< ಕೀರ್ತನೆಗಳು 78 >

1 ಆಸಾಫನ ಮಸ್ಕೀಲ್ ಕೀರ್ತನೆ. ನನ್ನ ಜನರೇ, ನನ್ನ ಬೋಧನೆಗೆ ಕಿವಿಗೊಡಿರಿ; ನನ್ನ ಬಾಯಿ ಮಾತುಗಳನ್ನು ಲಾಲಿಸಿರಿ.
A Maskil of Asaph. Give ear, O my people, to my instruction; listen to the words of my mouth.
2 ನಾನು ಸಾಮ್ಯವನ್ನು ಹೇಳಲು ನನ್ನ ಬಾಯಿ ತೆರೆಯುವೆನು. ಪೂರ್ವದಿಂದಿರುವ ಗುಪ್ತವಾದವುಗಳನ್ನು ನುಡಿಯುವೆನು.
I will open my mouth in parables; I will utter things hidden from the beginning,
3 ಅವುಗಳನ್ನು ನಾವು ಕೇಳಿ ತಿಳಿದಿದ್ದೇವೆ. ನಮ್ಮ ಪಿತೃಗಳು ನಮಗೆ ವಿವರಿಸಿದರು.
that we have heard and known and our fathers have relayed to us.
4 ನಾವು ಸಹ ಯೆಹೋವ ದೇವರ ಸ್ತೋತ್ರಗಳನ್ನೂ ಅವರ ಶಕ್ತಿಯನ್ನೂ ದೇವರು ಮಾಡಿದ ಅದ್ಭುತಗಳನ್ನೂ ನಮ್ಮ ಮಕ್ಕಳಿಗೆ ವಿವರಿಸುವೆವು. ನಮ್ಮ ಮಕ್ಕಳು ಮುಂದಿನ ತಲೆಮಾರಿಗೆ ಮರೆಮಾಡದಿರುವರು.
We will not hide them from their children, but will declare to the next generation the praises of the LORD and His might, and the wonders He has performed.
5 ಅವರು ಯಾಕೋಬ ವಂಶದಲ್ಲಿ ಶಾಸನಗಳನ್ನು ಸ್ಥಾಪಿಸಿ, ಇಸ್ರಾಯೇಲಿನಲ್ಲಿ ನಿಯಮವನ್ನು ಇಟ್ಟು, ಹಿರಿಯರಿಗೆ ಆಜ್ಞಾಪಿಸಿದ್ದೇನೆಂದರೆ, ಅವುಗಳನ್ನು ನಿಮ್ಮ ಮಕ್ಕಳಿಗೆ ಹೇಳಿಕೊಡಿರಿ,
For He established a testimony in Jacob and appointed a law in Israel, which He commanded our fathers to teach to their children,
6 ಇದರಿಂದ ಮುಂದಿನ ತಲೆಮಾರಿಗೆ ವಾಕ್ಯವು ಗೊತ್ತಾಗಿ, ಅವರ ಮಕ್ಕಳು ಅವುಗಳನ್ನು ತಮ್ಮ ಮಕ್ಕಳು ಮೊಮ್ಮಕ್ಕಳಿಗೆ ತಿಳಿಸುತ್ತಾ ಹೋಗುವರು.
that the coming generation would know them— even children yet to be born— to arise and tell their own children
7 ಆಗ ಅವರು ದೇವರಲ್ಲಿ ತಮ್ಮ ಭರವಸೆ ಇಡುವರು. ಮತ್ತು ದೇವರ ಕ್ರಿಯೆಗಳನ್ನು ಮರೆತು ಬಿಡದೆ ದೇವರ ಆಜ್ಞೆಗಳನ್ನು ಕೈಗೊಂಡು ನಡೆಯುವರು.
that they should put their confidence in God, not forgetting His works, but keeping His commandments.
