< ಕೀರ್ತನೆಗಳು 89 >

1 ಮಾಸ್ಕಿಲ ರಾಗದಿಂದ ಹಾಡತಕ್ಕದ್ದು. ಜೇರಹ ಕುಲದವನಾದ ಏತಾನನ ಪದ್ಯ. ಯೆಹೋವ ದೇವರ ಮಹಾ ಪ್ರೀತಿಯನ್ನು ಯುಗಯುಗಕ್ಕೂ ಹಾಡುವೆನು. ತಲತಲಾಂತರಕ್ಕೂ ನಿಮ್ಮ ನಂಬಿಗಸ್ತಿಕೆಯನ್ನು ನನ್ನ ಬಾಯಿ ತಿಳಿಯಪಡಿಸುವುದು.
“A Maskil of Ethan the Ezrachite.” The kindnesses of the Lord will I for ever sing: from generation to generation will I make known thy faithfulness with my mouth.
2 ಎಂದೆಂದಿಗೂ ನಿಮ್ಮ ಪ್ರೀತಿಯನ್ನು ಸಾರುವೆನು. ಪರಲೋಕದಲ್ಲಿ ನಿಮ್ಮ ನಂಬಿಗಸ್ತಿಕೆಯನ್ನು ಸ್ಥಿರಪಡಿಸಿದ್ದೀರಿ ಎಂದು ಘೋಷಿಸುವೆನು.
For I have said, To eternity will kindness be built up: the heavens—yea, in these wilt thou establish thy faithfulness.
3 ನೀವು ಹೇಳಿದ್ದೇನಂದರೆ, “ನಾನು ಆಯ್ದುಕೊಂಡವನ ಸಂಗಡ ನಾನು ಒಡಂಬಡಿಕೆ ಮಾಡಿಕೊಂಡಿದ್ದೇನೆ. ನಾನು ನನ್ನ ಸೇವಕನಾದ ದಾವೀದನಿಗೆ ಪ್ರಮಾಣ ಮಾಡಿದ್ದೇನೆ.
“I have made a covenant with my elect, I have sworn unto David my servant,
4 ‘ಎಂದೆಂದಿಗೂ ನಿಮ್ಮ ಸಂತತಿಯನ್ನು ಸ್ಥಿರಪಡಿಸುವೆನು ತಲತಲಾಂತರಕ್ಕೂ ನಿಮ್ಮ ಸಿಂಹಾಸನವನ್ನು ಕಟ್ಟುವೆನು.’”
Unto eternity will I establish thy seed, and I will build up thy throne, from generation to generation.” (Selah)
5 ಯೆಹೋವ ದೇವರೇ, ಆಕಾಶಗಳು ನಿಮ್ಮ ಅದ್ಭುತಗಳನ್ನೂ ಪರಿಶುದ್ಧರ ಸಭೆಯಲ್ಲಿ ನಿಮ್ಮ ನಂಬಿಗಸ್ತಿಕೆಯನ್ನೂ ಕೊಂಡಾಡುವುವು.
And the heavens praise thy wonder, O Lord: also thy faithfulness in the assembly of holy ones.
6 ಪ್ರಪಂಚದಲ್ಲಿ ಯೆಹೋವ ದೇವರಿಗೆ ಸಮಾನನಾದವನು ಯಾರು? ಪರಲೋಕ ಜೀವಿಗಳಲ್ಲಿ ಯೆಹೋವ ದೇವರಿಗೆ ಸಮಾನನಾದವನು ಯಾರು?
For who in the sky can be compared unto the Lord? who can be likened unto the Lord among the sons of the mighty?
7 ಅವರು ಪರಿಶುದ್ಧರ ಸಭೆಯಲ್ಲಿ ಭಯಭಕ್ತಿಗೆ ಪಾತ್ರರಾದ ದೇವರು. ತಮ್ಮ ಎಲ್ಲಾ ಪರಿವಾರದವರಿಗಿಂತ ಅವರು ಅತಿಶಯವಾದವರು.
