< ಕೀರ್ತನೆಗಳು 9 >
1 ಸಂಗೀತ ನಿರ್ದೇಶಕನಿಗಾಗಿರುವ ಕೀರ್ತನೆ. “ಪುತ್ರನ ಮರಣದ” ರಾಗ. ದಾವೀದನ ಕೀರ್ತನೆ. ಯೆಹೋವ ದೇವರೇ, ನನ್ನ ಪೂರ್ಣಹೃದಯದಿಂದ ನಾನು ನಿಮ್ಮನ್ನು ಸ್ತುತಿಸುವೆನು; ನಿಮ್ಮ ಅದ್ಭುತ ಕಾರ್ಯಗಳನ್ನೆಲ್ಲಾ ನಾನು ವರ್ಣಿಸುವೆನು.
聖歌隊の指揮者によってムツラベンのしらべにあわせてうたわせたダビデの歌 わたしは心をつくして主に感謝し、あなたのくすしきみわざをことごとく宣べ伝えます。
2 ನಾನು ನಿಮ್ಮಲ್ಲಿ ಆನಂದಿಸಿ ಉಲ್ಲಾಸಪಡುವೆನು; ಮಹೋನ್ನತರೇ, ನಾನು ನಿಮ್ಮ ಹೆಸರನ್ನು ಕೊಂಡಾಡಿ ಹಾಡುವೆನು.
いと高き者よ、あなたによってわたしは喜びかつ楽しみ、あなたの名をほめ歌います。
3 ನನ್ನ ಶತ್ರುಗಳು ಹಿಂದಿರುಗಿ ಓಡುವರು; ಅವರು ನಿಮ್ಮ ಮುಂದೆ ಎಡವಿಬಿದ್ದು ನಾಶವಾಗುವರು.
わたしの敵は退くとき、つまずき倒れてあなたの前に滅びました。
4 ನೀವು ನನ್ನ ನ್ಯಾಯವನ್ನೂ ವ್ಯಾಜ್ಯವನ್ನೂ ತೀರಿಸಲು ನೀತಿಯುಳ್ಳ ನ್ಯಾಯಾಧಿಪತಿಯಾಗಿ ಸಿಂಹಾಸನದಲ್ಲಿ ಕುಳಿತುಕೊಂಡಿದ್ದೀರಿ.
あなたがわたしの正しい訴えを助け守られたからです。あなたはみくらに座して、正しいさばきをされました。
5 ರಾಷ್ಟ್ರಗಳನ್ನು ಖಂಡಿಸಿ ದುಷ್ಟರನ್ನು ದಂಡಿಸಿದ್ದೀರಿ; ಅವರ ಹೆಸರನ್ನು ಯುಗಯುಗಾಂತರಗಳವರೆಗೂ ಅಳಿಸಿಬಿಟ್ಟಿದ್ದೀರಿ.
あなたはもろもろの国民を責め、悪しき者を滅ぼし、永久に彼らの名を消し去られました。
6 ವೈರಿಯನ್ನು ವಿನಾಶವು ನಿರಂತರವಾಗಿ ಬೆನ್ನಟ್ಟಿದೆ, ನೀವು ಅವರ ಪಟ್ಟಣಗಳನ್ನು ಕೆಡವಿದ್ದೀರಿ; ಅವರ ಸ್ಮರಣೆಯು ಅವರೊಂದಿಗೇ ನಾಶವಾಯಿತು.
敵は絶えはてて、とこしえに滅び、あなたが滅ぼされたもろもろの町はその記憶さえ消えうせました。
7 ಯೆಹೋವ ದೇವರು ಸದಾ ಆಳುವವರು; ಅವರು ನ್ಯಾಯಕ್ಕಾಗಿ ತಮ್ಮ ಸಿಂಹಾಸನವನ್ನು ಸ್ಥಾಪಿಸಿದ್ದಾರೆ.
しかし主はとこしえに、み位に座し、さばきのために、みくらを設けられました。
8 ಅವರು ನೀತಿಯಿಂದ ಲೋಕಕ್ಕೆ ನ್ಯಾಯತೀರಿಸುವರು; ಪ್ರಜೆಗಳಿಗೆ ಯಥಾರ್ಥವಾದ ತೀರ್ಪು ನೀಡುವರು.
主は正義をもって世界をさばき、公平をもってもろもろの民をさばかれます。
9 ಯೆಹೋವ ದೇವರು ಕುಗ್ಗಿದವರಿಗೆ ಆಶ್ರಯವಾಗಿರುವರು, ಇಕ್ಕಟ್ಟಿನ ದಿವಸಗಳಲ್ಲಿ ಭದ್ರಕೋಟೆಯಾಗಿರುವರು.
主はしえたげられる者のとりで、なやみの時のとりでです。
10 ನಿಮ್ಮ ಹೆಸರನ್ನು ತಿಳಿದವರು ನಿಮ್ಮಲ್ಲಿ ಭರವಸೆ ಇಡುವರು, ಏಕೆಂದರೆ ಯೆಹೋವ ದೇವರೇ, ನಿಮ್ಮನ್ನು ಹುಡುಕುವವರನ್ನು ನೀವು ಎಂದಿಗೂ ತೊರೆದುಬಿಡುವುದಿಲ್ಲ.
