< ಕೀರ್ತನೆಗಳು 44 >

1 ಸಂಗೀತ ನಿರ್ದೇಶಕನಿಗಾಗಿರುವ ಕೀರ್ತನೆ. ಕೋರಹೀಯರ ಮಕ್ಕಳ ಮಾಸ್ಕಿಲ ಪದ್ಯ. ದೇವರೇ, ನಾವು ನಮ್ಮ ಕಿವಿಯಾರೆ ಕೇಳಿದ್ದೇವೆ; ನೀವು ಪೂರ್ವಕಾಲದಲ್ಲಿ ನಮ್ಮ ಪಿತೃಗಳ ದಿವಸಗಳಲ್ಲಿ ಮಾಡಿದ ಕಾರ್ಯವನ್ನು ನಮಗೆ ಅವರು ವಿವರಿಸಿದ್ದಾರೆ.
לַמְנַצֵּחַ ׀ לִבְנֵי־קֹרַח מַשְׂכִּֽיל׃ אֱלֹהִים ׀ בְּאׇזְנֵינוּ שָׁמַעְנוּ אֲבוֹתֵינוּ סִפְּרוּ־לָנוּ פֹּעַל פָּעַלְתָּ בִימֵיהֶם בִּימֵי קֶֽדֶם׃
2 ನೀವು ನಿಮ್ಮ ಕೈಯಿಂದ ಜನಾಂಗಗಳನ್ನು ಹೊರಡಿಸಿ, ನಮ್ಮ ಪಿತೃಗಳನ್ನು ನೆಲೆಗೊಳಿಸಿದಿರಿ; ನೀವು ವೈರಿಗಳನ್ನು ತೆಗೆದುಹಾಕಿ, ನಮ್ಮ ಪಿತೃಗಳಿಗೆ ಸಮೃದ್ಧಿಯನ್ನುಂಟು ಮಾಡಿದಿರಿ.
אַתָּה ׀ יָדְךָ גּוֹיִם הוֹרַשְׁתָּ וַתִּטָּעֵם תָּרַע לְאֻמִּים וַֽתְּשַׁלְּחֵֽם׃
3 ನಮ್ಮ ಪಿತೃಗಳು ತಮ್ಮ ಖಡ್ಗದಿಂದ ದೇಶವನ್ನು ಸ್ವಾಧೀನಪಡಿಸಿಕೊಳ್ಳಲಿಲ್ಲ; ಅವರ ತೋಳು ಅವರಿಗೆ ಜಯ ತರಲಿಲ್ಲ; ಆದರೆ ನಿಮ್ಮ ಬಲಗೈಯೂ ನಿಮ್ಮ ತೋಳೂ ನಿಮ್ಮ ಮುಖದ ಪ್ರಕಾಶವೇ ಅವರಿಗೆ ಜಯವನ್ನು ತಂದಿತು. ಏಕೆಂದರೆ ಅವರನ್ನು ನೀವು ಪ್ರೀತಿಸಿದಿರಿ.
כִּי לֹא בְחַרְבָּם יָרְשׁוּ אָרֶץ וּזְרוֹעָם לֹא־הוֹשִׁיעָה לָּמוֹ כִּֽי־יְמִינְךָ וּזְרוֹעֲךָ וְאוֹר פָּנֶיךָ כִּי רְצִיתָֽם׃
4 ನೀವೇ ನನ್ನ ಅರಸರೂ ದೇವರೂ ಆಗಿದ್ದೀರಿ. ಯಾಕೋಬಿಗೆ ಜಯವನ್ನು ಆಜ್ಞಾಪಿಸುವ ದೇವರಾಗಿದ್ದೀರಿ.