God is greatly terrific in the secret council of the holy ones and fear-inspiring over all that are about him.
8 ಸೇನಾಧೀಶ್ವರ ಯೆಹೋವ ದೇವರೇ, ನಿಮ್ಮ ಹಾಗೆ ಶಕ್ತರು ಯಾರು ಇದ್ದಾರೆ? ಯೆಹೋವ ದೇವರೇ, ನೀವು ಶಕ್ತರು, ನಿಮ್ಮ ನಂಬಿಗಸ್ತಿಕೆಯು ನಿಮ್ಮನ್ನು ಸುತ್ತುವರಿದಿದೆ.
O Lord God of hosts, who is powerful, like thee, Eternal! and thy faithfulness is round about thee.
9 ನೀವು ಸಮುದ್ರದ ಏರುವಿಕೆಯನ್ನು ಆಳುತ್ತೀರಿ. ಅದರ ತೆರೆಗಳು ಏಳುವಾಗ ಅವುಗಳನ್ನು ಸುಮ್ಮನಿರಿಸುತ್ತೀರಿ.
Thou rulest over the pride of the sea: when its waves are lifted up, thou assuagest them.
10 ಹತನಾದವನಂತೆ ನೀವು ರಹಬನ್ನು ಜಯಿಸಿದ್ದೀರಿ. ನಿಮ್ಮ ಭುಜಬಲದಿಂದ ನಿಮ್ಮ ಶತ್ರುಗಳನ್ನು ಚದರಿಸಿದ್ದೀರಿ.
Thou didst crush Rahab as one that is slain: with thy strong arm didst thou scatter thy enemies.
11 ಆಕಾಶಗಳು ನಿಮ್ಮವು, ಭೂಮಿಯು ಸಹ ನಿಮ್ಮದು. ಲೋಕವನ್ನೂ ಅದರಲ್ಲಿರುವುದೆಲ್ಲವನ್ನೂ ನೀವು ಉಂಟುಮಾಡಿದ್ದೀರಿ.
Thine are the heavens, also thine is the earth: as for the world and what filleth it, thou hast founded them.
12 ಉತ್ತರವನ್ನೂ ದಕ್ಷಿಣವನ್ನೂ ನೀವೇ ನಿರ್ಮಿಸಿದ್ದೀರಿ. ತಾಬೋರೂ, ಹೆರ್ಮೋನೂ ನಿಮ್ಮ ಹೆಸರಿನಲ್ಲಿ ಉತ್ಸಾಹ ಧ್ವನಿಗೈಯುತ್ತವೆ.
The north and the south—these hast thou created: Tabor and Chermon shall rejoice in thy name.
13 ನಿಮ್ಮ ಭುಜವು ಶಕ್ತಿಯುತವಾದದ್ದು. ನಿಮ್ಮ ಕೈ ಬಲವುಳ್ಳದ್ದು; ನಿಮ್ಮ ಬಲಗೈ ಉನ್ನತವಾದದ್ದು.
Thine is the powerful arm, with might: strong is thy hand, and exalted is thy right hand.
14 ನೀತಿಯೂ, ನ್ಯಾಯವೂ ನಿಮ್ಮ ಸಿಂಹಾಸನದ ಅಸ್ತಿವಾರವಾಗಿವೆ. ಪ್ರೀತಿಯೂ, ಸತ್ಯತೆಯೂ ನಿಮ್ಮ ಮುಂದೆ ಹೋಗುತ್ತವೆ.
Righteousness and justice are the prop of thy throne: kindness and truth precede thy presence.
15 ನಿಮ್ಮ ಉತ್ಸಾಹ ಧ್ವನಿಯನ್ನು ಕೇಳಿದ ಜನರು ಧನ್ಯರು. ಯೆಹೋವ ದೇವರೇ, ನಿಮ್ಮ ಸನ್ನಿಧಿಯ ಬೆಳಕಿನಲ್ಲಿ ನಡೆಯುವವರು ಧನ್ಯರು.
Happy is the people that know the cornet's sound: O Lord, in the light of thy countenance will they ever walk firmly.
