< ಕೀರ್ತನೆಗಳು 47 >

1 ಸಂಗೀತ ನಿರ್ದೇಶಕನಿಗಾಗಿರುವ ಕೀರ್ತನೆ. ಕೋರಹೀಯರ ಗೀತೆ. ಎಲ್ಲಾ ಜನರೇ, ಕೈ ತಟ್ಟಿರಿ; ಜಯಾರ್ಭಟದಿಂದ ದೇವರಿಗೆ ಧ್ವನಿಗೈಯಿರಿ. 2 ಏಕೆಂದರೆ ಮಹೋನ್ನತರಾದ ಯೆಹೋವ ದೇವರು ಭಯಭಕ್ತಿಗೆ ಪಾತ್ರರೂ ಭೂಮಿಯ ಮೇಲೆಲ್ಲಾ ಮಹಾರಾಜರೂ ಆಗಿದ್ದಾರೆ. 3 ಜನರನ್ನು ನಮ್ಮ ಕೆಳಗೆ ತಂದಿದ್ದಾರೆ. ಜನಾಂಗಗಳನ್ನು ನಮಗೆ ಅಧೀನಮಾಡಿದ್ದಾರೆ. 4 ಅವರು ಪ್ರೀತಿಸುವ ಯಾಕೋಬಿನ ಘನತೆಯಾಗಿರುವ ನಮ್ಮ ಬಾಧ್ಯತೆಯನ್ನು ನಮಗಾಗಿ ಆಯ್ದುಕೊಂಡಿದ್ದಾರೆ. 5 ದೇವರು ಜಯಘೋಷದಿಂದ ಉನ್ನತರಾಗಿದ್ದಾರೆ. ಯೆಹೋವ ದೇವರು ತುತೂರಿಯ ಧ್ವನಿಯೊಡನೆ ಸಾಗಿದ್ದಾರೆ. 6 ದೇವರಿಗೆ ಸ್ತುತಿಯನ್ನು ಹಾಡಿರಿ, ಸ್ತುತಿಯನ್ನು ಹಾಡಿರಿ; ನಮ್ಮ ರಾಜರಿಗೆ ಸ್ತುತಿಯನ್ನು ಹಾಡಿರಿ, ಸ್ತುತಿಯನ್ನು ಹಾಡಿರಿ. 7 ಏಕೆಂದರೆ, ದೇವರು ಭೂಮಿಗೆಲ್ಲಾ ಮಹಾರಾಜರು. ದೇವರನ್ನು ಸ್ತೋತ್ರದ ಕೀರ್ತನೆಯಿಂದ ಕೀರ್ತಿಸಿರಿ. 8 ದೇವರು ಜನಾಂಗಗಳನ್ನು ಆಳುತ್ತಾರೆ. ದೇವರು ತಮ್ಮ ಪರಿಶುದ್ಧ ಸಿಂಹಾಸನದಲ್ಲಿ ಕೂತಿದ್ದಾರೆ. 9 ರಾಷ್ಟ್ರಗಳ ಅಧಿಪತಿಗಳು ಅಬ್ರಹಾಮನ ದೇವರ ಜನರಾಗಿ ಕೂಡಿಬಂದಿದ್ದಾರೆ. ಏಕೆಂದರೆ, ಭೂಮಿಯ ರಾಜರೆಲ್ಲರೂ ದೇವರಿಗೆ ಸೇರಿದವರು. ದೇವರು ಬಹಳವಾಗಿ ಘನ ಹೊಂದಿದ್ದಾರೆ.

< ಕೀರ್ತನೆಗಳು 47 >