< ಕೀರ್ತನೆಗಳು 61 >
1 ಸಂಗೀತ ನಿರ್ದೇಶಕನಿಗಾಗಿರುವ ಕೀರ್ತನೆ. ತಂತಿವಾದ್ಯದೊಡನೆ ಹಾಡತಕ್ಕದ್ದು. ದಾವೀದನ ಕೀರ್ತನೆ. ದೇವರೇ, ನನ್ನ ಮೊರೆಯನ್ನು ಕೇಳಿರಿ. ನನ್ನ ಪ್ರಾರ್ಥನೆಯನ್ನು ಆಲಿಸಿರಿ.
다윗의 시, 영장으로 현악에 맞춘 노래 하나님이여 나의 부르짖음을 들으시며 내 기도에 유의하소서
2 ನನ್ನ ಹೃದಯವು ಕುಂದಿ ಹೋಗಿರಲಾಗಿ ಭೂಮಿಯ ಅಂತ್ಯದಿಂದ ನಿಮಗೆ ಮೊರೆಯಿಡುತ್ತಿರುವೆನು. ನನಗಿಂತ ಎತ್ತರವಾದ ಬಂಡೆಗೆ ನನ್ನನ್ನು ನಡೆಸಿರಿ.
내 마음이 눌릴 때에 땅 끝에서부터 주께 부르짖으오리니 나보다 높은 바위에 나를 인도하소서
3 ನೀವೇ ನನಗೆ ಆಶ್ರಯವಾಗಿದ್ದೀರಿ. ಶತ್ರುವಿಗೆ ಎದುರಾಗಿ ಬಲವಾದ ಬುರುಜಾಗಿದ್ದೀರಿ.
주는 나의 피난처시요 원수를 피하는 견고한 망대심이니이다
4 ನಿಮ್ಮ ಗುಡಾರದಲ್ಲಿ ನಿತ್ಯವಾಗಿ ನಿವಾಸಿಸಲು ಹಾರೈಸುತ್ತಿದ್ದೇನೆ. ನಿಮ್ಮ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆನು.
내가 영원히 주의 장막에 거하며 내가 주의 날개 밑에 피하리이다(셀라)
5 ದೇವರೇ, ನೀವು ನನ್ನ ಹರಕೆಗಳನ್ನು ಕೇಳಿದ್ದೀರಿ. ನಿಮ್ಮ ಹೆಸರಿಗೆ ಭಯಪಡುವವರಿಗೆ ಕೊಡುವ ಸೊತ್ತನ್ನು ನನಗೂ ಕೊಟ್ಟಿದ್ದೀರಿ.
하나님이여 내 서원을 들으시고 주의 이름을 경외하는 자의 얻을 기업을 내게 주셨나이다
6 ಅರಸನ ಜೀವನದ ದಿನಗಳನ್ನು ಹೆಚ್ಚಿಸಿರಿ. ಆತನ ವರ್ಷಗಳನ್ನು ತಲತಲಾಂತರಗಳವರೆಗೆ ವೃದ್ಧಿಪಡಿಸಿರಿ.
주께서 왕으로 장수케 하사 그 나이 여러 대에 미치게 하시리이다
7 ಆತನು ಎಂದೆಂದಿಗೂ ದೇವರ ಮುಂದೆ ಆಳಿಕೆಮಾಡಲಿ. ಆತನನ್ನು ಕಾಯುವ ಹಾಗೆ ನಿಮ್ಮ ಪ್ರೀತಿ, ಸತ್ಯವನ್ನು ನೇಮಿಸಿರಿ.
저가 영원히 하나님 앞에 거하리니 인자와 진리를 예비하사 저를 보호하소서
8 ಆಗ ನಾನು ನನ್ನ ಹರಕೆಗಳನ್ನು ದಿನದಿನವೂ ಸಲ್ಲಿಸುವೆನು. ನಿಮ್ಮ ಹೆಸರನ್ನು ನಾನು ಎಂದೆಂದಿಗೂ ಕೀರ್ತಿಸುವೆನು.
그리하시면 내가 주의 이름을 영원히 찬양하며 매일 나의 서원을 이행하리이다