< ಕೀರ್ತನೆಗಳು 97 >

1 ಯೆಹೋವ ದೇವರು ಆಳಿಕೆ ಮಾಡುತ್ತಾರೆ; ಭೂಮಿಯು ಉಲ್ಲಾಸಪಡಲಿ; ದ್ವೀಪಗಳ ಸಮೂಹವು ಸಂತೋಷಪಡಲಿ.
耶和華作王!願地快樂! 願眾海島歡喜!
2 ಮೇಘಗಳೂ, ಕಾರ್ಗತ್ತಲೂ ಅವರ ಸುತ್ತಲು ಇವೆ; ನೀತಿಯೂ, ನ್ಯಾಯವೂ ಅವರ ಸಿಂಹಾಸನದ ಅಸ್ತಿವಾರವಾಗಿದೆ.
密雲和幽暗在他的四圍; 公義和公平是他寶座的根基。
3 ಬೆಂಕಿಯು ಅವರ ಮುಂದೆ ಹೋಗಿ ಅವರ ವೈರಿಗಳನ್ನು ಸುತ್ತಲೂ ದಹಿಸುವುದು.
有烈火在他前頭行, 燒滅他四圍的敵人。
4 ಅವರ ಮಿಂಚುಗಳು ಲೋಕವನ್ನು ಬೆಳಗಿಸುತ್ತವೆ; ಭೂಮಿಯು ಕಂಡು ನಡುಗುತ್ತದೆ.
他的閃電光照世界, 大地看見便震動。
5 ಯೆಹೋವ ದೇವರ ಸನ್ನಿಧಿಯಲ್ಲಿ ಬೆಟ್ಟಗಳು ಕರಗುತ್ತವೆ, ಸಮಸ್ತ ಭೂಮಿಯು ಮೇಣದ ಹಾಗೆ ಕರಗುತ್ತವೆ.
諸山見耶和華的面, 就是全地之主的面,便消化如蠟。
6 ಆಕಾಶವು ಅವರ ನೀತಿಯನ್ನು ತಿಳಿಸುತ್ತದೆ; ಎಲ್ಲಾ ಜನಗಳು ಅವರ ಮಹಿಮೆಯನ್ನು ಕಾಣುತ್ತಾರೆ.
諸天表明他的公義; 萬民看見他的榮耀。
7 ವಿಗ್ರಹಗಳನ್ನು ಪೂಜಿಸಿ, ವಿಗ್ರಹಗಳಲ್ಲಿ ಹೆಮ್ಮೆ ಪಡುವವರೆಲ್ಲರು ನಾಚಿಕೆಪಡಲಿ; ಎಲ್ಲಾ ದೇವರುಗಳೇ, ಯೆಹೋವ ದೇವರನ್ನು ಆರಾಧಿಸಿರಿ!
願一切事奉雕刻的偶像、 靠虛無之神自誇的,都蒙羞愧。 萬神哪,你們都當拜他。
8 ಯೆಹೋವ ದೇವರೇ, ನಿಮ್ಮ ನ್ಯಾಯಗಳನ್ನು ಚೀಯೋನ್ ಪಟ್ಟಣವು ಕೇಳಿ ಸಂತೋಷಿಸಿತು; ಯೆಹೂದದ ಪುತ್ರಿಯರು ಸಹ ಉಲ್ಲಾಸಿಸುತ್ತಾರೆ.
耶和華啊,錫安聽見你的判斷就歡喜; 猶大的城邑也都快樂。
9 ಏಕೆಂದರೆ ಯೆಹೋವ ದೇವರೇ, ನೀವು ಸಮಸ್ತ ಭೂಮಿಯ ಮೇಲೆ ಮಹೋನ್ನತರಾಗಿದ್ದೀರಿ; ಎಲ್ಲಾ ದೇವರುಗಳ ಮೇಲೆ ನೀವು ಅತ್ಯಂತ ಮಹೋನ್ನತರಾಗಿದ್ದೀರಿ.
因為你-耶和華至高,超乎全地; 你被尊崇,遠超萬神之上。
10 ಯೆಹೋವ ದೇವರನ್ನು ಪ್ರೀತಿಸುವವರು ಕೆಟ್ಟದ್ದನ್ನು ಹಗೆ ಮಾಡುವರು; ದೇವರು ತಮ್ಮ ಭಕ್ತರ ಪ್ರಾಣಗಳನ್ನು ಕಾಪಾಡಿ, ದುಷ್ಟರ ಕೈಯೊಳಗಿಂದ ಅವರನ್ನು ಬಿಡಿಸುವರು.
你們愛耶和華的,都當恨惡罪惡; 他保護聖民的性命, 搭救他們脫離惡人的手。
11 ನೀತಿವಂತನಿಗೋಸ್ಕರ ಬೆಳಕೂ, ಯಥಾರ್ಥ ಹೃದಯದವರಿಗೋಸ್ಕರ ಅವರ ಹೃದಯದಲ್ಲಿ ಆನಂದವೂ ಇರುವುದು.
散布亮光是為義人; 預備喜樂是為正直人。
12 ನೀತಿವಂತರೇ, ಯೆಹೋವ ದೇವರಲ್ಲಿ ಸಂತೋಷಿಸಿರಿ; ದೇವರ ಪರಿಶುದ್ಧ ನಾಮವನ್ನು ಕೊಂಡಾಡಿರಿ.
你們義人當靠耶和華歡喜, 稱謝他可記念的聖名。

< ಕೀರ್ತನೆಗಳು 97 >