< ಕೀರ್ತನೆಗಳು 48 >

1 ಒಂದು ಗೀತೆ. ಕೋರಹೀಯನ ಪುತ್ರರು ಸಂಯೋಜಿಸಿರುವ ಒಂದು ಕೀರ್ತನೆ. ಯೆಹೋವ ದೇವರು ಮಹೋನ್ನತರೂ ನಮ್ಮ ದೇವರು ತಮ್ಮ ಪರಿಶುದ್ಧ ಪರ್ವತ ಪಟ್ಟಣದಲ್ಲಿ ಬಹಳವಾಗಿ ಸ್ತುತಿಗೆ ಪಾತ್ರರಾಗಿದ್ದಾರೆ.
Псаломска песен на Кореевите синове. Велик е Господ; и твърде достохвален В града на нашия Бог, в Своя свет хълм.
2 ಉತ್ತರ ದಿಕ್ಕಿನಲ್ಲಿರುವ ಮಹಾರಾಜರ ಪಟ್ಟಣವಾದ ಚೀಯೋನ್ ಪರ್ವತವು ಸುಂದರವಾಗಿ ಚಾಪೋನಿನ ಶಿಖರದಂತೆ ಇಡೀ ಭೂಮಿಗೆ ಸಂತೋಷಕರವಾದದ್ದಾಗಿದೆ.
Красив по възвишеността си, радост на цялата земя, Е хълмът Сион, гдето по северните му страни Е градът на великия цар.
3 ದೇವರು ಅದರ ಅರಮನೆಗಳಲ್ಲಿ ವಾಸಿಸುತ್ತಾರೆ. ದೇವರು ತಾವೇ ಅದರ ಭದ್ರಕೋಟೆಯಾಗಿದ್ದಾರೆ.
В палатите му Бог е познат като прибежище.
4 ಏಕೆಂದರೆ, ಇಗೋ, ಅರಸರು ಕೂಡಿಬಂದರು. ಅವರು ಒಟ್ಟಾಗಿ ದಾಳಿಮಾಡಲು ಬಂದರು.
Защото, ето, царете се събраха; Всички преминаха.
5 ಅವರು ಪಟ್ಟಣವನ್ನು ಕಂಡು, ಬೆರಗಾದರು. ಅವರು ಭಯಪಟ್ಟು ಓಡಿಹೋದರು.
Те като видяха почудиха се, Смутиха се, спуснаха се на бяг.
6 ಅಲ್ಲಿ ನಡುಕವವೂ ಹೆರುವವಳ ಹಾಗೆ ನೋವೂ ಅವರನ್ನು ಹಿಡಿಯಿತು.
Трепет ги обзе там, Болки като на раждаща жена.
7 ಪೂರ್ವದಿಕ್ಕಿನ ಗಾಳಿಯಿಂದ ತಾರ್ಷೀಷ್ ಹಡಗುಗಳನ್ನು ನೀವು ಒಡೆಯುತ್ತೀರಲ್ಲಾ.
С източния вятър Ти съкрушаваш тарсийските кораби.
8 ನಾವು ಹೇಗೆ ಕೇಳಿದೆವೋ ಹಾಗೆಯೇ ಕಣ್ಣಾರೆ ಕಂಡೆವು, ಸೇನಾಧೀಶ್ವರ ಯೆಹೋವ ದೇವರ ಪಟ್ಟಣವಾಗಿರುವ, ನಮ್ಮ ದೇವರ ಪಟ್ಟಣದಲ್ಲಿ ಇದನ್ನು ಕಂಡೆವು: ದೇವರು ಪಟ್ಟಣವನ್ನು ಎಂದೆಂದಿಗೂ ಸ್ಥಿರಪಡಿಸುವರು.
Каквото бяхме чули, това и видяхме В града на Господа на Силите, в града на нашия Бог, Който Бог и до века ще утвърди. (Села)
9 ದೇವರೇ, ನಿಮ್ಮ ಒಡಂಬಡಿಕೆಯ ಪ್ರೀತಿಯನ್ನು ನಿಮ್ಮ ಮಂದಿರದಲ್ಲಿ ನಾವು ಸ್ಮರಿಸುತ್ತೇವೆ.
Размишляваме, Боже, за Твоето милосърдие Всред Твоя храм.
10 ದೇವರೇ, ನಿಮ್ಮ ಹೆಸರಿಗೆ ತಕ್ಕಂತೆಯೇ ನಿಮ್ಮ ಸ್ತೋತ್ರವು ಭೂಮಿಯ ಕಟ್ಟಕಡೆಯವರೆಗೂ ಇದೆ; ನಿಮ್ಮ ಬಲಗೈ ನೀತಿಯಿಂದ ತುಂಬಿದೆ.
Според името Ти, Боже, е и хвалата Ти до краищата на земята; Десницата Ти е пълна с правда.
11 ನಿಮ್ಮ ನ್ಯಾಯ ನಿರ್ಣಯಗಳ ನಿಮಿತ್ತ ಚೀಯೋನ್ ಪರ್ವತವು ಸಂತೋಷಪಡಲಿ; ಯೆಹೂದ ಪುತ್ರಿಯರು ಉಲ್ಲಾಸಪಡಲಿ.
Нека се весели хълмът Сион, Нека се радват Юдовите дъщери. Заради Твоите съдби.
12 ಚೀಯೋನನ್ನು ಸುತ್ತಿ ಅದರ ಸುತ್ತಲೂ ತಿರುಗಾಡಿ ಅದರ ಗೋಪುರಗಳನ್ನು ಎಣಿಸಿರಿ.
Обиколете Сион и обходете го; Пребройте кулите му;
13 ಮುಂದಿನ ತಲಾಂತರಕ್ಕೆ ತಿಳಿಸುವುದಕ್ಕೋಸ್ಕರ ಅದರ ಗೋಪುರಗಳನ್ನು ಕಣ್ಣಿಟ್ಟು ನೋಡಿರಿ, ಅದರ ಅರಮನೆಗಳನ್ನು ಲಕ್ಷಿಸಿರಿ.
Обърнете внимание в укрепленията му; Разгледайте палатите му; За да го разказвате на поколението подир вас.
14 ಏಕೆಂದರೆ, ಈ ದೇವರು ಯುಗಯುಗಾಂತರಗಳಿಗೂ ನಮ್ಮ ದೇವರಾಗಿದ್ದಾರೆ; ಅವರು ಅಂತ್ಯದವರೆಗೂ ನಮ್ಮ ಮಾರ್ಗದರ್ಶಿಯಾಗಿರುವರು.
Защото Тоя Бог е наш Бог до вечни векове; Той ще ни ръководи дори до смърт.

< ಕೀರ್ತನೆಗಳು 48 >