< ಕೀರ್ತನೆಗಳು 73 >

1 ಆಸಾಫನ ಕೀರ್ತನೆ. ದೇವರು ನಿಜವಾಗಿಯೂ ಇಸ್ರಾಯೇಲಿಗೂ ಶುದ್ಧ ಹೃದಯದವರಿಗೂ ಒಳ್ಳೆಯವರು.
מִזְמוֹר לְאָסָף אַךְ טוֹב לְיִשְׂרָאֵל אֱלֹהִים לְבָרֵי לֵבָֽב׃
2 ನನ್ನ ಪಾದಗಳು ಬಹಳಮಟ್ಟಿಗೆ ತಪ್ಪುವ ಹಾಗಿದ್ದವು. ನನ್ನ ಹೆಜ್ಜೆಗಳು ಜಾರುವುದಕ್ಕೆ ಬಹು ಸಮೀಪವಾಗಿದ್ದವು.
וַאֲנִי כִּמְעַט (נטוי) [נָטָיוּ] רַגְלָי כְּאַיִן (שפכה) [שֻׁפְּכוּ] אֲשֻׁרָֽי׃
3 ಏಕೆಂದರೆ ನಾನು ದುಷ್ಟರ ಸೌಭಾಗ್ಯವನ್ನು ಕಂಡಾಗ ಮೂರ್ಖರ ಮೇಲೆ ಹೊಟ್ಟೆಕಿಚ್ಚುಪಟ್ಟೆನು.
כִּֽי־קִנֵּאתִי בַּהוֹלְלִים שְׁלוֹם רְשָׁעִים אֶרְאֶֽה׃
4 ಏಕೆಂದರೆ ಅವರಿಗೆ ಹೋರಾಟಗಳು ಇಲ್ಲ. ಅವರ ದೇಹವು ಆರೋಗ್ಯಕರ ಮತ್ತು ದೃಢವಾಗಿದೆ.
כִּי אֵין חַרְצֻבּוֹת לְמוֹתָם וּבָרִיא אוּלָֽם׃
5 ಇತರರ ಹಾಗೆ ಅವರಿಗೆ ಯಾವುದೇ ಹೊರೆ ಇಲ್ಲ ಮಾನವರಿಗೆ ತಗುಲುವ ಯಾವುದೇ ವ್ಯಾಧಿಯೂ ಅವರಿಗೆ ತಗುಲುವುದಿಲ್ಲ.
בַּעֲמַל אֱנוֹשׁ אֵינֵמוֹ וְעִם־אָדָם לֹא יְנֻגָּֽעוּ׃
6 ಆದ್ದರಿಂದ ಗರ್ವವು ಕಂಠಮಾಲೆಯಂತೆ ಅವರನ್ನು ಸುತ್ತಿದೆ. ದಬ್ಬಾಳಿಕೆ ಅವರನ್ನು ಬಟ್ಟೆಯ ಹಾಗೆ ಮುಚ್ಚುತ್ತಿದೆ.
לָכֵן עֲנָקַתְמוֹ גַאֲוָה יַעֲטָף־שִׁית חָמָס לָֽמוֹ׃
7 ಅವರ ಹೃದಯವು ಕೊಬ್ಬಿನಿಂದ ಉಬ್ಬಿಕೊಂಡಿರುತ್ತವೆ; ಅವರ ದುಷ್ಕಲ್ಪನೆಗಳಿಗೆ ಮಿತಿಯೇ ಇಲ್ಲ.
יָצָא מֵחֵלֶב עֵינֵמוֹ עָבְרוּ מַשְׂכִּיּוֹת לֵבָֽב׃
8 ಅವರು ಹಾಸ್ಯಮಾಡುವವರಾಗಿ ಕೇಡನ್ನೇ ಮಾತನಾಡುತ್ತಾರೆ ದಬ್ಬಾಳಿಕೆ ಮಾಡಲು ಗರ್ವದಿಂದ ಅವರು ಬೆದರಿಕೆ ಹಾಕುತ್ತಾರೆ.
יָמִיקוּ ׀ וִידַבְּרוּ בְרָע עֹשֶׁק מִמָּרוֹם יְדַבֵּֽרוּ׃
9 ಪರಲೋಕಕ್ಕೆ ವಿರೋಧವಾಗಿ ತಮ್ಮ ಬಾಯನ್ನು ತೆರೆದಿದ್ದಾರೆ. ಭೂಲೋಕದಲ್ಲೆಲ್ಲಾ ಅವರ ಮಾತು ಮುಂದುವರೆದಿದೆ.
שַׁתּוּ בַשָּׁמַיִם פִּיהֶם וּלְשׁוֹנָם תִּהֲלַךְ בָּאָֽרֶץ׃
10 ಆದ್ದರಿಂದ ಜನರು ಅವರ ಕಡೆಗೆ ತಿರುಗುತ್ತಾರೆ. ಜನರಿಗೆ ಅವರ ಮಾತು ಬಹಳವಾಗಿ ದೊರೆಯುತ್ತದೆ.
