< ಕೀರ್ತನೆಗಳು 60 >

1 ಸಂಗೀತ ನಿರ್ದೇಶಕನಿಗಾಗಿರುವ ಕೀರ್ತನೆ. ಷೂಷನ್ ಎದೂತೆಂಬ ರಾಗವನ್ನು ಆಧರಿಸಿದೆ. ದಾವೀದನ ಮಿಕ್ಟಮ್ ಹಾಡಿನ ಸಂಯೋಜನೆ. ಪರಾಜಿತರು ದೈವೋತ್ತರವನ್ನು ಆಧಾರಮಾಡಿಕೊಂಡು ಪ್ರಾರ್ಥಿಸುವುದು. ಯೋವಾಬನು ಉಪ್ಪಿನ ತಗ್ಗಿನಲ್ಲಿ ಹನ್ನೆರಡು ಸಾವಿರ ಎದೋಮ್ಯರನ್ನು ಹೊಡೆದಾಗ ದಾವೀದನು ರಚಿಸಿದ ಕೀರ್ತನೆ. ದೇವರೇ, ನನ್ನನ್ನು ಕೈಬಿಟ್ಟಿದ್ದೀರಾ? ನನ್ನನ್ನು ಚದರಿಸಿದ್ದೀರಾ? ನಮ್ಮ ಕಡೆಗೆ ಬೇಸರಗೊಂಡರೂ ನಮ್ಮನ್ನು ಪುನಃ ಸ್ಥಾಪಿಸಿರಿ.
לַמְנַצֵּחַ עַל־שׁוּשַׁן עֵדוּת מִכְתָּם לְדָוִד לְלַמֵּֽד׃ בְּהַצּוֹתוֹ ׀ אֶת ־ אֲרַם נַהֲרַיִם וְאֶת־אֲרַם צוֹבָה וַיָּשׇׁב יוֹאָב וַיַּךְ אֶת־אֱדוֹם בְּגֵיא־מֶלַח שְׁנֵים עָשָׂר אָֽלֶף׃ אֱלֹהִים זְנַחְתָּנוּ פְרַצְתָּנוּ אָנַפְתָּ תְּשׁוֹבֵֽב לָֽנוּ׃
2 ದೇಶವು ಕಂಪನಗೊಂಡು ಒಡೆದುಹೋಗಿದೆ. ಅದರ ಬಿರುಕುಗಳನ್ನು ಸ್ವಸ್ಥಮಾಡಿರಿ, ಅದು ನಡುಗುತ್ತಿದೆ.
הִרְעַשְׁתָּה אֶרֶץ פְּצַמְתָּהּ רְפָה שְׁבָרֶיהָ כִי־מָֽטָה׃
3 ನಿಮ್ಮ ಜನರಿಗೆ ಕಠಿಣ ಕಾಲಗಳನ್ನು ನೀವು ತೋರಿಸಿದ್ದೀರಿ. ನಾವು ಭ್ರಮಣಗೊಳಿಸುವ ದ್ರಾಕ್ಷಾರಸವನ್ನು ಕುಡಿದವರಂತೆ ಆದೆವು.
הִרְאִיתָ עַמְּךָ קָשָׁה הִשְׁקִיתָנוּ יַיִן תַּרְעֵלָֽה׃
4 ನಿಮ್ಮ ಭಕ್ತರಿಗೆ ಧ್ವಜವನ್ನು ನಿಲ್ಲಿಸಿದ್ದೀರಿ. ಶತ್ರುಗಳ ಬಿಲ್ಲಿನ ವಿರುದ್ಧ ಹಾರಿಸಬಹುದಾದ ಧ್ವಜವನ್ನೇ ನೀಡಿದ್ದೀರಿ.
נָתַתָּה לִּירֵאֶיךָ נֵּס לְהִתְנוֹסֵס מִפְּנֵי קֹשֶׁט סֶֽלָה׃
5 ನೀವು ಪ್ರೀತಿಸುವವರು ಬಿಡುಗಡೆಯಾಗುವಂತೆ ನಿಮ್ಮ ಬಲಗೈಯಿಂದ ರಕ್ಷಿಸಿ ನಮಗೆ ಸಹಾಯಮಾಡಿರಿ.
