< ಕೀರ್ತನೆಗಳು 96 >
1 ಯೆಹೋವ ದೇವರಿಗೆ ಹೊಸಹಾಡನ್ನು ಹಾಡಿರಿ; ಸಮಸ್ತ ಭೂನಿವಾಸಿಗಳೇ, ಯೆಹೋವ ದೇವರಿಗೆ ಹಾಡಿರಿ.
Pjevajte Jahvi pjesmu novu! Pjevaj Jahvi, sva zemljo!
2 ಯೆಹೋವ ದೇವರಿಗೆ ಹಾಡಿರಿ, ಅವರ ನಾಮವನ್ನು ಸ್ತುತಿಸಿರಿ; ಅವರ ರಕ್ಷಣೆಯನ್ನು ದಿನಂಪ್ರತಿ ಸಾರಿ ಹೇಳಿರಿ.
Pjevajte Jahvi, hvalite ime njegovo! Navješćujte iz dana u dan spasenje njegovo,
3 ಜನಾಂಗಗಳಲ್ಲಿ ಅವರ ಘನತೆಯನ್ನೂ, ಎಲ್ಲಾ ಜನಾಂಗಗಳಲ್ಲಿ ಅವರ ಅದ್ಭುತಗಳನ್ನೂ ವಿವರಿಸಿರಿ.
kazujte poganima njegovu slavu, svim narodima čudesa njegova.
4 ಯೆಹೋವ ದೇವರು ಮಹೋನ್ನತರಾಗಿದ್ದಾರೆ, ಬಹು ಸ್ತುತಿಗೆ ಪಾತ್ರರೂ ಆಗಿದ್ದಾರೆ; ಅವರು ಎಲ್ಲಾ ದೇವರುಗಳಿಗಿಂತ ಬಹುಭಯಭಕ್ತಿಗೆ ಪಾತ್ರರಾಗಿದ್ದಾರೆ.
Velik je Jahve, hvale predostojan, strašniji od svih bogova!
5 ಏಕೆಂದರೆ ಜನಾಂಗಗಳ ದೇವರುಗಳೆಲ್ಲಾ ವಿಗ್ರಹಗಳಾಗಿವೆ; ಆದರೆ ಯೆಹೋವ ದೇವರು ಆಕಾಶಮಂಡಲವನ್ನು ನಿರ್ಮಿಸಿದವರು.
Ništavni su svi bozi naroda. Jahve stvori nebesa!
6 ಘನತೆಯೂ, ಪ್ರಭೆಯೂ ಅವರ ಮುಂದೆ ಇವೆ; ಬಲವೂ, ಸೌಂದರ್ಯವೂ ಅವರ ಪರಿಶುದ್ಧ ಸ್ಥಳದಲ್ಲಿ ಇವೆ.
Slava je i veličanstvo pred njim, (sila) i sjaj u Svetištu njegovu.
7 ಜನಾಂಗದ ಕುಟುಂಬಗಳೇ, ಯೆಹೋವ ದೇವರ ಮುಂದೆ ನೀವು ಮಹಿಮೆಯನ್ನೂ ಬಲವನ್ನೂ ಅರ್ಪಿಸಿರಿ.
Dajte Jahvi, narodna plemena, dajte Jahvi slavu i silu!
8 ಯೆಹೋವ ದೇವರ ಹೆಸರಿಗೆ ಸಲ್ಲತಕ್ಕ ಗೌರವವನ್ನು ಸಲ್ಲಿಸಿರಿ; ಕಾಣಿಕೆಯನ್ನು ತೆಗೆದುಕೊಂಡು ಅವರ ಅಂಗಳಗಳಿಗೆ ಬನ್ನಿರಿ.
Dajte Jahvi slavu imena njegova! Prinosite žrtvu i uđite u dvorove njegove,
9 ಪರಿಶುದ್ಧತೆ ಎಂಬ ಭೂಷಣದೊಡನೆ ಯೆಹೋವ ದೇವರನ್ನು ಆರಾಧಿಸಿರಿ; ಸಮಸ್ತ ಭೂನಿವಾಸಿಗಳೇ, ಅವರ ಮುಂದೆ ಭಯಪಡಿರಿ.
poklonite se Jahvi u sjaju svetosti njegove. Strepi pred njim, zemljo sva!
10 “ಯೆಹೋವ ದೇವರು ಆಳಿಕೆ ಮಾಡುತ್ತಾರೆ; ಆದ್ದರಿಂದ ಲೋಕವು ಸ್ಥಿರವಾಗಿರುವುದು, ಕದಲುವುದಿಲ್ಲ; ಅವರು ಜನರಿಗೆ ನೀತಿಯಲ್ಲಿ ನ್ಯಾಯತೀರಿಸುತ್ತಾರೆ,” ಎಂದು ಎಲ್ಲಾ ಜನಾಂಗಗಳಲ್ಲಿ ಹೇಳಿರಿ.
Nek' se govori među poganima: “Jahve kraljuje!” Svijet on učvrsti da se ne pomakne, narodima pravedno upravlja.
11 ಆಕಾಶವು ಸಂತೋಷಿಸಲಿ; ಭೂಮಿಯು ಉಲ್ಲಾಸಪಡಲಿ; ಸಮುದ್ರವೂ, ಅದರಲ್ಲಿರುವುದೆಲ್ಲವೂ ಘೋಷಿಸಲಿ.
Raduj se, nebo, i kliči, zemljo! Neka huči more i što je u njemu!
12 ಹೊಲಗಳೂ, ಅವುಗಳಲ್ಲಿರುವ ಸಮಸ್ತವೂ ಉತ್ಸಾಹಪಡಲಿ; ಆಗ ಅಡವಿಯ ಮರಗಳೆಲ್ಲಾ ಯೆಹೋವ ದೇವರ ಮುಂದೆಯೇ ಉತ್ಸಾಹಧ್ವನಿ ಮಾಡಲಿ.
Nek' se raduje polje i što je na njemu, neka klikće šumsko drveće
13 ಸಮಸ್ತ ಸೃಷ್ಟಿಯು ಯೆಹೋವ ದೇವರ ಸನ್ನಿಧಿಯಲ್ಲಿ ಹಾಡಲಿ, ಏಕೆಂದರೆ ಅವರು ಲೋಕಕ್ಕೆ ನೀತಿಯಿಂದಲೂ; ಜನರಿಗೆ ತಮ್ಮ ಸತ್ಯದಿಂದಲೂ ನ್ಯಾಯತೀರಿಸಲು ಬರುತ್ತಾರೆ.
pred Jahvom, jer dolazi, jer dolazi suditi zemlji. Sudit će svijetu u pravdi i narodima u istini svojoj.