< ಕೀರ್ತನೆಗಳು 88 >

1 ದುಃಖದಲ್ಲಿ ಮುಳುಗಿರುವವನ ಮೊರೆ; ಕೋರಹೀಯರ ಕೀರ್ತನೆ; ಸಂಗೀತ ನಿರ್ದೇಶಕನಿಗಾಗಿರುವ ಕೀರ್ತನೆ; ಮಹಲಾತ್ ಎಂಬ ರಾಗದ ಪ್ರಕಾರ ಹಾಡತಕ್ಕದ್ದು. ಮಸ್ಕೀಲ್ ರಾಗದಲ್ಲಿ ಜೇರಹ ಕುಲದವನಾದ ಹೇಮಾನನ ಪದ್ಯ. ನನ್ನನ್ನು ರಕ್ಷಿಸುವ ದೇವರಾದ ಯೆಹೋವ ದೇವರೇ, ಹಗಲಿರುಳು ನಿಮ್ಮ ಮುಂದೆ ಮೊರೆಯಿಡುತ್ತೇನೆ.
שִׁ֥יר מִזְמ֗וֹר לִבְנֵ֫י קֹ֥רַח לַמְנַצֵּ֣חַ עַל־מָחֲלַ֣ת לְעַנּ֑וֹת מַ֝שְׂכִּ֗יל לְהֵימָ֥ן הָאֶזְרָחִֽי׃ יְ֭הוָה אֱלֹהֵ֣י יְשׁוּעָתִ֑י יוֹם־צָעַ֖קְתִּי בַלַּ֣יְלָה נֶגְדֶּֽךָ׃
2 ನನ್ನ ಪ್ರಾರ್ಥನೆಯು ನಿಮ್ಮ ಮುಂದೆ ಬರಲಿ. ನನ್ನ ಮೊರೆಗೆ ನಿಮ್ಮ ಕಿವಿಕೊಡಿರಿ.
תָּב֣וֹא לְ֭פָנֶיךָ תְּפִלָּתִ֑י הַטֵּֽה־אָ֝זְנְךָ֗ לְרִנָּתִֽי׃
3 ನನ್ನ ಪ್ರಾಣವು ಕಷ್ಟದಿಂದ ತುಂಬಿದೆ; ನನ್ನ ಜೀವವು ಸಮಾಧಿಯ ಸಮೀಪಕ್ಕೆ ಎಳೆಯುತ್ತದೆ. (Sheol h7585)
כִּֽי־שָֽׂבְעָ֣ה בְרָע֣וֹת נַפְשִׁ֑י וְחַיַּ֗י לִשְׁא֥וֹל הִגִּֽיעוּ׃ (Sheol h7585)
4 ಸಮಾಧಿ ಸೇರುವವರ ಸಂಗಡ ಎಣಿಸಲಾಗಿದ್ದೇನೆ; ನಾನು ಬಲವಿಲ್ಲದ ಪುರುಷನ ಹಾಗಿದ್ದೇನೆ.
נֶ֭חְשַׁבְתִּי עִם־י֣וֹרְדֵי ב֑וֹר הָ֝יִ֗יתִי כְּגֶ֣בֶר אֵֽין־אֱיָֽל׃
5 ಹತರಾದವರು ಸಮಾಧಿಯಲ್ಲಿ ಮಲಗಿದಂತೆ ನಾನೂ ಸತ್ತವರೊಂದಿಗೆ ಸೇರಿರುತ್ತೇನೆ. ಅವರನ್ನು ನೀನೆಂದೂ ಜ್ಞಾಪಿಸಿಕೊಳ್ಳುವುದಿಲ್ಲ. ನಿಮ್ಮ ಪರಿಪಾಲನೆಯಿಂದ ದೂರವಾಗಿದ್ದಾರೆ.
