< ಕೀರ್ತನೆಗಳು 72 >

1 ಸೊಲೊಮೋನನ ಕೀರ್ತನೆ. ದೇವರೇ, ನಿಮ್ಮ ನ್ಯಾಯವನ್ನು ಅರಸನಿಗೆ ಕಲಿಸಿಕೊಡಿರಿ. ನಿಮ್ಮ ನೀತಿಯನ್ನು ರಾಜಕುಮಾರನಿಗೆ ಕಲಿಸಿಕೊಡಿರಿ.
О Соломоне. Боже! даруй царю Твой суд и сыну царя Твою правду,
2 ಅರಸನು ನಿಮ್ಮ ಜನರಿಗೆ ನೀತಿಯಿಂದಲೂ ನಿಮ್ಮ ಬಾಧೆಪಟ್ಟ ಪ್ರಜೆಗೆ ನ್ಯಾಯದಿಂದಲೂ ತೀರ್ಪುಮಾಡಲಿ.
да судит праведно людей Твоих и нищих Твоих на суде;
3 ಬೆಟ್ಟಗುಡ್ಡಗಳಿಂದ ಸಮೃದ್ಧಿಯೂ ನೀತಿಯ ಫಲವೂ ಜನರಿಗೆ ಬರಲಿ.
да принесут горы мир людям и холмы правду;
4 ಅರಸನು ಬಡವರ ನ್ಯಾಯ ಸ್ಥಾಪಿಸಲಿ. ಅವನು ಅಗತ್ಯತೆಯಲ್ಲಿರುವವರ ಮಕ್ಕಳನ್ನು ರಕ್ಷಿಸಲಿ. ದಬ್ಬಾಳಿಕೆ ಮಾಡುವವರನ್ನು ದಂಡಿಸಲಿ.
да судит нищих народа, да спасет сынов убогого и смирит притеснителя, -
5 ಸೂರ್ಯನೂ ಚಂದ್ರನೂ ಇರುವವರೆಗೆ ತಲತಲಾಂತರಗಳು ಜನರು ಅರಸನಿಗೆ ಭಯಪಡಲಿ.
и будут бояться Тебя, доколе пребудут солнце и луна, в роды родов.
6 ಕೊಯ್ದ ಹುಲ್ಲಿನ ಮೇಲೆ ಬೀಳುವ ಮಳೆಯ ಹಾಗೆಯೂ, ಭೂಮಿಯನ್ನು ನೆನಸುತ್ತಾ ಸುರಿಯುವ ಮಳೆಗಳ ಹಾಗೆಯೂ ಅರಸನು ಇರಲಿ.
Он сойдет, как дождь на скошенный луг, как капли, орошающие землю;
7 ಅರಸನ ದಿವಸಗಳಲ್ಲಿ ನೀತಿವಂತರು ವೃದ್ಧಿ ಆಗಲಿ. ಸಮೃದ್ಧಿಯಾದ ಸಮಾಧಾನವು ಚಂದ್ರನು ಇರುವವರೆಗೂ ಇರಲಿ.
во дни его процветет праведник, и будет обилие мира, доколе не престанет луна;
8 ಸಮುದ್ರದಿಂದ ಸಮುದ್ರದವರೆಗೂ ನದಿಯಿಂದ ಭೂಮಿಯ ಕೊನೆಗಳವರೆಗೂ ಅರಸನು ಆಳಲಿ.
он будет обладать от моря до моря и от реки до концов земли;
9 ಅರಸನ ಮುಂದೆ ಮರುಭೂಮಿಯ ನಿವಾಸಿಗಳು ಎರಗಲಿ. ಅರಸನ ಶತ್ರುಗಳು ಧೂಳನ್ನು ನೆಕ್ಕಲಿ.
падут пред ним жители пустынь, и враги его будут лизать прах;
10 ತಾರ್ಷೀಷಿನ ಅರಸರೂ ದ್ವೀಪಗಳ ಅರಸರೂ ಕಾಣಿಕೆಗಳನ್ನು ಅರಸನಿಗೆ ಸಲ್ಲಿಸಲಿ. ಶೆಬ ಮತ್ತು ಸೆಬದ ಅರಸರು ದಾನಗಳನ್ನು ತಂದೊಪ್ಪಿಸಲಿ.
цари Фарсиса и островов поднесут ему дань; цари Аравии и Савы принесут дары;
11 ಹೌದು, ಎಲ್ಲಾ ಅರಸರು ನಮ್ಮ ಅರಸನ ಮುಂದೆ ಅಡ್ಡಬೀಳಲಿ. ಎಲ್ಲಾ ಜನಾಂಗಗಳು ಅರಸನಿಗೆ ಸೇವೆಸಲ್ಲಿಸಲಿ.