16 ನಿಮ್ಮ ಹೆಸರಿನಿಂದ ದಿನವೆಲ್ಲಾ ಉಲ್ಲಾಸಪಟ್ಟು, ನಿಮ್ಮ ನೀತಿಯಲ್ಲಿ ಅವರು ಉನ್ನತಕ್ಕೇರುವರು.
In thy name will they be glad all the day, and in thy righteousness will they be exalted.
17 ಏಕೆಂದರೆ ಅವರ ಬಲವೂ ಮಹಿಮೆಯೂ ನೀವೇ. ನಿಮ್ಮ ಮೆಚ್ಚುಗೆಯಿಂದ ನಮ್ಮ ಬಲವೆಂಬ ಕೊಂಬು ಉನ್ನತವಾಗುವುದು.
For thou art the glory of their strength; and through thy favor will our horn be exalted.
18 ನಮ್ಮ ಗುರಾಣಿಯು ಯೆಹೋವ ದೇವರದೇ. ನಮ್ಮ ಅರಸರು ಇಸ್ರಾಯೇಲರ ಪರಿಶುದ್ಧರಾಗಿರುವರು.
For of the Lord is our shield; and of the Holy One of Israel is our king.
19 ಆ ಕಾಲದಲ್ಲಿ ನೀವು ದರ್ಶನದಲ್ಲಿ ನಿಮ್ಮ ಭಕ್ತರಿಗೆ ಹೇಳಿದ್ದೇನೆಂದರೆ: “ಒಬ್ಬ ಶೂರನಿಗೆ ನಾನು ಬಲವನ್ನು ಅನುಗ್ರಹಿಸಿದ್ದೇನೆ. ಪ್ರಜೆಗಳಲ್ಲಿ ಒಬ್ಬ ಯೌವನಸ್ಥನನ್ನು ಆರಿಸಿ ಉನ್ನತ ಸ್ಥಾನದಲ್ಲಿಟ್ಟಿದ್ದೇನೆ.
Then spokest thou in a vision to thy pious [servant], and saidst, “I have bestowed help to one that is mighty; I have exalted a youth out of the people;
20 ನನ್ನ ಸೇವಕನಾದ ದಾವೀದನನ್ನು ಕಂಡು, ನನ್ನ ಪರಿಶುದ್ಧ ಎಣ್ಣೆಯಿಂದ ಅವನನ್ನು ಅಭಿಷೇಕಿಸಿದ್ದೇನೆ.
I have found David my servant; with my holy oil have I anointed him;
21 ನನ್ನ ಕೈ ಅವನನ್ನು ಪರಿಪಾಲಿಸುವುದು; ನನ್ನ ಭುಜವು ಅವನನ್ನು ಬಲಪಡಿಸುವುದು.
With whom my hand shall be firmly established; also my arm shall strengthen him;
22 ಶತ್ರುವು ಅವನನ್ನು ಜಯಿಸಲಾರನು. ಯಾವ ದುಷ್ಟನೂ ಅವನನ್ನು ಹಿಂಸೆಪಡಿಸನು.
The enemy shall not exact from him like a lender: and the son of injustice shall not afflict him:
23 ಅವನ ಮುಂದೆ ಅವನ ವೈರಿಗಳನ್ನು ಓಡಿಸಿಬಿಡುವೆನು; ಅವನ ವಿರೋಧಿಗಳನ್ನು ದಂಡಿಸುವೆನು.
And I will beat down before his face his assailants, and those that hate him will I plague.
24 ನನ್ನ ನಂಬಿಗಸ್ತಿಕೆಯೂ ಪ್ರೀತಿಯೂ ಅವನ ಸಂಗಡ ಇರುವುವು. ನನ್ನ ಹೆಸರಿನಲ್ಲಿ ಅವನ ಬಲವೆಂಬ ಕೊಂಬು ಉನ್ನತವಾಗುವುದು.
But my faithfulness and my kindness shall be with him: and through my name shall his horn be exalted.
