< ಕೀರ್ತನೆಗಳು 38 >

1 ದಾವೀದನ ಕೀರ್ತನೆ. ದುರವಸ್ಥೆಯಲ್ಲಿರುವ ಭಕ್ತನ ದೇವರ ಸಹಾಯದ ಬೇಡಿಕೆ. ಯೆಹೋವ ದೇವರೇ, ನೀವು ಬೇಸರದಿಂದ ನನ್ನನ್ನು ಗದರಿಸಬೇಡಿರಿ; ಮನನೊಂದು ನನ್ನನ್ನು ಶಿಕ್ಷಿಸಬೇಡಿರಿ.
מִזְמֹ֖ור לְדָוִ֣ד לְהַזְכִּֽיר׃ יְֽהוָ֗ה אַל־בְּקֶצְפְּךָ֥ תֹוכִיחֵ֑נִי וּֽבַחֲמָתְךָ֥ תְיַסְּרֵֽנִי׃
2 ಏಕೆಂದರೆ, ನಿಮ್ಮ ಬಾಣಗಳು ನನ್ನಲ್ಲಿ ನಾಟಿವೆ. ನಿಮ್ಮ ಶಿಕ್ಷಾ ಹಸ್ತವು ನನ್ನ ಮೇಲೆ ಭಾರವಾಗಿದೆ.
כִּֽי־חִ֭צֶּיךָ נִ֣חֲתוּ בִ֑י וַתִּנְחַ֖ת עָלַ֣י יָדֶֽךָ׃
3 ನಿಮ್ಮ ಬೇಸರದ ನಿಮಿತ್ತ ನನ್ನ ಶರೀರದಲ್ಲಿ ಸ್ವಸ್ಥತೆ ಏನೂ ಇಲ್ಲ; ನನ್ನ ಪಾಪದ ನಿಮಿತ್ತ ನನ್ನ ಎಲುಬುಗಳಲ್ಲಿ ಕ್ಷೇಮವೇ ಇಲ್ಲ.
אֵין־מְתֹ֣ם בִּ֭בְשָׂרִי מִפְּנֵ֣י זַעְמֶ֑ךָ אֵין־שָׁלֹ֥ום בַּ֝עֲצָמַ֗י מִפְּנֵ֥י חַטָּאתִֽי׃
4 ಏಕೆಂದರೆ, ನನ್ನ ಅಕ್ರಮಗಳು ನನ್ನ ತಲೆಯ ಮೇಲೆ ಏರಿ ಹೋಗಿವೆ; ದೋಷ ಭಾವನೆಯ ಹೊರೆಯು ನನಗೆ ಬಹುಭಾರವಾಗಿವೆ.
כִּ֣י עֲ֭וֹנֹתַי עָבְר֣וּ רֹאשִׁ֑י כְּמַשָּׂ֥א כָ֝בֵ֗ד יִכְבְּד֥וּ מִמֶּֽנִּי׃
5 ನನ್ನ ಮೂರ್ಖತನದ ನಿಮಿತ್ತ ನನಗಾದ ಗಾಯಗಳು ದುರ್ವಾಸನೆಯಿಂದ ಕೀವು ತುಂಬಿವೆ.
הִבְאִ֣ישׁוּ נָ֭מַקּוּ חַבּוּרֹתָ֑י מִ֝פְּנֵ֗י אִוַּלְתִּֽי׃
6 ನಾನು ಬಹಳವಾಗಿ ಬಾಗಿ ಕುಗ್ಗಿದ್ದೇನೆ. ದಿನವೆಲ್ಲಾ ದುಃಖದಿಂದ ನಾನು ಅಲೆಯುತ್ತಿದ್ದೇನೆ.
נַעֲוֵ֣יתִי שַׁחֹ֣תִי עַד־מְאֹ֑ד כָּל־הַ֝יֹּ֗ום קֹדֵ֥ר הִלָּֽכְתִּי׃
7 ನನ್ನ ಸೊಂಟ ಬಹು ಬೇನೆಯಿಂದ ತುಂಬಿದೆ. ನನ್ನ ದೇಹದಲ್ಲಿ ಕ್ಷೇಮವೇ ಇಲ್ಲ.
כִּֽי־כְ֭סָלַי מָלְא֣וּ נִקְלֶ֑ה וְאֵ֥ין מְ֝תֹ֗ם בִּבְשָׂרִֽי׃
8 ಬಲಹೀನನಾಗಿದ್ದೇನೆ, ಬಹಳ ಜಜ್ಜಿ ಹೋಗಿದ್ದೇನೆ; ನನ್ನ ಹೃದಯದ ವೇದನೆಯಿಂದ ನರಳುತ್ತಾ ಇದ್ದೇನೆ.
נְפוּגֹ֣ותִי וְנִדְכֵּ֣יתִי עַד־מְאֹ֑ד שָׁ֝אַ֗גְתִּי מִֽנַּהֲמַ֥ת לִבִּֽי׃
9 ಯೆಹೋವ ದೇವರೇ, ನಿಮಗೆ ನನ್ನ ಅಪೇಕ್ಷೆಗಳೆಲ್ಲಾ ಗೊತ್ತೇ ಇದೆ; ನನ್ನ ನಿಟ್ಟುಸಿರು ನಿಮಗೆ ಮರೆಯಾದದ್ದಲ್ಲ.
אֲ‍ֽדֹנָי נֶגְדְּךָ֥ כָל־תַּאֲוָתִ֑י וְ֝אַנְחָתִ֗י מִמְּךָ֥ לֹא־נִסְתָּֽרָה׃
10 ನನ್ನ ಹೃದಯ ಬಡಿದುಕೊಳ್ಳುತ್ತದೆ. ನನ್ನ ಶಕ್ತಿಯು ನನ್ನನ್ನು ಬಿಟ್ಟುಹೋಗಿದೆ; ನನ್ನ ಕಣ್ಣುಗಳ ಬೆಳಕು ಸಹ ಹೋಗಿಬಿಟ್ಟಿದೆ.
לִבִּ֣י סְ֭חַרְחַר עֲזָבַ֣נִי כֹחִ֑י וְֽאֹור־עֵינַ֥י גַּם־הֵ֝֗ם אֵ֣ין אִתִּֽי׃
11 ನನ್ನ ಪ್ರಿಯರೂ, ನನ್ನ ಸ್ನೇಹಿತರೂ ನನ್ನ ಬಾಧೆಗೆ ಓರೆಯಾಗಿ ನಿಲ್ಲುತ್ತಾರೆ; ನನ್ನ ನೆರೆಯವರು ದೂರದಲ್ಲಿ ನಿಂತಿದ್ದಾರೆ.
אֹֽהֲבַ֨י ׀ וְרֵעַ֗י מִנֶּ֣גֶד נִגְעִ֣י יַעֲמֹ֑דוּ וּ֝קְרֹובַ֗י מֵרָחֹ֥ק עָמָֽדוּ׃
12 ನನ್ನ ಪ್ರಾಣವನ್ನು ಹುಡುಕುವವರು ಬಲೆ ಒಡ್ಡುತ್ತಾರೆ; ನನ್ನ ಕೇಡನ್ನು ಹುಡುಕುವವರು ಕೇಡಿನ ಮಾತುಗಳನ್ನಾಡುತ್ತಾರೆ; ದಿನವೆಲ್ಲಾ ಮೋಸಗಳನ್ನು ಆಲೋಚಿಸುತ್ತಾರೆ.
וַיְנַקְשׁ֤וּ ׀ מְבַקְשֵׁ֬י נַפְשִׁ֗י וְדֹרְשֵׁ֣י רָ֭עָתִי דִּבְּר֣וּ הַוֹּ֑ות וּ֝מִרְמֹ֗ות כָּל־הַיֹּ֥ום יֶהְגּֽוּ׃
13 ಆದರೆ ನಾನು ಕಿವುಡನ ಹಾಗೆ ಕೇಳಿಸಿಕೊಳ್ಳುವುದಿಲ್ಲ; ತನ್ನ ಬಾಯಿ ತೆರೆಯದ ಮೂಕನ ಹಾಗಿದ್ದೇನೆ.
וַאֲנִ֣י כְ֭חֵרֵשׁ לֹ֣א אֶשְׁמָ֑ע וּ֝כְאִלֵּ֗ם לֹ֣א יִפְתַּח־פִּֽיו׃
14 ನಾನು ಕಿವಿ ಕೇಳಿಸದವನಂತೆ ಇದ್ದೇನೆ. ನಾನು ಪ್ರತ್ಯುತ್ತರ ಕೊಡಲಾರದಂತೆಯೂ ಇದ್ದೇನೆ.