8 ಆಗ ಅವರು ತಮ್ಮ ಪಿತೃಗಳ ಹಾಗೆ ಹಟಮಾರಿ ಮತ್ತು ದಂಗೆಕೋರ ಸಂತತಿಯವರು ಆಗಿರುವುದಿಲ್ಲ, ಅವರ ಹೃದಯವು ದೇವರಿಗೆ ಸತ್ಯವಾಗಿರಲಿಲ್ಲ, ಅವರ ಆತ್ಮವು ದೇವರಲ್ಲಿ ನಂಬಿಗಸ್ತಿಕೆಯಿಂದಲೂ ಇರಲಿಲ್ಲ.
Then they will not be like their fathers, a stubborn and rebellious generation, whose heart was not loyal, whose spirit was not faithful to God.
9 ಎಫ್ರಾಯೀಮನ ಮಕ್ಕಳು ಆಯುಧಗಳನ್ನು ಧರಿಸಿ, ಬಿಲ್ಲುಗಳನ್ನು ಹೊತ್ತುಕೊಂಡಿದ್ದರೂ ಕಾಳಗದ ದಿವಸದಲ್ಲಿ ಹಿಂತಿರುಗಿಕೊಂಡರು.
The archers of Ephraim turned back on the day of battle.
10 ಅವರು ದೇವರ ಒಡಂಬಡಿಕೆಯನ್ನು ಕೈಗೊಳ್ಳಲಿಲ್ಲ. ದೇವರ ನಿಯಮದಲ್ಲಿ ನಡೆಯಲೊಲ್ಲದೆ ಇದ್ದರು.
They failed to keep God’s covenant and refused to live by His law.
11 ದೇವರು ಅವರಿಗೆ ತೋರಿಸಿದ ಕೃತ್ಯಗಳನ್ನೂ ದೇವರು ಮಾಡಿದ ಅದ್ಭುತಗಳನ್ನೂ ಮರೆತುಬಿಟ್ಟರು.
They forgot what He had done, the wonders He had shown them.
12 ದೇವರು ಪಿತೃಗಳ ಮುಂದೆ ಈಜಿಪ್ಟ್ ದೇಶದಲ್ಲಿ, ಚೋವನ್ ಬೈಲಿನಲ್ಲಿ ಅದ್ಭುತಗಳನ್ನು ಮಾಡಿದರು.
He worked wonders before their fathers in the land of Egypt, in the region of Zoan.
13 ದೇವರು ಸಮುದ್ರವನ್ನು ವಿಭಾಗಿಸಿ ಅವರನ್ನು ದಾಟಿಸಿದರು. ನೀರನ್ನು ಗೋಡೆಯಾಗಿ ನಿಲ್ಲಿಸಿದರು.
He split the sea and brought them through; He set the waters upright like a wall.
14 ದೇವರು ಹಗಲಿನಲ್ಲಿ ಮೇಘದಿಂದಲೂ ರಾತ್ರಿಯೆಲ್ಲಾ ಬೆಂಕಿಯ ಬೆಳಕಿನಿಂದ ಅವರನ್ನು ನಡೆಸಿದರು.
He led them with a cloud by day and with a light of fire all night.
15 ಮರುಭೂಮಿಯಲ್ಲಿ ದೇವರು ಬಂಡೆಗಳನ್ನು ಸೀಳಿ, ಜನರಿಗೆ ಮಹಾ ಜಲಾಗಾಧಗಳ ಹಾಗೆ ನೀರನ್ನು ಕುಡಿಯಲು ಕೊಟ್ಟರು.
He split the rocks in the wilderness and gave them drink as abundant as the seas.
16 ಬಂಡೆಯೊಳಗಿಂದ ಹೊಳೆಗಳನ್ನು ಹೊರಗೆ ತಂದು, ನದಿಗಳನ್ನು ನೀರನ್ನು ಹರಿಯಮಾಡಿದರು.
He brought streams from the stone and made water flow down like rivers.
17 ಆದರೆ ಜನರು ಇನ್ನೂ ದೇವರಿಗೆ ವಿರೋಧವಾಗಿ ಪಾಪಮಾಡಿ, ಮರುಭೂಮಿಯಲ್ಲಿ ಮಹೋನ್ನತರಿಗೆ ವಿರೋಧವಾಗಿ ಕೋಪವನ್ನೆಬ್ಬಿಸಿದರು.
