< ಕೀರ್ತನೆಗಳು 43 >
1 ದೇವರೇ, ನನ್ನನ್ನು ನಿರ್ದೋಷಿ ಎಂದು ನಿರ್ಣಯಿಸಿರಿ, ಭಕ್ತಿಹೀನ ಜನತೆಯ ವಿರೋಧವಾಗಿ ನನ್ನ ನ್ಯಾಯವನ್ನು ವಾದಿಸಿರಿ. ಮೋಸವೂ ಅನ್ಯಾಯವೂ ಉಳ್ಳ ಮನುಷ್ಯನಿಂದ ನನ್ನನ್ನು ತಪ್ಪಿಸಿರಿ.
೧ದೇವರೇ, ನ್ಯಾಯವನ್ನು ತೀರಿಸು; ನನಗೋಸ್ಕರ ವ್ಯಾಜ್ಯವನ್ನು ನಡೆಸಿ ಭಕ್ತಿ ಇಲ್ಲದ ಜನಾಂಗದಿಂದ ತಪ್ಪಿಸು, ದುರಾಚಾರಿಗಳಾದ ಮೋಸಗಾರರಿಂದ ನನ್ನನ್ನು ಬಿಡಿಸು.
2 ನೀವು ನನ್ನ ದೇವರು, ನನ್ನ ಬಲವಾದ ಕೋಟೆಯು; ನೀವು ಏಕೆ ನನ್ನನ್ನು ತಳ್ಳಿಬಿಟ್ಟಿದ್ದೀರಿ? ಏಕೆ ನಾನು ಶತ್ರುವಿನ ಬಾಧೆಯಿಂದ ದುಃಖದಲ್ಲಿ ನಡೆದುಕೊಳ್ಳಬೇಕು?
೨ದೇವರೇ, ನೀನು ನನಗೆ ದುರ್ಗಸ್ಥಾನವಲ್ಲವೇ; ಏಕೆ ನನ್ನನ್ನು ತಳ್ಳಿಬಿಟ್ಟೆ? ನಾನು ಏಕೆ ಶತ್ರುಬಾಧೆಯಿಂದ ದುಃಖಿಸುತ್ತಾ ವಿಕಾರಿಯಾಗಿ ಅಲೆಯಬೇಕು?
3 ನಿಮ್ಮ ಬೆಳಕನ್ನೂ ನಿಮ್ಮ ಸತ್ಯವನ್ನೂ ಕಳುಹಿಸಿರಿ; ಅವು ನನ್ನನ್ನು ನೀವು ವಾಸಿಸುವ ನಿಮ್ಮ ಪರಿಶುದ್ಧ ಪರ್ವತಕ್ಕೆ ನನ್ನನ್ನು ಬರಮಾಡಲಿ.
೩ನಿನ್ನ ಬೆಳಕನ್ನು, ನಿನ್ನ ಸತ್ಯಪ್ರಸನ್ನತೆಗಳನ್ನು ಕಳುಹಿಸು; ಅವು ನಿನ್ನ ಪರಿಶುದ್ಧಪರ್ವತಕ್ಕೆ ನನ್ನನ್ನು ಕರೆದುಕೊಂಡು ಹೋಗಿ ನಿನ್ನ ನಿವಾಸಕ್ಕೆ ಬರಮಾಡಲಿ.
4 ದೇವರೇ, ನನ್ನ ದೇವರೇ, ಆಗ ನಿಮ್ಮ ಬಲಿಪೀಠದ ಬಳಿಗೆ ಬರುವೆನು. ನನ್ನ ಸಂತೋಷವೂ ಹರ್ಷವೂ ಆಗಿರುವ ನಿಮ್ಮ ಬಳಿಗೂ ಬಂದು, ಕಿನ್ನರಿಯಿಂದ ನಿಮ್ಮನ್ನು ಕೊಂಡಾಡುವೆನು.
೪ದೇವರೇ, ನನ್ನ ದೇವರೇ, ಆಗ ನಾನು ನಿನ್ನ ಯಜ್ಞವೇದಿಯ ಬಳಿಗೆ, ನನ್ನ ಆನಂದನಿಧಿಯಾಗಿರುವ ನಿನ್ನ ಹತ್ತಿರಕ್ಕೆ ಸೇರಿ, ಕಿನ್ನರಿಯನ್ನು ನುಡಿಸುತ್ತಾ ನಿನ್ನನ್ನು ಕೊಂಡಾಡುವೆನು.
5 ನನ್ನ ಪ್ರಾಣವೇ, ನೀನು ಏಕೆ ಕುಗ್ಗಿ ಹೋಗಿದ್ದೀ? ನನ್ನಲ್ಲಿ ನೀನು ಏಕೆ ವ್ಯಥೆಪಡುತ್ತೀ? ದೇವರನ್ನು ನಿರೀಕ್ಷಿಸು; ಅವರೇ ನನ್ನ ರಕ್ಷಕರೂ ದೇವರೂ ಆಗಿದ್ದಾರೆ. ಹೌದು, ನಾನು ದೇವರನ್ನೇ ಕೊಂಡಾಡುತ್ತಿರುವೆನು.
೫ನನ್ನ ಮನವೇ, ನೀನು ಕುಗ್ಗಿ ಹೋಗಿರುವುದೇನು? ಹೀಗೆ ವ್ಯಥೆಪಡುವುದೇಕೆ? ದೇವರನ್ನು ನಿರೀಕ್ಷಿಸು; ಆತನೇ ನನಗೆ ರಕ್ಷಕನೂ, ದೇವರೂ ಆಗಿದ್ದಾನೆ; ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು.