< ಕೀರ್ತನೆಗಳು 77 >

1 ಸಂಗೀತ ನಿರ್ದೇಶಕನಿಗಾಗಿರುವ ಕೀರ್ತನೆ. ಯೆದುತೂನನ ರೀತಿಯಲ್ಲಿ ಹಾಡತಕ್ಕದ್ದು. ಆಸಾಫನ ಕೀರ್ತನೆ. ನನ್ನ ಸಹಾಯಕ್ಕಾಗಿ ದೇವರ ಕಡೆಗೆ ಕೂಗುತ್ತೇನೆ. ಹೌದು, ನನ್ನ ಸ್ವರದಿಂದ ದೇವರ ಕಡೆಗೆ ಕೂಗುತ್ತೇನೆ, ನನಗೆ ದೇವರು ಕಿವಿಗೊಡುವರು.
לַמְנַצֵּ֥חַ עַֽל־ידיתון לְאָסָ֥ף מִזְמֽוֹר׃ קוֹלִ֣י אֶל־אֱלֹהִ֣ים וְאֶצְעָ֑קָה קוֹלִ֥י אֶל־אֱ֝לֹהִ֗ים וְהַאֲזִ֥ין אֵלָֽי׃
2 ನನ್ನ ಇಕ್ಕಟ್ಟಿನ ದಿವಸದಲ್ಲಿ ಯೆಹೋವ ದೇವರನ್ನು ಹುಡುಕಿದೆನು. ನಾನು ರಾತ್ರಿಯೆಲ್ಲಾ ಬೇಸರವಿಲ್ಲದೆ ಕೈಚಾಚಿದೆ. ನನ್ನ ಮನಸ್ಸಿಗೆ ಶಾಂತಿ ಇರಲಿಲ್ಲ.
בְּי֥וֹם צָרָתִי֮ אֲדֹנָ֪י דָּ֫רָ֥שְׁתִּי יָדִ֤י ׀ לַ֣יְלָה נִ֭גְּרָה וְלֹ֣א תָפ֑וּג מֵאֲנָ֖ה הִנָּחֵ֣ם נַפְשִֽׁי׃
3 ನಾನು ವ್ಯಥೆಪಡುತ್ತಿರುವಾಗ, ದೇವರನ್ನು ಜ್ಞಾಪಕಮಾಡಿಕೊಂಡೆನು. ನಾನು ಚಿಂತಿಸುವುದರಿಂದ ನನ್ನ ಆತ್ಮವು ಬಳಲಿ ಹೋಯಿತು.
אֶזְכְּרָ֣ה אֱלֹהִ֣ים וְאֶֽהֱמָיָ֑ה אָשִׂ֓יחָה ׀ וְתִתְעַטֵּ֖ף רוּחִ֣י סֶֽלָה׃
4 ನನ್ನ ಕಣ್ಣುಗಳನ್ನು ಮುಚ್ಚದಿರುವಾಗ, ನಾನು ಮಾತನಾಡಲಾರದಂತೆ ಕಳವಳಪಟ್ಟೆನು.
אָ֭חַזְתָּ שְׁמֻר֣וֹת עֵינָ֑י נִ֝פְעַ֗מְתִּי וְלֹ֣א אֲדַבֵּֽר׃
5 ಪೂರ್ವದ ದಿವಸಗಳನ್ನೂ ಆದಿಕಾಲದ ವರ್ಷಗಳನ್ನೂ ಯೋಚಿಸಿದೆ.
חִשַּׁ֣בְתִּי יָמִ֣ים מִקֶּ֑דֶם שְׁ֝נ֗וֹת עוֹלָמִֽים׃
6 ನನ್ನ ಹಾಡನ್ನು ರಾತ್ರಿಯಲ್ಲಿ ಜ್ಞಾಪಕಮಾಡಿಕೊಂಡೆನು. ನನ್ನ ಹೃದಯದಲ್ಲಿ ನಾನು ಧ್ಯಾನ ಮಾಡಿದೆ. ನನ್ನ ಆತ್ಮದಲ್ಲಿ ಪ್ರಶ್ನೆ ಹೀಗೆ ಮೂಡುತ್ತಿತ್ತು:
אֶֽזְכְּרָ֥ה נְגִינָתִ֗י בַּ֫לָּ֥יְלָה עִם־לְבָבִ֥י אָשִׂ֑יחָה וַיְחַפֵּ֥שׂ רוּחִֽי׃
7 “ನಿರಂತರವಾಗಿ ಯೆಹೋವ ದೇವರು ತಳ್ಳಿಬಿಡುವರೋ? ಇನ್ನೆಂದಿಗೂ ದಯೆತೋರದೆ ಇರುವರೋ?