But they continued to sin against Him, rebelling in the desert against the Most High.
18 ದೇವರನ್ನು ತಮ್ಮ ಹೃದಯದಲ್ಲಿ ಬೇಕೆಂದು ಪರೀಕ್ಷಿಸಿ, ತಮ್ಮ ದುರಾಶೆಗಳಿಗೋಸ್ಕರ ಆಹಾರವನ್ನು ಕೇಳಿದರು.
They willfully tested God by demanding the food they craved.
19 ಹೌದು, ಅವರು ದೇವರಿಗೆ ವಿರೋಧವಾಗಿ ಮಾತನಾಡಿ, “ದೇವರು ಅರಣ್ಯದಲ್ಲಿ ಭೋಜನವನ್ನು ಸಿದ್ಧ ಮಾಡಬಲ್ಲನೋ?
They spoke against God, saying, “Can God really prepare a table in the wilderness?
20 ಇಗೋ, ದೇವರು ಬಂಡೆಯನ್ನು ಹೊಡೆಯಲಾಗಿ, ನೀರು ಚಿಮ್ಮಿ ಹೊರಟಿತು. ಹಳ್ಳಗಳು ದಡಮೀರಿ ಹರಿದವು. ಅರಣ್ಯದಲ್ಲಿ, ರೊಟ್ಟಿಯನ್ನು ಸಹ ಕೊಡಬಲ್ಲನೋ? ತಮ್ಮ ಜನರಿಗೆ ಮಾಂಸವನ್ನು ಸಿದ್ಧಮಾಡುವನೋ?” ಎಂದರು.
When He struck the rock, water gushed out and torrents raged. But can He also give bread or supply His people with meat?”
21 ಯೆಹೋವ ದೇವರು ಇದನ್ನು ಕೇಳಿ ಬೇಸರಗೊಂಡರು. ಯಾಕೋಬ್ಯರಲ್ಲಿ ಬೆಂಕಿ ಹೊತ್ತಿತು. ಇಸ್ರಾಯೇಲರು ದಂಡನೆಗೆ ಒಳಗಾದರು.
Therefore the LORD heard and was filled with wrath; so a fire was kindled against Jacob, and His anger flared against Israel,
22 ಏಕೆಂದರೆ ಅವರು ದೇವರಲ್ಲಿ ನಂಬಿಕೆ ಇಡಲಿಲ್ಲ. ದೇವರ ರಕ್ಷಣೆಯಲ್ಲಿ ಭರವಸೆ ಇಡಲಿಲ್ಲ.
because they did not believe God or rely on His salvation.
23 ಆದರೆ ದೇವರು ಮೇಲಿರುವ ಮೇಘಗಳಿಗೆ ಆಜ್ಞಾಪಿಸಿ, ಆಕಾಶದ ಕದಗಳನ್ನು ತೆರೆದರು.
Yet He commanded the clouds above and opened the doors of the heavens.
24 ಉಣ್ಣುವುದಕ್ಕೆ ಮನ್ನವನ್ನು ಜನರ ಮೇಲೆ ಸುರಿಸಿ, ಪರಲೋಕದ ಧಾನ್ಯವನ್ನು ಅವರಿಗೆ ಕೊಟ್ಟರು.
He rained down manna for them to eat; He gave them grain from heaven.
25 ದೇವದೂತರ ಆಹಾರವನ್ನು ಮಾನವರು ತಿಂದರು. ದೇವರು ಅವರಿಗೆ ಬೇಕಾದಷ್ಟು ಕಳುಹಿಸಿದರು.
Man ate the bread of angels; He sent them food in abundance.
26 ಮೂಡಣ ಗಾಳಿಯನ್ನು ಆಕಾಶದಲ್ಲಿ ಹುಟ್ಟಿಸಿ, ತಮ್ಮ ಶಕ್ತಿಯಿಂದ ದಕ್ಷಿಣ ಗಾಳಿಯನ್ನು ಬರಮಾಡಿದರು.
