< ಕೀರ್ತನೆಗಳು 98 >

1 ಒಂದು ಕೀರ್ತನೆ. ಯೆಹೋವ ದೇವರಿಗೆ ಹೊಸಹಾಡನ್ನು ಹಾಡಿರಿ; ಏಕೆಂದರೆ ಅವರು ಅದ್ಭುತಗಳನ್ನು ಮಾಡಿದ್ದಾರೆ; ಅವರ ಬಲಗೈಯೂ, ಅವರ ಪರಿಶುದ್ಧ ಭುಜವು ಅವರಿಗೆ ಜಯವನ್ನು ತಂದಿವೆ.
(시) 새 노래로 여호와께 찬송하라! 대저 기이한 일을 행하사 그 오른 손과 거룩한 팔로 자기를 위하여 구원을 베푸셨도다
2 ಯೆಹೋವ ದೇವರು ತಮ್ಮ ರಕ್ಷಣೆಯನ್ನು ತಿಳಿಯಪಡಿಸಿದ್ದಾರೆ; ರಾಷ್ಟ್ರಗಳಿಗೆ ತಮ್ಮ ನೀತಿಯನ್ನು ಪ್ರಕಟಪಡಿಸಿದ್ದಾರೆ.
여호와께서 그 구원을 알게 하시며 그 의를 열방의 목전에 명백히 나타내셨도다
3 ಇಸ್ರಾಯೇಲರ ಕಡೆಗೆ ತಮ್ಮ ಪ್ರೀತಿಯನ್ನೂ, ತಮ್ಮ ಸತ್ಯತೆಯನ್ನೂ ಜ್ಞಾಪಕ ಮಾಡಿಕೊಂಡಿದ್ದಾರೆ; ಭೂಮಿಯ ಅಂತ್ಯಗಳಲ್ಲೆವೂ ನಮ್ಮ ದೇವರ ರಕ್ಷಣೆಯನ್ನು ನೋಡಿವೆ.
저가 이스라엘 집에 향하신 인자와 성실을 기억하셨으므로 땅의 모든 끝이 우리 하나님의 구원을 보았도다
4 ಸಮಸ್ತ ಭೂನಿವಾಸಿಗಳೇ, ಯೆಹೋವ ದೇವರಿಗೆ ಆನಂದಘೋಷ ಮಾಡಿರಿ. ಉತ್ಸಾಹಧ್ವನಿ ಮಾಡಿ ಸಂಗೀತದಿಂದ ಸ್ತುತಿಹಾಡಿರಿ.
온 땅이여, 여호와께 즐거이 소리할지어다! 소리를 발하여 즐거이 노래하며 찬송할지어다
5 ಯೆಹೋವ ದೇವರಿಗೆ ಕಿನ್ನರಿಯಿಂದ ಗಾನಮಾಡಿರಿ. ಕಿನ್ನರಿಯಿಂದಲೂ, ಕೀರ್ತನೆಯ ಶಬ್ದದಿಂದಲೂ ಹಾಡಿರಿ.
수금으로 여호와를 찬양하라! 수금과 음성으로 찬양할지어다!
6 ತುತೂರಿಗಳಿಂದಲೂ, ಹೌದು, ಟಗರಿನ ಕೊಂಬಿನಿಂದಲೂ ಯೆಹೋವ ರಾಜರ ಮುಂದೆ ಆನಂದಘೋಷ ಮಾಡಿರಿ.
나팔과 호각으로 왕 여호와 앞에 즐거이 소리할지어다
7 ಸಮುದ್ರವೂ, ಅದರಲ್ಲಿರುವುದೆಲ್ಲವೂ, ಲೋಕವೂ, ಅದರ ನಿವಾಸಿಗಳೂ ಪ್ರತಿಧ್ವನಿಸಲಿ.
바다와 거기 충만한 것과 그 중에 거하는 자는 다 외칠지어다
8 ನದಿಗಳು ಚಪ್ಪಾಳೆ ತಟ್ಟಲಿ. ಬೆಟ್ಟಗಳು ಒಟ್ಟುಗೂಡಿ ಆನಂದ ಕೀರ್ತನೆ ಹಾಡಲಿ.
여호와 앞에서 큰 물이 박수하며 산악이 함께 즐거이 노래할지어다
9 ಅವು ಯೆಹೋವ ದೇವರ ಮುಂದೆ ಹಾಡಲಿ, ಏಕೆಂದರೆ ಅವರು ಭೂಮಿಗೆ ನ್ಯಾಯತೀರಿಸಲು ಬರುತ್ತಾರೆ. ಅವರು ಲೋಕಕ್ಕೆ ನೀತಿಗನುಸಾರವಾಗಿಯೂ ಜನರಿಗೆ ನ್ಯಾಯಾನುಸಾರವಾಗಿಯೂ ತೀರ್ಪು ನೀಡುವರು.
저가 땅을 판단하려 임하실 것임이로다 저가 의로 세계를 판단하시며 공평으로 그 백성을 판단하시리로다

< ಕೀರ್ತನೆಗಳು 98 >