< ಕೀರ್ತನೆಗಳು 43 >

1 ದೇವರೇ, ನನ್ನನ್ನು ನಿರ್ದೋಷಿ ಎಂದು ನಿರ್ಣಯಿಸಿರಿ, ಭಕ್ತಿಹೀನ ಜನತೆಯ ವಿರೋಧವಾಗಿ ನನ್ನ ನ್ಯಾಯವನ್ನು ವಾದಿಸಿರಿ. ಮೋಸವೂ ಅನ್ಯಾಯವೂ ಉಳ್ಳ ಮನುಷ್ಯನಿಂದ ನನ್ನನ್ನು ತಪ್ಪಿಸಿರಿ.
שָׁפְטֵ֤נִי אֱלֹהִ֨ים ׀ וְרִ֘יבָ֤ה רִיבִ֗י מִגֹּ֥וי לֹא־חָסִ֑יד מֵ֤אִישׁ־מִרְמָ֖ה וְעַוְלָ֣ה תְפַלְּטֵֽנִי׃
2 ನೀವು ನನ್ನ ದೇವರು, ನನ್ನ ಬಲವಾದ ಕೋಟೆಯು; ನೀವು ಏಕೆ ನನ್ನನ್ನು ತಳ್ಳಿಬಿಟ್ಟಿದ್ದೀರಿ? ಏಕೆ ನಾನು ಶತ್ರುವಿನ ಬಾಧೆಯಿಂದ ದುಃಖದಲ್ಲಿ ನಡೆದುಕೊಳ್ಳಬೇಕು?
כִּֽי־אַתָּ֤ה ׀ אֱלֹהֵ֣י מָֽעוּזִּי֮ לָמָ֪ה זְנַ֫חְתָּ֥נִי לָֽמָּה־קֹדֵ֥ר אֶתְהַלֵּ֗ךְ בְּלַ֣חַץ אֹויֵֽב׃
3 ನಿಮ್ಮ ಬೆಳಕನ್ನೂ ನಿಮ್ಮ ಸತ್ಯವನ್ನೂ ಕಳುಹಿಸಿರಿ; ಅವು ನನ್ನನ್ನು ನೀವು ವಾಸಿಸುವ ನಿಮ್ಮ ಪರಿಶುದ್ಧ ಪರ್ವತಕ್ಕೆ ನನ್ನನ್ನು ಬರಮಾಡಲಿ.
שְׁלַח־אֹורְךָ֣ וַ֭אֲמִתְּךָ הֵ֣מָּה יַנְח֑וּנִי יְבִיא֥וּנִי אֶל־הַֽר־קָ֝דְשְׁךָ֗ וְאֶל־מִשְׁכְּנֹותֶֽיךָ׃
4 ದೇವರೇ, ನನ್ನ ದೇವರೇ, ಆಗ ನಿಮ್ಮ ಬಲಿಪೀಠದ ಬಳಿಗೆ ಬರುವೆನು. ನನ್ನ ಸಂತೋಷವೂ ಹರ್ಷವೂ ಆಗಿರುವ ನಿಮ್ಮ ಬಳಿಗೂ ಬಂದು, ಕಿನ್ನರಿಯಿಂದ ನಿಮ್ಮನ್ನು ಕೊಂಡಾಡುವೆನು.
וְאָבֹ֤ואָה ׀ אֶל־מִזְבַּ֬ח אֱלֹהִ֗ים אֶל־אֵל֮ שִׂמְחַ֪ת גִּ֫ילִ֥י וְאֹודְךָ֥ בְכִנֹּ֗ור אֱלֹהִ֥ים אֱלֹהָֽי׃
5 ನನ್ನ ಪ್ರಾಣವೇ, ನೀನು ಏಕೆ ಕುಗ್ಗಿ ಹೋಗಿದ್ದೀ? ನನ್ನಲ್ಲಿ ನೀನು ಏಕೆ ವ್ಯಥೆಪಡುತ್ತೀ? ದೇವರನ್ನು ನಿರೀಕ್ಷಿಸು; ಅವರೇ ನನ್ನ ರಕ್ಷಕರೂ ದೇವರೂ ಆಗಿದ್ದಾರೆ. ಹೌದು, ನಾನು ದೇವರನ್ನೇ ಕೊಂಡಾಡುತ್ತಿರುವೆನು.
מַה־תִּשְׁתֹּ֬וחֲחִ֨י ׀ נַפְשִׁי֮ וּֽמַה־תֶּהֱמִ֪י עָ֫לָ֥י הֹוחִ֣ילִי לֽ͏ֵ֭אלֹהִים כִּי־עֹ֣וד אֹודֶ֑נּוּ יְשׁוּעֹ֥ת פָּ֝נַ֗י וֵֽאלֹהָֽי׃

< ಕೀರ್ತನೆಗಳು 43 >