He stirred the east wind from the heavens and drove the south wind by His might.
27 ಧೂಳಿನಂತೆ ಮಾಂಸವನ್ನು ಸುರಿಸಿದರು. ಸಮುದ್ರದ ಮರಳಿನಂತೆ ಪಕ್ಷಿಗಳನ್ನೂ ಅವರ ಮೇಲೆ ಸುರಿಸಿದರು.
He rained meat on them like dust, and winged birds like the sand of the sea.
28 ಅವರ ಮಧ್ಯದಲ್ಲಿಯೂ ಅವರ ಗುಡಾರಗಳ ಸುತ್ತಲೂ ಸುರಿಸಿದರು.
He felled them in the midst of their camp, all around their dwellings.
29 ಆಗ ಅವರು ತಿಂದು ಬಹಳ ತೃಪ್ತಿಗೊಂಡರು. ಅವರು ಆಶಿಸಿದ್ದನ್ನು ದೇವರು ಕೊಟ್ಟರು.
So they ate and were well filled, for He gave them what they craved.
30 ಅವರು ತಮ್ಮ ಆಶೆಯನ್ನು ಬಿಡದೆ, ಅವರ ಊಟವು ಇನ್ನೂ ಅವರ ಬಾಯಿಯಲ್ಲಿ ಇರುವಾಗ,
Yet before they had filled their desire, with the food still in their mouths,
31 ದೇವರ ಶಿಕ್ಷೆ ಅವರ ಮೇಲೆ ಬಿತ್ತು. ಅವರಲ್ಲಿ ಕೊಬ್ಬಿದವರು ಸತ್ತರು. ಇಸ್ರಾಯೇಲರ ಪ್ರಾಯಸ್ಥರು ಸಹ ಸತ್ತುಹೋದರು.
God’s anger flared against them, and He put to death their strongest and subdued the young men of Israel.
32 ಇದೆಲ್ಲಾ ಆದಾಗ್ಯೂ ಜನರು ಇನ್ನೂ ಪಾಪಮಾಡುತ್ತಿದ್ದರು. ದೇವರ ಅದ್ಭುತಗಳನ್ನು ಕಂಡರೂ ನಂಬಲಿಲ್ಲ.
In spite of all this, they kept on sinning; despite His wonderful works, they did not believe.
33 ಆಗ ದೇವರು ಅವರ ದಿವಸಗಳನ್ನು ವ್ಯರ್ಥವಾಗಿಯೂ ಅವರ ವರ್ಷಗಳನ್ನು ಕಳವಳದಲ್ಲಿಯೂ ಕಳೆಯ ಹೋಗಲು ಅನುಮತಿಸಿದರು.
So He ended their days in futility, and their years in sudden terror.
34 ದೇವರು ಜನರನ್ನು ದಂಡಿಸುವಾಗೆಲ್ಲಾ ಅವರು ದೇವರನ್ನು ಹುಡುಕಿದರು. ಆಸಕ್ತಿಯಿಂದ ದೇವರ ಕಡೆಗೆ ತಿರುಗಿಕೊಳ್ಳುತ್ತಿದ್ದರು.
When He slew them, they would seek Him; they repented and searched for God.
35 ದೇವರು ತಮ್ಮ ಬಂಡೆ ಎಂದೂ ಮಹೋನ್ನತರಾದ ದೇವರು ತಮ್ಮ ವಿಮೋಚಕರೆಂದೂ ಜ್ಞಾಪಕ ಮಾಡಿಕೊಳ್ಳುತ್ತಿದ್ದರು.
And they remembered that God was their Rock, that God Most High was their Redeemer.
36 ಆದರೂ ಅವರು ತಮ್ಮ ಬಾಯಿಗಳಿಂದ ದೇವರಿಗೆ ಮುಖಸ್ತುತಿ ಮಾಡಿ, ತಮ್ಮ ನಾಲಿಗೆಯಿಂದ ದೇವರನ್ನು ಸುಳ್ಳಾಗಿ ಹೋಗಳುತ್ತಿದ್ದರು.