הַֽ֭לְעוֹלָמִים יִזְנַ֥ח ׀ אֲדֹנָ֑י וְלֹֽא־יֹסִ֖יף לִרְצ֣וֹת עֽוֹד׃
8 ದೇವರ ಒಡಂಬಡಿಕೆಯ ಪ್ರೀತಿಯು ಸದಾಕಾಲಕ್ಕೆ ನಿಂತು ಹೋಯಿತೋ? ತಲತಲಾಂತರಕ್ಕೂ ವಾಗ್ದಾನ ಮುಗಿದು ಹೋಯಿತೋ?
הֶאָפֵ֣ס לָנֶ֣צַח חַסְדּ֑וֹ גָּ֥מַר אֹ֝֗מֶר לְדֹ֣ר וָדֹֽר׃
9 ದೇವರು ಕರುಣಿಸುವುದನ್ನು ಮರೆತು ಬಿಟ್ಟಿದ್ದಾರೋ? ತಮ್ಮ ಅಂತಃಕರಣವನ್ನು ಬೇಸರದಿಂದ ತಡೆಹಿಡಿದಿದ್ದಾರೋ?”
הֲשָׁכַ֣ח חַנּ֣וֹת אֵ֑ל אִם־קָפַ֥ץ בְּ֝אַ֗ף רַחֲמָ֥יו סֶֽלָה׃
10 ನಂತರ ನಾನು ಯೋಚಿಸಿದ್ದೇನಂದರೆ, “ಹೀಗೆ ನೆನಸಿದ್ದು ನನ್ನ ಬಲಹೀನತೆಯೇ. ಮಹೋನ್ನತ ದೇವರ ಬಲಗೈಯ ಪರಾಕ್ರಮದ ವರ್ಷಗಳನ್ನು ನಾನು ಸ್ಮರಿಸುವೆನು.
וָ֭אֹמַר חַלּ֣וֹתִי הִ֑יא שְׁ֝נ֗וֹת יְמִ֣ין עֶלְיֽוֹן׃
11 ಯೆಹೋವ ದೇವರ ಕ್ರಿಯೆಗಳನ್ನು ಜ್ಞಾಪಕಮಾಡಿಕೊಳ್ಳುವೆನು. ಹೌದು, ಆದಿಯಿಂದಲೂ ನೀವು ನಡೆಸಿದ ಅದ್ಭುತಗಳನ್ನು ನೆನಪುಮಾಡಿಕೊಳ್ಳುವೆನು.
אזכיר מַֽעַלְלֵי־יָ֑הּ כִּֽי־אֶזְכְּרָ֖ה מִקֶּ֣דֶם פִּלְאֶֽךָ׃
12 ನಿಮ್ಮ ಮಹಾಕಾರ್ಯಗಳನ್ನೆಲ್ಲಾ ಧ್ಯಾನಿಸುವೆನು, ನಿಮ್ಮ ಕೃತ್ಯಗಳನ್ನು ಯೋಚಿಸುವೆನು.”
וְהָגִ֥יתִי בְכָל־פָּעֳלֶ֑ךָ וּֽבַעֲלִ֖ילוֹתֶ֣יךָ אָשִֽׂיחָה׃
13 ದೇವರೇ, ನಿಮ್ಮ ಮಾರ್ಗಗಳು ಪರಿಶುದ್ಧವಾದವುಗಳು. ನಮ್ಮ ದೇವರ ಹಾಗೆ ಮಹಾ ದೇವರು ಯಾರು?
אֱ֭לֹהִים בַּקֹּ֣דֶשׁ דַּרְכֶּ֑ךָ מִי־אֵ֥ל גָּ֝ד֗וֹל כֵּֽאלֹהִֽים׃
14 ಅದ್ಭುತಗಳನ್ನು ಮಾಡುವ ದೇವರು ನೀವೇ. ಜನರಲ್ಲಿ ನಿಮ್ಮ ಬಲವನ್ನು ತಿಳಿಯಮಾಡಿದ್ದೀರಿ.
