< ಕೀರ್ತನೆಗಳು 59 >

1 ಸಂಗೀತ ನಿರ್ದೇಶಕನಿಗಾಗಿರುವ ಕೀರ್ತನೆ. ಅಲ್ತಷ್ಖೇತೆಂಬ ರಾಗವನ್ನು ಆಧರಿಸಿದೆ. ದಾವೀದನ ಮಿಕ್ಟಮ್ ಹಾಡಿನ ಸಂಯೋಜನೆ. ಸೌಲನು ಕಳುಹಿಸಿದವರು ದಾವೀದನ ಜೀವ ತೆಗೆಯಬೇಕೆಂದು ಅವನ ಮನೆಯ ಸುತ್ತಲೂ ಒಳಸಂಚುಮಾಡಿದಾಗ ಅವನು ರಚಿಸಿದ ಕಾವ್ಯ. ದೇವರೇ, ನನ್ನ ಶತ್ರುಗಳಿಂದ ನನ್ನನ್ನು ಬಿಡಿಸಿರಿ. ನನಗೆ ವಿರೋಧವಾಗಿ ಎದ್ದವರಿಂದ ನನ್ನನ್ನು ರಕ್ಷಿಸಿರಿ
לַמְנַצֵּחַ אַל־תַּשְׁחֵת לְדָוִד מִכְתָּם בִּשְׁלֹחַ שָׁאוּל וַֽיִּשְׁמְרוּ אֶת־הַבַּיִת לַהֲמִיתֽוֹ׃ הַצִּילֵנִי מֵאֹיְבַי ׀ אֱלֹהָי מִֽמִּתְקוֹמְמַי תְּשַׂגְּבֵֽנִי׃
2 ಕೆಡುಕನ್ನು ಮಾಡುವವರಿಂದ ನನ್ನನ್ನು ಬಿಡಿಸಿರಿ. ಕೊಲೆಪಾತಕರಿಂದ ನನ್ನನ್ನು ರಕ್ಷಿಸಿರಿ.
הַצִּילֵנִי מִפֹּעֲלֵי אָוֶן וּֽמֵאַנְשֵׁי דָמִים הֽוֹשִׁיעֵֽנִי׃
3 ಇಗೋ, ನನ್ನ ಪ್ರಾಣಕ್ಕೆ ಅವರು ಒಳಸಂಚುಮಾಡುತ್ತಾರೆ. ಕ್ರೂರರು ನನಗೆ ವಿರೋಧವಾಗಿ ಕೂಡಿಕೊಳ್ಳುತ್ತಾರೆ. ಯೆಹೋವ ದೇವರೇ, ನನ್ನಲ್ಲಿ ಅಪರಾಧವಿಲ್ಲ, ನಾನು ಯಾವ ತಪ್ಪೂ ಮಾಡಿಲ್ಲ.
כִּי הִנֵּה אָרְבוּ לְנַפְשִׁי יָגוּרוּ עָלַי עַזִּים לֹֽא־פִשְׁעִי וְלֹא־חַטָּאתִי יְהֹוָֽה׃
4 ನನ್ನಲ್ಲಿ ತಪ್ಪು ಇಲ್ಲದಿದ್ದರೂ ಅವರು ಹಾನಿಮಾಡಲು ಸಿದ್ಧರಾಗಿದ್ದಾರೆ. ನನ್ನ ಅವಸ್ಥೆಯನ್ನು ನೋಡಿರಿ, ನನಗೆ ಸಹಾಯ ಮಾಡುವುದಕ್ಕೆ ಸಿದ್ಧರಾಗಿರಿ.
בְּֽלִי־עָוֺן יְרֻצוּן וְיִכּוֹנָנוּ עוּרָה לִקְרָאתִי וּרְאֵֽה׃
5 ಸರ್ವಶಕ್ತರಾದ ಯೆಹೋವ ದೇವರೇ, ಇಸ್ರಾಯೇಲರ ದೇವರೇ, ನೀವು ಎಲ್ಲಾ ಜನಾಂಗಗಳನ್ನು ನ್ಯಾಯತೀರಿಸುವುದಕ್ಕೆ ಎಚ್ಚರವಾಗಿರಿ. ದುಷ್ಟ ಅಪರಾಧಿಗಳಲ್ಲಿ ಯಾರಿಗೂ ದಯೆಸಿಗದಿರಲಿ.