אַתָּה־הוּא מַלְכִּי אֱלֹהִים צַוֵּה יְשׁוּעוֹת יַעֲקֹֽב׃
5 ನಿಮ್ಮಿಂದ ನಮ್ಮ ವೈರಿಗಳನ್ನು ದಬ್ಬುವೆವು; ನಿಮ್ಮ ಹೆಸರಿನಲ್ಲಿ ನಮ್ಮ ಎದುರಾಳಿಗಳನ್ನು ತುಳಿಯುವೆವು.
בְּךָ צָרֵינוּ נְנַגֵּחַ בְּשִׁמְךָ נָבוּס קָמֵֽינוּ׃
6 ನಾನು ನನ್ನ ಬಿಲ್ಲಿನಲ್ಲಿ ಭರವಸೆ ಇಡುವುದಿಲ್ಲ; ನನ್ನ ಖಡ್ಗವು ನನಗೆ ಜಯ ತರುವುದಿಲ್ಲ.
כִּי לֹא בְקַשְׁתִּי אֶבְטָח וְחַרְבִּי לֹא תוֹשִׁיעֵֽנִי׃
7 ಆದರೆ ನೀವು ನಮ್ಮ ವೈರಿಗಳ ಮೇಲೆ ನಮಗೆ ಜಯವನ್ನು ಕೊಟ್ಟಿದ್ದೀರಿ. ನೀವು ನಮ್ಮನ್ನು ದ್ವೇಷಿಸುವವರನ್ನು ನಾಚಿಕೆಪಡಿಸಿದಿರಿ.
כִּי הוֹשַׁעְתָּנוּ מִצָּרֵינוּ וּמְשַׂנְאֵינוּ הֱבִישֽׁוֹתָ׃
8 ದೇವರಲ್ಲಿ ದಿನವೆಲ್ಲಾ ನಾವು ಹಿಗ್ಗುತ್ತಿದ್ದೇವೆ; ನಿಮ್ಮ ಹೆಸರನ್ನು ಯುಗಯುಗಕ್ಕೂ ಕೊಂಡಾಡುವೆವು.
בֵּאלֹהִים הִלַּלְנוּ כׇל־הַיּוֹם וְשִׁמְךָ ׀ לְעוֹלָם נוֹדֶה סֶֽלָה׃
9 ಆದರೆ ಈಗ ನೀವು ನಮ್ಮನ್ನು ತಳ್ಳಿಬಿಟ್ಟದ್ದರಿಂದ ನಾವು ಕುಗ್ಗಿಹೋಗಿದ್ದೇವೆ. ನಮ್ಮ ಸೈನ್ಯಗಳ ಸಂಗಡ ನೀವು ಹೊರಡಲಿಲ್ಲ.
אַף־זָנַחְתָּ וַתַּכְלִימֵנוּ וְלֹא־תֵצֵא בְּצִבְאוֹתֵֽינוּ׃
10 ವೈರಿಯ ಮುಂದೆ ನಾವು ಓಡಿಹೋಗುವಂತೆ ಮಾಡಿದ್ದೀರಿ. ನಮ್ಮ ವೈರಿಗಳು ನಮ್ಮ ಸೊತ್ತನ್ನು ಕೊಳ್ಳೆ ಹೊಡೆಯುತ್ತಾರೆ.
תְּשִׁיבֵנוּ אָחוֹר מִנִּי־צָר וּמְשַׂנְאֵינוּ שָׁסוּ לָֽמוֹ׃
11 ಕಡಿಯತಕ್ಕ ಕುರಿಗಳಂತೆ ನಮ್ಮನ್ನು ಅವರಿಗೆ ಒಪ್ಪಿಸಿದ್ದೀರಿ; ಜನಾಂಗಗಳಲ್ಲಿ ನಮ್ಮನ್ನು ಚದರಿಸಿದ್ದೀರಿ.
תִּתְּנֵנוּ כְּצֹאן מַאֲכָל וּבַגּוֹיִם זֵרִיתָֽנוּ׃
12 ನಿಮ್ಮ ಜನರನ್ನು ನೀವು ಕ್ರಯವಿಲ್ಲದೆ ಮಾರಿಬಿಟ್ಟಂತಿದೆ. ಆ ಮಾರಾಟದಿಂದ ಲಾಭ ಏನೂ ಇಲ್ಲದಂತಿದೆ.
