< ಕೀರ್ತನೆಗಳು 4 >

1 ಸಂಗೀತ ನಿರ್ದೇಶಕನಿಗಾಗಿರುವ ಕೀರ್ತನೆ. ತಂತಿವಾದ್ಯದೊಡನೆ ಹಾಡತಕ್ಕದ್ದು. ದಾವೀದನ ಕೀರ್ತನೆ. ನನ್ನ ನೀತಿಯಾಗಿರುವ ದೇವರೇ, ನಾನು ಕರೆಯುವಾಗ ನನಗೆ ಸದುತ್ತರವನ್ನು ಕೊಡಿರಿ. ನನ್ನ ಸಂಕಟದಿಂದ ನನಗೆ ನೆಮ್ಮದಿಯನ್ನು ನೀಡಿರಿ; ನನ್ನನ್ನು ಕರುಣಿಸಿ, ನನ್ನ ಪ್ರಾರ್ಥನೆಯನ್ನು ಕೇಳಿರಿ.
Кад Те зовем чуј ме, Боже, правдо моја! У тескоби дај ми простор; смилуј се на ме и услиши молитву моју.
2 ಓ ಮಾನವ, ನೀನು ಎಲ್ಲಿಯತನಕ ನನ್ನ ಮಹಿಮೆಯನ್ನು ಅವಮಾನಕ್ಕೆ ಗುರಿಪಡಿಸುವಿ? ನೀನು ಎಲ್ಲಿಯತನಕ ವ್ಯರ್ಥವಾದದ್ದನ್ನು ಪ್ರೀತಿಸಿ, ಸುಳ್ಳನ್ನು ಹುಡುಕುವಿ?
Синови човечији! Докле ће слава моја бити у срамоти? Докле ћете љубити ништавило и тражити лажи?
3 ಯೆಹೋವ ದೇವರು ತಮ್ಮ ನಂಬಿಗಸ್ತರನ್ನು ತಮಗಾಗಿ ಪ್ರತ್ಯೇಕಿಸಿದ್ದಾರೆ ಎಂದು ತಿಳಿದುಕೊಳ್ಳಿರಿ; ನಾನು ಬೇಡಿಕೊಳ್ಳಲು ಯೆಹೋವ ದೇವರು ನನಗೆ ಉತ್ತರ ನೀಡುವರು.
Знајте да Господ дивно чува светог свог; Господ чује кад Га зовем.
4 ನಡುಗಿರಿ, ಪಾಪಮಾಡಬೇಡಿರಿ; ನೀವು ನಿಮ್ಮ ಹಾಸಿಗೆಯ ಮೇಲೆ ಇರುವಾಗ, ನಿಮ್ಮ ಹೃದಯಗಳಲ್ಲಿ ಧ್ಯಾನಮಾಡಿ ಮೌನವಾಗಿರಿ.
Гневећи се не грешите; размислите у срцима својим на постељама својим, и утолите.
5 ನೀತಿಯ ಬಲಿಗಳನ್ನು ಅರ್ಪಿಸಿರಿ ಯೆಹೋವ ದೇವರಲ್ಲಿ ನಿಮ್ಮ ಭರವಸೆಯನ್ನು ಇಡಿರಿ.
Принесите жртву за правду, и уздајте се у Господа.
6 ಯೆಹೋವ ದೇವರೇ, “ನಮಗೆ ಒಳ್ಳೆಯದನ್ನು ಮಾಡುವವರು ಯಾರು?” ಎಂದು ಕೇಳುವವರು ಅನೇಕರಿದ್ದಾರೆ. ನಿಮ್ಮ ಮುಖಪ್ರಕಾಶವು ನಮ್ಮ ಮೇಲೆ ಬೆಳಗಲಿ.
Многи говоре: Ко ће нам показати шта је добро? Обрати к нама, Господе, светло лице своје.
7 ಧಾನ್ಯವೂ ಹೊಸ ದ್ರಾಕ್ಷಾರಸವೂ ಸುಗ್ಗಿಕಾಲದಲ್ಲಿ ಸಮೃದ್ಧಿಯಾದಾಗ ಇರುವುದಕ್ಕಿಂತಲೂ ಅಧಿಕವಾದ ಆನಂದವನ್ನು ನೀವು ನನ್ನ ಹೃದಯದಲ್ಲಿ ಇಟ್ಟಿದ್ದೀರಿ.
А мени си дао у срце радост већу него што је они имају, кад им роди пшеница и вино.
8 ಸಮಾಧಾನವಾಗಿ ಮಲಗಿ ನಿದ್ರೆ ಮಾಡುವೆನು, ಏಕೆಂದರೆ ಯೆಹೋವ ದೇವರೇ, ನೀವೊಬ್ಬರೇ ನನ್ನನ್ನು ಸುರಕ್ಷಿತವಾಗಿ ವಾಸಿಸುವಂತೆ ಮಾಡುತ್ತೀರಿ.
Ја мирно лежем и спавам; јер Ти, Господе, сам дајеш ми, те сам без страха.

< ಕೀರ್ತನೆಗಳು 4 >