< ಕೀರ್ತನೆಗಳು 55 >

1 ಸಂಗೀತ ನಿರ್ದೇಶಕನಿಗಾಗಿರುವ ಕೀರ್ತನೆ. ತಂತಿವಾದ್ಯದೊಡನೆ ಹಾಡತಕ್ಕದ್ದು. ಮಸ್ಕಿಲ್ ರಾಗದಲ್ಲಿ ದಾವೀದನು ರಚಿಸಿದ ಕೀರ್ತನೆ. ದೇವರೇ, ನನ್ನ ಪ್ರಾರ್ಥನೆಗೆ ಕಿವಿಗೊಡಿರಿ, ನನ್ನ ವಿಜ್ಞಾಪನೆಗೆ ನಿಮ್ಮನ್ನು ಮರೆಮಾಡಿಕೊಳ್ಳಬೇಡಿರಿ.
В конец, в песнех разума, Асафу, псалом. Внуши, Боже, молитву мою и не презри моления моего:
2 ನನ್ನನ್ನು ಆಲೈಸಿರಿ, ನನಗೆ ಉತ್ತರಕೊಡಿರಿ. ನಾನು ನನ್ನ ಚಿಂತೆಯಿಂದ ದುಃಖಿಸುತ್ತಾ ಬೇಸರವಾಗಿದ್ದೇನೆ.
вонми ми и услыши мя: возскорбех печалию моею, и смятохся
3 ಶತ್ರುವಿನ ಗರ್ಜನೆಯಿಂದಲೂ ದುಷ್ಟರ ಬೆದರಿಕೆಯಿಂದಲೂ ನರಳುತ್ತೇನೆ. ಏಕೆಂದರೆ ಅವರು ಅಪರಾಧವನ್ನು ನನ್ನ ಮೇಲೆ ಬರಮಾಡಿ, ಕೋಪದಿಂದ ನನ್ನನ್ನು ಹಗೆ ಮಾಡುತ್ತಾರೆ.
от гласа вражия и от стужения грешнича: яко уклониша на мя беззаконие и во гневе враждоваху ми.
4 ನನ್ನ ಹೃದಯವು ನನ್ನ ಅಂತರಂಗದಲ್ಲಿ ನೊಂದುಕೊಳ್ಳುತ್ತದೆ. ಮರಣದ ಬೆದರಿಕೆಗಳು ನನ್ನ ಮೇಲೆ ಬಿದ್ದಿವೆ.
Сердце мое смятеся во мне, и боязнь смерти нападе на мя:
5 ಭಯವೂ ನಡುಗೂ ನನಗೆ ಬಂದಿವೆ; ಭೀತಿಯು ನನ್ನನ್ನು ಮುಚ್ಚಿದೆ.
страх и трепет прииде на мя, и покры мя тма.
6 “ಓ, ಪಾರಿವಾಳದಂತೆ ನನಗೆ ರೆಕ್ಕೆಗಳು ಇರುತ್ತಿದ್ದರೆ, ಹಾರಿಹೋಗಿ ವಿಶ್ರಾಂತಿಯನ್ನು ತೆಗೆದುಕೊಳ್ಳುತ್ತಿದ್ದೆ.
И рех: кто даст ми криле яко голубине? И полещу, и почию.
7 ನಾನು ದೂರ ಹಾರಿಹೋಗಿ ಮರುಭೂಮಿಯಲ್ಲಿ ವಾಸಿಸುತ್ತಿದ್ದೆ.
Се, удалихся бегая и водворихся в пустыни.
8 ಚಂಡಮಾರುತದಿಂದಲೂ ಬಿರುಗಾಳಿಯಿಂದಲೂ ತಪ್ಪಿಸಿಕೊಳ್ಳುತ್ತಿದ್ದೆ,” ಎಂದುಕೊಂಡೆನು.
Чаях Бога спасающаго мя от малодушия и от бури.