וְאַתָּה יְהֹוָֽה־אֱלֹהִים ׀ צְבָאוֹת אֱלֹהֵי יִשְׂרָאֵל הָקִיצָה לִפְקֹד כׇּֽל־הַגּוֹיִם אַל־תָּחֹן כׇּל־בֹּגְדֵי אָוֶן סֶֽלָה׃
6 ಅವರು ಸಂಜೆಗೆ ಹಿಂದಿರುಗುವರು. ನಾಯಿಯ ಹಾಗೆ ಬೊಗಳುವರು. ಪಟ್ಟಣವನ್ನು ಸುತ್ತುವರು.
יָשׁוּבוּ לָעֶרֶב יֶהֱמוּ כַכָּלֶב וִיסוֹבְבוּ עִֽיר׃
7 ಇಗೋ, ತಮ್ಮ ಬಾಯಿಂದ ಬೊಗಳುತ್ತಾರೆ. ಅವರ ತುಟಿಗಳಲ್ಲಿ ಖಡ್ಗಗಳು ಇವೆ. ಅವರು, “ನಮ್ಮನ್ನು ಕೇಳುವವರು ಯಾರು?” ಎಂದು ಅಂದುಕೊಳ್ಳುತ್ತಾರೆ.
הִנֵּה ׀ יַבִּיעוּן בְּפִיהֶם חֲרָבוֹת בְּשִׂפְתֽוֹתֵיהֶם כִּי־מִי שֹׁמֵֽעַ׃
8 ಆದರೆ ಯೆಹೋವ ದೇವರೇ, ನೀವು ಅವರನ್ನು ನೋಡಿ ನಗುವಿರಿ. ಇತರ ಜನಾಂಗವೆಲ್ಲ ಅಪಹಾಸ್ಯಕ್ಕಿಡಾಗಲಿ.
וְאַתָּה יְהֹוָה תִּשְׂחַק־לָמוֹ תִּלְעַג לְכׇל־גּוֹיִֽם׃
9 ದೇವರೇ, ನನ್ನ ಬಲವೇ, ನಿಮಗಾಗಿ ಕಾದುಕೊಂಡಿರುವೆನು. ನನ್ನ ದೇವರೇ, ನೀವು ನನ್ನ ಕೋಟೆಯಾಗಿರುವಿರಿ.
עֻזּוֹ אֵלֶיךָ אֶשְׁמֹרָה כִּֽי־אֱלֹהִים מִשְׂגַּבִּֽי׃
10 ದೇವರು ಪ್ರಸನ್ನರಾಗಿ ನನ್ನ ಮುಂದೆ ಹೋಗುವರು. ದೇವರು ನನ್ನ ನಿಂದಕರ ಮೇಲೆ ಜಯಿಸುವಂತೆ ಮಾಡುವರು.
אֱלֹהֵי (חסדו) [חַסְדִּי] יְקַדְּמֵנִי אֱלֹהִים יַרְאֵנִי בְשֹׁרְרָֽי׃
11 ನಮ್ಮ ಗುರಾಣಿಯಾಗಿರುವ ಯೆಹೋವ ದೇವರೇ, ನನ್ನ ಜನರು ಮರೆಯದ ಹಾಗೆ ಅವರು ಉಳಿದಿರಲಿ. ನಿಮ್ಮ ಪರಾಕ್ರಮದಿಂದ ಅವರನ್ನು ದಂಡಿಸಿರಿ.