בַּמֵּתִ֗ים חָ֫פְשִׁ֥י כְּמ֤וֹ חֲלָלִ֨ים ׀ שֹׁ֥כְבֵי קֶ֗בֶר אֲשֶׁ֤ר לֹ֣א זְכַרְתָּ֣ם ע֑וֹד וְ֝הֵ֗מָּה מִיָּדְךָ֥ נִגְזָֽרוּ׃
6 ಅಧೋಲೋಕದಲ್ಲಿಯೂ ಗಾಡಾಂಧಕಾರದಲ್ಲಿಯೂ ಅಗಾಧಗಳಲ್ಲಿಯೂ ನನ್ನನ್ನು ಇಟ್ಟಿದ್ದೀರಿ.
שַׁ֭תַּנִי בְּב֣וֹר תַּחְתִּיּ֑וֹת בְּ֝מַחֲשַׁכִּ֗ים בִּמְצֹלֽוֹת׃
7 ನಿಮ್ಮ ಬೇಸರವು ನನ್ನ ಮೇಲೆ ಭಾರವಾಗಿದೆ. ನಿಮ್ಮ ಅಲೆಗಳಿಂದೆಲ್ಲಾ ನನ್ನನ್ನು ಮುಳುಗಿಸಿದ್ದೀರಿ.
עָ֭לַי סָמְכָ֣ה חֲמָתֶ֑ךָ וְכָל־מִ֝שְׁבָּרֶ֗יךָ עִנִּ֥יתָ סֶּֽלָה׃
8 ನನ್ನ ಪರಿಚಿತರನ್ನು ನನ್ನಿಂದ ದೂರಮಾಡಿದ್ದೀರಿ. ನಾನು ಅವರಿಗೆ ಬೇಡವಾಗಿದ್ದೇನೆ. ನಾನು ಬಂಧಿತನಾಗಿದ್ದೇನೆ, ಹೊರಗೆ ಬರಲಾರೆನು.
הִרְחַ֥קְתָּ מְיֻדָּעַ֗י מִ֫מֶּ֥נִּי שַׁתַּ֣נִי תוֹעֵב֣וֹת לָ֑מוֹ כָּ֝לֻ֗א וְלֹ֣א אֵצֵֽא׃
9 ಬಾಧೆಯ ದೆಸೆಯಿಂದ ನನ್ನ ಕಣ್ಣು ಮಂದವಾಗಿ ಹೋಗಿದೆ. ಯೆಹೋವ ದೇವರೇ, ದಿನವೆಲ್ಲಾ ನಿಮ್ಮನ್ನು ಕರೆಯುತ್ತೇನೆ. ನಾನು ನಿಮ್ಮ ಕಡೆಗೆ ನನ್ನ ಕೈಗಳನ್ನು ಚಾಚುತ್ತೇನೆ.
עֵינִ֥י דָאֲבָ֗ה מִנִּ֫י עֹ֥נִי קְרָאתִ֣יךָ יְהוָ֣ה בְּכָל־י֑וֹם שִׁטַּ֖חְתִּי אֵלֶ֣יךָ כַפָּֽי׃
10 ಸತ್ತವರಿಗೆ ಅದ್ಭುತಗಳನ್ನು ತೋರಿಸುವಿರೋ? ಸತ್ತವರು ಎದ್ದು ನಿಮ್ಮನ್ನು ಕೊಂಡಾಡುವರೋ?
הֲלַמֵּתִ֥ים תַּעֲשֶׂה־פֶּ֑לֶא אִם־רְ֝פָאִ֗ים יָק֤וּמוּ ׀ יוֹד֬וּךָ סֶּֽלָה׃
11 ಸಮಾಧಿಯಲ್ಲಿ ನಿಮ್ಮ ಪ್ರೀತಿ ಸಾರಲಾಗುವುದೇ? ನಾಶನ ಸ್ಥಳದಲ್ಲಿ ನಿಮ್ಮ ನಂಬಿಗಸ್ತಿಕೆಯು ಹೇಳಲಾಗುವುದೋ?
הַיְסֻפַּ֣ר בַּקֶּ֣בֶר חַסְדֶּ֑ךָ אֱ֝מֽוּנָתְךָ֗ בָּאֲבַדּֽוֹן׃
12 ಕತ್ತಲೆಯಲ್ಲಿ ನಿಮ್ಮ ಅದ್ಭುತಗಳೂ ಮರೆತುಹೋಗಿರುವ ದೇಶದಲ್ಲಿ ನಿಮ್ಮ ನೀತಿಯೂ ತಿಳಿಯಲಾಗುವುದೋ?