9 ಯೆಹೋವ ದೇವರೇ, ದುಷ್ಟರನ್ನು ಕಳವಳಗೊಳಿಸಿರಿ, ಅವರ ಮಾತುಗಳನ್ನು ನಿಲ್ಲಿಸಿಬಿಡಿರಿ. ಬಲಾತ್ಕಾರವನ್ನೂ ವಿವಾದವನ್ನೂ ಪಟ್ಟಣದಲ್ಲಿ ನಾನು ಕಾಣುತ್ತಿದ್ದೇನೆ.
Потопи, Господи, и раздели языки их: яко видех беззаконие и пререкание во граде.
10 ಅವರು ಹಗಲಿರುಳು ಪಟ್ಟಣದ ಗೋಡೆಗಳನ್ನು ಸುತ್ತುತ್ತಾರೆ. ಕೇಡು ಅನಾಚಾರಗಳು ಅದರ ಮಧ್ಯದಲ್ಲಿ ಇವೆ.
Днем и нощию обыдет и по стенам его: беззаконие и труд посреде его, и неправда:
11 ನಾಶಕರ ಶಕ್ತಿಗಳು ನಗರ ಮಧ್ಯದಲ್ಲಿ ಇವೆ. ಬೀದಿಗಳೊಳಗಿಂದ ಬೆದರಿಕೆಯೂ ವಂಚನೆಯೂ ತೊಲಗುವುದಿಲ್ಲ.
и не оскуде от стогн его лихва и лесть.
12 ನನ್ನನ್ನು ನಿಂದಿಸುವವನು ಶತ್ರುವಲ್ಲ, ಶತ್ರುವಾದರೆ ತಾಳಿಕೊಳ್ಳುತ್ತಿದ್ದೆ. ನನಗೆ ವಿರೋಧವಾಗಿರುವವನು ನನ್ನ ವೈರಿಯಾಗಿದ್ದರೆ, ಅವನಿಂದ ಅಡಗಿಕೊಳ್ಳುತ್ತಿದ್ದೆನು.
Яко аще бы враг поносил ми, претерпел бых убо: и аще бы ненавидяй мя на мя велеречевал, укрылбыхся от него.
13 ಆದರೆ ನನ್ನ ಜೊತೆಗಾರನೂ ನನ್ನ ಆಪ್ತನೂ, ನನಗೆ ಸಮನಾದವನೇ ವಿರೋಧವಾಗಿದ್ದಾನೆ.
Ты же, человече равнодушне, владыко мой и знаемый мой,
14 ದೇವರ ಆಲಯಕ್ಕೆ ಆರಾಧಕರ ಗುಂಪಿನೊಂದಿಗೆ ನಾವಿಬ್ಬರೂ ನಡೆದು ಹೋಗುವಾಗ ಮಧುರ ಅನ್ಯೋನ್ಯತೆಯನ್ನು ಅನುಭವಿಸಿದೆವು.
иже купно наслаждался еси со мною брашен: в дому Божии ходихом единомышлением.
15 ಮರಣ ನನ್ನ ವೈರಿಗಳನ್ನು ತಟ್ಟನೆ ಹಿಡಿಯಲಿ. ಜೀವಸಹಿತ ಪಾತಾಳಕ್ಕೆ ಅವರು ಇಳಿಯಲಿ, ಅವರ ಮನೆಯಲ್ಲಿ ದುಷ್ಟತನವು ಇದೆ. (Sheol h7585)
Да приидет же смерть на ня, и да снидут во ад живи: яко лукавство в жилищих их, посреде их. (Sheol h7585)
16 ಆದರೆ ನಾನು ದೇವರನ್ನು ಕರೆಯುವೆನು. ಯೆಹೋವ ದೇವರು ನನ್ನನ್ನು ರಕ್ಷಿಸುವರು.
Аз к Богу воззвах, и Господь услыша мя.
17 ಸಂಜೆ, ಮುಂಜಾನೆ, ಮಧ್ಯಾಹ್ನಗಳಲ್ಲಿ ಹಂಬಲಿಸಿ ಮೊರೆಯಿಡುವೆನು. ದೇವರು ನನ್ನ ಧ್ವನಿಯನ್ನು ಕೇಳುವರು.
