< ಕೀರ್ತನೆಗಳು 36 >
1 ಸಂಗೀತ ನಿರ್ದೇಶಕನಿಗಾಗಿರುವ ಕೀರ್ತನೆ. ಯೆಹೋವ ದೇವರ ಸೇವಕನಾದ ದಾವೀದನ ಕೀರ್ತನೆ. ನನ್ನ ಹೃದಯದಲ್ಲಿ ದೇವರಿಂದ ಬಂದ ಸಂದೇಶವು ದುಷ್ಟರ ಪಾಪದ ಬಗ್ಗೆ ಹೀಗಿರುತ್ತದೆ: ಅವರ ದೃಷ್ಟಿಯಲ್ಲಿ ದೇವರ ಭಯವೇ ಇಲ್ಲ.
Dem Vorsänger. Von dem Knechte Jehovas, von David. Die Übertretung des Gesetzlosen spricht im Innern meines Herzens: Es ist keine Furcht Gottes vor seinen Augen.
2 ತಮ್ಮ ಪಾಪವನ್ನು ಹಗೆ ಮಾಡದೆ ಅಥವಾ ಪಾಪವನ್ನು ತಾವು ಕಂಡುಕೊಳ್ಳಲಾರದಷ್ಟು ಅವರು ತಮ್ಮ ದೃಷ್ಟಿಯಲ್ಲಿ ತಮ್ಮನ್ನು ತಾವೇ ಹೊಗಳಿಕೊಳ್ಳುತ್ತಾರೆ.
Denn es schmeichelt ihm in seinen eigenen Augen, seine Ungerechtigkeit zu erreichen, Haß auszuüben.
3 ಅವರ ಬಾಯಿಯ ಮಾತುಗಳು ಅಕ್ರಮವೂ ಮೋಸವೂ ಆಗಿರುತ್ತವೆ; ಬುದ್ಧಿಯಿಂದ ನಡೆಯುವುದನ್ನೂ ಒಳ್ಳೆಯದನ್ನು ಮಾಡುವುದನ್ನೂ ಅವರು ಬಿಟ್ಟಿದ್ದಾರೆ.
Frevel und Trug sind die Worte seines Mundes; er hat es aufgegeben, verständig zu sein, Gutes zu tun.
4 ಕುಯುಕ್ತಿಯನ್ನು ತಮ್ಮ ಹಾಸಿಗೆಯ ಮೇಲೆ ಕಲ್ಪಿಸುತ್ತಾರೆ; ಪಾಪದ ಮಾರ್ಗಕ್ಕೆ ತಮ್ಮನ್ನು ಅರ್ಪಿಸಿಕೊಳ್ಳುತ್ತಾರೆ; ಅವರು ಕೆಟ್ಟದ್ದಕ್ಕೆ ಅಸಹ್ಯಪಡುವುದಿಲ್ಲ.
Frevel ersinnt er auf seinem Lager; er stellt sich auf einen Weg, der nicht gut ist; das Böse verabscheut er nicht.
5 ಯೆಹೋವ ದೇವರೇ, ನಿಮ್ಮ ಒಡಂಬಡಿಕೆಯ ಪ್ರೀತಿಯು ಆಕಾಶವನ್ನು ಮುಟ್ಟುತ್ತದೆ; ನಿಮ್ಮ ನಂಬಿಗಸ್ತಿಕೆಯು ಮೇಘಗಳವರೆಗೆ ಮುಟ್ಟಿದೆ.
Jehova! An die Himmel reicht deine Güte, bis zu den Wolken deine Treue.
6 ನಿಮ್ಮ ನೀತಿಯು ದೊಡ್ಡ ಪರ್ವತಗಳ ಹಾಗಿದೆ; ನಿಮ್ಮ ನ್ಯಾಯತೀರ್ಪುಗಳು ಮಹಾ ಅಗಾಧವೇ. ಯೆಹೋವ ದೇವರೇ, ನೀವು ಮನುಷ್ಯರನ್ನೂ ಮೃಗಗಳನ್ನೂ ಸಂರಕ್ಷಿಸುತ್ತೀರಿ.
Deine Gerechtigkeit ist gleich Bergen Gottes, deine Gerichte sind eine große Tiefe; Menschen und Vieh rettest du, Jehova.
7 ದೇವರೇ, ನಿಮ್ಮ ಒಡಂಬಡಿಕೆಯ ಪ್ರೀತಿಯು ಎಷ್ಟೋ ಅಮೂಲ್ಯವಾದದ್ದು! ಮನುಷ್ಯರು ನಿಮ್ಮ ರೆಕ್ಕೆಗಳ ನೆರಳಿನಲ್ಲಿ ಆಶ್ರಯಪಡೆಯುತ್ತಾರೆ.
Wie köstlich ist deine Güte, o Gott! Und Menschenkinder nehmen Zuflucht zu deiner Flügel Schatten;
8 ನಿಮ್ಮ ಆಲಯದ ಸಮೃದ್ಧಿಯಿಂದ ಅವರು ಸಂತೃಪ್ತಿ ಹೊಂದುವರು; ನಿಮ್ಮ ಹರ್ಷ ನದಿಯಿಂದ ಅವರಿಗೆ ಕುಡಿಯಲು ಕೊಡುವಿರಿ.
sie werden reichlich trinken von der Fettigkeit deines Hauses, und mit dem Strome deiner Wonnen wirst du sie tränken.
9 ಏಕೆಂದರೆ ನಿಮ್ಮ ಬಳಿಯಲ್ಲಿ ಜೀವದ ಬುಗ್ಗೆ ಉಂಟು; ನಿಮ್ಮ ಬೆಳಕಿನಲ್ಲಿ ನಾವು ಬೆಳಕನ್ನು ಕಾಣುವೆವು.
Denn bei dir ist der Quell des Lebens, in deinem Lichte werden wir das Licht sehen.
10 ನಿಮ್ಮನ್ನು ತಿಳಿದವರಿಗೆ ನಿಮ್ಮ ಪ್ರೀತಿಯು ಮುಂದುವರೆಯಲಿ ಯಥಾರ್ಥ ಹೃದಯದವರಿಗೆ ನಿಮ್ಮ ನೀತಿಯೂ ನೆಲೆಯಾಗಲಿ.
Laß deine Güte fortdauern denen, die dich kennen, und deine Gerechtigkeit den von Herzen Aufrichtigen!
11 ಗರ್ವಿಷ್ಠರ ಪಾದ ನನಗೆ ವಿರೋಧವಾಗಿ ಬಾರದೇ ಇರಲಿ; ದುಷ್ಟರ ಕೈ ನನ್ನನ್ನು ತೆಗೆದು ಹಾಕದಿರಲಿ.
Nicht erreiche mich der Fuß der Hochmütigen, und die Hand der Gesetzlosen vertreibe mich nicht!
12 ಕೇಡು ಮಾಡುವವರು ಬಿದ್ದಿದ್ದಾರೆ. ಅವರು ಏಳಲಾರದೆ ಕೆಳಗೆ ಬಿದ್ದಿದ್ದಾರೆ.
Da sind gefallen, die Frevel tun; sie wurden niedergestoßen, und vermochten nicht aufzustehen.