< ಕೀರ್ತನೆಗಳು 8 >
1 ಸಂಗೀತ ನಿರ್ದೇಶಕನಿಗಾಗಿರುವ ಕೀರ್ತನೆ. ಗಿತ್ತೀ ರಾಗದಲ್ಲಿ ಹಾಡತಕ್ಕದ್ದು. ದಾವೀದನ ಕೀರ್ತನೆ. ನಮ್ಮ ಕರ್ತ ಆಗಿರುವ ಯೆಹೋವ ದೇವರೇ, ನಿಮ್ಮ ಹೆಸರು ಭೂಮಿಯಲ್ಲೆಲ್ಲಾ ಎಷ್ಟೋ ವೈಭವವುಳ್ಳದ್ದಾಗಿದೆ! ನೀವು ನಿಮ್ಮ ಮಹಿಮೆಯನ್ನು ಆಕಾಶಗಳಲ್ಲಿ ಸ್ಥಾಪಿಸಿದ್ದೀರಿ.
Ó Senhor, nosso Senhor, quão admiravel é o teu nome em toda a terra, pois pozeste a tua gloria sobre os céus!
2 ಸಣ್ಣ ಮಕ್ಕಳ ಮತ್ತು ಹಾಲುಣ್ಣುವ ಕೂಸುಗಳ ಸ್ತೋತ್ರದ ಮೂಲಕ ನಿಮ್ಮ ಶತ್ರುಗಳ ವಿರೋಧವಾಗಿ ಭದ್ರಕೋಟೆಯನ್ನು ಸ್ಥಾಪಿಸಿ, ನಿಮ್ಮ ವೈರಿಗಳನ್ನೂ ಮುಯ್ಯಿ ತೀರಿಸುವವರನ್ನೂ ನೀವು ಸುಮ್ಮಗಿರಿಸಿದ್ದೀರಿ.
Tu ordenaste força da bocca das creanças e dos que mamam, por causa dos teus inimigos, para fazer calar ao inimigo e ao vingador.
3 ನಿಮ್ಮ ಬೆರಳಿನ ಸೃಷ್ಟಿಯಾದ ಆಕಾಶಮಂಡಲವನ್ನೂ ನೀವು ಉಂಟುಮಾಡಿದ ಚಂದ್ರನಕ್ಷತ್ರಗಳನ್ನೂ ನಾನು ನೋಡಿದಾಗ,
Quando vejo os teus céus, obra dos teus dedos, a lua e as estrellas que preparaste;
4 ನೀವು ಮಾನವರನ್ನು ನೆನಸಲು ಅವರು ಎಷ್ಟರವರು? ಮನುಷ್ಯಪುತ್ರನನ್ನು ಲಕ್ಷ್ಯವಿಡಲು ಅವನು ಯಾರು?
Que é o homem mortal para que te lembres d'elle? e o filho do homem, para que o visites?
5 ನೀವು ಮನುಷ್ಯಪುತ್ರನನ್ನು ದೇವರಿಗಿಂತಲೂ ಸ್ವಲ್ಪ ಕಡಿಮೆ ಮಾಡಿ, ಮಹಿಮೆಯನ್ನೂ ಮಾನವನ್ನೂ ಅವನಿಗೆ ಕಿರೀಟವಾಗಿಟ್ಟಿದ್ದೀರಿ.
Pois pouco menor o fizeste do que os anjos, e de gloria e de honra o coroaste.
6 ನೀವು ನಿಮ್ಮ ಕೈಕೃತಿಗಳ ಮೇಲೆ ಅವನನ್ನು ಅಧಿಕಾರಿಯನ್ನಾಗಿ ಮಾಡಿ, ಸಮಸ್ತವನ್ನೂ ಅವನ ಪಾದಗಳ ಕೆಳಗೆ ಹಾಕಿದ್ದೀರಿ:
Fazes com que elle tenha dominio sobre as obras das tuas mãos; tudo pozeste debaixo de seus pés:
7 ಎಲ್ಲಾ ಕುರಿದನಗಳನ್ನೂ ಅಡವಿಯ ಮೃಗಗಳನ್ನೂ
Todas as ovelhas e bois, assim como os animaes do campo,
8 ಆಕಾಶದ ಪಕ್ಷಿಗಳನ್ನೂ ಸಮುದ್ರದ ಮೀನುಗಳನ್ನೂ ಸಮುದ್ರದ ಹಾದಿಗಳಲ್ಲಿ ಸಂಚರಿಸುವ ಎಲ್ಲ ವಿಧವಾದ ಜೀವಜಂತುಗಳನ್ನೂ ಅವನ ಪಾದಗಳ ಕೆಳಗೆ ಹಾಕಿದ್ದೀರಿ.
As aves dos céus, e os peixes do mar, e tudo o que passa pelas veredas dos mares.
9 ನಮ್ಮ ಕರ್ತ ಆಗಿರುವ ಯೆಹೋವ ದೇವರೇ, ನಿಮ್ಮ ಹೆಸರು ಭೂಮಿಯಲ್ಲೆಲ್ಲಾ ಎಷ್ಟೋ ಮಹಿಮೆಯುಳ್ಳದ್ದಾಗಿದೆ!
Ó Senhor, nosso Senhor, quão admiravel é o teu nome sobre toda a terra!