But they deceived Him with their mouths, and lied to Him with their tongues.
37 ಅವರ ಹೃದಯವು ದೇವರ ಸಂಗಡ ಸ್ಥಿರವಾಗಿರಲಿಲ್ಲ. ಅವರು ದೇವರ ಒಡಂಬಡಿಕೆಯಲ್ಲಿ ನಂಬಿಗಸ್ತರಾಗಿರಲಿಲ್ಲ.
Their hearts were disloyal to Him, and they were unfaithful to His covenant.
38 ಆದಾಗ್ಯೂ ದೇವರು ಅವರನ್ನು ಕರುಣಿಸಿ, ಅವರ ಅಕ್ರಮವನ್ನು ಕ್ಷಮಿಸಿ, ನಾಶಮಾಡದೆ ಬಿಟ್ಟುಬಿಟ್ಟರು. ಹೌದು, ಅನೇಕ ಸಾರಿ ದೇವರು ಕೋಪಿಸಿಕೊಳ್ಳದಿದ್ದರು, ತಮ್ಮ ಬೇಸರವನ್ನು ದೇವರು ಪ್ರಯೋಗಿಸಲಿಲ್ಲ.
And yet He was compassionate; He forgave their iniquity and did not destroy them. He often restrained His anger and did not unleash His full wrath.
39 ಜನರು ಬರೀ ಮಾಂಸ ಮಾತ್ರದವರೂ ತಿರುಗಿಕೊಳ್ಳದೆ ಹೋಗುವ ಗಾಳಿಯೂ ಆಗಿದ್ದಾರೆಂದು ದೇವರು ಜ್ಞಾಪಕಮಾಡಿಕೊಂಡರು.
He remembered that they were but flesh, a passing breeze that does not return.
40 ಎಷ್ಟೋ ಸಾರಿ ಜನರು ಮರುಭೂಮಿಯಲ್ಲಿ ದೇವರಿಗೆ ಬೇಸರಮಾಡಿದರು. ಕಾಡಿನಲ್ಲಿ ದೇವರನ್ನು ದುಃಖಪಡಿಸಿದರು.
How often they disobeyed Him in the wilderness and grieved Him in the desert!
41 ಅವರು ತಿರುಗಿಬಿದ್ದು ದೇವರನ್ನು ಪರೀಕ್ಷಿಸಿದರು. ಇಸ್ರಾಯೇಲರ ಪರಿಶುದ್ಧರಿಗೆ ಬೇಸರಗೊಳಿಸಿದರು.
Again and again they tested God and provoked the Holy One of Israel.
42 ದೇವರು ಅವರನ್ನು ವೈರಿಯಿಂದ ವಿಮೋಚಿಸಿದ್ದನ್ನೂ ತಾವು ತೋರಿಸಿದ ಶಕ್ತಿಯನ್ನೂ ಅವರು ಸ್ಮರಿಸಲಿಲ್ಲ.
They did not remember His power — the day He redeemed them from the adversary,
43 ಈಜಿಪ್ಟಿನಲ್ಲಿ ಆದ ಸೂಚಕಕಾರ್ಯಗಳನ್ನೂ, ಚೋವನ್ ಬಯಲಿನಲ್ಲಿ ನಡೆಸಿದ ಅದ್ಭುತಗಳನ್ನು ಮಾಡಿದ ದಿವಸವನ್ನೂ ಅವರು ಜ್ಞಾಪಕ ಮಾಡಿಕೊಳ್ಳಲಿಲ್ಲ.
when He performed His signs in Egypt and His wonders in the fields of Zoan.
44 ಅವರು ಕುಡಿಯಲಾರದ ಹಾಗೆ ಅವರ ನದಿಗಳು ರಕ್ತವಾದವು. ಅವರ ಹೊಳೆಗಳು ಸಹ ರಕ್ತವಾಗಿ ಮಾರ್ಪಟ್ಟವು.