תִּמְכֹּֽר־עַמְּךָ בְלֹא־הוֹן וְלֹֽא־רִבִּיתָ בִּמְחִירֵיהֶֽם׃
13 ನಮ್ಮ ನೆರೆಯವರಿಗೆ ನಾವು ನಿಂದೆಯಾಗಿದ್ದೇವೆ. ನಮ್ಮ ಸುತ್ತಲಿರುವವರಿಗೆ ಗೇಲಿಯಾಗಿಯೂ ಹಾಸ್ಯವೂ ಆಗಿದ್ದೇವೆ.
תְּשִׂימֵנוּ חֶרְפָּה לִשְׁכֵנֵינוּ לַעַג וָקֶלֶס לִסְבִיבוֹתֵֽינוּ׃
14 ನಮ್ಮನ್ನು ಇತರ ದೇಶಗಳವರ ಗಾದೆಗೆ ಆಸ್ಪದ ಮಾಡಿರುವಿರಿ; ಅವರು ನಮ್ಮನ್ನು ಪರಿಹಾಸ್ಯದ ವಿಷಯವನ್ನಾಗಿ ಮಾಡಿಕೊಂಡಿದ್ದಾರೆ.
תְּשִׂימֵנוּ מָשָׁל בַּגּוֹיִם מְנֽוֹד־רֹאשׁ בַּלְאֻמִּֽים׃
15 ನಿಂದಕನ ಮತ್ತು ದೂಷಕನ ಮಾತುಗಳಿಗೂ ಮುಯ್ಯಿಗೆ ಮುಯ್ಯಿ ತೀರಿಸುವ ಶತ್ರುವಿನ ನಿಮಿತ್ತವೂ,
כׇּל־הַיּוֹם כְּלִמָּתִי נֶגְדִּי וּבֹשֶׁת פָּנַי כִּסָּֽתְנִי׃
16 ಸದಾ ನನ್ನ ಅವಮಾನವು ನನ್ನ ಮುಂದೆ ಇದೆ; ನನ್ನ ಮುಖವು ನಾಚಿಕೆಯಿಂದ ಮುಚ್ಚಿದೆ.
מִקּוֹל מְחָרֵף וּמְגַדֵּף מִפְּנֵי אוֹיֵב וּמִתְנַקֵּֽם׃
17 ಇದೆಲ್ಲಾ ನಮ್ಮ ಮೇಲೆ ಬಂತು; ಆದರೆ ನಾವು ನಿಮ್ಮನ್ನು ಮರೆತುಬಿಡಲಿಲ್ಲ; ನಿಮ್ಮ ಒಡಂಬಡಿಕೆಯನ್ನು ಬಿಡಲಿಲ್ಲ.
כׇּל־זֹאת בָּאַתְנוּ וְלֹא שְׁכַחֲנוּךָ וְלֹֽא־שִׁקַּרְנוּ בִּבְרִיתֶֽךָ׃
18 ನಮ್ಮ ಹೃದಯವು ಹಿಂದಿರುಗಲಿಲ್ಲ; ನಮ್ಮ ಹೆಜ್ಜೆಗಳು ನಿಮ್ಮ ಹಾದಿಯಿಂದ ತೊಲಗಲಿಲ್ಲ.
לֹא־נָסוֹג אָחוֹר לִבֵּנוּ וַתֵּט אֲשֻׁרֵינוּ מִנִּי אׇרְחֶֽךָ׃
19 ಆದರೂ ನರಿಗಳ ವಾಸಸ್ಥಳದಂತೆ ನಮ್ಮ ದೇಶವಿದೆ. ಕಾರ್ಗತ್ತಲಿನ ನೆರಳು ನಮ್ಮನ್ನು ಮುಚ್ಚಿಬಿಟ್ಟಂತಿದೆ.