לְמַעַן יֵחָלְצוּן יְדִידֶיךָ הוֹשִׁיעָה יְמִינְךָ (ועננו) [וַעֲנֵֽנִי]׃
6 ದೇವರು ತಮ್ಮ ಪರಿಶುದ್ಧ ಸ್ಥಳದಿಂದ ಹೀಗೆ ನುಡಿದಿದ್ದಾರೆ: “ನಾನು ಜಯದಿಂದ ಶೆಕೆಮ್ ಪ್ರದೇಶವನ್ನು ಹಂಚುವೆನು. ಸುಕ್ಕೋತಿನ ತಗ್ಗನ್ನು ಅಳತೆ ಮಾಡುವೆನು.
אֱלֹהִים ׀ דִּבֶּר בְּקׇדְשׁוֹ אֶעְלֹזָה אֲחַלְּקָה שְׁכֶם וְעֵמֶק סֻכּוֹת אֲמַדֵּֽד׃
7 ಗಿಲ್ಯಾದ್ ನನ್ನದು; ಮನಸ್ಸೆ ನನ್ನದು, ಎಫ್ರಾಯೀಮ್ ನನ್ನ ಶಿರಸ್ತ್ರಾಣ, ಯೆಹೂದವು ನನ್ನ ರಾಜದಂಡ.
לִי גִלְעָד ׀ וְלִי מְנַשֶּׁה וְאֶפְרַיִם מָעוֹז רֹאשִׁי יְהוּדָה מְחֹֽקְקִֽי׃
8 ಮೋವಾಬ್ ನನ್ನ ಸ್ನಾನ ಪಾತ್ರೆಯು, ಎದೋಮ್ ನನ್ನ ಕೆರಗಳ ಸ್ಥಳ. ಫಿಲಿಷ್ಟಿಯರ ಮೇಲೆ ಜಯೋತ್ಸಾಹ ಮಾಡುವೆನು.”
מוֹאָב ׀ סִיר רַחְצִי עַל־אֱדוֹם אַשְׁלִיךְ נַעֲלִי עָלַי פְּלֶשֶׁת הִתְרוֹעָֽעִי׃
9 ಕೋಟೆಯ ಪಟ್ಟಣಕ್ಕೆ ನನ್ನನ್ನು ಕರೆತರುವವರು ಯಾರು? ಎದೋಮಿಗೆ ನನ್ನನ್ನು ನಡೆಸುವವರು ಯಾರು?
מִי יֹבִלֵנִי עִיר מָצוֹר מִי נָחַנִי עַד־אֱדֽוֹם׃
10 ದೇವರೇ, ಈಗ ನೀವು ನಮ್ಮ ಸೈನ್ಯಗಳ ಸಂಗಡ ಹೊರಡುವುದಿಲ್ಲವೋ ನಮ್ಮನ್ನು ಕೈಬಿಟ್ಟಿದ್ದೀರೋ?
הֲלֹֽא־אַתָּה אֱלֹהִים זְנַחְתָּנוּ וְֽלֹא־תֵצֵא אֱלֹהִים בְּצִבְאוֹתֵֽינוּ׃
11 ವೈರಿಗಳ ವಿರೋಧ ನಮಗೆ ಸಹಾಯಮಾಡಿರಿ. ಮನುಷ್ಯರ ಸಹಾಯವು ವ್ಯರ್ಥ.
הָֽבָה־לָּנוּ עֶזְרָת מִצָּר וְשָׁוְא תְּשׁוּעַת אָדָֽם׃
12 ದೇವರಿಂದ ನಾವು ಜಯ ಹೊಂದುವೆವು. ದೇವರೇ ನಮ್ಮ ವೈರಿಗಳನ್ನು ತುಳಿದುಬಿಡುವರು.
בֵּאלֹהִים נַֽעֲשֶׂה־חָיִל וְהוּא יָבוּס צָרֵֽינוּ׃

< ಕೀರ್ತನೆಗಳು 60 >