He turned their rivers to blood, and from their streams they could not drink.
45 ಅವರಲ್ಲಿ ವಿವಿಧ ಹುಳುಗಳು ಬಂದವು. ಅವು ಅವರನ್ನು ಹಾನಿಮಾಡಿದವು. ಕಪ್ಪೆಗಳು ಸಹ ಕಳುಹಿಸಲಾದವು. ಅವು ಸಹ ಅವರನ್ನು ಹಾನಿಮಾಡಿದವು.
He sent swarms of flies that devoured them, and frogs that devastated them.
46 ಅವರ ಬೆಳೆಗಳು ಕಂಬಳಿ ಹುಳುಗಳಿಗೂ ಅವರ ವ್ಯವಸಾಯ ಮಿಡತೆಗಳಿಗೂ ತುತ್ತಾದವು.
He gave their crops to the grasshopper, the fruit of their labor to the locust.
47 ಅವರ ದ್ರಾಕ್ಷಿಬಳ್ಳಿಗಳು ಕಲ್ಮಳೆಯಿಂದಲೂ ಅವರ ಅತ್ತಿಮರಗಳು ಮಂಜಿನಿಂದಲೂ ನಾಶವಾದವು.
He killed their vines with hailstones and their sycamore-figs with sleet.
48 ಅವರ ದನಗಳು ಕಲ್ಮಳೆಗೂ ಅವರ ಪಶುಗಳು ಸಿಡಿಲಿಗೂ ಒಳಪಟ್ಟವು.
He abandoned their cattle to the hail and their livestock to bolts of lightning.
49 ದೇವರು ನಾಶದ ದೇವದೂತರನ್ನು ಕಳುಹಿಸುತ್ತಾ ತಮ್ಮ ಬೇಸರದಿಂದಲೂ ದುಃಖದಿಂದಲೂ ಇಕ್ಕಟ್ಟುಗಳನ್ನೂ ಅವರ ಮೇಲೆ ಸುರಿಯಮಾಡಿದರು.
He unleashed His fury against them, wrath, indignation, and calamity— a band of destroying angels.
50 ತಮ್ಮ ಬೇಸರಕ್ಕೆ ದಾರಿಯನ್ನು ಮಾಡಿ, ಅವರನ್ನು ಪೂರ್ಣವಾಗಿ ದಂಡಿಸಿದರು. ಅವರ ಜೀವವನ್ನು ವ್ಯಾಧಿಗೆ ಒಪ್ಪಿಸಿಬಿಟ್ಟು,
He cleared a path for His anger; He did not spare them from death but delivered their lives to the plague.
51 ಈಜಿಪ್ಟಿನಲ್ಲಿ ಚೊಚ್ಚಲರೆಲ್ಲರನ್ನೂ, ಹಾಮನ ಗುಡಾರಗಳಲ್ಲಿ ಪುರುಷತ್ವದ ಪ್ರಥಮ ಫಲವನ್ನೂ ದಂಡಿಸಿದರು.
He struck all the firstborn of Egypt, the virility in the tents of Ham.
52 ಆದರೆ ದೇವರು ಮಂದೆಯ ಹಾಗೆ ತಮ್ಮ ಜನರನ್ನು ಹೊರತಂದು, ಕುರಿಗಳನ್ನು ನಡೆಸುವಂತೆ ಮರುಭೂಮಿಯಲ್ಲಿ ಅವರನ್ನು ನಡೆಸಿದರು.
He led out His people like sheep and guided them like a flock in the wilderness.
53 ಜನರನ್ನು ಸುರಕ್ಷಿತವಾಗಿ ನಡೆಸಿದ ಕಾರಣ ಅವರು ಹೆದರಲಿಲ್ಲ. ಆದರೆ ಸಮುದ್ರವು ಅವರ ಶತ್ರುಗಳನ್ನು ಮುಚ್ಚಿಬಿಟ್ಟಿತು.
He led them safely, so they did not fear, but the sea engulfed their enemies.