み名を知る者はあなたに寄り頼みます。主よ、あなたを尋ね求める者をあなたは捨てられたことがないからです。
11 ಚೀಯೋನಿನಲ್ಲಿ ವಾಸಿಸುವ ಯೆಹೋವ ದೇವರಿಗೆ ಸ್ತುತಿಹಾಡಿರಿ; ಅವರ ಕ್ರಿಯೆಗಳನ್ನು ರಾಷ್ಟ್ರಗಳಲ್ಲಿ ಸಾರಿ ಹೇಳಿರಿ.
シオンに住まわれる主にむかってほめうたい、そのみわざをもろもろの民のなかに宣べ伝えよ。
12 ಅವರು ಪ್ರಾಣಹತ್ಯೆ ಮಾಡುವವರನ್ನು ಮುಯ್ಯಿತೀರಿಸಲು ಜ್ಞಾಪಕಮಾಡಿಕೊಳ್ಳುವರು; ಬಾಧೆಗೆ ಒಳಗಾಗಿರುವ ದೀನರ ಕೂಗನ್ನು ಅವರು ಅಲಕ್ಷ್ಯಮಾಡುವುದಿಲ್ಲ.
血を流す者にあだを報いられる主は彼らを心にとめ、苦しむ者の叫びをお忘れにならないからです。
13 ಯೆಹೋವ ದೇವರೇ, ನನ್ನ ವೈರಿಗಳು ನನ್ನನ್ನು ಹಿಂಸಿಸುವುದನ್ನು ನೋಡಿರಿ. ನನ್ನನ್ನು ಕರುಣಿಸಿ, ಮರಣ ದ್ವಾರದಿಂದ ನನ್ನನ್ನು ಮೇಲಕ್ಕೆತ್ತಿರಿ.
主よ、わたしをあわれんでください。死の門からわたしを引きあげられる主よ、あだする者のわたしを悩ますのをみそなわしてください。
14 ಆಗ ಚೀಯೋನೆಂಬ ನಗರ ದ್ವಾರಗಳಲ್ಲಿ ನಿಮ್ಮ ಸ್ತುತಿಯನ್ನು ಸಾರುವೆನು. ನಿಮ್ಮ ರಕ್ಷಣೆಯಲ್ಲಿ ಆನಂದಿಸುವೆನು.
そうすれば、わたしはあなたのすべての誉を述べ、シオンの娘の門で、あなたの救を喜ぶことができましょう。
15 ರಾಷ್ಟ್ರಗಳು ತಾವು ಅಗೆದ ಕುಣಿಯಲ್ಲಿ ತಾವೇ ಬಿದ್ದಿದ್ದಾರೆ; ಅವರು ಅಡಗಿಸಿಟ್ಟ ಬಲೆಯಲ್ಲೇ ಅವರ ಕಾಲುಗಳು ಸಿಕ್ಕಿಕೊಂಡಿವೆ.
もろもろの国民は自分の作った穴に陥り、隠し設けた網に自分の足を捕えられる。
16 ಯೆಹೋವ ದೇವರು ತಮ್ಮ ನ್ಯಾಯಕೃತ್ಯಗಳಲ್ಲಿ ಪ್ರಸಿದ್ಧರಾಗಿದ್ದಾರೆ; ದುಷ್ಟರು ತಮ್ಮ ಕೈಕೆಲಸದಲ್ಲಿ ಸಿಕ್ಕಿಕೊಂಡಿದ್ದಾರೆ.
主はみずからを知らせ、さばきを行われた。悪しき者は自分の手で作ったわなに捕えられる。[ヒガヨン、セラ
17 ದುಷ್ಟರು ಪಾತಾಳಕ್ಕೆ ತಿರುಗುವರು, ದೇವರನ್ನು ಮರೆಯುವ ರಾಷ್ಟ್ರಗಳ ಅಂತ್ಯವೂ ಹಾಗೇ ಇರುವುದು. (Sheol )
悪しき者、また神を忘れるもろもろの国民は陰府へ去って行く。 (Sheol )
18 ಆದರೆ ದೇವರು ಬಡವರನ್ನು ಎಂದೆಂದಿಗೂ ಮರೆಯುವುದಿಲ್ಲ; ಕುಗ್ಗಿದವರ ನಿರೀಕ್ಷೆ ಎಂದೆಂದಿಗೂ ನಾಶವಾಗುವುದಿಲ್ಲ.
貧しい者は常に忘れられるのではない。苦しむ者の望みはとこしえに滅びるのではない。
19 ಯೆಹೋವ ದೇವರೇ ಎದ್ದೇಳಿರಿ, ಮನುಷ್ಯರು ನನ್ನ ಮೇಲೆ ವಿಜಯ ಸಾಧಿಸದಿರಲಿ; ರಾಷ್ಟ್ರಗಳಿಗೆ ನಿಮ್ಮ ಮುಂದೆಯೇ ನ್ಯಾಯತೀರ್ಪಾಗಲಿ.
主よ、立ちあがってください。人に勝利を得させず、もろもろの国民に、み前でさばきを受けさせてください。
20 ಯೆಹೋವ ದೇವರೇ, ಅವರನ್ನು ಭಯದಲ್ಲಿರಿಸಿರಿ; ರಾಷ್ಟ್ರಗಳು ತಾವು ಮನುಷ್ಯರೇ ಎಂದು ತಿಳಿದುಕೊಳ್ಳಲಿ.
主よ、彼らに恐れを起させ、もろもろの国民に自分がただ、人であることを知らせてください。 (セラ)