< ಕೀರ್ತನೆಗಳು 67 >

1 ಸಂಗೀತ ನಿರ್ದೇಶಕನಿಗಾಗಿರುವ ಕೀರ್ತನೆ. ತಂತಿವಾದ್ಯದೊಡನೆ ಹಾಡತಕ್ಕ ಕೀರ್ತನೆ, ಒಂದು ಗೀತೆ. ದೇವರು ನಮ್ಮ ಮೇಲೆ ಕರುಣೆಯಿಟ್ಟು, ನಮ್ಮನ್ನು ಆಶೀರ್ವದಿಸಲಿ. ದೇವರು ತಮ್ಮ ಮುಖವನ್ನು ನಮ್ಮ ಮೇಲೆ ಪ್ರಕಾಶಿಸಮಾಡಲಿ.
لِقَائِدِ الْمُنْشِدِينَ عَلَى الآلاتِ الْوَتَرِيَّةِ. لِيَتَرَأَّفِ اللهُ عَلَيْنَا وَلْيُبَارِكْنَا، وَلْيُضِئْ بِوَجْهِهِ عَلَيْنَا١
2 ಆಗ ದೇವರೇ, ನಿಮ್ಮ ಮಾರ್ಗಗಳು ಭೂಮಿಯಲ್ಲಿ ಗೊತ್ತಾಗುವುದು. ನಿಮ್ಮ ರಕ್ಷಣೆಯು ಎಲ್ಲಾ ಜನಾಂಗಗಳಲ್ಲಿ ಪ್ರಸಿದ್ಧವಾಗುವುದು.
لِكَيْ يُعْرَفَ فِي الأَرْضِ طَرِيقُكَ، وَبَيْنَ جَمِيعِ الأُمَمِ خَلاصُكَ.٢
3 ದೇವರೇ, ಜನರು ನಿಮ್ಮನ್ನು ಕೊಂಡಾಡಲಿ, ಸರ್ವ ಜನಾಂಗಗಳು ನಿಮ್ಮನ್ನು ಸ್ತುತಿಸಲಿ.
تَحْمَدُكَ الشُّعُوبُ يَا اللهُ، تَحْمَدُكَ الشُّعُوبُ كُلُّهَا.٣
4 ಜನಾಂಗಗಳು ಸಂತೋಷಪಟ್ಟು ಉತ್ಸಾಹದಿಂದ ಹಾಡಲಿ. ಏಕೆಂದರೆ ನೀವು ಜನರನ್ನು ನೀತಿಯಿಂದ ನ್ಯಾಯತೀರಿಸಿ, ಜನಾಂಗಗಳನ್ನು ಭೂಮಿಯಲ್ಲಿ ಪರಿಪಾಲಿಸುತ್ತೀರಿ.
تَفْرَحُ وَتَبْتَهِجُ الأُمَمُ لأَنَّكَ تَدِينُ الشُّعُوبَ بِالاسْتِقَامَةِ، وَتَهْدِي أُمَمَ الأَرْضِ.٤
5 ದೇವರೇ, ಜನರು ನಿಮ್ಮನ್ನು ಕೊಂಡಾಡಲಿ. ಸರ್ವ ಜನಾಂಗಗಳು ನಿಮ್ಮನ್ನು ಸ್ತುತಿಸಲಿ.
تَحْمَدُكَ الشُّعُوبُ يَا اللهُ، تَحْمَدُكَ الشُّعُوبُ كُلُّهَا.٥
6 ಭೂಮಿಯು ತನ್ನ ಬೆಳೆಯನ್ನು ಕೊಡುವುದು. ದೇವರೇ, ಹೌದು, ನಮ್ಮ ದೇವರೇ ನಮ್ಮನ್ನು ಆಶೀರ್ವದಿಸುವರು.
أَعْطَتِ الأَرْضُ غَلَّتَهَا الْوَفِيرَةَ.٦
7 ದೇವರು ನಮ್ಮನ್ನು ಆಶೀರ್ವದಿಸುವರು. ಭೂಮಿಯಲ್ಲಿರುವ ಎಲ್ಲರೂ ದೇವರಲ್ಲಿ ಭಯಭಕ್ತಿಯುಳ್ಳವರಾಗಿರುವರು.
يُبَارِكُنَا اللهُ إِلَهُنَا، فَتَخَافُهُ كُلُّ أَقَاصِي الأَرْضِ.٧

< ಕೀರ್ತನೆಗಳು 67 >