и поклонятся ему все цари; все народы будут служить ему;
12 ಏಕೆಂದರೆ ಅರಸನಿಗೆ ಮೊರೆಯಿಡುವ ಬಡವರನ್ನೂ ಸಹಾಯಕನಿಲ್ಲದ ಬಾಧೆಪಡುವವರನ್ನೂ ಬಿಡಿಸುವನು.
ибо он избавит нищего, вопиющего и угнетенного, у которого нет помощника.
13 ದರಿದ್ರನನ್ನೂ, ಬಡವನನ್ನೂ ಕರುಣಿಸುವನು. ಬಡವರ ಪ್ರಾಣಗಳನ್ನು ರಕ್ಷಿಸುವನು.
Будет милосерд к нищему и убогому, и души убогих спасет;
14 ಮೋಸ ದಬ್ಬಾಳಿಕೆಯಿಂದ ಜನರನ್ನು ಬಿಡುಗಡೆ ಮಾಡುವನು. ಜನರ ಜೀವವು ಆತನ ದೃಷ್ಟಿಯಲ್ಲಿ ಅಮೂಲ್ಯವಾಗಿರುವುದು.
от коварства и насилия избавит души их, и драгоценна будет кровь их пред очами его;
15 ಅರಸನು ಬಾಳಲಿ. ಆತನಿಗೆ ಶೆಬದ ಚಿನ್ನವನ್ನು ಕೊಡಲಿ. ಆತನಿಗೋಸ್ಕರ ಯಾವಾಗಲೂ ಪ್ರಾರ್ಥನೆ ಮಾಡಲಿ. ಇಡೀ ದಿನ ಆತನಿಗೆ ಆಶೀರ್ವಾದಗಳು ಉಂಟಾಗಲಿ.
и будет жить, и будут давать ему от золота Аравии, и будут молиться о нем непрестанно, всякий день благословлять его;
16 ಧಾನ್ಯದ ಸಮೃದ್ಧಿಯು ದೇಶದಲ್ಲಿ ಬೆಟ್ಟಗಳ ತುದಿಯವರೆಗೂ ಇರಲಿ; ಅದರ ಫಲವು ಲೆಬನೋನಿನ ಹಾಗೆ ಸಮೃದ್ಧಿಯಾಗಲಿ; ಪಟ್ಟಣದವರು ಭೂಮಿಯ ಸೊಪ್ಪಿನ ಹಾಗೆ ವೃದ್ಧಿ ಆಗಲಿ.
будет обилие хлеба на земле, наверху гор; плоды его будут волноваться, как лес на Ливане, и в городах размножатся люди, как трава на земле;
17 ಅರಸನ ನಾಮವು ಎಂದೆಂದಿಗೂ ಇರಲಿ. ಸೂರ್ಯನಿರುವವರೆಗೂ ಆತನ ಹೆಸರು ಇರಲಿ. ಮನುಷ್ಯರು ಅರಸನಲ್ಲಿ ಆಶೀರ್ವಾದ ಹೊಂದಲಿ. ಎಲ್ಲಾ ಜನಾಂಗಗಳು ಆತನನ್ನು ಭಾಗ್ಯವಂತನೆಂದು ಕರೆಯಲಿ.
будет имя его вовек; доколе пребывает солнце, будет передаваться имя его; и благословятся в нем племена, все народы ублажат его.
18 ಅದ್ಭುತಗಳನ್ನು ಮಾಡುವುದರಲ್ಲಿ ಸರಿಸಾಟಿಯಿಲ್ಲದ ಇಸ್ರಾಯೇಲರ ದೇವರಾಗಿರುವ ಯೆಹೋವ ದೇವರಿಗೆ ಸ್ತೋತ್ರವಾಗಲಿ.
Благословен Господь Бог, Бог Израилев, един творящий чудеса,
19 ದೇವರ ಘನವುಳ್ಳ ಹೆಸರಿಗೆ ಎಂದೆಂದಿಗೂ ಸ್ತೋತ್ರವಾಗಲಿ. ದೇವರ ತೇಜಸ್ಸು ಭೂಮಿಯಲ್ಲೆಲ್ಲಾ ತುಂಬಲಿ.
и благословенно имя славы Его вовек, и наполнится славою Его вся земля. Аминь и аминь.
20 ಇಷಯನ ಮಗ ದಾವೀದನ ಪ್ರಾರ್ಥನೆಗಳು ಇಲ್ಲಿಗೆ ಮುಕ್ತಾಯವಾಗುತ್ತವೆ.
Кончились молитвы Давида, сына Иесеева.

< ಕೀರ್ತನೆಗಳು 72 >