< ಕೀರ್ತನೆಗಳು 91 >

1 ಮಹೋನ್ನತ ದೇವರ ಆಶ್ರಯದಲ್ಲಿ ವಾಸಿಸುವವರು ಸರ್ವಶಕ್ತರ ನೆರಳಿನಲ್ಲಿ ವಿಶ್ರಮಿಸುವರು.
יֹ֭שֵׁב בְּסֵ֣תֶר עֶלְיֹ֑ון בְּצֵ֥ל שַׁ֝דַּ֗י יִתְלֹונָֽן׃
2 “ನನ್ನ ಆಶ್ರಯವೂ, ನನ್ನ ಕೋಟೆಯೂ, ನಾನು ಭರವಸೆ ಇಡುವ ನನ್ನ ದೇವರೂ ಎಂದು ನಾನು ಯೆಹೋವ ದೇವರಿಗೆ ಹೇಳುವೆನು.”
אֹמַ֗ר לַֽ֭יהוָה מַחְסִ֣י וּמְצוּדָתִ֑י אֱ֝לֹהַ֗י אֶבְטַח־בֹּֽו׃
3 ನಿಶ್ಚಯವಾಗಿ ದೇವರು ನಿಮ್ಮನ್ನು ಬೇಡನ ಉರುಲಿನಿಂದ ರಕ್ಷಿಸುವರು. ಮರಣಾಂತಿಕವಾದ ಸಾಂಕ್ರಾಮಿಕ ರೋಗದಿಂದಲೂ ಬಿಡಿಸುವರು.
כִּ֤י ה֣וּא יַ֭צִּֽילְךָ מִפַּ֥ח יָק֗וּשׁ מִדֶּ֥בֶר הַוֹּֽות׃
4 ತಮ್ಮ ರೆಕ್ಕೆಗಳಿಂದ ನಿಮ್ಮನ್ನು ಹೊದಿಸುವರು. ದೇವರ ರೆಕ್ಕೆಗಳ ಕೆಳಗೆ ಆಶ್ರಯಿಸಿಕೊಳ್ಳುವಿರಿ. ದೇವರ ಸತ್ಯತೆಯು ನಿಮ್ಮ ಖೇಡ್ಯವೂ ಕೋಟೆಯೂ ಆಗಿರುವುದು.
בְּאֶבְרָתֹ֨ו ׀ יָ֣סֶךְ לָ֭ךְ וְתַֽחַת־כְּנָפָ֣יו תֶּחְסֶ֑ה צִנָּ֖ה וְֽסֹחֵרָ֣ה אֲמִתֹּֽו׃
5 ರಾತ್ರಿಯ ಭಯಂಕರತೆಗೆ ನೀನು ಅಂಜಬೇಕಾಗಿಲ್ಲ, ಹಗಲಿನಲ್ಲಿ ಹಾರುವ ಬಾಣಕ್ಕೂ ಹೆದರಬೇಕಾಗಿರುವುದಿಲ್ಲ.
לֹא־תִ֭ירָא מִפַּ֣חַד לָ֑יְלָה מֵ֝חֵ֗ץ יָע֥וּף יֹומָֽם׃
6 ಅಂಧಕಾರದಲ್ಲಿ ಬೆನ್ನಟ್ಟಿ ಬರುವ ವಿಪತ್ತಿಗೆ ಕಳವಳಪಡದಿರುವೆ. ಮಧ್ಯಾಹ್ನದಲ್ಲಿ ಹಾಳುಮಾಡುವ ವ್ಯಾಧಿಗೂ ನೀನು ಭಯಪಡದಿರುವೆ.
מִ֭דֶּבֶר בָּאֹ֣פֶל יַהֲלֹ֑ךְ מִ֝קֶּ֗טֶב יָשׁ֥וּד צָהֳרָֽיִם׃
7 ನಿಮ್ಮ ಪಕ್ಕದಲ್ಲಿ ಸಾವಿರ ಜನರು ಬಿದ್ದರೂ ನಿಮ್ಮ ಬಲಗಡೆಯಲ್ಲಿ ಹತ್ತು ಸಾವಿರ ಜನರು ಬಿದ್ದಾಗ್ಯೂ, ನಿಮ್ಮ ಸಮೀಪಕ್ಕೆ ಅದು ಬರುವುದಿಲ್ಲ.
יִפֹּ֤ל מִצִּדְּךָ֨ ׀ אֶ֗לֶף וּרְבָבָ֥ה מִימִינֶ֑ךָ אֵ֝לֶ֗יךָ לֹ֣א יִגָּֽשׁ׃
8 ನಿನ್ನ ಕಣ್ಣುಗಳಿಂದ ಮಾತ್ರ ನೀನು ಗಮನಿಸುವೆ. ದುಷ್ಟರಿಗೆ ಪ್ರತಿದಂಡನೆ ಆಗುವುದನ್ನು ಸಹ ನೀನು ಕಾಣುವೆ.