אַל־תַּהַרְגֵם ׀ פֶּֽן־יִשְׁכְּחוּ עַמִּי הֲנִיעֵמוֹ בְחֵילְךָ וְהוֹרִידֵמוֹ מָגִנֵּנוּ אֲדֹנָֽי׃
12 ಅವರ ಬಾಯಿಯ ಪಾಪಕ್ಕೂ, ಅವರ ತುಟಿಗಳ ಮಾತಿಗೂ, ಅವರು ನುಡಿಯುವ ಶಾಪಕ್ಕೂ ಅವರ ಗರ್ವವೇ ಅವರನ್ನು ಹಿಡಿಯಲಿ.
חַטַּאת־פִּימוֹ דְּֽבַר־שְׂפָתֵימוֹ וְיִלָּכְדוּ בִגְאוֹנָם וּמֵאָלָה וּמִכַּחַשׁ יְסַפֵּֽרוּ׃
13 ಅವರು ದಂಡನೆಗೆ ತುತ್ತಾಗಲಿ. ಅವರು ನಿರ್ನಾಮವಾಗಿಬಿಡಲಿ. ಆಗ ಯಾಕೋಬರನ್ನು ಆಳುವವರು ದೇವರೇ ಎಂಬುದು ಇಡೀ ಲೋಕಕ್ಕೇ ಗೊತ್ತಾಗಲಿ.
כַּלֵּה בְחֵמָה כַּלֵּה וְֽאֵינֵמוֹ וְֽיֵדְעוּ כִּֽי־אֱלֹהִים מֹשֵׁל בְּֽיַעֲקֹב לְאַפְסֵי הָאָרֶץ סֶֽלָה׃
14 ಅವರು ಸಂಜೆಗೆ ಹಿಂದಿರುಗುವರು. ನಾಯಿಯ ಹಾಗೆ ಬೊಗಳುವರು. ಪಟ್ಟಣವನ್ನು ಸುತ್ತುವರು.
וְיָשֻׁבוּ לָעֶרֶב יֶהֱמוּ כַכָּלֶב וִיסוֹבְבוּ עִֽיר׃
15 ಅವರು ಆಹಾರಕ್ಕಾಗಿ ಅಲೆದಾಡುವರು. ತೃಪ್ತಿಯಾಗದಿದ್ದರೆ ಗೊಣಗುಟ್ಟುವರು.
הֵמָּה (ינועון) [יְנִיעוּן] לֶאֱכֹל אִם־לֹא יִשְׂבְּעוּ וַיָּלִֽינוּ׃
16 ಆದರೆ ನಾನು ನಿಮ್ಮ ಬಲವನ್ನು ಕುರಿತು ಹಾಡುವೆನು. ಹೌದು, ಮುಂಜಾನೆ ನಿಮ್ಮ ಪ್ರೀತಿಯ ಕುರಿತು ಹಾಡುವೆನು. ಏಕೆಂದರೆ ನೀವು ನನಗೆ ಭದ್ರಕೋಟೆಯೂ, ನನ್ನ ಇಕ್ಕಟ್ಟಿನಲ್ಲಿ ಆಶ್ರಯವಾಗಿಯೂ ಇದ್ದೀರಿ.
וַאֲנִי ׀ אָשִׁיר עֻזֶּךָ וַאֲרַנֵּן לַבֹּקֶר חַסְדֶּךָ כִּֽי־הָיִיתָ מִשְׂגָּב לִי וּמָנוֹס בְּיוֹם צַר־לִֽי׃
17 ನನ್ನ ಬಲವಾಗಿರುವವರೇ, ನಿಮ್ಮನ್ನು ಕೊಂಡಾಡುವೆನು. ಏಕೆಂದರೆ ದೇವರೇ, ನೀವು ನನ್ನ ಭದ್ರಕೋಟೆ ಆಗಿದ್ದೀರಿ. ನೀವು ನಾನು ಭರವಸೆ ಇಡುವ ಕರುಣೆಯುಳ್ಳ ದೇವರೂ ಆಗಿದ್ದೀರಿ.
עֻזִּי אֵלֶיךָ אֲזַמֵּרָה כִּֽי־אֱלֹהִים מִשְׂגַּבִּי אֱלֹהֵי חַסְדִּֽי׃

< ಕೀರ್ತನೆಗಳು 59 >