< ಕೀರ್ತನೆಗಳು 75 >

1 ಸಂಗೀತ ನಿರ್ದೇಶಕನಿಗಾಗಿರುವ ಕೀರ್ತನೆ. ಅಲ್ತಷ್ಟೇತೆಂಬ ರಾಗ. ಆಸಾಫನ ಕೀರ್ತನೆ. ಒಂದು ಗೀತೆ. ನಿಮ್ಮನ್ನು ಕೊಂಡಾಡುತ್ತೇವೆ; ದೇವರೇ, ನಿಮ್ಮನ್ನು ಕೊಂಡಾಡುತ್ತೇವೆ; ಏಕೆಂದರೆ ಜನರು ನಿಮ್ಮ ನಾಮವನ್ನು ಜಪಿಸಿ, ನಿಮ್ಮ ಅದ್ಭುತಗಳನ್ನು ಕುರಿತು ಹೇಳುತ್ತಾರೆ.
לַמְנַצֵּחַ אַל־תַּשְׁחֵת מִזְמוֹר לְאָסָף שִֽׁיר׃ הוֹדִינוּ לְּךָ ׀ אֱ‍ֽלֹהִים הוֹדִינוּ וְקָרוֹב שְׁמֶךָ סִפְּרוּ נִפְלְאוֹתֶֽיךָ׃
2 “ನಿಯಮಿತ ಸಮಯವನ್ನು ಆಯ್ದುಕೊಳ್ಳುವೆನು. ನ್ಯಾಯಕ್ಕೆ ಸರಿಯಾಗಿ ನ್ಯಾಯತೀರಿಸುವೆನು,
כִּי אֶקַּח מוֹעֵד אֲנִי מֵישָׁרִים אֶשְׁפֹּֽט׃
3 ಭೂಮಿಯೂ ಅದರ ನಿವಾಸಿಗಳೆಲ್ಲರೂ ಬೆರಗಾಗಿದ್ದಾರೆ. ನಾನು ಅದರ ಸ್ತಂಭಗಳನ್ನು ನಿಲ್ಲಿಸಿದ್ದೇನೆ.
נְֽמֹגִים אֶרֶץ וְכָל־יֹשְׁבֶיהָ אָנֹכִי תִכַּנְתִּי עַמּוּדֶיהָ סֶּֽלָה׃
4 ‘ಅಹಂಕಾರದಿಂದ ವರ್ತಿಸಬೇಡಿರಿ,’ ಎಂದು ಅಹಂಕಾರಿಗೆ ಹೇಳುತ್ತೇನೆ. ‘ನಿಮ್ಮ ಕೊಂಬು ಎತ್ತಬೇಡಿರಿ,’ ಎಂದು ದುಷ್ಟರಿಗೆ ಹೇಳುವೆನು.
אָמַרְתִּי לַֽהוֹלְלִים אַל־תָּהֹלּוּ וְלָרְשָׁעִים אַל־תָּרִימוּ קָֽרֶן׃
5 ನಿಮ್ಮ ಕೊಂಬನ್ನು ಪರಲೋಕದ ಕಡೆಗೆ ಎತ್ತಬೇಡಿರಿ. ಹಟಮಾರಿತನದಿಂದ ಮಾತನಾಡಬೇಡಿರಿ,” ಎಂದು ನೀವು ಹೇಳಿದ್ದೀರಿ.
אַל־תָּרִימוּ לַמָּרוֹם קַרְנְכֶם תְּדַבְּרוּ בְצַוָּאר עָתָֽק׃
6 ಏಕೆಂದರೆ ಉದ್ಧಾರವು ಪೂರ್ವದಿಂದಲೂ ಪಶ್ಚಿಮದಿಂದಲೂ ಅಲ್ಲ, ಇಲ್ಲವೆ ದಕ್ಷಿಣದ ಮರುಭೂಮಿಯಿಂದಲೂ ಬರುವುದಿಲ್ಲ.
כִּי לֹא מִמּוֹצָא וּמִֽמַּעֲרָב וְלֹא מִמִּדְבַּר הָרִֽים׃
7 ಆದರೆ ದೇವರು ನ್ಯಾಯತೀರಿಸುವವರಾಗಿದ್ದಾರೆ. ದೇವರು ಒಬ್ಬನನ್ನು ತಗ್ಗಿಸುತ್ತಾರೆ, ಒಬ್ಬನನ್ನು ಎತ್ತುತ್ತಾರೆ.
כִּֽי־אֱלֹהִים שֹׁפֵט זֶה יַשְׁפִּיל וְזֶה יָרִֽים׃
8 ಯೆಹೋವ ದೇವರ ಕೈಯಲ್ಲಿ ಒಂದು ಪಾತ್ರೆಯು ಇದೆ. ಔಷಧಿಮಿಶ್ರವಾಗಿ ಉಕ್ಕುವ ದ್ರಾಕ್ಷಾರಸದಿಂದ ತುಂಬಿ ಇದೆ. ಅದನ್ನು ಅವರು ಹೊಯ್ಯುತ್ತಾರೆ. ಅದರ ಮಡ್ಡಿಯನ್ನು ಸಹ ಭೂಮಿಯ ದುಷ್ಟರೆಲ್ಲರೂ ಹೀರಿಕೊಂಡು ಕುಡಿಯುವರು.
כִּי כוֹס בְּֽיַד־יְהוָה וְיַיִן חָמַר ׀ מָלֵא מֶסֶךְ וַיַּגֵּר מִזֶּה אַךְ־שְׁמָרֶיהָ יִמְצוּ יִשְׁתּוּ כֹּל רִשְׁעֵי־אָֽרֶץ׃
9 ನಾನಾದರೋ ಸದಾ ವರ್ಣಿಸುವವನಾಗಿ ಯಾಕೋಬ ವಂಶದವರ ದೇವರನ್ನು ಸಂಕೀರ್ತಿಸುವೆನು.
וַאֲנִי אַגִּיד לְעֹלָם אֲזַמְּרָה לֵאלֹהֵי יַעֲקֹֽב׃
10 ದುಷ್ಟರ ಕೊಂಬುಗಳನ್ನೆಲ್ಲಾ ಕಡಿದುಹೋಗುವುದು. ಆದರೆ ನೀತಿವಂತನ ಕೊಂಬುಗಳು ಎತ್ತಲಾಗುವುದು.
וְכָל־קַרְנֵי רְשָׁעִים אֲגַדֵּעַ תְּרוֹמַמְנָה קַֽרְנוֹת צַדִּֽיק׃

< ಕೀರ್ತನೆಗಳು 75 >