< ಕೀರ್ತನೆಗಳು 54 >
1 ಸಂಗೀತ ನಿರ್ದೇಶಕನಿಗಾಗಿರುವ ಕೀರ್ತನೆ. ತಂತಿವಾದ್ಯದೊಡನೆ ಹಾಡತಕ್ಕದ್ದು. ಜಿಫೆಂಬ ಸ್ಥಳದವರು ಸೌಲನ ಬಳಿಗೆ ಬಂದು ದಾವೀದನು ತಮ್ಮಲ್ಲೇ ಅಡಗಿಕೊಂಡಿದ್ದಾನೆಂದು ತಿಳಿಸಿದಾಗ, ಮಸ್ಕಿಲ್ ರಾಗದಲ್ಲಿ ದಾವೀದನು ರಚಿಸಿದ ಕೀರ್ತನೆ. ದೇವರೇ, ನಿಮ್ಮ ಹೆಸರಿನಿಂದ ನನ್ನನ್ನು ರಕ್ಷಿಸಿರಿ. ನಿಮ್ಮ ಬಲದಿಂದ ನನಗೆ ನ್ಯಾಯತೀರಿಸಿರಿ.
೧ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂತಿವಾದ್ಯದೊಡನೆ ಹಾಡತಕ್ಕದ್ದು; ಜಿಫ್ಯರು ಸೌಲನ ಬಳಿಗೆ ಬಂದು ದಾವೀದನು ತಮ್ಮಲ್ಲೇ ಅಡಗಿಕೊಂಡಿದ್ದಾನೆಂದು ತಿಳಿಸಿದಾಗ ದಾವೀದನು ರಚಿಸಿದ ಪದ್ಯ. ದೇವರೇ, ನಿನ್ನ ನಾಮಮಹತ್ತಿನಿಂದ ನನ್ನನ್ನು ರಕ್ಷಿಸು; ನಿನ್ನ ಪರಾಕ್ರಮದಿಂದ ನನ್ನ ನ್ಯಾಯವನ್ನು ಸ್ಥಾಪಿಸು.
2 ದೇವರೇ, ನನ್ನ ಪ್ರಾರ್ಥನೆಯನ್ನು ಕೇಳಿರಿ. ನನ್ನ ಬಾಯಿಯ ಮಾತಿಗೆ ಕಿವಿಕೊಡಿರಿ.
೨ದೇವರೇ, ನನ್ನ ಪ್ರಾರ್ಥನೆಯನ್ನು ಲಾಲಿಸು; ನನ್ನ ಮಾತುಗಳಿಗೆ ಕಿವಿಗೊಡು.
3 ಗರ್ವಿಗಳು ನನಗೆ ವಿರೋಧವಾಗಿ ಎದ್ದಿದ್ದಾರೆ. ಕ್ರೂರಿಗಳು ನನ್ನ ಪ್ರಾಣವನ್ನು ತೆಗೆಯಬೇಕೆಂದಿದ್ದಾರೆ. ಅವರು ದೇವರನ್ನು ಲಕ್ಷಿಸುವದೇ ಇಲ್ಲ.
೩ಗರ್ವಿಗಳು ನನ್ನ ವಿರುದ್ಧವಾಗಿ ನಿಂತಿದ್ದಾರೆ; ಬಲಾತ್ಕಾರಿಗಳು ನನ್ನ ಪ್ರಾಣವನ್ನು ತೆಗೆಯಬೇಕೆಂದಿದ್ದಾರೆ. ಅವರು ದೇವರನ್ನು ಲಕ್ಷಿಸುವುದೇ ಇಲ್ಲ. (ಸೆಲಾ)
4 ನಿಜವಾಗಿಯೂ ದೇವರು ನನ್ನ ಸಹಾಯಕರು. ಯೆಹೋವ ದೇವರು ನನ್ನ ಪ್ರಾಣವನ್ನು ಕಾಪಾಡುವವರು.
೪ಇಗೋ, ದೇವರೇ ನನಗೆ ಸಹಾಯಕನು; ಕರ್ತನೇ ನನ್ನ ಪ್ರಾಣವನ್ನು ಕಾಪಾಡುವವನು.
5 ನನ್ನ ಕೆಡುಕನ್ನು ಬಯಸುವವರು ಕೇಡನ್ನು ಅನುಭವಿಸಲಿ. ನಿಮ್ಮ ನಂಬಿಗಸ್ತಿಕೆಯಿಂದ ನೀವು ಅವರನ್ನು ದಂಡಿಸಿರಿ.
೫ನನ್ನ ಕೆಡುಕಿಗೆ ಸಮಯ ನೋಡುವವರು ತಾವೇ ಕೇಡನ್ನು ಅನುಭವಿಸಲಿ. ನೀನು ನಂಬಿಗಸ್ತನಲ್ಲವೇ; ಅವರನ್ನು ನಿರ್ಮೂಲಮಾಡು.
6 ನಾನು ನಿಮಗೆ ಸ್ವಂತ ಇಚ್ಛೆಯಿಂದ ಬಲಿಯನ್ನು ಅರ್ಪಿಸುವೆನು. ಯೆಹೋವ ದೇವರೇ, ನಿಮ್ಮ ಒಳ್ಳೆಯ ಹೆಸರನ್ನು ಕೊಂಡಾಡುವೆನು.
೬ನಾನು ಸಂತೋಷದಿಂದ ನಿನಗೆ ಯಜ್ಞವನ್ನು ಸಮರ್ಪಿಸುವೆನು; ಉತ್ತಮೋತ್ತಮವಾಗಿರುವ ನಿನ್ನ ಹೆಸರನ್ನು ಕೊಂಡಾಡುವೆನು.
7 ಏಕೆಂದರೆ ಎಲ್ಲಾ ಇಕ್ಕಟ್ಟಿನಿಂದ ನನ್ನನ್ನು ಬಿಡಿಸಿದ ದೇವರು ನೀವೇ. ನನ್ನ ವೈರಿಗಳ ಮೇಲೆ ಜಯ ಸಾಧಿಸಿದ್ದನ್ನು ನಾನು ನೋಡುವೆನು.
೭ಏಕೆಂದರೆ ಯೆಹೋವನೇ, ನೀನು ನನ್ನನ್ನು ಸರ್ವ ಆಪತ್ತುಗಳಿಂದ ಬಿಡಿಸಿ, ನನ್ನ ಕಣ್ಣ ಮುಂದೆಯೇ ನನ್ನ ವೈರಿಗಳನ್ನು ಶಿಕ್ಷಿಸಿದ್ದಿ.