೀದನು ಅಬೀಮೆಲೆಕನ ಎದುರಿನಲ್ಲಿ ಹುಚ್ಚನಂತೆ ತೋರ್ಪಡಿಸಿಕೊಂಡು ಅವನ ಬಳಿಯಿಂದ ಹೊರಕ್ಕೆ ಕಳುಹಿಸಿ ರಚಿಸಿದ ಕೀರ್ತನೆ. ನಾನು ಎಲ್ಲಾ ಕಾಲಗಳಲ್ಲಿ ಯೆಹೋವ ದೇವರನ್ನು ಸ್ತುತಿಸುವೆನು; ಅವರ ಸ್ತೋತ್ರವು ಯಾವಾಗಲೂ ನನ್ನ ಬಾಯಲ್ಲಿ ಇರುವುದು.
Davidi, cum immutavit vultum suum coram Achimelech, et dimisit eum et abiit. Benedicam Dominum in omni tempore: semper laus eius in ore meo.
2 ಯೆಹೋವ ದೇವರಲ್ಲಿ ನನ್ನ ಪ್ರಾಣವು ಹಿಗ್ಗುವುದು; ಇದನ್ನು ದೀನರು ಕೇಳಿ ಸಂತೋಷಪಡುವರು.
In Domino laudabitur anima mea: audiant mansueti, et lætentur.
3 ನನ್ನ ಸಂಗಡ ಯೆಹೋವ ದೇವರನ್ನು ಮಹಿಮೆಪಡಿಸಿರಿ; ನಾವು ಒಟ್ಟಾಗಿ ಅವರ ಹೆಸರನ್ನು ಘನಪಡಿಸೋಣ.
Magnificate Dominum mecum: et exaltemus nomen eius in idipsum.
4 ನಾನು ಯೆಹೋವ ದೇವರನ್ನು ಹುಡುಕಿದೆನು; ಆಗ ಅವರು ನನಗೆ ಉತ್ತರಕೊಟ್ಟು, ಸಕಲ ಭೀತಿಗಳಿಂದ ನನ್ನನ್ನು ಬಿಡಿಸಿದರು.
Exquisivi Dominum, et exaudivit me: et ex omnibus tribulationibus meis eripuit me.
5 ದೇವರನ್ನು ದೃಷ್ಟಿಸಿದವರು ಪ್ರಕಾಶ ಹೊಂದಿದರು; ಅಂಥವರ ಮುಖಗಳು ನಾಚಿಕೆಯಿಂದ ಕುಂದಿಹೋಗುವುದಿಲ್ಲ.
Accedite ad eum, et illuminamini: et facies vestræ non confundentur.
6 ಬಡವನಾದ ನಾನು ಕರೆಯಲು ಯೆಹೋವ ದೇವರು ಕೇಳಿ ನನ್ನ ಎಲ್ಲಾ ಇಕ್ಕಟ್ಟುಗಳೊಳಗಿಂದ ನನ್ನನ್ನು ರಕ್ಷಿಸಿದರು.
Iste pauper clamavit, et Dominus exaudivit eum: et de omnibus tribulationibus eius salvavit eum.
7 ದೇವರಿಗೆ ಭಯಪಡುವವರ ಸುತ್ತಲೂ ಯೆಹೋವ ದೇವರ ದೂತನು ಇಳಿದುಕೊಂಡು ಅವರನ್ನು ಕಾಪಾಡುತ್ತಾನೆ.
Immittet angelus Domini in circuitu timentium eum: et eripiet eos.
8 ಯೆಹೋವ ದೇವರು ಒಳ್ಳೆಯವರೆಂದು ರುಚಿಸಿ ನೋಡಿರಿ; ಅವರನ್ನು ಆಶ್ರಯಿಸುವ ಮನುಷ್ಯನು ಭಾಗ್ಯವಂತನು.
Gustate, et videte quoniam suavis est Dominus: beatus vir, qui sperat in eo.
9 ದೇವರ ಭಕ್ತರೇ, ನೀವು ಯೆಹೋವ ದೇವರಿಗೆ ಭಯಪಡಿರಿ; ಏಕೆಂದರೆ ದೇವಭಕ್ತಿಯುಳ್ಳವರಿಗೆ ಯಾವ ಕೊರತೆಯೂ ಇಲ್ಲ.
Timete Dominum omnes sancti eius: quoniam non est inopia timentibus eum.
10 ಸಿಂಹಗಳು ಹಸಿದು ಬಳಲಬಹುದು, ಆದರೆ ಯೆಹೋವ ದೇವರನ್ನು ಹುಡುಕುವವರಿಗೆ ಯಾವ ಒಳ್ಳೆಯದರ ಕೊರತೆಯೂ ಇರುವುದಿಲ್ಲ.
Divites eguerunt et esurierunt: inquirentes autem Dominum non minuentur omni bono.
11 ಮಕ್ಕಳೇ, ನೀವು ಬಂದು ನನ್ನ ಮಾತನ್ನು ಕೇಳಿರಿ; ನಾನು ಯೆಹೋವ ದೇವರ ಬಗ್ಗೆ ಭಯವನ್ನು ನಿಮಗೆ ಕಲಿಸುವೆನು.
