< ಕೀರ್ತನೆಗಳು 53 >

1 ಸಂಗೀತ ನಿರ್ದೇಶಕನಿಗಾಗಿರುವ ಕೀರ್ತನೆ. ಮಹಲಾತ್ ಎಂಬ ರಾಗದ ಪ್ರಕಾರ ಹಾಡತಕ್ಕದ್ದು. ಮಸ್ಕೀಲ್ ರಾಗದಲ್ಲಿ ರಚಿಸಿದ ದಾವೀದನ ಕೀರ್ತನೆ. “ದೇವರು ಇಲ್ಲಾ,” ಎಂದು ಮೂರ್ಖರು ತಮ್ಮ ಹೃದಯದಲ್ಲಿ ಹೇಳಿಕೊಳ್ಳುತ್ತಾರೆ. ಅವರು ಕೆಟ್ಟು ಹೋದವರು ಅವರ ಮಾರ್ಗಗಳು ಅಸಹ್ಯಕರ. ಅವರಲ್ಲಿ ಒಳ್ಳೆಯದನ್ನು ಮಾಡುವವರು ಒಬ್ಬರೂ ಇಲ್ಲ.
לַמְנַצֵּ֥חַ עַֽל־מָחֲלַ֗ת מַשְׂכִּ֥יל לְדָוִֽד׃ אָ֘מַ֤ר נָבָ֣ל בְּ֭לִבֹּו אֵ֣ין אֱלֹהִ֑ים הִֽ֝שְׁחִ֗יתוּ וְהִֽתְעִ֥יבוּ עָ֝֗וֶל אֵ֣ין עֹֽשֵׂה־טֹֽוב׃
2 ದೇವರನ್ನು ಹುಡುಕುವ ಜ್ಞಾನಿಗಳು ಇದ್ದಾರೋ ಎಂದು ನೋಡುವುದಕ್ಕೆ ದೇವರು ಸ್ವರ್ಗದಿಂದ ಮನುಷ್ಯರ ಮೇಲೆ ದೃಷ್ಟಿಸಿದರು.
אֱ‍ֽלֹהִ֗ים מִשָּׁמַיִם֮ הִשְׁקִ֪יף עַֽל־בְּנֵ֫י אָדָ֥ם לִ֭רְאֹות הֲיֵ֣שׁ מַשְׂכִּ֑יל דֹּ֝רֵ֗שׁ אֶת־אֱלֹהִֽים׃
3 ಒಳ್ಳೆಯದನ್ನು ಮಾಡುವವರು ಯಾರೂ ಇಲ್ಲ, ಒಬ್ಬರಾದರೂ ಇಲ್ಲ. ಎಲ್ಲರೂ ದಾರಿತಪ್ಪಿ ಹೋಗಿದ್ದಾರೆ, ಎಲ್ಲರೂ ಕೆಟ್ಟು ಹೋಗಿದ್ದರು.
כֻּלֹּ֥ו סָג֮ יַחְדָּ֪ו נֶ֫אֱלָ֥חוּ אֵ֤ין עֹֽשֵׂה־טֹ֑וב אֵ֝֗ין גַּם־אֶחָֽד׃
4 ದುಷ್ಟತ್ವವನ್ನು ನಡೆಸುವವರಿಗೆ ಏನೂ ತಿಳಿಯುವುದಿಲ್ಲವೋ? ಅವರು ನನ್ನ ಜನರನ್ನು ರೊಟ್ಟಿಯಂತೆ ತಿಂದು ಬಿಡುತ್ತಾರೆಯೋ? ಅವರು ದೇವರನ್ನು ಸ್ಮರಿಸುವುದೇ ಇಲ್ಲ.
הֲלֹ֥א יָדְעוּ֮ פֹּ֤עֲלֵ֫י אָ֥וֶן אֹכְלֵ֣י עַ֭מִּי אָ֣כְלוּ לֶ֑חֶם אֱ֝לֹהִ֗ים לֹ֣א קָרָֽאוּ׃
5 ಭಯವಿಲ್ಲದಿರುವಲ್ಲಿ ಅವರು ಭಯಭ್ರಾಂತರಾದರು; ಏಕೆಂದರೆ ನಿಮಗೆ ವಿರೋಧವಾಗಿ ದಂಡು ಇಳಿಸುವವರನ್ನು ದೇವರು ಚದರಿಸಿಬಿಟ್ಟಿದ್ದಾರೆ. ನೀವು ಅವರನ್ನು ನಾಚಿಕೆಪಡಿಸಿದ್ದೀರಿ. ಏಕೆಂದರೆ ದೇವರು ಅವರನ್ನು ತಿರಸ್ಕರಿಸಿದ್ದಾರೆ.
שָׁ֤ם ׀ פָּֽחֲדוּ־פַחַד֮ לֹא־הָ֪יָה֫ פָ֥חַד כִּֽי־אֱלֹהִ֗ים פִּ֭זַּר עַצְמֹ֣ות חֹנָ֑ךְ הֱ֝בִשֹׁ֗תָה כִּֽי־אֱלֹהִ֥ים מְאָסָֽם׃
6 ಓ, ಚೀಯೋನಿನಿಂದ ಇಸ್ರಾಯೇಲರಿಗೆ ರಕ್ಷಣೆಯು ಬಂದರೆ ಎಷ್ಟೋ ಒಳ್ಳೆಯದು! ದೇವರು ತಮ್ಮ ಜನರನ್ನು ಸೆರೆಯಿಂದ ತಿರುಗಿ ಬರಮಾಡುವಾಗ ಯಾಕೋಬ್ಯರು ಉಲ್ಲಾಸಗೊಳ್ಳುವರು. ಇಸ್ರಾಯೇಲರು ಸಂತೋಷಿಸುವರು.
מִ֥י יִתֵּ֣ן מִצִּיֹּון֮ יְשֻׁעֹ֪ות יִשְׂרָ֫אֵ֥ל בְּשׁ֣וּב אֱ֭לֹהִים שְׁב֣וּת עַמֹּ֑ו יָגֵ֥ל יַ֝עֲקֹ֗ב יִשְׂמַ֥ח יִשְׂרָאֵֽל׃

< ಕೀರ್ತನೆಗಳು 53 >