כִּי דִכִּיתָנוּ בִּמְקוֹם תַּנִּים וַתְּכַס עָלֵינוּ בְצַלְמָֽוֶת׃
20 ನಾವು ನಮ್ಮ ದೇವರ ಹೆಸರನ್ನು ಮರೆತು ಅನ್ಯ ದೇವರಿಗೆ ನಮ್ಮ ಕೈಗಳನ್ನು ಚಾಚಿದ್ದರೆ,
אִם־שָׁכַחְנוּ שֵׁם אֱלֹהֵינוּ וַנִּפְרֹשׂ כַּפֵּינוּ לְאֵל זָֽר׃
21 ದೇವರೇ ಹೃದಯದ ರಹಸ್ಯಗಳನ್ನು ತಿಳಿದಿರುವ ನಿಮಗೆ ಅವೆಲ್ಲವೂ ಮರೆಯಾಗಿರುತ್ತಿರಲಿಲ್ಲ.
הֲלֹא אֱלֹהִים יַחֲקׇר־זֹאת כִּי־הוּא יֹדֵעַ תַּעֲלֻמוֹת לֵֽב׃
22 ಹೌದು, ನಿಮಗೋಸ್ಕರ ನಾವು ದಿನವೆಲ್ಲಾ ಮರಣಕ್ಕೆ ಗುರಿಯಾಗಿದ್ದೇವೆ. ವಧಿಸಲಿಕ್ಕಾಗಿರುವ ಕುರಿಗಳಂತೆ ಜನರು ನಮ್ಮನ್ನು ಎಣಿಸಿದ್ದಾರೆ.
כִּֽי־עָלֶיךָ הֹרַגְנוּ כׇל־הַיּוֹם נֶחְשַׁבְנוּ כְּצֹאן טִבְחָֽה׃
23 ಯೆಹೋವ ದೇವರೇ, ಏಳಿರಿ, ಹೌದು ಎದ್ದೇಳಿರಿ ಸದಾಕಾಲಕ್ಕೆ ನಮ್ಮನ್ನು ತಳ್ಳಿಬಿಡಬೇಡಿರಿ.
עוּרָה ׀ לָמָּה תִישַׁן ׀ אֲדֹנָי הָקִיצָה אַל־תִּזְנַח לָנֶֽצַח׃
24 ಏಕೆ ನಿಮ್ಮ ಮುಖವನ್ನು ಮರೆಮಾಡಿಕೊಂಡಿದ್ದೀರಿ? ನಮ್ಮ ಸಂಕಟ ಬಾಧೆಗಳನ್ನು ಮರೆತುಬಿಡುವಿರಾ?
לָֽמָּה־פָנֶיךָ תַסְתִּיר תִּשְׁכַּח עׇנְיֵנוּ וְֽלַחֲצֵֽנוּ׃
25 ನಮ್ಮ ಪ್ರಾಣವು ಮಣ್ಣು ಪಾಲಾದಂತಿದೆ. ನಮ್ಮ ಶರೀರವು ನೆಲ ಪಾಲಾದಂತಿದೆ.
כִּי שָׁחָה לֶעָפָר נַפְשֵׁנוּ דָּבְקָה לָאָרֶץ בִּטְנֵֽנוּ׃
26 ನಮಗೆ ಸಹಾಯಕರಾಗಿ ಏಳಿರಿ; ನಿಮ್ಮ ಒಡಂಬಡಿಕೆಯ ಪ್ರೀತಿಗಾಗಿ ನಮ್ಮನ್ನು ವಿಮೋಚಿಸಿರಿ.
קוּמָֽה עֶזְרָתָה לָּנוּ וּפְדֵנוּ לְמַעַן חַסְדֶּֽךָ׃

< ಕೀರ್ತನೆಗಳು 44 >