25 ಸಮುದ್ರ ಹಾಗು ನದಿಗಳ ಮೇಲೆ ಅವನ ಬಲಗೈಯನ್ನೂ ಇರಿಸುವೆನು.
And I will place on the sea his hand, and on the rivers his right hand.
26 ಅವನು, ‘ನೀವು ನನ್ನ ತಂದೆಯೂ ನನ್ನ ದೇವರೂ ನನ್ನ ರಕ್ಷಣೆಯ ಬಂಡೆಯೂ ಆಗಿದ್ದೀರಿ’ ಎಂದು ನನಗೆ ಮೊರೆಯಿಡುವನು.
He will call unto me, Thou art my father, my God, and the rock of my salvation.
27 ನಾನು ಆತನನ್ನು ನನ್ನ ಚೊಚ್ಚಲ ಮಗನನ್ನಾಗಿಯೂ ಭೂಮಿಯ ಅರಸರಿಗಿಂತ ಉನ್ನತನನ್ನಾಗಿಯೂ ಮಾಡಿಕೊಳ್ಳುವೆನು.
Also I will appoint my first-born, the highest among the kings of the earth.
28 ಎಂದೆಂದಿಗೂ ಆತನಿಗೋಸ್ಕರ ನನ್ನ ಪ್ರೀತಿಯನ್ನು ಕಾದಿಡುವೆನು. ನನ್ನ ಒಡಂಬಡಿಕೆಯು ಆತನೊಂದಿಗೆ ದೃಢವಾಗಿರುವುದು.
For evermore will I keep for him my kindness, and my covenant shall stand faithfully with him.
29 ಆತನ ಸಂತತಿಯನ್ನು ಸಹ ಎಂದೆಂದಿಗೂ ಆತನ ಸಿಂಹಾಸನವನ್ನು ಆಕಾಶ ಇರುವವರೆಗೂ ಮಾಡುವೆನು.
And I appoint for ever his seed, and his throne as the days of heaven.
30 “ಆತನ ಸಂತತಿಯು ನನ್ನ ನಿಯಮವನ್ನು ಬಿಟ್ಟು, ನನ್ನ ಶಾಸನಗಳನ್ನು ಅನುಸರಿಸಿ ನಡೆಯದೆ,
If his children forsake my law, and walk not in my ordinances;
31 ಅವರು ನನ್ನ ತೀರ್ಪುಗಳನ್ನು ಮುರಿದು, ನನ್ನ ಆಜ್ಞೆಗಳನ್ನು ಕೈಗೊಳ್ಳದೆ ಹೋದರೆ,
If they profane my statutes, and keep not my commandments:
32 ಕೋಲಿನಿಂದ ಅವರ ದ್ರೋಹವನ್ನೂ ಪೆಟ್ಟುಗಳಿಂದ ಅವರ ಅಕ್ರಮವನ್ನೂ ದಂಡಿಸುವೆನು.
Then will I visit with the rod their transgressions, and with plagues their iniquity.
33 ಆದರೂ ನನ್ನ ಪ್ರೀತಿ, ಕರುಣೆಯನ್ನು ಆತನಿಂದ ಸಂಪೂರ್ಣವಾಗಿ ತೊಲಗಿಸೆನು. ಇಲ್ಲವೆ ನನ್ನ ನಂಬಿಗಸ್ತಿಕೆಯಿಂದ ನಾನು ಜಾರಿಹೋಗೆನು.
Nevertheless my kindness will I not make utterly void from him, and I will not act falsely against my faithfulness.
34 ನನ್ನ ಒಡಂಬಡಿಕೆಯನ್ನು ನಾನು ಮುರಿಯೆನು. ಇಲ್ಲವೆ ನನ್ನ ತುಟಿಗಳಿಂದ ಹೊರಟದ್ದನ್ನು ಬದಲಾಯಿಸೆನು.
I will not profane my covenant, and what is gone out of my lips will I not alter.