הֲיִוָּדַ֣ע בַּחֹ֣שֶׁךְ פִּלְאֶ֑ךָ וְ֝צִדְקָתְךָ֗ בְּאֶ֣רֶץ נְשִׁיָּֽה׃
13 ಆದರೆ ನಾನು ಯೆಹೋವ ದೇವರೇ, ನಿಮ್ಮ ಕಡೆಗೆ ಮೊರೆಯಿಡುತ್ತೇನೆ. ಉದಯಕಾಲದಲ್ಲಿ ನನ್ನ ಪ್ರಾರ್ಥನೆಯು ನಿಮ್ಮನ್ನು ಎದುರುಗೊಳ್ಳುವುದು.
וַאֲנִ֤י ׀ אֵלֶ֣יךָ יְהוָ֣ה שִׁוַּ֑עְתִּי וּ֝בַבֹּ֗קֶר תְּֽפִלָּתִ֥י תְקַדְּמֶֽךָּ׃
14 ಯೆಹೋವ ದೇವರೇ, ನೀವೇಕೆ ನನ್ನನ್ನು ತಳ್ಳಿಬಿಟ್ಟಿದ್ದೀರಿ. ನನಗೆ ನಿಮ್ಮ ಮುಖ ಮರೆಮಾಡುತ್ತೀರಿ?
לָמָ֣ה יְ֭הוָה תִּזְנַ֣ח נַפְשִׁ֑י תַּסְתִּ֖יר פָּנֶ֣יךָ מִמֶּֽנִּי׃
15 ಬಾಲ್ಯದಿಂದಲೂ ನಾನು ಬಾಧಿತನು ಸಾಯುವುದಕ್ಕೆ ಸಿದ್ಧನೂ ಆಗಿದ್ದೇನೆ. ನಿಮ್ಮ ದಂಡನೆಯನ್ನು ನಾನು ತಾಳುತ್ತಾ ಭ್ರಮೆಗೊಳ್ಳುತ್ತೇನೆ.
עָ֘נִ֤י אֲנִ֣י וְגֹוֵ֣עַ מִנֹּ֑עַר נָשָׂ֖אתִי אֵמֶ֣יךָ אָפֽוּנָה׃
16 ನನ್ನ ಮೇಲೆ ನಿಮ್ಮ ಬೇಸರವು ಆವರಿಸಿದೆ. ನಿಮ್ಮ ದಂಡನೆಗಳು ನನ್ನನ್ನು ಬಾಧಿಸಿರುತ್ತವೆ.
עָ֭לַי עָבְר֣וּ חֲרוֹנֶ֑יךָ בִּ֝עוּתֶ֗יךָ צִמְּתוּתֻֽנִי׃
17 ಪ್ರವಾಹಗಳ ಹಾಗೆ ಅವು ಬಂದು ನನ್ನನ್ನು ದಿನವೆಲ್ಲಾ ಸುತ್ತಿಕೊಳ್ಳುತ್ತವೆ; ಅವು ಸಂಪೂರ್ಣವಾಗಿ ನನ್ನನ್ನು ಮುತ್ತಿಕೊಳ್ಳುತ್ತವೆ.
סַבּ֣וּנִי כַ֭מַּיִם כָּל־הַיּ֑וֹם הִקִּ֖יפוּ עָלַ֣י יָֽחַד׃
18 ನನ್ನ ಆಪ್ತಮಿತ್ರರನ್ನು ದೂರ ಮಾಡಿದಿರಿ. ಅಂಧಕಾರವೇ ನನ್ನ ಪರಿಚಯವು.
הִרְחַ֣קְתָּ מִ֭מֶּנִּי אֹהֵ֣ב וָרֵ֑עַ מְֽיֻדָּעַ֥י מַחְשָֽׁךְ׃

< ಕೀರ್ತನೆಗಳು 88 >