< ಕೀರ್ತನೆಗಳು 82 >
1 ಆಸಾಫನ ಕೀರ್ತನೆ. ದೇವರು ಮಹಾಸಭೆಯಲ್ಲಿ ಅಧ್ಯಕ್ಷತೆವಹಿಸಿ, ದೇವರುಗಳ ಮಧ್ಯದಲ್ಲಿ ನ್ಯಾಯತೀರಿಸುತ್ತಾರೆ.
Бог стаде на сабору Божијем, усред богова изрече суд:
2 “ಎಷ್ಟರವರೆಗೆ ಅನ್ಯಾಯವಾಗಿ ತೀರ್ಪು ನೀಡುವಿರಿ. ಎಲ್ಲಿಯತನಕ ದುಷ್ಟರಿಗೆ ಮುಖದಾಕ್ಷಿಣ್ಯ ಮಾಡುವಿರಿ?
"Докле ћете судити неправо, и безбожницима гледати ко је ко?
3 ದರಿದ್ರನನ್ನೂ ದಿಕ್ಕಿಲ್ಲದವನನ್ನೂ ಕಾಪಾಡಿರಿ. ದೀನನಿಗೂ, ಬಡವನಿಗೂ ನ್ಯಾಯವನ್ನು ಕೊಡಿರಿ.
Судите убогоме и сироти, оног кога гоне и ништега правдајте.
4 ದರಿದ್ರನನ್ನೂ, ಬಡವನನ್ನೂ ತಪ್ಪಿಸಿರಿ. ಅವರನ್ನು ದುಷ್ಟರ ಕೈಯೊಳಗಿಂದ ಬಿಡಿಸಿರಿ.
Избављајте убогога и ништега, из руке безбожничке отимајте.
5 “ದೇವರುಗಳು ಅರಿಯರು ಏನೂ, ಅವರು ಗ್ರಹಿಸುವುದಿಲ್ಲ ಏನೂ. ಅವರು ಕತ್ತಲೆಯಲ್ಲಿ ನಡೆದುಕೊಳ್ಳುತ್ತಾರೆ. ಭೂಮಿಯ ಅಸ್ತಿವಾರಗಳೆಲ್ಲಾ ಕದಲುತ್ತಿದೆ.
Не познаше, нити разумеше, ходе по тами; задрмаше се земљи сви темељи.
6 “ನಾನು ಮುಂದುವರೆಸಿ ಅವರಿಗೆ ಹೇಳಿದ್ದು, ‘ನೀವು ದೇವರುಗಳು, ನೀವೆಲ್ಲರು ಮಹೋನ್ನತ ದೇವರ ಮಕ್ಕಳು,’ ಎಂದು ಹೇಳಿದೆನು.
Рекох: Богови сте, и синови Вишњег сви.
7 ಆದರೂ ಕೇವಲ ಮನುಷ್ಯರ ಹಾಗೆ ನೀವು ಸಾಯುವಿರಿ. ಇತರ ನಾಯಕರಂತೆಯೇ ಬಿದ್ದು ಹೋಗುವಿರಿ.”
Али ћете као људи помрети, и као сваки кнез пашћете."
8 ದೇವರೇ, ಬನ್ನಿರಿ ಭೂಮಿಗೆ ನ್ಯಾಯತೀರಿಸಿರಿ. ಏಕೆಂದರೆ ಜನಾಂಗಗಳೆಲ್ಲಾ ನಿಮಗೇ ಸೇರಿರುತ್ತವೆ.
Устани, Боже, суди земљи; јер су Твоји по наследству сви народи.