35 ಒಂದೇ ಸಾರಿ ನನ್ನ ಪರಿಶುದ್ಧತ್ವದಿಂದ ಆಣೆಯಿಟ್ಟು ಹೇಳಿದ್ದೇನೆ. ದಾವೀದನಿಗೆ ಸುಳ್ಳಾಡೆನು.
One thing have I sworn by my holiness, that I will not lie unto David.
36 ಆತನ ಸಂತತಿಯು ಯುಗಯುಗಕ್ಕೂ ಇರುವುದು. ಆತನ ಸಿಂಹಾಸನವು ನನ್ನ ಮುಂದೆ ಸೂರ್ಯನ ಹಾಗೆಯೂ ಇರುವುದು.
His seed shall endure for ever, and his throne shall be like the sun before me.
37 ಚಂದ್ರನ ಹಾಗೆ ಅದು ಯುಗಯುಗಕ್ಕೂ ಸ್ಥಿರವಾಗಿರುವುದು; ಆಕಾಶದಲ್ಲಿರುವ ಸಾಕ್ಷಿಯ ಹಾಗೆ ನಂಬಿಗಸ್ತಿಕೆಯುಳ್ಳದ್ದಾಗಿರುವುದು.”
Like the moon shall it be firmly established for ever, and as this faithful witness in the sky.” (Selah)
38 ಆದರೆ ನೀವು ತಿರಸ್ಕರಿಸಿ ಬಿಟ್ಟುಬಿಟ್ಟ, ನಿಮ್ಮ ಅಭಿಷಿಕ್ತನಿಗೆ ವಿರೋಧವಾಗಿ ಬೇಸರವಾದಿರಿ.
And yet thou hast east off and despised, thou hast become wroth with thy anointed.
39 ನಿಮ್ಮ ಸೇವಕನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಅಸಡ್ಡೆಮಾಡಿ, ಅವನ ಕಿರೀಟವನ್ನು ಮಣ್ಣುಪಾಲು ಮಾಡಿದ್ದೀರಿ.
Thou hast made void the covenant of thy servant: thou hast profaned, down to the ground, his crown.
40 ಅವನ ಗೋಡೆಗಳನ್ನೆಲ್ಲಾ ಮುರಿದು, ಅವನ ಕೋಟೆಗಳನ್ನು ಹಾಳುಮಾಡಲು ಅನುಮತಿಸಿದ್ದೀರಿ.
Thou hast broken down all his fences: thou hast brought his strong-holds to terror.
41 ದಾರಿಯಲ್ಲಿ ಹೋಗುವವರು ಅವನನ್ನು ಕೊಳ್ಳೆ ಹೊಡೆಯುತ್ತಾರೆ. ತನ್ನ ನೆರೆಯವರಿಗೆ ಅವನು ನಿಂದೆಯಾಗಿದ್ದಾನೆ.
All that pass by the way plunder him: he is become a reproach to his neighbors.
42 ಅವನ ವೈರಿಗಳ ಬಲಗೈ ಉನ್ನತವಾಗಿದೆ. ಅವನ ವೈರಿಗಳೆಲ್ಲಾ ಆನಂದಿಸುತ್ತಿದ್ದಾರೆ.
Thou hast raised up the right hand of his assailants: thou hast caused all his enemies to rejoice.
43 ಅವನ ಖಡ್ಗದ ಮೊನೆ ಮೊಂಡಾಗಿದೆ. ಯುದ್ಧದಲ್ಲಿ ನೀವು ಅವನನ್ನು ನಿಲ್ಲುವಂತೆ ಮಾಡಲಿಲ್ಲ.
Thou hast also turned the edge of his sword, and hast not let him stand erect in the battle.
44 ಅವನ ಪ್ರಭೆ ಮುಗಿದು ಹೋಗಿದೆ. ಅವನ ಸಿಂಹಾಸನ ಉರುಳಿಬಿಟ್ಟಿದೆ.
Thou hast made his brilliancy cease; and his throne hast thou thrown down to the ground.
