< ಕೀರ್ತನೆಗಳು 84 >

1 ಸಂಗೀತ ನಿರ್ದೇಶಕನಿಗಾಗಿರುವ ಕೀರ್ತನೆ. ಗಿತ್ತೀ ರಾಗದಿಂದ ಹಾಡತಕ್ಕದ್ದು. ಕೋರಹೀಯರ ಕೀರ್ತನೆ. ಸೇನಾಧೀಶ್ವರ ಯೆಹೋವ ದೇವರೇ, ನಿಮ್ಮ ನಿವಾಸಗಳು ಎಷ್ಟೋ ರಮ್ಯವಾಗಿವೆ!
לַמְנַצֵּחַ עַֽל־הַגִּתִּית לִבְנֵי־קֹרַח מִזְמֽוֹר׃ מַה־יְּדִידוֹת מִשְׁכְּנוֹתֶיךָ יְהוָה צְבָאֽוֹת׃
2 ಯೆಹೋವ ದೇವರ ಅಂಗಳಗಳಲ್ಲಿ ಸೇರಲು ನನ್ನ ಪ್ರಾಣವು ಬಯಸಿ ಕುಂದುತ್ತದೆ. ನನ್ನ ಹೃದಯವೂ, ನನ್ನ ಶರೀರವೂ ಜೀವವುಳ್ಳ ದೇವರಿಗಾಗಿ ಕೂಗಿಕೊಳ್ಳುತ್ತದೆ.
נִכְסְפָה וְגַם־כָּלְתָה ׀ נַפְשִׁי לְחַצְרוֹת יְהוָה לִבִּי וּבְשָׂרִי יְרַנְּנוּ אֶל אֵֽל־חָֽי׃
3 ಓ ಸೇನಾಧೀಶ್ವರ ಯೆಹೋವ ದೇವರೇ, ನನ್ನ ಅರಸರಾಗಿರುವವರೇ, ನನ್ನ ದೇವರೇ, ಗುಬ್ಬಿಯು ಮನೆಯನ್ನೂ, ಬಾನಕ್ಕಿಯು ತನ್ನ ಮರಿಗಳನ್ನಿಡುವ ಗೂಡನ್ನೂ ನಿಮ್ಮ ಬಲಿಪೀಠಗಳ ಬಳಿಯಲ್ಲಿ ದೊರಕಿತಲ್ಲಾ.
גַּם־צִפּוֹר ׀ מָצְאָה בַיִת וּדְרוֹר ׀ קֵן לָהּ אֲשֶׁר־שָׁתָה אֶפְרֹחֶיהָ אֶֽת־מִזְבְּחוֹתֶיךָ יְהוָה צְבָאוֹת מַלְכִּי וֵאלֹהָֽי׃
4 ನಿಮ್ಮ ಆಲಯದಲ್ಲಿ ವಾಸವಾಗಿರುವವರು ಧನ್ಯರು; ನಿಮ್ಮನ್ನು ಅವರು ಯಾವಾಗಲೂ ಸ್ತುತಿಸುವರು.
אַשְׁרֵי יוֹשְׁבֵי בֵיתֶךָ עוֹד יְֽהַלְלוּךָ סֶּֽלָה׃
5 ನಿಮ್ಮಲ್ಲಿ ಯಾರು ಬಲಹೊಂದಿರುವರೋ, ಯಾರು ಯಾತ್ರಿಗಳಾಗಿದ್ದಾರೋ ಅವರು ಧನ್ಯರು.
אַשְׁרֵי אָדָם עֽוֹז־לוֹ בָךְ מְסִלּוֹת בִּלְבָבָֽם׃
6 ಬಾಕಾ ತಗ್ಗನ್ನು ದಾಟುವಾಗ ಅವರು ಅದನ್ನು ಬುಗ್ಗೆಯಾಗಿ ಮಾಡುತ್ತಾರೆ. ಮುಂಗಾರು ಮಳೆಯು ಕೊಳಗಳನ್ನು ತುಂಬುತ್ತದೆ.