וָאֱהִ֗י כְּ֭אִישׁ אֲשֶׁ֣ר לֹא־שֹׁמֵ֑עַ וְאֵ֥ין בְּ֝פִ֗יו תֹּוכָחֹֽות׃
15 ಯೆಹೋವ ದೇವರೇ, ನಿಮ್ಮನ್ನೇ ಎದುರು ನೋಡುತ್ತೇನೆ; ನನ್ನ ದೇವರಾದ ಯೆಹೋವ ದೇವರೇ, ನೀವು ಉತ್ತರ ಕೊಡುವಿರಿ.
כִּֽי־לְךָ֣ יְהוָ֣ה הֹוחָ֑לְתִּי אַתָּ֥ה תַ֝עֲנֶ֗ה אֲדֹנָ֥י אֱלֹהָֽי׃
16 ಏಕೆಂದರೆ ನಾನು, “ಅವರು ನನಗೋಸ್ಕರ ಸಂತೋಷಪಡದೆ ಇರಲಿ ನನ್ನ ಪಾದ ಜಾರುವಾಗ ಅವರು ನನಗೆ ವಿರೋಧವಾಗಿ ತಮ್ಮನ್ನು ಹೆಚ್ಚಿಸಿಕೊಳ್ಳದಿರಲಿ,” ಎಂದುಕೊಂಡೆನು.
כִּֽי־אָ֭מַרְתִּי פֶּן־יִשְׂמְחוּ־לִ֑י בְּמֹ֥וט רַ֝גְלִ֗י עָלַ֥י הִגְדִּֽילוּ׃
17 ನಾನು ಎಡವಿ ಬೀಳಲಿದ್ದೇನೆ; ನನ್ನ ನೋವು ಯಾವಾಗಲೂ ನನ್ನ ಮುಂದೆ ಇದೆ.
כִּֽי־אֲ֭נִי לְצֶ֣לַע נָכֹ֑ון וּמַכְאֹובִ֖י נֶגְדִּ֣י תָמִֽיד׃
18 ನನ್ನ ಅಕ್ರಮವನ್ನು ಅರಿಕೆ ಮಾಡುವೆನು; ನನ್ನ ಪಾಪಕ್ಕೋಸ್ಕರ ದುಃಖಪಡುವೆನು.
כִּֽי־עֲוֹנִ֥י אַגִּ֑יד אֶ֝דְאַ֗ג מֵֽחַטָּאתִֽי׃
19 ನನ್ನ ಶತ್ರುಗಳು ಬಲಗೊಂಡಿದ್ದಾರೆ. ನನ್ನನ್ನು ವಿನಾಕಾರಣವಾಗಿ ದ್ವೇಷಿಸುವವರು ಹೆಚ್ಚಿದ್ದಾರೆ.
וְֽ֭אֹיְבַי חַיִּ֣ים עָצֵ֑מוּ וְרַבּ֖וּ שֹׂנְאַ֣י שָֽׁקֶר׃
20 ನನ್ನ ಶತ್ರುಗಳು ಒಳ್ಳೆಯದಕ್ಕೆ ಬದಲಾಗಿ ಕೇಡನ್ನು ಸಲ್ಲಿಸುತ್ತಿದ್ದಾರೆ. ನಾನು ಒಳ್ಳೆಯದನ್ನು ಹಿಂದಟ್ಟುವ ಕಾರಣ ನನ್ನನ್ನು ಎದುರಿಸುತ್ತಾರೆ.
וּמְשַׁלְּמֵ֣י רָ֭עָה תַּ֣חַת טֹובָ֑ה יִ֝שְׂטְנ֗וּנִי תַּ֣חַת רְדֹופִי־ (רָֽדְפִי)־טֹֽוב׃
21 ಯೆಹೋವ ದೇವರೇ, ನನ್ನನ್ನು ಬಿಡಬೇಡಿರಿ; ನನ್ನ ದೇವರೇ, ನನಗೆ ದೂರವಾಗಿರಬೇಡಿರಿ.
אַל־תַּֽעַזְבֵ֥נִי יְהוָ֑ה אֱ֝לֹהַ֗י אַל־תִּרְחַ֥ק מִמֶּֽנִּי׃
22 ನನ್ನ ರಕ್ಷಕ ಆಗಿರುವ ಯೆಹೋವ ದೇವರೇ, ನನ್ನ ಸಹಾಯಕ್ಕೆ ಬೇಗ ಬನ್ನಿರಿ.
ח֥וּשָׁה לְעֶזְרָתִ֑י אֲ֝דֹנָ֗י תְּשׁוּעָתִֽי׃

< ಕೀರ್ತನೆಗಳು 38 >