Вечер и заутра и полудне повем и возвещу, и услышит глас мой.
18 ಅನೇಕರು ನನ್ನನ್ನು ವಿರೋಧಿಸಿದರೂ ನನಗೆ ವಿರೋಧವಾಗಿ ಆಗುವ ಯುದ್ಧಗಳಲ್ಲಿ ದೇವರು ನನ್ನನ್ನು ಯಾವುದೇ ಹಾನಿಯಾಗದಂತೆ ವಿಮೋಚಿಸುವರು.
Избавит миром душу мою от приближающихся мне: яко во мнозе бяху со мною.
19 ಆದಿಯಿಂದ ಸಿಂಹಾಸನಾರೂಢರಾಗಿರುವ ದೇವರು, ಅವರ ಮೊರೆಯನ್ನು ಕೇಳಿ ಅವರನ್ನು ತಗ್ಗಿಸುವರು, ಏಕೆಂದರೆ, ಅವರು ದೇವರಿಗೆ ಭಯಪಡುವುದಿಲ್ಲ. ದೇವರು ಬದಲಾಗುವುದಿಲ್ಲ.
Услышит Бог, и смирит я сый прежде век: несть бо им изменения, яко не убояшася Бога.
20 ನನ್ನ ಜೊತೆಗಾರನು ತನ್ನ ಸ್ನೇಹಿತನ ಮೇಲೆ ದಾಳಿಮಾಡಿದ್ದಾನೆ. ತಾನು ಮಾಡಿದ ಒಡಂಬಡಿಕೆಯನ್ನು ಭಂಗಪಡಿಸಿದ್ದಾನೆ.
Простре руку свою на воздаяние: оскверниша завет Его.
21 ಅವನ ಬಾಯಿಯ ಮಾತುಗಳು ಬೆಣ್ಣೆಗಿಂತ ನುಣ್ಣಗಾಗಿವೆ; ಆದರೆ ಅವನ ಹೃದಯದಲ್ಲಿ ಕಾಳಗವಿದೆ; ಅವನ ಮಾತುಗಳು ಎಣ್ಣೆಗಿಂತ ನಯವಾಗಿವೆ; ಆದರೆ ಅವು ಬಿಚ್ಚುಗತ್ತಿಗಳಾಗಿವೆ.
Разделишася от гнева лица Его, и приближишася сердца их: умякнуша словеса их паче елеа, и та суть стрелы.
22 ಯೆಹೋವ ದೇವರ ಮೇಲೆ ನಿಮ್ಮ ಭಾರವನ್ನು ಹಾಕಿರಿ. ಅವರು ನಿಮಗೆ ಆಧಾರವಾಗಿರುವರು. ದೇವರು ಎಂದೆಂದಿಗೂ ನೀತಿವಂತನನ್ನು ಕದಲಗೊಡಿಸುವುದಿಲ್ಲ.
Возверзи на Господа печаль твою, и Той тя препитает: не даст в век молвы праведнику.
23 ಆದರೆ ದೇವರೇ, ದುಷ್ಟರನ್ನು ನಾಶದ ಕುಣಿಯಲ್ಲಿ ಇಳಿಯ ಮಾಡುವಿರಿ. ಕೊಲೆಪಾತಕರೂ ಮೋಸಗಾರರೂ ತಮ್ಮ ಆಯುಷ್ಕಾಲದಲ್ಲಿ ಅರ್ಧವನ್ನೂ ಜೀವಿಸುವುದಿಲ್ಲ. ನಾನಾದರೋ ನಿಮ್ಮಲ್ಲಿ ಭರವಸವಿಡುತ್ತೇನೆ.
Ты же, Боже, низведеши их в студенец истления: мужие кровей и льсти не преполовят дний своих. Аз же, Господи, уповаю на Тя.

< ಕೀರ್ತನೆಗಳು 55 >