< ಕೀರ್ತನೆಗಳು 87 >
1 ಕೋರಹೀಯರ ಕೀರ್ತನೆ. ಒಂದು ಗೀತೆ. ಯೆಹೋವ ದೇವರು ತಮ್ಮ ಪಟ್ಟಣದ ಅಸ್ತಿವಾರವನ್ನು ಪರಿಶುದ್ಧ ಪರ್ವತದಲ್ಲಿ ಸ್ಥಾಪಿಸಿದ್ದಾರೆ.
Psalmus Cantici, filiis Core. Fundamenta eius in montibus sanctis:
2 ದೇವರು ಚೀಯೋನಿನ ದ್ವಾರಗಳನ್ನು ಯಾಕೋಬನ ಎಲ್ಲಾ ನಿವಾಸಗಳಿಗಿಂತ ಹೆಚ್ಚಾಗಿ ಪ್ರೀತಿ ಮಾಡುತ್ತಾರೆ.
diligit Dominus portas Sion super omnia tabernacula Iacob.
3 ದೇವರ ಪಟ್ಟಣವೇ, ನಿನ್ನ ವಿಷಯವಾದ ಮಹಿಮೆಯು ಏನೆಂದರೆ,
Gloriosa dicta sunt de te, civitas Dei.
4 “ರಾಹಬ್, ಬಾಬೆಲ್ ದೇಶಗಳವರನ್ನು, ನನ್ನನ್ನು ಬಲ್ಲವರಲ್ಲಿ ಎಣಿಸುವೆನು. ಇಗೋ, ಫಿಲಿಷ್ಟಿಯ, ಟೈರ್, ಕೂಷ್ ಜನಾಂಗಗಳು, ‘ಚೀಯೋನಿನಲ್ಲೇ ಹುಟ್ಟಿದವು.’”
Memor ero Rahab, et Babylonis scientium me. Ecce alienigenae, et Tyrus, et populus Aethiopum, hi fuerunt illic.
5 ಚೀಯೋನಿನ ವಿಷಯವಾಗಿ, “ಸಕಲ ಜನಾಂಗದವರೂ ಚೀಯೋನಿನಲ್ಲಿ ಹುಟ್ಟಿದರು. ಮಹೋನ್ನತರೇ ಅದನ್ನು ಸ್ಥಿರಪಡಿಸುವರು,” ಎಂದು ಹೇಳುವರು.
Numquid Sion dicet: Homo, et homo natus est in ea: et ipse fundavit eam Altissimus?
6 ಯೆಹೋವ ದೇವರು ಜನಾಂಗಗಳ ಗ್ರಂಥದಲ್ಲಿ ಬರೆಯುವಾಗ, “ಚೀಯೋನಿನಲ್ಲಿ ಇವನು ಹುಟ್ಟಿದನು,” ಎಂದು ಬರೆಯುವರು.
Dominus narrabit in scripturis populorum, et principum: horum, qui fuerunt in ea.
7 “ನನ್ನ ಎಲ್ಲಾ ಬುಗ್ಗೆಗಳು ನಿಮ್ಮಲ್ಲಿಯೇ ಇವೆ,” ಎಂದು ಸಂಗೀತಕಾರರು ಹಾಡುವರು.
Sicut laetantium omnium habitatio est in te.