< ಕೀರ್ತನೆಗಳು 90 >

1 ದೇವರ ಮನುಷ್ಯನಾದ ಮೋಶೆಯ ಪ್ರಾರ್ಥನೆ. ಯೆಹೋವ ದೇವರೇ, ತಲತಲಾಂತರಗಳಲ್ಲಿ ನೀವು ನಮ್ಮ ವಾಸಸ್ಥಾನವಾಗಿದ್ದೀರಿ.
תְּפִלָּה לְמֹשֶׁה אִֽישׁ־הָאֱלֹהִים אֲֽדֹנָי מָעוֹן אַתָּה הָיִיתָ לָּנוּ בְּדֹר וָדֹֽר׃
2 ಬೆಟ್ಟಗಳು ಹುಟ್ಟುವುದಕ್ಕಿಂತ ಮುಂಚೆಯೂ ನೀವು ಲೋಕವನ್ನೂ ನಿರ್ಮಿಸುವುದಕ್ಕಿಂತ ಮುಂಚೆಯೂ ಯುಗಯುಗಾಂತರಕ್ಕೂ ನೀವು ದೇವರಾಗಿದ್ದೀರಿ.
בְּטֶרֶם ׀ הָרִים יֻלָּדוּ וַתְּחוֹלֵֽל אֶרֶץ וְתֵבֵל וּֽמֵעוֹלָם עַד־עוֹלָם אַתָּה אֵֽל׃
3 ನೀವು ಮನುಷ್ಯರನ್ನು ಪುನಃ ಮಣ್ಣಿಗೆ ಸೇರಿಸುತ್ತೀರಿ. “ಮನುಷ್ಯ ಪುತ್ರರೇ, ಮಣ್ಣಿಗೆ ಮರಳಿರಿ,” ಎಂದು ಹೇಳುತ್ತೀರಿ.
תָּשֵׁב אֱנוֹשׁ עַד־דַּכָּא וַתֹּאמֶר שׁוּבוּ בְנֵֽי־אָדָֽם׃
4 ಸಾವಿರ ವರ್ಷಗಳು ನಿಮ್ಮ ದೃಷ್ಟಿಗೆ ಕಳೆದುಹೋದ ಒಂದು ದಿವಸದ ಹಾಗೆಯೂ ರಾತ್ರಿ ಜಾವದ ಹಾಗೆಯೂ ಇವೆ.
כִּי אֶלֶף שָׁנִים בְּֽעֵינֶיךָ כְּיוֹם אֶתְמוֹל כִּי יַֽעֲבֹר וְאַשְׁמוּרָה בַלָּֽיְלָה׃
5 ನೀವು ಜನರನ್ನು ಮರಣ ನಿದ್ರೆಯ ಪ್ರವಾಹದಂತೆ ಹೋಗಲು ಅನುಮತಿಸುತ್ತೀರಿ. ಅವರು ಬೆಳಿಗ್ಗೆ ಬೆಳೆಯುವ ಹುಲ್ಲಿನ ಹಾಗೆ ಇದ್ದಾರೆ.
זְרַמְתָּם שֵׁנָה יִהְיוּ בַּבֹּקֶר כֶּחָצִיר יַחֲלֹֽף׃
6 ಅದು ಬೆಳಿಗ್ಗೆ ಅರಳಿ ಬೆಳೆಯುತ್ತದೆ. ಸಂಜೆಯಲ್ಲಿ ಒಣಗಿ ಬಿದ್ದು ಹೋಗುತ್ತದೆ.
בַּבֹּקֶר יָצִיץ וְחָלָף לָעֶרֶב יְמוֹלֵל וְיָבֵֽשׁ׃
7 ನಾವು ನಿಮ್ಮ ಬೇಸರದಿಂದ ಬಾಧಿತರಾಗಿದ್ದೇವೆ. ನಿಮ್ಮ ಖಂಡನೆಯಿಂದ ತಲ್ಲಣಿಸುತ್ತೇವೆ.
כִּֽי־כָלִינוּ בְאַפֶּךָ וּֽבַחֲמָתְךָ נִבְהָֽלְנוּ׃
8 ನಮ್ಮ ಅಕ್ರಮಗಳನ್ನು ನಿಮ್ಮ ಮುಂದೆ ಇಟ್ಟಿದ್ದೀರಿ. ನಾವು ಮುಚ್ಚಿಟ್ಟುಕೊಂಡಿರುವ ಪಾಪಗಳು ನಿಮ್ಮ ಸನ್ನಿಧಿಯಲ್ಲಿವೆ.
שַׁתָּ עֲוֺנֹתֵינוּ לְנֶגְדֶּךָ עֲלֻמֵנוּ לִמְאוֹר פָּנֶֽיךָ׃
9 ನಮ್ಮ ದಿವಸಗಳೆಲ್ಲಾ ನಿಮ್ಮ ಖಂಡನೆಯಿಂದಲೇ ದಾಟಿಹೋದವು. ನಮ್ಮ ವರ್ಷಗಳನ್ನು ನಿಟ್ಟುಸಿರಿನಲ್ಲಿ ಕಳೆಯುತ್ತಿದ್ದೇವೆ.
