< ಕೀರ್ತನೆಗಳು 56 >
1 ಸಂಗೀತ ನಿರ್ದೇಶಕನಿಗಾಗಿರುವ ಕೀರ್ತನೆ. “ದೂರದ ಓಕ್ ಮರದ ಮೇಲೆ ಪಾರಿವಾಳ ಕುಳಿತಿದೆ” ಎಂಬ ರಾಗವನ್ನು ಆಧರಿಸಿದೆ. ದಾವೀದನ ಮಿಕ್ಟಮ್ ಹಾಡಿನ ಸಂಯೋಜನೆ. ದಾವೀದನ ಗತ್ ಎಂಬ ಊರಲ್ಲಿ ಫಿಲಿಷ್ಟಿಯರ ಕೈವಶವಾದಾಗ ರಚಿಸಿದ ಕಾವ್ಯ. ದೇವರೇ ಕರುಣಿಸು, ಏಕೆಂದರೆ ಮನುಷ್ಯರು ನನ್ನನ್ನು ಬೆನ್ನಟ್ಟುತ್ತಿದ್ದಾರೆ. ದಿನವೆಲ್ಲಾ ವಿರೋಧಿಸುತ್ತಾ ನನ್ನನ್ನು ಬಾಧಿಸುತ್ತಿದ್ದಾರೆ.
Til songmeisteren, etter «Den mållause duva langt burte»; av David, ein miktam, då filistarane tok honom i Gat. Ver meg nådig, Gud, for menneskje vil sluka meg; heile dagen trengjer dei meg med strid.
2 ನನ್ನ ವಿರೋಧಿಗಳು ದಿನವೆಲ್ಲಾ ನನ್ನನ್ನು ಬೆನ್ನಟ್ಟುತ್ತಿದ್ದಾರೆ. ಗರ್ವದಿಂದ ನನಗೆ ವಿರೋಧವಾಗಿ ಯುದ್ಧ ಮಾಡುತ್ತಿದ್ದಾರೆ.
Dei vil sluka meg dei som lurar på meg, heile dagen; for mange er dei som i stormod strider imot meg.
3 ನಾನು ಭಯಪಡುವ ಸಮಯದಲ್ಲಿ ನಿಮ್ಮಲ್ಲಿ ಭರವಸೆ ಇಡುವೆನು.
Den dagen då eg ottast, set eg mi lit til deg.
4 ದೇವರ ಮಾತುಗಳಲ್ಲಿ ನಾನು ಹೆಮ್ಮೆಪಡುವೆನು. ದೇವರಲ್ಲಿಯೇ ಭರವಸೆ ಇಡುವೆನು, ನಾನು ಭಯಪಡುವುದಿಲ್ಲ. ಸಾಯುವ ಮನುಷ್ಯನು ನನಗೇನು ಮಾಡಬಲ್ಲ?
Ved Gud skal eg lova hans ord, til Gud set eg lit, eg ottast ikkje, kva skulde kjøt kunna gjera meg?
5 ಶತ್ರುಗಳು ನನ್ನ ಮಾತುಗಳನ್ನು ಸದಾ ಅಪಾರ್ಥ ಮಾಡಿಕೊಳ್ಳುತ್ತಾರೆ. ನನಗೆ ವಿರೋಧವಾಗಿರುವ ಅವರ ಆಲೋಚನೆಗಳೆಲ್ಲಾ ಕೇಡಿಗಾಗಿವೆ.
Heile dagen rengjer dei mine ord; alle deira tankar er imot meg til det som vondt er.
6 ಅವರು ಕೂಡಿಕೊಂಡು ಹೊಂಚುಹಾಕುತ್ತಾರೆ. ನನ್ನ ಪ್ರಾಣ ತೆಗೆಯಲು ಕುತೂಹಲದಿಂದ ನನ್ನ ಹೆಜ್ಜೆಗಳನ್ನು ಗುರುತಿಸುತ್ತಾರೆ.