54 ಹೀಗೆ ದೇವರು ತಮ್ಮ ಭುಜಬಲದಿಂದ ಪವಿತ್ರ ನಾಡಿನ ತಮ್ಮ ಮೇರೆಗೂ, ಈ ಪರ್ವತ ನಾಡಿಗೂ ಅವರನ್ನು ಬರಮಾಡಿದರು.
He brought them to His holy land, to the mountain His right hand had acquired.
55 ದೇವರು ಜನಾಂಗಗಳನ್ನು ಅವರ ಮುಂದೆ ಹೊರಗೆ ಹಾಕಿ, ಅವರ ಬಾಧ್ಯತೆಯನ್ನು ಹಂಚಿ, ಅವರ ಗುಡಾರಗಳಲ್ಲಿ ಇಸ್ರಾಯೇಲರನ್ನು ವಾಸಿಸುವಂತೆ ಮಾಡಿದರು.
He drove out nations before them and apportioned their inheritance; He settled the tribes of Israel in their tents.
56 ಆದರೆ ಜನರು ಮಹೋನ್ನತರಾದ ದೇವರನ್ನು ಪರೀಕ್ಷಿಸಿ ವಿರೋಧಿಸಿದರು; ದೇವರ ಶಾಸನಗಳನ್ನು ಅವರು ಕೈಗೊಳ್ಳಲಿಲ್ಲ.
But they tested and disobeyed God Most High, for they did not keep His decrees.
57 ತಮ್ಮ ಪಿತೃಗಳ ಹಾಗೆ ಉಪಕಾರ ನೆನಸದೆ, ಅಪನಂಬಿಗಸ್ತರಾಗಿ ಮೋಸದ ಬಿಲ್ಲಿನ ಹಾಗೆ ಓರೆಯಾದರು.
They turned back and were faithless like their fathers, twisted like a faulty bow.
58 ತಮ್ಮ ಉನ್ನತ ಸ್ಥಳಗಳಿಂದ ದೇವರಿಗೆ ಬೇಸರಗೊಳಿಸಿದರು. ತಮ್ಮ ಮೂರ್ತಿಗಳಿಂದ ದೇವರಿಗೆ ದುಃಖಪಡಿಸಿದರು.
They enraged Him with their high places and provoked His jealousy with their idols.
59 ದೇವರು ಇದನ್ನು ಕಂಡಾಗ, ಬೇಸರಗೊಂಡು ಇಸ್ರಾಯೇಲನ್ನು ಪರಿಪೂರ್ಣವಾಗಿ ತಿರಸ್ಕರಿಸಿಬಿಟ್ಟರು.
On hearing it, God was furious and rejected Israel completely.
60 ದೇವರು ಸಿಲೋವಿನ ಗುಡಾರನ್ನೂ ಜನರೊಳಗೆ ಹಾಕಿದ ಗುಡಾರವನ್ನೂ ತಳ್ಳಿಬಿಟ್ಟರು.
He abandoned the tabernacle of Shiloh, the tent He had pitched among men.
61 ತಮ್ಮ ಬಲದ ಮಂಜೂಷವನ್ನು ಸೆರೆಗೆ ಒಪ್ಪಿಸಿಬಿಟ್ಟರು. ತಮ್ಮ ಮಹಿಮೆಯನ್ನು ವೈರಿಯ ಕೈಗೂ ಕೊಟ್ಟುಬಿಟ್ಟರು.
He delivered His strength to captivity, and His splendor to the hand of the adversary.
62 ದೇವರು ತಮ್ಮ ಜನರನ್ನು ಖಡ್ಗಕ್ಕೆ ಒಪ್ಪಿಸಿಕೊಟ್ಟರು. ತಮ್ಮ ಸ್ವಾಸ್ಥತೆಗೆ ವಿರೋಧವಾಗಿದ್ದರು.
He surrendered His people to the sword because He was enraged by His heritage.