אַתָּ֣ה הָ֭אֵל עֹ֣שֵׂה פֶ֑לֶא הוֹדַ֖עְתָּ בָעַמִּ֣ים עֻזֶּֽךָ׃
15 ಯಾಕೋಬನ ಮತ್ತು ಯೋಸೇಫನ ಸಂತತಿಯವರಾದ ನಿಮ್ಮ ಜನರನ್ನು ನಿಮ್ಮ ಬಲವಾದ ತೋಳಿನಿಂದ ವಿಮೋಚಿಸಿದ್ದೀರಿ.
גָּאַ֣לְתָּ בִּזְר֣וֹעַ עַמֶּ֑ךָ בְּנֵי־יַעֲקֹ֖ב וְיוֹסֵ֣ף סֶֽלָה׃
16 ಜಲರಾಶಿಗಳು ನಿಮ್ಮನ್ನು ಕಂಡವು. ದೇವರೇ, ಜಲರಾಶಿಗಳು ನಿಮ್ಮನ್ನು ಕಂಡು ಹೊರಳಾಡಿದವು. ಅಗಾಧ ಸಾಗರಗಳು ಅಲ್ಲಕಲ್ಲೋಲವಾದವು.
רָ֘א֤וּךָ מַּ֨יִם ׀ אֱֽלֹהִ֗ים רָא֣וּךָ מַּ֣יִם יָחִ֑ילוּ אַ֝֗ף יִרְגְּז֥וּ תְהֹמֽוֹת׃
17 ಮೋಡಗಳು ನೀರನ್ನು ಸುರಿಸಿದವು. ಆಕಾಶಗಳು ಗುಡುಗಿನಿಂದ ಶಬ್ದಮಾಡಿದವು. ನಿಮ್ಮ ಬಾಣಗಳು ಹಿಂದೆಯೂ ಮುಂದೆಯೂ ಹಾರಿ ಬಂದವು.
זֹ֤רְמוּ מַ֨יִם ׀ עָב֗וֹת ק֭וֹל נָתְנ֣וּ שְׁחָקִ֑ים אַף־חֲ֝צָצֶ֗יךָ יִתְהַלָּֽכוּ׃
18 ನಿಮ್ಮ ಗುಡುಗಿನ ಶಬ್ದವು ಸುಂಟರಗಾಳಿಯಲ್ಲಿ ಕೇಳುತ್ತಿತ್ತು. ಮಿಂಚುಗಳು ಜಗತ್ತನ್ನು ಬೆಳಗಿಸಿದವು. ಭೂಮಿಯು ನಡುಗಿ ಕದಲಿತು.
ק֤וֹל רַעַמְךָ֨ ׀ בַּגַּלְגַּ֗ל הֵאִ֣ירוּ בְרָקִ֣ים תֵּבֵ֑ל רָגְזָ֖ה וַתִּרְעַ֣שׁ הָאָֽרֶץ׃
19 ನೀವು ಸಮುದ್ರದಲ್ಲಿ ಮಾರ್ಗಮಾಡಿದಿರಿ. ಮಹಾಜಲರಾಶಿಗಳನ್ನು ದಾಟಿದಿರಿ. ಆದರೂ ನಿಮ್ಮ ಹೆಜ್ಜೆಯ ಗುರುತು ಕಾಣಲಿಲ್ಲ.
בַּיָּ֤ם דַּרְכֶּ֗ךָ ושביליך בְּמַ֣יִם רַבִּ֑ים וְ֝עִקְּבוֹתֶ֗יךָ לֹ֣א נֹדָֽעוּ׃
20 ಮೋಶೆ ಆರೋನರ ಕೈಯಿಂದ ನಿಮ್ಮ ಜನರನ್ನು ಮಂದೆಯ ಹಾಗೆ ನಡೆಸಿದಿರಿ.
נָחִ֣יתָ כַצֹּ֣אן עַמֶּ֑ךָ בְּֽיַד־מֹשֶׁ֥ה וְאַהֲרֹֽן׃

< ಕೀರ್ತನೆಗಳು 77 >