כִּי כׇל־יָמֵינוּ פָּנוּ בְעֶבְרָתֶךָ כִּלִּינוּ שָׁנֵינוּ כְמוֹ־הֶֽגֶה׃
10 ನಮ್ಮ ಜೀವನದ ದಿನಗಳು ಎಪ್ಪತ್ತು ವರ್ಷ, ಬಲದಿಂದಿದ್ದರೆ ಎಂಬತ್ತು ವರ್ಷ. ಆದಾಗ್ಯೂ ಅವುಗಳ ಉತ್ತಮ ವರ್ಷಗಳು ಕಷ್ಟವೂ ಪ್ರಯಾಸವೂ ಆಗಿವೆ. ನಮ್ಮ ದಿನಗಳು ಬೇಗ ತೀರಿಹೋಗುತ್ತವೆ. ನಾವು ಹಾರಿಹೋಗುತ್ತೇವೆ.
יְמֵֽי־שְׁנוֹתֵינוּ בָהֶם שִׁבְעִים שָׁנָה וְאִם בִּגְבוּרֹת ׀ שְׁמוֹנִים שָׁנָה וְרׇהְבָּם עָמָל וָאָוֶן כִּי־גָז חִישׁ וַנָּעֻֽפָה׃
11 ನಿಮ್ಮ ಕೋಪದ ಶಕ್ತಿಯನ್ನು ತಿಳಿದವರ‍್ಯಾರು? ನಿಮ್ಮ ಮೇಲಿನ ಭಯಭಕ್ತಿಗೆ ಕಾರಣವಾಗಿರುವ ನಿಮ್ಮ ಖಂಡನೆಯನ್ನು ಗ್ರಹಿಸುವವರ‍್ಯಾರು?
מִֽי־יוֹדֵעַ עֹז אַפֶּךָ וּכְיִרְאָתְךָ עֶבְרָתֶֽךָ׃
12 ನಾವು ಜ್ಞಾನವುಳ್ಳ ಹೃದಯವನ್ನು ಹೊಂದುವ ಹಾಗೆ, ನಮ್ಮ ದಿನಗಳನ್ನು ಲೆಕ್ಕಿಸುವುದಕ್ಕೆ ನಮಗೆ ಕಲಿಸಿಕೊಡಿರಿ.
לִמְנוֹת יָמֵינוּ כֵּן הוֹדַע וְנָבִא לְבַב חׇכְמָֽה׃
13 ಯೆಹೋವ ದೇವರೇ, ಮನಸ್ಸು ಮಾರ್ಪಡಿಸಿಕೊಳ್ಳಿರಿ. ನೀವು ಎಷ್ಟರವರೆಗೆ ಬೇಸರಗೊಳ್ಳುವಿರಿ? ನಿಮ್ಮ ಸೇವಕರ ವಿಷಯದಲ್ಲಿ ಅನುಕಂಪ ತೋರಿಸಿರಿ.
שׁוּבָה יְהֹוָה עַד־מָתָי וְהִנָּחֵם עַל־עֲבָדֶֽיךָ׃
14 ಬೆಳಿಗ್ಗೆ ನಿಮ್ಮ ಒಡಂಬಡಿಕೆಯ ಪ್ರೀತಿಯಿಂದ ನಮ್ಮನ್ನು ತೃಪ್ತಿಪಡಿಸಿರಿ. ಆಗ ನಮ್ಮ ದಿನಗಳೆಲ್ಲಾ ಉತ್ಸಾಹ ಧ್ವನಿಗೈದು ನಿಮ್ಮಲ್ಲಿ ಸಂತೋಷಪಡುವೆವು.
שַׂבְּעֵנוּ בַבֹּקֶר חַסְדֶּךָ וּֽנְרַנְּנָה וְנִשְׂמְחָה בְּכׇל־יָמֵֽינוּ׃
15 ನೀವು ನಮ್ಮನ್ನು ಬಾಧಿಸಿದಷ್ಟು ಕಾಲ ಹರ್ಷಗೊಳಿಸಿರಿ. ನಾವು ತೊಂದರೆಯನ್ನು ನೋಡಿದಷ್ಟು ವರ್ಷಗಳು ನಮ್ಮನ್ನು ಸಂತೋಷಪಡಿಸಿರಿ.
שַׂמְּחֵנוּ כִּימוֹת עִנִּיתָנוּ שְׁנוֹת רָאִינוּ רָעָֽה׃
16 ನಿಮ್ಮ ಸೇವಕರಿಗೆ ನಿಮ್ಮ ಕೃತ್ಯಗಳನ್ನು ಪ್ರಕಟಿಸಿರಿ. ಅವರ ಮಕ್ಕಳಿಗೆ ನಿಮ್ಮ ಪ್ರಭೆಯೂ ತೋರಿ ಬರಲಿ.
יֵרָאֶה אֶל־עֲבָדֶיךָ פׇעֳלֶךָ וַהֲדָרְךָ עַל־בְּנֵיהֶֽם׃
17 ನಮ್ಮ ದೇವರಾದ ಯೆಹೋವ ದೇವರ ಮೆಚ್ಚುಗೆಯು ನಮ್ಮ ಮೇಲೆ ಇರಲಿ. ನಮ್ಮ ಕೈಗಳ ಕೆಲಸವನ್ನು ಸ್ಥಿರಪಡಿಸಿರಿ. ಹೌದು, ನಮ್ಮ ಕೈಗಳ ಕೆಲಸವನ್ನು ಸ್ಥಾಪಿಸಿರಿ.
וִיהִי ׀ נֹעַם אֲדֹנָי אֱלֹהֵינוּ עָלֵינוּ וּמַעֲשֵׂה יָדֵינוּ כּוֹנְנָה עָלֵינוּ וּֽמַעֲשֵׂה יָדֵינוּ כּוֹנְנֵֽהוּ׃

< ಕೀರ್ತನೆಗಳು 90 >