< ಕೀರ್ತನೆಗಳು 51 >

1 ಸಂಗೀತ ನಿರ್ದೇಶಕನಿಗಾಗಿರುವ ಕೀರ್ತನೆ. ದಾವೀದನ ಕೀರ್ತನೆ. ದಾವೀದನು ಬತ್ಷೆಬೆಳ ಸಂಗಡ ಪಾಪಮಾಡಿದ ಮೇಲೆ, ಪ್ರವಾದಿಯಾದ ನಾತಾನನು ಅವನ ಹತ್ತಿರ ಬಂದಾಗ ರಚಿಸಿದ ಕೀರ್ತನೆ. ದೇವರೇ, ನಿಮ್ಮ ಒಡಂಬಡಿಕೆಯ ಪ್ರೀತಿಗೆ ಅನುಸಾರವಾಗಿ ನನ್ನನ್ನು ಕರುಣಿಸಿರಿ. ನಿಮ್ಮ ಮಹಾ ಅನುಕಂಪಕ್ಕೆ ಅನುಸಾರವಾಗಿ ನನ್ನ ಅತಿಕ್ರಮಗಳನ್ನು ಅಳಿಸಿಬಿಡಿರಿ.
a karmesternek. Zsoltár Dávidtól. Mikor odament Nátán próféta hozzá, a midőn bement volt Bát-Sébához. Könyörülj rajtam, Istenem, kegyelmed szerint; irgalmad bősége szerint töröld el bűntetteimet.
2 ನನ್ನ ಎಲ್ಲಾ ಅಪರಾಧಗಳಿಂದ ನನ್ನನ್ನು ತೊಳೆದುಬಿಡಿರಿ; ನನ್ನ ಪಾಪದಿಂದ ನನ್ನನ್ನು ಶುದ್ಧಮಾಡಿರಿ.
Sokszorosan moss meg engem bűnömtől, és vétkemtől tisztíts meg.
3 ನನ್ನ ಅತಿಕ್ರಮಗಳನ್ನು ನಾನೇ ತಿಳಿದಿದ್ದೇನೆ, ನನ್ನ ಪಾಪವು ಯಾವಾಗಲೂ ನನ್ನ ಕಣ್ಮುಂದೆಯೇ ಇದೆ.
Mert bűntetteimet tudom én, és vétkem előttem van mindig.
4 ನಿಮಗೇ ನಿಮಗೊಬ್ಬರಿಗೆ ಮಾತ್ರ ವಿರೋಧವಾಗಿ ನಾನು ಪಾಪಮಾಡಿ, ನಿಮ್ಮ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವುದ್ದನ್ನೇ ಮಾಡಿದ್ದೇನೆ. ಹೀಗೆ ನೀವು ನ್ಯಾಯತೀರಿಸುವಾಗ ನೀತಿವಂತರಾಗಿಯೂ ನೀವು ತೀರ್ಪು ನಿರ್ಣಯಿಸುವಾಗ ನ್ಯಾಯವಂತರಾಗಿಯೂ ಇರುವಿರಿ.
Egyedül ellened vétkeztem, a mi rossz a szemeidben, azt tettem; azért, hogy igaznak bizonyulj szóltadban, jogosnak itéltedben.
5 ಹುಟ್ಟಿದಂದಿನಿಂದಲೇ ನಾನು ಪಾಪಿ. ನನ್ನ ತಾಯಿ ನನ್ನನ್ನು ಗರ್ಭಧರಿಸಿದಾಗಲೇ ನಾನು ಪಾಪಿಯೇ.
Lám, bűnben születtem, s vétekben fogant engem anyám.
6 ಆದರೂ ಅಂತರಂಗದಲ್ಲಿ ನೀವು ಯಥಾರ್ಥವನ್ನು ಬಯಸುತ್ತೀರಿ. ನೀವು ಹೃದಯದ ಆಂತರ್ಯದಲ್ಲಿ ನನಗೆ ಜ್ಞಾನವನ್ನು ಬೋಧಿಸಿದ್ದೀರಿ.
Lám, igazat kivánsz a vesékben, s a bensőben bölcseséget tudatsz velem.
7 ಹಿಸ್ಸೋಪಿನಿಂದ ನನ್ನನ್ನು ಶುಚಿಮಾಡಿರಿ, ಆಗ ನಾನು ಶುದ್ಧನಾಗುವೆನು. ನನ್ನನ್ನು ತೊಳೆಯಿರಿ, ಆಗ ಹಿಮಕ್ಕಿಂತ ಬೆಳ್ಳಗಾಗುವೆನು.
Tisztíts meg engem izsóppal, hogy tiszta legyek, moss meg, hogy hónál fehérebb legyek.
8 ನಾನು ಆನಂದವನ್ನೂ ಹರ್ಷವನ್ನೂ ಕೇಳುವಂತೆ ಮಾಡಿರಿ; ನೀವು ಜಜ್ಜಿದ ಎಲುಬುಗಳು ಆನಂದಪಡಲಿ.
Hallass velem vígságot és örömet, újjongjanak a csontok, melyeket összezúztál.
9 ನನ್ನ ಪಾಪಗಳಿಗೆ ನಿಮ್ಮ ಮುಖವನ್ನು ಮರೆಮಾಡಿಕೊಳ್ಳಿರಿ; ನನ್ನ ಅಧರ್ಮಗಳನ್ನೆಲ್ಲಾ ಅಳಿಸಿಬಿಡಿರಿ.