רַ֭ק בְּעֵינֶ֣יךָ תַבִּ֑יט וְשִׁלֻּמַ֖ת רְשָׁעִ֣ים תִּרְאֶֽה׃
9 “ಮಹೋನ್ನತ ದೇವರು ನಮ್ಮ ಆಶ್ರಯ,” ಎಂದು ಹೇಳುವದಾದರೆ, ಯೆಹೋವ ದೇವರು ನಿಮ್ಮ ನಿವಾಸವಾಗಿ ಮಾಡಿಕೊಂಡರೆ,
כִּֽי־אַתָּ֣ה יְהוָ֣ה מַחְסִ֑י עֶ֝לְיֹ֗ון שַׂ֣מְתָּ מְעֹונֶֽךָ׃
10 ಯಾವ ಕೇಡೂ ನಿಮ್ಮನ್ನು ಮುಟ್ಟದು, ಯಾವ ವಿಪತ್ತು ನಿಮ್ಮನ್ನು ಸಮೀಪಿಸುವುದಿಲ್ಲ.
לֹֽא־תְאֻנֶּ֣ה אֵלֶ֣יךָ רָעָ֑ה וְ֝נֶ֗גַע לֹא־יִקְרַ֥ב בְּאָהֳלֶֽךָ׃
11 ಏಕೆಂದರೆ ನಿನ್ನ ಎಲ್ಲಾ ಮಾರ್ಗಗಳಲ್ಲಿ ನಿನ್ನನ್ನು ಕಾಪಾಡುವುದಕ್ಕೆ ದೇವರು ತಮ್ಮ ದೂತರಿಗೆ ನಿನ್ನ ವಿಷಯವಾಗಿ ಆಜ್ಞಾಪಿಸುವರು.
כִּ֣י מַ֭לְאָכָיו יְצַוֶּה־לָּ֑ךְ לִ֝שְׁמָרְךָ֗ בְּכָל־דְּרָכֶֽיךָ׃
12 ನಿಮ್ಮ ಪಾದಗಳು ಕಲ್ಲಿಗೆ ತಗಲದಂತೆ ದೇವದೂತರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು.
עַל־כַּפַּ֥יִם יִשָּׂא֑וּנְךָ פֶּן־תִּגֹּ֖ף בָּאֶ֣בֶן רַגְלֶֽךָ׃
13 ಸಿಂಹದ ಮೇಲೆಯೂ ಸರ್ಪದ ಮೇಲೆಯೂ ನಡೆಯುವೆ. ಪ್ರಾಯದ ಸಿಂಹವನ್ನೂ ಘಟಸರ್ಪವನ್ನೂ ತುಳಿದುಬಿಡುವೆ.
עַל־שַׁ֣חַל וָפֶ֣תֶן תִּדְרֹ֑ךְ תִּרְמֹ֖ס כְּפִ֣יר וְתַנִּֽין׃
14 “ಆತನು ನನ್ನನ್ನು ಪ್ರೀತಿಸುವುದರಿಂದ ಆತನನ್ನು ಸಂರಕ್ಷಿಸುವೆನು. ಆತನು ನನ್ನ ನಾಮವನ್ನು ಸ್ವೀಕರಿಸಿದ್ದರಿಂದ ಆತನನ್ನು ಕಾಪಾಡುವೆನು.
כִּ֤י בִ֣י חָ֭שַׁק וַאֲפַלְּטֵ֑הוּ אֲ֝שַׂגְּבֵ֗הוּ כִּֽי־יָדַ֥ע שְׁמִֽי׃
15 ಆತನು ನನ್ನನ್ನು ಕರೆಯುವನು ನಾನು ಆತನಿಗೆ ಉತ್ತರಕೊಡುವೆನು. ಇಕ್ಕಟ್ಟಿನಲ್ಲಿ ನಾನು ಆತನ ಸಂಗಡ ಇದ್ದು, ಆತನನ್ನು ಘನಪಡಿಸುವೆನು.
יִקְרָאֵ֨נִי ׀ וְֽאֶעֱנֵ֗הוּ עִמֹּֽו־אָנֹכִ֥י בְצָרָ֑ה אֲ֝חַלְּצֵ֗הוּ וַֽאֲכַבְּדֵֽהוּ׃
16 ದೀರ್ಘಾಯುಷ್ಯದಿಂದ ಆತನನ್ನು ತೃಪ್ತಿಪಡಿಸಿ, ನನ್ನ ರಕ್ಷಣೆಯನ್ನು ಆತನಿಗೆ ತೋರಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.
אֹ֣רֶךְ יָ֭מִים אַשְׂבִּיעֵ֑הוּ וְ֝אַרְאֵ֗הוּ בִּֽישׁוּעָתִֽי׃

< ಕೀರ್ತನೆಗಳು 91 >