< ಕೀರ್ತನೆಗಳು 57 >

1 ಸಂಗೀತ ನಿರ್ದೇಶಕನಿಗಾಗಿರುವ ಕೀರ್ತನೆ. ಅಲ್ತಷ್ಖೇತೆಂಬ ರಾಗವನ್ನು ಆಧರಿಸಿದೆ. ದಾವೀದನ ಮಿಕ್ಟಮ್ ಹಾಡಿನ ಸಂಯೋಜನೆ. ದಾವೀದನು ಸೌಲನ ಭಯದಿಂದ ಓಡಿಹೋಗಿ ಗುಹೆಯಲ್ಲಿ ಅಡಗಿಕೊಂಡಿದ್ದಾಗ ರಚಿಸಿದ ಕಾವ್ಯ. ದೇವರೇ ನನ್ನನ್ನು ಕರುಣಿಸಿರಿ, ನನ್ನನ್ನು ಕರುಣಿಸಿರಿ. ನನ್ನ ಪ್ರಾಣವು ನಿಮ್ಮನ್ನು ಆಶ್ರಯಿಸಿಕೊಂಡಿದೆ; ಆಪತ್ತುಗಳು ದಾಟುವವರೆಗೂ ನಿಮ್ಮ ರೆಕ್ಕೆಗಳ ನೆರಳನ್ನೇ ನಾನು ಆಶ್ರಯಿಸಿಕೊಳ್ಳುತ್ತೇನೆ.
לַמְנַצֵּחַ אַל־תַּשְׁחֵת לְדָוִד מִכְתָּם בְּבׇרְחוֹ מִפְּנֵי־שָׁאוּל בַּמְּעָרָֽה׃ חׇנֵּנִי אֱלֹהִים ׀ חׇנֵּנִי כִּי בְךָ חָסָיָה נַפְשִׁי וּבְצֵֽל־כְּנָפֶיךָ אֶחְסֶה עַד יַעֲבֹר הַוּֽוֹת׃
2 ಮಹೋನ್ನತನಾದ ದೇವರಿಗೆ, ಮೊರೆಯಿಡುತ್ತೇನೆ. ನನಗಾಗಿ ಕಾರ್ಯಗಳಿಗೆ ನ್ಯಾಯ ನೀಡುವ ದೇವರಿಗೆ ಮೊರೆಯಿಡುತ್ತೇನೆ.
אֶקְרָא לֵֽאלֹהִים עֶלְיוֹן לָאֵל גֹּמֵר עָלָֽי׃
3 ದೇವರು ಪರಲೋಕದಿಂದ ಸಹಾಯ ಕಳುಹಿಸಿ, ನನ್ನನ್ನು ನಿಂದಿಸುವವರನ್ನು ದಂಡಿಸಿ, ನನ್ನನ್ನು ರಕ್ಷಿಸುವರು. ದೇವರು ತಮ್ಮ ಒಡಂಬಡಿಕೆಯ ಪ್ರೀತಿಯನ್ನೂ ತಮ್ಮ ಸತ್ಯವನ್ನೂ ಕಳುಹಿಸುವರು.
יִשְׁלַח מִשָּׁמַיִם ׀ וְֽיוֹשִׁיעֵנִי חֵרֵף שֹׁאֲפִי סֶלָה יִשְׁלַח אֱלֹהִים חַסְדּוֹ וַאֲמִתּֽוֹ׃
4 ನಾನು ಸಿಂಹಗಳಂಥವರ ಮಧ್ಯದಲ್ಲಿದ್ದೇನೆ. ಕ್ರೂರಮೃಗಗಳಂಥವರ ಮಧ್ಯದಲ್ಲಿ ಒತ್ತಾಯವಾಗಿ ವಾಸಮಾಡುತ್ತಿದ್ದೇನೆ. ಅವರ ಹಲ್ಲು, ಭಲ್ಲೆ, ಬಾಣಗಳೂ ಅವರ ನಾಲಿಗೆ ಹದವಾದ ಖಡ್ಗವೂ ಆಗಿವೆ.