לָכֵן ׀ (ישיב) [יָשׁוּב] עַמּוֹ הֲלֹם וּמֵי מָלֵא יִמָּצוּ לָֽמוֹ׃
11 ಅವರು, “ದೇವರಿಗೆ ಹೇಗೆ ಗೊತ್ತಾಗುವುದು? ಮಹೋನ್ನತನಿಗೆ ಏನಾದರೂ ತಿಳಿಯಲು ಸಾಧ್ಯವೇ?” ಎನ್ನುತ್ತಾರೆ.
וְֽאָמְרוּ אֵיכָה יָדַֽע־אֵל וְיֵשׁ דֵּעָה בְעֶלְיֽוֹן׃
12 ದುಷ್ಟರು ನಿಶ್ಚಿಂತರಾಗಿ, ಐಶ್ವರ್ಯದಲ್ಲಿ ಇವರು ಹೆಚ್ಚುತ್ತಾರೆ.
הִנֵּה־אֵלֶּה רְשָׁעִים וְשַׁלְוֵי עוֹלָם הִשְׂגּוּ־חָֽיִל׃
13 ನನ್ನ ಹೃದಯವನ್ನು ಶುದ್ಧ ಮಾಡಿಕೊಂಡಿದ್ದು ವ್ಯರ್ಥವೋ? ನನ್ನ ಅಂಗೈಗಳನ್ನು ನಿರಪರಾಧದಲ್ಲಿ ತೊಳೆದಿದ್ದೂ ವ್ಯರ್ಥವೋ?
אַךְ־רִיק זִכִּיתִי לְבָבִי וָאֶרְחַץ בְּנִקָּיוֹן כַּפָּֽי׃
14 ಏಕೆಂದರೆ ನಾನು ದಿನವೆಲ್ಲಾ ಬಾಧೆಪಡುತ್ತಿದ್ದೇನೆ. ಪ್ರತಿ ಉದಯವೂ ನನಗೆ ಹೊಸ ಶಿಕ್ಷೆಯಾಗುತ್ತಿದೆ.
וָאֱהִי נָגוּעַ כׇּל־הַיּוֹם וְתוֹכַחְתִּי לַבְּקָרִֽים׃
15 ನಾನು ಈ ಪ್ರಕಾರ ಬಾಯಿತೆರೆದು ಮಾತಾಡಿದ್ದರೆ, ನಿಮ್ಮ ಪ್ರಜೆಗೆ ದ್ರೋಹಿಯಾಗುತ್ತಿದ್ದೆನು.
אִם־אָמַרְתִּי אֲסַפְּרָה כְמוֹ הִנֵּה דוֹר בָּנֶיךָ בָגָֽדְתִּי׃
16 ಇದನ್ನೆಲ್ಲಾ ತಿಳಿದುಕೊಳ್ಳುವುದಕ್ಕೆ ನಾನು ಪ್ರಯತ್ನಿಸಿದಾಗ, ಅದು ನನಗೆ ಬಹಳವಾಗಿ ಕಷ್ಟಕರವಾಗಿತ್ತು.
וָאֲחַשְּׁבָה לָדַעַת זֹאת עָמָל (היא) [הוּא] בְעֵינָֽי׃
17 ನಾನು ದೇವರ ಪರಿಶುದ್ಧ ಆಲಯಕ್ಕೆ ಬರುವವರೆಗೆ ನನಗೆ ಅರ್ಥವಾಗಲಿಲ್ಲ. ಅನಂತರ ಅವರ ಅಂತ್ಯವನ್ನು ನನಗೆ ಅರ್ಥವಾಯಿತು.
עַד־אָבוֹא אֶל־מִקְדְּשֵׁי־אֵל אָבִינָה לְאַחֲרִיתָֽם׃
18 ನಿಶ್ಚಯವಾಗಿ ನೀವು ಜಾರುವ ಸ್ಥಳಗಳಲ್ಲಿ ಅವರನ್ನು ಬಿಟ್ಟಿದ್ದೀರಿ. ಅವರನ್ನು ದಂಡಿಸಿಬಿಡು.
אַךְ בַּחֲלָקוֹת תָּשִׁית לָמוֹ הִפַּלְתָּם לְמַשּׁוּאֽוֹת׃
19 ಕ್ಷಣಮಾತ್ರದಲ್ಲಿ ಅವರು ನಾಶವಾದರು. ಅವರು ದಿಗಿಲುಬಿದ್ದು ಸಂಪೂರ್ಣವಾಗಿ ನಾಶವಾದರು.