עֹבְרֵי ׀ בְּעֵמֶק הַבָּכָא מַעְיָן יְשִׁיתוּהוּ גַּם־בְּרָכוֹת יַעְטֶה מוֹרֶֽה׃
7 ಅವರು ಬಲದಿಂದ ಬಲಕ್ಕೆ ಸಾಗಿ, ಚೀಯೋನಿನಲ್ಲಿ ದೇವರ ಮುಂದೆ ಕಾಣಿಸಿಕೊಳ್ಳುತ್ತಾರೆ.
יֵלְכוּ מֵחַיִל אֶל־חָיִל יֵרָאֶה אֶל־אֱלֹהִים בְּצִיּֽוֹן׃
8 ಸರ್ವಶಕ್ತರಾದ ಯೆಹೋವ ದೇವರೇ, ನನ್ನ ಪ್ರಾರ್ಥನೆಯನ್ನು ಕೇಳಿರಿ. ಯಾಕೋಬನ ದೇವರೇ, ಕಿವಿಗೊಡಿರಿ.
יְהוָה אֱלֹהִים צְבָאוֹת שִׁמְעָה תְפִלָּתִי הַאֲזִינָה אֱלֹהֵי יַעֲקֹב סֶֽלָה׃
9 ನಮ್ಮ ಗುರಾಣಿಯಾಗಿರುವ ದೇವರೇ, ನೋಡಿರಿ. ನಿಮ್ಮ ಅಭಿಷಿಕ್ತನ ಮುಖವನ್ನು ದೃಷ್ಟಿಸಿ ನೋಡಿರಿ.
מָגִנֵּנוּ רְאֵה אֱלֹהִים וְהַבֵּט פְּנֵי מְשִׁיחֶֽךָ׃
10 ಏಕೆಂದರೆ ನಿಮ್ಮ ಆಲಯದ ಅಂಗಳಗಳಲ್ಲಿ ಕಳೆದ ಒಂದು ದಿನವು ಬೇರೆ ಸಹಸ್ರ ದಿನಗಳಿಗಿಂತ ಉತ್ತಮವಾಗಿದೆ. ದುಷ್ಟರ ಗುಡಾರಗಳಲ್ಲಿ ವಾಸಿಸುವುದಕ್ಕಿಂತ ನನ್ನ ದೇವರ ಆಲಯದ ಬಾಗಿಲು ಕಾಯುವವನಾಗಿರುವುದೇ ಲೇಸು.
כִּי טֽוֹב־יוֹם בַּחֲצֵרֶיךָ מֵאָלֶף בָּחַרְתִּי הִסְתּוֹפֵף בְּבֵית אֱלֹהַי מִדּוּר בְּאָהֳלֵי־רֶֽשַׁע׃
11 ಯೆಹೋವ ದೇವರು ಸೂರ್ಯನಂತೆ ಪ್ರಕಾಶಿಸುವವವರೂ ಗುರಾಣಿಯೂ ಆಗಿದ್ದಾರೆ. ಯೆಹೋವ ದೇವರು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾರೆ. ನಿಷ್ಕಳಂಕವಾಗಿ ನಡೆದುಕೊಳ್ಳುವವರಿಗೆ ಅವರು ಒಳ್ಳೆಯದನ್ನು ಮಾಡಲು ಹಿಂದೆಗೆಯುವುದಿಲ್ಲ.
כִּי שֶׁמֶשׁ ׀ וּמָגֵן יְהוָה אֱלֹהִים חֵן וְכָבוֹד יִתֵּן יְהוָה לֹא יִמְנַע־טוֹב לַֽהֹלְכִים בְּתָמִֽים׃
12 ಸೇನಾಧೀಶ್ವರ ಯೆಹೋವ ದೇವರೇ, ನಿಮ್ಮಲ್ಲಿ ಭರವಸವಿಡುವವನೇ ಭಾಗ್ಯವಂತನು.
יְהוָה צְבָאוֹת אַֽשְׁרֵי אָדָם בֹּטֵחַ בָּֽךְ׃

< ಕೀರ್ತನೆಗಳು 84 >