< ಕೀರ್ತನೆಗಳು 47 >

1 ಸಂಗೀತ ನಿರ್ದೇಶಕನಿಗಾಗಿರುವ ಕೀರ್ತನೆ. ಕೋರಹೀಯರ ಗೀತೆ. ಎಲ್ಲಾ ಜನರೇ, ಕೈ ತಟ್ಟಿರಿ; ಜಯಾರ್ಭಟದಿಂದ ದೇವರಿಗೆ ಧ್ವನಿಗೈಯಿರಿ.
למנצח לבני קרח מזמור כל העמים תקעו כף הריעו לאלהים בקול רנה׃
2 ಏಕೆಂದರೆ ಮಹೋನ್ನತರಾದ ಯೆಹೋವ ದೇವರು ಭಯಭಕ್ತಿಗೆ ಪಾತ್ರರೂ ಭೂಮಿಯ ಮೇಲೆಲ್ಲಾ ಮಹಾರಾಜರೂ ಆಗಿದ್ದಾರೆ.
כי יהוה עליון נורא מלך גדול על כל הארץ׃
3 ಜನರನ್ನು ನಮ್ಮ ಕೆಳಗೆ ತಂದಿದ್ದಾರೆ. ಜನಾಂಗಗಳನ್ನು ನಮಗೆ ಅಧೀನಮಾಡಿದ್ದಾರೆ.
ידבר עמים תחתינו ולאמים תחת רגלינו׃
4 ಅವರು ಪ್ರೀತಿಸುವ ಯಾಕೋಬಿನ ಘನತೆಯಾಗಿರುವ ನಮ್ಮ ಬಾಧ್ಯತೆಯನ್ನು ನಮಗಾಗಿ ಆಯ್ದುಕೊಂಡಿದ್ದಾರೆ.
יבחר לנו את נחלתנו את גאון יעקב אשר אהב סלה׃
5 ದೇವರು ಜಯಘೋಷದಿಂದ ಉನ್ನತರಾಗಿದ್ದಾರೆ. ಯೆಹೋವ ದೇವರು ತುತೂರಿಯ ಧ್ವನಿಯೊಡನೆ ಸಾಗಿದ್ದಾರೆ.
עלה אלהים בתרועה יהוה בקול שופר׃
6 ದೇವರಿಗೆ ಸ್ತುತಿಯನ್ನು ಹಾಡಿರಿ, ಸ್ತುತಿಯನ್ನು ಹಾಡಿರಿ; ನಮ್ಮ ರಾಜರಿಗೆ ಸ್ತುತಿಯನ್ನು ಹಾಡಿರಿ, ಸ್ತುತಿಯನ್ನು ಹಾಡಿರಿ.
זמרו אלהים זמרו זמרו למלכנו זמרו׃
7 ಏಕೆಂದರೆ, ದೇವರು ಭೂಮಿಗೆಲ್ಲಾ ಮಹಾರಾಜರು. ದೇವರನ್ನು ಸ್ತೋತ್ರದ ಕೀರ್ತನೆಯಿಂದ ಕೀರ್ತಿಸಿರಿ.
כי מלך כל הארץ אלהים זמרו משכיל׃
8 ದೇವರು ಜನಾಂಗಗಳನ್ನು ಆಳುತ್ತಾರೆ. ದೇವರು ತಮ್ಮ ಪರಿಶುದ್ಧ ಸಿಂಹಾಸನದಲ್ಲಿ ಕೂತಿದ್ದಾರೆ.
מלך אלהים על גוים אלהים ישב על כסא קדשו׃
9 ರಾಷ್ಟ್ರಗಳ ಅಧಿಪತಿಗಳು ಅಬ್ರಹಾಮನ ದೇವರ ಜನರಾಗಿ ಕೂಡಿಬಂದಿದ್ದಾರೆ. ಏಕೆಂದರೆ, ಭೂಮಿಯ ರಾಜರೆಲ್ಲರೂ ದೇವರಿಗೆ ಸೇರಿದವರು. ದೇವರು ಬಹಳವಾಗಿ ಘನ ಹೊಂದಿದ್ದಾರೆ.
נדיבי עמים נאספו עם אלהי אברהם כי לאלהים מגני ארץ מאד נעלה׃

< ಕೀರ್ತನೆಗಳು 47 >