63 ಅವರ ಯುವಕರನ್ನು ಬೆಂಕಿಯು ದಹಿಸಿಬಿಟ್ಟಿತು. ಅವರ ಕನ್ಯೆಯರು ವಿವಾಹ ಗೀತೆಗಳನ್ನು ಹಾಡಲಿಲ್ಲ.
Fire consumed His young men, and their maidens were left without wedding songs.
64 ಅವರ ಯಾಜಕರು ಖಡ್ಗದಿಂದ ಸಂಹಾರವಾದರು. ಅವರ ವಿಧವೆಯರು ಗೋಳಾಡಲಿಲ್ಲ.
His priests fell by the sword, but their widows could not lament.
65 ಆಗ ಯೆಹೋವ ದೇವರು ಪ್ರತಿಕ್ರಿಯೆಯನ್ನು ಪ್ರಕಟಿಸಿದರು. ದ್ರಾಕ್ಷಾರಸದಿಂದ ಆರ್ಭಟಿಸುವ ಪರಾಕ್ರಮಶಾಲಿಯ ಹಾಗೆ ಸಂರಕ್ಷಿಸಲಾದರು.
Then the Lord awoke as from sleep, like a mighty warrior overcome by wine.
66 ತಮ್ಮ ವೈರಿಗಳನ್ನು ದಂಡಿಸಿದರು. ನಿತ್ಯನಿಂದೆಯೇ ಅವರ ಪಾಲಾಯಿತು.
He beat back His foes; He put them to everlasting shame.
67 ಆಗ ದೇವರು ಯೋಸೇಫನ ಗುಡಾರವನ್ನು ತಿರಸ್ಕರಿಸಿ, ಎಫ್ರಾಯೀಮನ ಗೋತ್ರವನ್ನು ಆಯ್ದುಕೊಳ್ಳದೆ,
He rejected the tent of Joseph and refused the tribe of Ephraim.
68 ಯೆಹೂದನ ಕುಲವನ್ನೂ, ತಾನು ಪ್ರೀತಿಮಾಡಿದ ಚೀಯೋನ್ ಪರ್ವತವನ್ನೂ ಆಯ್ದುಕೊಂಡರು.
But He chose the tribe of Judah, Mount Zion, which He loved.
69 ಉನ್ನತವಾದವುಗಳಂತೆಯೂ, ಯುಗಯುಗಕ್ಕೂ ತಾವು ಅಸ್ತಿವಾರ ಹಾಕಿದ ಭೂಮಿಯಂತೆಯೂ ತಮ್ಮ ಪರಿಶುದ್ಧ ಸ್ಥಳವನ್ನು ಕಟ್ಟಿದರು.
He built His sanctuary like the heights, like the earth He has established forever.
70 ತಮ್ಮ ಸೇವಕ ದಾವೀದನನ್ನು ಆಯ್ದುಕೊಂಡು, ಕುರಿಹಟ್ಟಿಯಿಂದ ಅವನನ್ನು ತೆಗೆದುಕೊಂಡರು.
He chose David His servant and took him from the sheepfolds;
71 ತಮ್ಮ ಪ್ರಜೆಯಾದ ಯಾಕೋಬ್ಯರನ್ನೂ ತಮ್ಮ ಬಾಧ್ಯತೆಯಾದ ಇಸ್ರಾಯೇಲರನ್ನೂ ಮೇಯಿಸುವ ಕುರುಬನನ್ನಾಗಿ ದಾವೀದನನ್ನು ನೇಮಿಸಿದರು.
from tending the ewes He brought him to be shepherd of His people Jacob, of Israel His inheritance.
72 ದಾವೀದನು ತಮ್ಮ ಹೃದಯದ ಯಥಾರ್ಥತೆಯ ಪ್ರಕಾರ ಜನರನ್ನು ಪೋಷಿಸಿ ತಮ್ಮ ಹಸ್ತ ಕೌಶಲ್ಯದಿಂದ ಅವರನ್ನು ನಡೆಸಿದನು.
So David shepherded them with integrity of heart and guided them with skillful hands.

< ಕೀರ್ತನೆಗಳು 78 >