< ಕೀರ್ತನೆಗಳು 41 >
1 ಸಂಗೀತ ನಿರ್ದೇಶಕನಿಗಾಗಿರುವ ಕೀರ್ತನೆ. ದಾವೀದನ ಕೀರ್ತನೆ. ಬಡವರನ್ನು ಪರಾಮರಿಸುವವರು ಧನ್ಯರು; ಕೇಡಿನ ಸಮಯದಲ್ಲಿ ಯೆಹೋವ ದೇವರು ಅವರನ್ನು ತಪ್ಪಿಸುವರು.
Pou direktè koral la; Yon Sòm David A la beni (sila) ki konsidere ka malere a beni! SENYÈ a va delivre li nan jou twoub li.
2 ಯೆಹೋವ ದೇವರು ಅವರನ್ನು ಕಾಪಾಡಿ ಸುರಕ್ಷಿತವಾಗಿಡುವರು; ಅವರು ಭೂಮಿಯಲ್ಲಿ ಧನ್ಯರಾಗಿರುವರು; ದೇವರು ಅವರ ಶತ್ರುಗಳ ಇಚ್ಛೆಗೆ ಅವರನ್ನು ಒಪ್ಪಿಸಿಕೊಡರು.
SENYÈ a va pwoteje li e fè l viv. Li va rele beni sou latè a. Ni li p ap livre a volonte lènmi li yo.
3 ಬಡವರನ್ನು ಪರಾಮರಿಸುವವರನ್ನು ಯೆಹೋವ ದೇವರು ವ್ಯಾಧಿಯ ಮಂಚದಲ್ಲಿ ಬಲಪಡಿಸುವರು; ಅವರ ಅಸ್ವಸ್ಥತೆಯನ್ನು ಯೆಹೋವ ದೇವರು ಹೋಗಲಾಡಿಸಿ ಮರುಸ್ಥಾಪಿಸುವರು.
SENYÈ a va bay li soutyen lè l malad sou kabann nan. Nan maladi li, li va restore li a lasante.
4 “ಯೆಹೋವ ದೇವರೇ, ನನಗೆ ಕರುಣೆ ತೋರಿಸಿ ನನ್ನನ್ನು ಸ್ವಸ್ಥಮಾಡಿರಿ, ಏಕೆಂದರೆ ನಿಮಗೆ ವಿರೋಧವಾಗಿ ಪಾಪಮಾಡಿದ್ದೇನೆ,” ಎಂದು ನಾನು ಹೇಳಿ ಬೇಡುವೆನು.
Konsa, pou mwen, mwen te di: “O SENYÈ, fè m gras. Geri nanm mwen paske mwen te peche kont Ou.”
5 “ಅವನು ಸತ್ತು ಅವನ ಹೆಸರು ನಾಶವಾಗುವುದು ಯಾವಾಗ?” ಎಂದು ನನ್ನ ಶತ್ರುಗಳು ನನ್ನ ಕೇಡನ್ನು ಬಯಸಿ ಮಾತನಾಡುತ್ತಾರೆ.
Lènmi m yo pale mal kont mwen: “Kilè l ap mouri pou non li disparèt?”
6 ನನ್ನನ್ನು ನೋಡುವುದಕ್ಕೆ ಅವರಲ್ಲಿ ಒಬ್ಬನು ಬಂದರೆ, ಕಪಟವಾಗಿ ಮಾತನಾಡುತ್ತಾನೆ. ಅವನ ಹೃದಯ ಕೇಡನ್ನು ಕೂಡಿಟ್ಟುಕೊಳ್ಳುತ್ತಿದೆ. ಅವನು ಹೊರಗೆ ಹೋದ ಮೇಲೆ ಕೇಡನ್ನು ಹಬ್ಬಿಸುತ್ತಾನೆ.
Si li vin wè m, li bay manti. Kè li ranmase mechanste pou kont li. Lè l sòti deyò, li pale sa.
7 ನನ್ನ ಶತ್ರುಗಳೆಲ್ಲರೂ ಸೇರಿ ನನ್ನ ಮೇಲೆ ಪಿಸುಗುಟ್ಟುತ್ತಾರೆ; ನನಗೆ ವಿರೋಧವಾಗಿ ಕೇಡನ್ನು ಕಲ್ಪಿಸುತ್ತಾರೆ.
Tout (sila) ki rayi mwen yo soufle ti pawòl nan zòrèy youn lòt. Kont mwen, yo fè plan pou donmaje mwen epi yo di:
8 “ಕೆಟ್ಟ ರೋಗವು ಅವನನ್ನು ಹಿಡಿದಿದೆ, ಈಗ ಅವನು ಹಾಸಿಗೆ ಹಿಡಿದಿದ್ದಾನೆ ಎಂದಿಗೂ ಏಳುವುದಿಲ್ಲ,” ಎಂದು ಹೇಳಿಕೊಳ್ಳುತ್ತಾರೆ.
“Yon bagay mechan gen tan pran l, pou lè l kouche, pou l pa leve ankò.”
9 ನನ್ನ ರೊಟ್ಟಿಯನ್ನು ತಿಂದವನೂ ನಾನು ನಂಬಿದ್ದವನೂ ಆಗಿರುವ ನನ್ನ ಆಪ್ತ ಸ್ನೇಹಿತನು ಸಹ ನನಗೆ ವಿರೋಧವಾಗಿ ತನ್ನ ಕಾಲನ್ನು ಎತ್ತಿದ್ದಾನೆ.
Menm zanmi ki te pre m nan, nan (sila) mwen te mete konfyans la, li ki te manje pen mwen, te leve talon li kont mwen.
10 ಆದರೆ ಯೆಹೋವ ದೇವರೇ, ನೀವು ನನ್ನನ್ನು ಕರುಣಿಸಿ ನಾನು ಏಳುವಂತೆ ಮಾಡಿರಿ. ನಾನು ಅವರಿಗೆ ಮುಯ್ಯಿಗೆ ಮುಯ್ಯಿತೀರಿಸುವೆನು.
Men Ou menm, O SENYÈ, fè m gras e fè m leve pou m kab bay yo rekonpans yo.
11 ನನ್ನ ಶತ್ರು ನನ್ನ ಮೇಲೆ ಜಯ ಹೊಂದದೆ ಇರುವುದರಿಂದಲೇ, ನೀವು ನನ್ನನ್ನು ಮೆಚ್ಚಿದ್ದೀರಿ ಎಂದು ನಾನು ತಿಳಿದುಕೊಳ್ಳುವೆ.
Se konsa mwen konnen ke Ou pran plezi nan mwen. Akoz lènmi mwen an pa kriye viktwa sou mwen.
12 ಆದರೆ ನೀವು ನನ್ನ ಪ್ರಾಮಾಣಿಕತೆಯ ಕಾರಣ ನನ್ನನ್ನು ಎತ್ತಿ ಹಿಡಿದಿರುವಿರಿ; ನೀವು ನನ್ನನ್ನು ನಿತ್ಯವಾಗಿ ನಿಮ್ಮ ಸಮ್ಮುಖದಲ್ಲಿ ಇರಿಸುವಿರಿ.
Pou mwen menm, Ou soutni mwen nan entegrite m, epi Ou mete mwen nan prezans Ou jis pou tout tan.
13 ಇಸ್ರಾಯೇಲರ ದೇವರಾಗಿರುವ ಯೆಹೋವ ದೇವರಿಗೆ, ಯುಗಯುಗಕ್ಕೂ ಸ್ತುತಿಯಾಗಲಿ.
Beni se SENYÈ a, Bondye Israël la, soti pou tout tan, jis rive pou tout tan. Amen e amen.