Rejtsd el arczodat vétkeimtől s mind a bűneimet töröld el.
10 ಓ ದೇವರೇ, ಶುದ್ಧ ಹೃದಯವನ್ನು ನನ್ನಲ್ಲಿ ಸೃಷ್ಟಿಮಾಡಿರಿ, ಸ್ಥಿರವಾದ ಆತ್ಮವನ್ನು ನನ್ನಲ್ಲಿ ನವೀಕರಿಸಿರಿ.
Tiszta szívet teremts nekem, Isten, és szilárd szell emet ujíts meg én bennem.
11 ನಿಮ್ಮ ಸನ್ನಿಧಿಯಿಂದ ನನ್ನನ್ನು ಹೊರ ದೂಡಬೇಡಿರಿ; ನಿಮ್ಮ ಪರಿಶುದ್ಧಾತ್ಮರನ್ನು ನನ್ನಿಂದ ತೆಗೆಯಬೇಡಿರಿ.
Ne vess el engem színed elöl, s szent szellemedet ne vedd el tőlem.
12 ನಿಮ್ಮ ರಕ್ಷಣೆಯ ಆನಂದವನ್ನು ನನಗೆ ಪುನಃ ಸ್ಥಾಪಿಸಿರಿ; ನನಗೆ ಸಿದ್ಧ ಆತ್ಮವನ್ನು ನೀಡಿ, ನನ್ನನ್ನು ಬೆಂಬಲಿಸಿರಿ.
Add vissza nekem üdvöd vígságát, és készséges szellemmel támassz engem.
13 ಆಗ ನಾನು ಅತಿಕ್ರಮಿಸಿದವರಿಗೆ ನಿಮ್ಮ ಮಾರ್ಗಗಳನ್ನು ಬೋಧಿಸುವೆನು; ಮತ್ತು ಪಾಪಿಗಳು ನಿಮ್ಮ ಕಡೆಗೆ ತಿರುಗಿಕೊಳ್ಳುವರು.
Hadd tanítsam az elpártolókat útjaidra, hogy a vétkesek hozzád megtérjenek.
14 ದೇವರೇ, ನನ್ನ ರಕ್ಷಣೆಯ ದೇವರೇ, ರಕ್ತಾಪರಾಧದಿಂದ ನನ್ನನ್ನು ಬಿಡಿಸಿರಿ, ನನ್ನ ನಾಲಿಗೆಯು ನಿಮ್ಮ ನೀತಿಯನ್ನು ಹಾಡುವುದು.
Ments meg engem vérbűntől, Isten, segedelmem Istene; újjongjon a nyelvem igazságodon.
15 ಕರ್ತಾ, ನನ್ನ ತುಟಿಗಳನ್ನು ತೆರೆಯಿರಿ. ಆಗ ನನ್ನ ಬಾಯಿ ನಿಮ್ಮ ಸ್ತೋತ್ರವನ್ನು ಪ್ರಸಿದ್ಧಿ ಮಾಡುವುದು.
Uram, ajkaimat nyisd meg, hogy szájam hirdesse dicséretedet.
16 ಯಜ್ಞವನ್ನು ನೀವು ಇಷ್ಟಪಡುವುದಿಲ್ಲ, ಇಲ್ಲವಾದರೆ ನಾನು ಅದನ್ನು ತರುತ್ತಿದ್ದೆನು. ದಹನಬಲಿಗಳಲ್ಲಿ ನೀವು ಸಂತೋಷಪಡುವುದಿಲ್ಲ.
Mert nem kivánsz vágóáldozatot, hisz adnám; égőáldozatot nem kedvelsz.
17 ಓ ದೇವರೇ, ನಿಮಗೆ ಇಷ್ಟವಾದ ಯಜ್ಞಗಳು ಮುರಿದ ಆತ್ಮವೇ. ಮುರಿದಂಥ, ಜಜ್ಜಿದಂಥ ಹೃದಯವನ್ನು ದೇವರು ತಿರಸ್ಕರಿಸುವುದಿಲ್ಲ.
Istennek vágóáldozatai: megtört lélek; megtört, zúzott szívet, oh Isten, nem vetsz meg.
18 ನಿಮ್ಮ ಮೆಚ್ಚುಗೆಯಿಂದ ಚೀಯೋನಿಗೆ ಸಮೃದ್ಧಿಯನ್ನು ನೀಡಿರಿ, ಯೆರೂಸಲೇಮಿನ ಗೋಡೆಗಳನ್ನು ಕಟ್ಟಿರಿ.
Tégy jót Cziónnal kedvességedben, építsd fel Jeruzsálem falait;
19 ಆಗ ನೀತಿಯ ಯಜ್ಞಗಳಲ್ಲಿಯೂ ಸಂಪೂರ್ಣ ದಹನಬಲಿಗಳಲ್ಲಿಯೂ, ನೀವು ಸಂತೋಷಪಡುವಿರಿ; ಆಗ ನಿಮ್ಮ ಬಲಿಪೀಠದ ಮೇಲೆ ಹೋರಿಗಳನ್ನು ಅರ್ಪಿಸಲಾಗುವುದು.
akkor kivánsz majd igazsággal való vágóáldozatokat, égőáldozatot és egész áldozatot, akkor tulkok feljutnak oltárodra.

< ಕೀರ್ತನೆಗಳು 51 >