45 ಅವನ ಯೌವನದ ದಿವಸಗಳು ಕಡಿಮೆಯಾಗಿದೆ. ನಾಚಿಕೆ ಎಂಬ ವಸ್ತ್ರ ಅವನನ್ನು ಮುಚ್ಚಲು ನೀವು ಅನುಮತಿಸಿದ್ದೀರಿ.
Thou hast shortened the days of his youth: thou hast enshrouded him with shame. (Selah)
46 ಯೆಹೋವ ದೇವರೇ, ಇನ್ನೂ ಎಷ್ಟರವರೆಗೆ? ಸದಾಕಾಲಕ್ಕೆ ನೀವು ಅಡಗಿಕೊಳ್ಳುವಿರಾ? ನಿಮ್ಮ ಬೇಸರವು ಬೆಂಕಿಯ ಹಾಗೆ ಉರಿಯುವುದು ಎಷ್ಟರವರೆಗೆ?
How long, Lord, wilt thou hide thyself, continually? how long shall thy fury burn like fire?
47 ನನ್ನ ಆಯುಸ್ಸು ಎಷ್ಟು ಕಡಿಮೆ ಎಂದು ಜ್ಞಾಪಕಮಾಡಿಕೊಳ್ಳಿರಿ. ನಿರ್ಮಿಸಿದ ಎಲ್ಲಾ ಮನುಷ್ಯರೂ ವ್ಯರ್ಥವಾಗಿದ್ದಾರೆ.
Remember [what] I am, what my duration is [here], for what nothingness thou hast created all sons of men!
48 ಮರಣವನ್ನು ಕಾಣದೆ ಬದುಕುವಂಥವರು ಯಾರು? ಸಮಾಧಿಯ ಶಕ್ತಿಯಿಂದ ಪ್ರಾಣವನ್ನು ತಪ್ಪಿಸಿಕೊಳ್ಳುವಂಥವರು ಯಾರು? (Sheol h7585)
What man is there that can live, and shall not see death? that can deliver his soul from the power of the nether word? (Selah) (Sheol h7585)
49 ಯೆಹೋವ ದೇವರೇ, ನಿಮ್ಮ ಸತ್ಯದಲ್ಲಿ ನೀವು ದಾವೀದನಿಗೆ ಆಣೆಯಿಟ್ಟೆ. ನಿಮ್ಮ ಮೊದಲಿನ ಮಹಾ ಪ್ರೀತಿ ಎಲ್ಲಿ?
Where are thy former kindnesses, O Lord, which thou hast sworn unto David by thy truth?
50 ಯೆಹೋವ ದೇವರೇ, ನಿಮ್ಮ ಸೇವಕನು ನಿಂದೆ ಹೊಂದಿರುವದನ್ನು ನೆನಸಿಕೊಳ್ಳಿರಿ. ಎಲ್ಲಾ ರಾಷ್ಟ್ರಗಳ ಅಪಹಾಸ್ಯವನ್ನು ನಾನು ಹೇಗೆ ಸಹಿಸಿದೆನೆಂಬುದನ್ನು ಜ್ಞಾಪಕಮಾಡಿಕೊಳ್ಳಿರಿ.
Remember, Lord, the disgrace of thy servants; that I bear in my bosom the [burden] of all the many nations;
51 ಯೆಹೋವ ದೇವರೇ, ನಿಮ್ಮ ಶತ್ರುಗಳು ನಿಂದಿಸುತ್ತಿದ್ದಾರೆ. ನಿಮ್ಮ ಅಭಿಷಿಕ್ತನ ಹೆಜ್ಜೆ ಹೆಜ್ಜೆಗೂ ನಿಂದಿಸುತ್ತಾರಲ್ಲಾ?
That thy enemies have defied, O Lord; that they have defied the footsteps of thy anointed.
52 ಯೆಹೋವ ದೇವರಿಗೆ ಯುಗಯುಗಕ್ಕೂ ಸ್ತುತಿಯಾಗಲಿ.
Blessed be the Lord for evermore. Amen, and Amen.

< ಕೀರ್ತನೆಗಳು 89 >