אֵיךְ הָיוּ לְשַׁמָּה כְרָגַע סָפוּ תַמּוּ מִן־בַּלָּהֽוֹת׃
20 ಅವರು ನಿದ್ದೆಯಿಂದ ಎಚ್ಚರಗೊಂಡ ಕನಸಿನಂತೆ ಇರುತ್ತಾರೆ. ಯೆಹೋವ ದೇವರೇ, ನಿಮ್ಮ ದೃಷ್ಟಿಯಲ್ಲಿ ಅವರು ಅಲ್ಪರಾಗಿರಲಿ.
כַּחֲלוֹם מֵהָקִיץ אֲדֹנָי בָּעִיר ׀ צַלְמָם תִּבְזֶֽה׃
21 ನನ್ನ ಹೃದಯವು ದುಃಖಗೊಂಡು, ನನ್ನ ಆತ್ಮವು ಕಹಿಗೊಂಡಿತು.
כִּי יִתְחַמֵּץ לְבָבִי וְכִלְיוֹתַי אֶשְׁתּוֹנָֽן׃
22 ಆಗ ನಾನು ಮೂರ್ಖನಾಗಿ ಏನೂ ತಿಳಿಯದೆ ನಿಮ್ಮ ಮುಂದೆ ಪಶುವಿನಂತೆ ಇದ್ದೆನು.
וַאֲנִי־בַעַר וְלֹא אֵדָע בְּהֵמוֹת הָיִיתִי עִמָּֽךְ׃
23 ಆದರೂ ನಾನು ನಿಮ್ಮ ಸಂಗಡ ಯಾವಾಗಲೂ ಇದ್ದೇನೆ. ನೀವು ನನ್ನ ಬಲಗೈಯನ್ನು ಹಿಡಿದಿದ್ದೀರಿ.
וַאֲנִי תָמִיד עִמָּךְ אָחַזְתָּ בְּיַד־יְמִינִֽי׃
24 ನಿಮ್ಮ ಆಲೋಚನೆಯಂತೆ ನನ್ನನ್ನು ನಡೆಸಿ, ತರುವಾಯ ಮಹಿಮೆಗೆ ನನ್ನನ್ನು ಸೇರಿಸುವಿರಿ.
בַּעֲצָתְךָ תַנְחֵנִי וְאַחַר כָּבוֹד תִּקָּחֵֽנִי׃
25 ಪರಲೋಕದಲ್ಲಿ ನನಗೆ ನೀವಲ್ಲದೆ ಮತ್ಯಾರಿದ್ದಾರೆ? ಇಹಲೋಕದಲ್ಲಿ ನಿಮ್ಮನ್ನಲ್ಲದೆ ಇನ್ನಾರನ್ನೂ ನಾನು ಬಯಸುವುದಿಲ್ಲ.
מִי־לִי בַשָּׁמָיִם וְעִמְּךָ לֹֽא־חָפַצְתִּי בָאָֽרֶץ׃
26 ನನ್ನ ತನುಮನಗಳು ಕುಂದುತ್ತವೆ; ಆದರೆ ದೇವರು ಯುಗಯುಗಕ್ಕೂ ನನ್ನ ಹೃದಯದ ಬಲವೂ, ನನ್ನ ಪಾಲೂ ಆಗಿದ್ದಾರೆ.
כָּלָה שְׁאֵרִי וּלְבָבִי צוּר־לְבָבִי וְחֶלְקִי אֱלֹהִים לְעוֹלָֽם׃
27 ದೇವರೇ, ನಿಮ್ಮಿಂದ ದೂರವಾಗಿರುವವರು ನಾಶವಾಗುತ್ತಾರೆ; ನಿಮ್ಮನ್ನು ಬಿಟ್ಟು ದ್ರೋಹ ಮಾಡುವವರೆಲ್ಲರೂ ದಂಡನೆಗೆ ಗುರಿಯಾಗುವರು.
כִּֽי־הִנֵּה רְחֵקֶיךָ יֹאבֵדוּ הִצְמַתָּה כׇּל־זוֹנֶה מִמֶּֽךָּ׃
28 ನನಗಾದರೋ ದೇವರ ಸಮೀಪಕ್ಕೆ ಬರುವುದೇ ಒಳ್ಳೆಯದು. ನಿಮ್ಮ ಕ್ರಿಯೆಗಳನ್ನೆಲ್ಲಾ ಸಾರುವುದಕ್ಕೆ ಸಾರ್ವಭೌಮ ಯೆಹೋವ ದೇವರಲ್ಲಿ ನನ್ನ ಭರವಸೆಯನ್ನು ಇಟ್ಟಿದ್ದೇನೆ.
וַאֲנִי ׀ קִרְבַת אֱלֹהִים לִי ־ טוֹב שַׁתִּי ׀ בַּאדֹנָי יֱהֹוִה מַחְסִי לְסַפֵּר כׇּל־מַלְאֲכוֹתֶֽיךָ׃

< ಕೀರ್ತನೆಗಳು 73 >