נַפְשִׁי ׀ בְּתוֹךְ לְבָאִם אֶשְׁכְּבָה לֹהֲטִים בְּֽנֵי־אָדָם שִׁנֵּיהֶם חֲנִית וְחִצִּים וּלְשׁוֹנָם חֶרֶב חַדָּֽה׃
5 ಓ, ದೇವರೇ, ಆಕಾಶಗಳ ಮೇಲೆ ನಿಮ್ಮ ಘನವು ಮೆರೆಯಲಿ. ಭೂಮಿಯ ಮೇಲೆಲ್ಲಾ ನಿಮ್ಮ ಮಹಿಮೆಯು ಹರಡಲಿ.
רוּמָה עַל־הַשָּׁמַיִם אֱלֹהִים עַל כׇּל־הָאָרֶץ כְּבוֹדֶֽךָ׃
6 ಶತ್ರುಗಳು ನನ್ನ ಕಾಲುಗಳಿಗೆ ಬಲೆಯೊಡ್ಡಿದ್ದಾರೆ. ನನ್ನ ಪ್ರಾಣವು ಕುಗ್ಗಿಹೋಗಿದೆ. ನನ್ನ ದಾರಿಯಲ್ಲಿ ಕುಣಿಯನ್ನು ಅಗೆದಿದ್ದಾರೆ. ಅದರಲ್ಲಿ ತಾವೇ ಬಿದ್ದುಹೋದರು.
רֶשֶׁת ׀ הֵכִינוּ לִפְעָמַי כָּפַף נַפְשִׁי כָּרוּ לְפָנַי שִׁיחָה נָפְלוּ בְתוֹכָהּ סֶֽלָה׃
7 ದೇವರೇ, ನನ್ನ ಹೃದಯವು ಸ್ಥಿರವಾಗಿದೆ. ಹೌದು, ನನ್ನ ಹೃದಯವು ಸ್ಥಿರವಾಗಿದೆ. ನಾನು ಸಂಗೀತದೊಡನೆ ಹಾಡುವೆನು.
נָכוֹן לִבִּי אֱלֹהִים נָכוֹן לִבִּי אָשִׁירָה וַאֲזַמֵּֽרָה׃
8 ಎಚ್ಚರವಾಗು, ನನ್ನ ಪ್ರಾಣವೇ, ವೀಣೆಯೇ, ಕಿನ್ನರಿಯೇ ಎಚ್ಚರವಾಗಿರಿ, ನಾನು ಉದಯಕಾಲವನ್ನು ಎಚ್ಚರಗೊಳಿಸುವೆನು.
עוּרָה כְבוֹדִי עוּרָֽה הַנֵּבֶל וְכִנּוֹר אָעִירָה שָּֽׁחַר׃
9 ಯೆಹೋವ ದೇವರೇ, ಜನಾಂಗಗಳಲ್ಲಿ ನಾನು ನಿಮ್ಮನ್ನು ಕೊಂಡಾಡುವೆನು. ಜನರ ಮಧ್ಯದಲ್ಲಿ ನಿಮ್ಮನ್ನು ಹಾಡಿ ಕೊಂಡಾಡುವೆನು.
אוֹדְךָ בָעַמִּים ׀ אֲדֹנָי אֲזַמֶּרְךָ בַּלְאֻמִּֽים׃
10 ಆಕಾಶಕ್ಕಿಂತ ನಿಮ್ಮ ಪ್ರೀತಿ ದೊಡ್ಡದು. ಮೇಘವನ್ನು ನಿಲುಕುವಷ್ಟು ನಿಮ್ಮ ಸತ್ಯವು ಉನ್ನತವಾಗಿವೆ.
כִּֽי־גָדֹל עַד־שָׁמַיִם חַסְדֶּךָ וְֽעַד־שְׁחָקִים אֲמִתֶּֽךָ׃
11 ಓ, ದೇವರೇ, ಆಕಾಶಗಳ ಮೇಲೆ ನಿಮ್ಮ ಘನವು ಮೆರೆಯಲಿ. ಭೂಮಿಯ ಮೇಲೆಲ್ಲಾ ನಿಮ್ಮ ಮಹಿಮೆಯು ಹರಡಲಿ.
רוּמָה עַל־שָׁמַיִם אֱלֹהִים עַל כׇּל־הָאָרֶץ כְּבוֹדֶֽךָ׃

< ಕೀರ್ತನೆಗಳು 57 >