Venite filii, audite me: timorem Domini docebo vos.
12 ನಿಮ್ಮಲ್ಲಿ ಜೀವನವನ್ನು ಪ್ರೀತಿಸುವವನು ಮತ್ತು ಬಹಳ ದಿನಗಳವರೆಗೆ ಬದುಕಬೇಕೆ?
Quis est homo qui vult vitam: diligit dies videre bonos?
13 ನೀನು ಕೇಡಿನಿಂದ ನಿನ್ನ ನಾಲಿಗೆಯನ್ನು, ಮೋಸವನ್ನು ನುಡಿಯದ ಹಾಗೆ ನಿನ್ನ ತುಟಿಗಳನ್ನೂ ನಿಯಂತ್ರಿಸಿಕೋ.
Prohibe linguam tuam a malo: et labia tua ne loquantur dolum.
14 ಕೇಡಿನಿಂದ ತೊಲಗಿ ಒಳ್ಳೆಯದನ್ನು ಮಾಡು; ಸಮಾಧಾನವನ್ನು ಹುಡುಕಿ ಅದನ್ನು ಹಿಂಬಾಲಿಸು.
Diverte a malo, et fac bonum: inquire pacem, et persequere eam.
15 ನೀತಿವಂತರ ಮೇಲೆ ಯೆಹೋವ ದೇವರು ದೃಷ್ಟಿ ಇಡುತ್ತಾರೆ, ಅವರು ಮೊರೆಯಿಡುವಾಗ ದೇವರು ಕಿವಿಗೊಡುತ್ತಾರೆ.
Oculi Domini super iustos: et aures eius in preces eorum.
16 ಆದರೆ ಕೆಟ್ಟದ್ದನ್ನು ಮಾಡುವವರಿಗೆ ಯೆಹೋವ ದೇವರು ವಿಮುಖರಾಗಿದ್ದಾರೆ, ಅಂಥವರ ಹೆಸರನ್ನು ಭೂಮಿಯೊಳಗಿಂದ ತೆಗೆದುಹಾಕುವರು.
Vultus autem Domini super facientes mala: ut perdat de terra memoriam eorum.
17 ನೀತಿವಂತರ ಕೂಗನ್ನು ಯೆಹೋವ ದೇವರು ಕೇಳಿ, ಅವರನ್ನು ಎಲ್ಲಾ ಇಕ್ಕಟ್ಟುಗಳೊಳಗಿಂದ ಬಿಡಿಸುತ್ತಾರೆ.
Clamaverunt iusti, et Dominus exaudivit eos: et ex omnibus tribulationibus eorum liberavit eos.
18 ಮುರಿದ ಹೃದಯದವರಿಗೆ ಯೆಹೋವ ದೇವರು ಸಮೀಪವಾಗಿದ್ದಾರೆ; ಜಜ್ಜಿದ ಆತ್ಮವುಳ್ಳವರನ್ನು ರಕ್ಷಿಸುತ್ತಾರೆ.
Iuxta est Dominus iis, qui tribulato sunt corde: et humiles spiritu salvabit.
19 ನೀತಿವಂತನಿಗೆ ತೊಂದರೆಗಳು ಬಹಳವಾಗಿವೆ; ಆದರೆ ಅವೆಲ್ಲವುಗಳಿಂದ ಯೆಹೋವ ದೇವರು ಅವನನ್ನು ಬಿಡಿಸುತ್ತಾರೆ.
Multæ tribulationes iustorum: et de omnibus his liberabit eos Dominus.
20 ಅವರು ಅವನ ಎಲುಬುಗಳನ್ನೆಲ್ಲಾ ಕಾಪಾಡುತ್ತಾರೆ; ಅವುಗಳಲ್ಲಿ ಒಂದಾದರೂ ಮುರಿದು ಹೋಗುವುದಿಲ್ಲ.
Custodit Dominus omnia ossa eorum: unum ex his non conteretur.
21 ಕೇಡು ದುಷ್ಟನನ್ನೇ ಕೊಲ್ಲುವುದು; ನೀತಿವಂತನನ್ನು ದ್ವೇಷಿಸುವವರು ಶಿಕ್ಷೆಗೆ ಒಳಗಾಗುವರು.
Mors peccatorum pessima: et qui oderunt iustum delinquent.
22 ಯೆಹೋವ ದೇವರು ತಮ್ಮ ಸೇವಕರ ಪ್ರಾಣವನ್ನು ವಿಮೋಚಿಸುತ್ತಾರೆ; ದೇವರನ್ನು ಆಶ್ರಯಿಸುವವರು ಯಾರೂ ಶಿಕ್ಷೆಗೆ ಒಳಗಾಗುವುದಿಲ್ಲ.
Redimet Dominus animas servorum suorum: et non delinquent omnes qui sperant in eo.

< ಕೀರ್ತನೆಗಳು 34 >