Dei slær seg saman, dei lurer, dei vaktar på mine stig, då dei trår etter livet mitt.
7 ಅಪರಾಧದಿಂದ ಅವರು ತಪ್ಪಿಸಿಕೊಂಡಾರೋ? ದೇವರೇ ಜನರನ್ನು ಕಠಿಣವಾಗಿ ದಂಡಿಸಿರಿ.
Skulde dei med sin vondskap koma seg undan? Gud, støyt folkeslag ned i vreide!
8 ನನ್ನ ಗೋಳಾಟವನ್ನು ಎಣಿಕೆ ಮಾಡಿರಿ, ನಿಮ್ಮ ಸುರುಳಿಯಲ್ಲಿ ನನ್ನ ಕಣ್ಣೀರ ಲೆಕ್ಕಮಾಡಿರಿ, ಅವು ನಿಮ್ಮ ಗ್ರಂಥದಲ್ಲಿ ಬರೆದಿದೆಯಲ್ಲವೇ?
Du hev talt kor ofte eg hev fare på flugt, mine tåror er gøymde i di flaska; stend dei ikkje i di bok?
9 ನಾನು ನಿಮಗೆ ಮೊರೆಯಿಟ್ಟಾಗ, ನನ್ನ ಶತ್ರುಗಳು ಹಿಂದಿರುಗುವರು. ಇದರಿಂದ ದೇವರು ನನಗಿದ್ದಾರೆ ಎಂಬುದನ್ನು ತಿಳಿದುಕೊಳ್ಳುವೆನು.
Då skal mine fiendar venda attende, den dagen eg ropar; det veit eg, at Gud er med meg.
10 ನಾನು ದೇವರಲ್ಲಿಯೂ ದೇವರ ವಾಕ್ಯದಲ್ಲಿಯೂ ಹೆಮ್ಮೆಪಡುವೆನು. ಹೌದು, ದೇವರಲ್ಲಿಯೂ ಯೆಹೋವ ದೇವರ ವಾಕ್ಯದಲ್ಲಿಯೂ ಹೆಮ್ಮೆಪಡುವೆನು.
Ved Gud skal eg lova ordet; ved Herren skal eg lova ordet.
11 ನಾನು ದೇವರಲ್ಲಿ ಭರವಸೆಯಿಡುವೆನು. ನಾನು ಭಯಪಡುವುದಿಲ್ಲ. ಮಾನವನು ನನಗೇನು ಮಾಡುವನು?
Til Gud set eg lit, eg ottast ikkje; kva kann menneskje gjera meg?
12 ನನ್ನ ದೇವರೇ ನಾನು ನಿಮಗೆ ಸಲ್ಲಿಸಿದ ಹರಕೆಗಳಿಗೆ ಅಧೀನವಾಗಿದ್ದೇನೆ. ನಾನು ಉಪಕಾರ ಸ್ತುತಿಯ ಕಾಣಿಕೆಗಳನ್ನು ನಿಮಗೆ ಸಲ್ಲಿಸುವೆನು.
Gud, eg hev lovnader på meg til deg; eg vil løysa deim ut med takkoffer til deg.
13 ಏಕೆಂದರೆ ನೀವು ನನ್ನ ಪ್ರಾಣವನ್ನು ಮರಣದಿಂದ ಬಿಡಿಸಿದ್ದೀರಿ. ನಾನು ಜೀವದ ಬೆಳಕಿನಲ್ಲಿ ನಿಮ್ಮ ಮುಂದೆ ನಡೆದುಕೊಳ್ಳುವ ಹಾಗೆ ನೀವು ನನ್ನ ಪಾದಗಳನ್ನು ಎಡವದಂತೆ ಕಾಪಾಡಿದ್ದೀರಿ.
For du hev berga mi sjæl frå dauden, ja mine føter frå fall, so eg kann ferdast for Gud i ljoset åt dei livande.