< ಪ್ರಕಟಣೆ 10 >

1 ಆಗ ನಾನು ಮತ್ತೊಬ್ಬ ಬಲಿಷ್ಠನಾದ ದೇವದೂತನು ಪರಲೋಕದಿಂದ ಇಳಿದು ಬರುವುದನ್ನು ಕಂಡೆನು. ಅವನು ಮೇಘವನ್ನು ಧರಿಸಿಕೊಂಡಿದ್ದನು. ಅವನ ತಲೆಯ ಮೇಲೆ ಮುಗಿಲ ಬಿಲ್ಲು ಇತ್ತು. ಅವನ ಮುಖವು ಸೂರ್ಯನಂತಿದ್ದು, ಅವನ ಕಾಲುಗಳು ಅಗ್ನಿಸ್ತಂಭಗಳಂತಿದ್ದವು.
And I saw a mighty agent coming down out of heaven, clothed with a cloud, and the rainbow was upon his head, and his face was like the sun, and his feet like pillars of fire,
2 ಅವನು ತನ್ನ ಕೈಯಲ್ಲಿ ತೆರೆದಿದ್ದ ಒಂದು ಚಿಕ್ಕ ಸುರುಳಿಯನ್ನು ಹಿಡಿದುಕೊಂಡಿದ್ದನು. ಅವನು ತನ್ನ ಬಲಗಾಲನ್ನು ಸಮುದ್ರದ ಮೇಲೂ ತನ್ನ ಎಡಗಾಲನ್ನು ಭೂಮಿಯ ಮೇಲೂ ಇಟ್ಟುಕೊಂಡು,
and having in his hand an opened book. And he placed his right foot upon the sea, and the left upon the earth.
3 ಸಿಂಹದ ಘರ್ಜನೆಯಂತೆ ಮಹಾ ಸ್ವರದಿಂದ ಕೂಗಿದನು. ಅವನು ಕೂಗಿದಾಗ, ಏಳು ಗುಡುಗುಗಳು ಮಾತನಾಡಿದವು.
And he cried out in a great voice as a lion roars. And when he cried out, the seven thunders uttered their voices.
4 ಏಳು ಗುಡುಗುಗಳು ಮಾತನಾಡಿದಾಗ, ನಾನು ಬರೆಯಬೇಕೆಂದಿದ್ದೆನು. ಆದರೆ ಪರಲೋಕದಿಂದ ಬಂದ ಶಬ್ದವು, “ನೀನು ಆ ಏಳು ಗುಡುಗುಗಳು ಹೇಳಿರುವುದನ್ನು ಮುದ್ರೆಹಾಕಿ ಮುಚ್ಚಿಡು. ಅದನ್ನು ಬರೆಯಬೇಡ,” ಎಂದು ಹೇಳುವುದನ್ನು ಕೇಳಿದೆನು.
And when the seven thunders uttered, I was going to write. And I heard a voice from heaven saying, Seal up what the seven thunders uttered, and do not write them.
5 ಆಗ ಸಮುದ್ರದ ಮೇಲೂ ಭೂಮಿಯ ಮೇಲೂ ನಿಂತಿರುವ ದೇವದೂತನು ತನ್ನ ಬಲಗೈಯನ್ನು ಪರಲೋಕದ ಕಡೆಗೆ ಎತ್ತಿ,
And the agent whom I saw standing upon the sea and upon the earth raised his right hand to heaven,
6 ಯುಗಯುಗಾಂತರಕ್ಕೂ ಜೀವಿಸುವವರೂ ಪರಲೋಕವನ್ನೂ ಅದರಲ್ಲಿರುವವುಗಳನ್ನೂ ಭೂಮಿಯನ್ನೂ ಸಮುದ್ರವನ್ನೂ ಅದರಲ್ಲಿರುವವುಗಳನ್ನೂ ಸೃಷ್ಟಿಸಿದವರ ಮೇಲೆ ಆಣೆ ಇಟ್ಟು ಹೇಳಿದ್ದೇನೆಂದರೆ, “ಇನ್ನು ಆಲಸ್ಯವಾಗುವುದಿಲ್ಲ! (aiōn g165)
and swore by him who lives into the ages of the ages, who created the heaven and the things in it, and the earth and the things in it, and the sea and the things in it, that time would be no more. (aiōn g165)
7 ಆದರೆ ಏಳನೆಯ ದೇವದೂತನು ತನ್ನ ತುತೂರಿಯನ್ನು ಊದಬೇಕೆಂದಿರುವ ದಿನಗಳಲ್ಲಿ ದೇವರು ತನ್ನ ಸೇವಕರಾದ ಪ್ರವಾದಿಗಳಿಗೆ ಪ್ರಕಟಿಸಿದಂತೆಯೇ, ದೇವರ ರಹಸ್ಯವು ನೆರವೇರುವುದು.”
But in the days of the voice of the seventh agent, when he is going to sound, even the mystery of God is finished, as he declared the good news to his bondmen the prophets.
8 ಆಗ ಪರಲೋಕದಿಂದ ನಾನು ಕೇಳಿದ್ದ ಧ್ವನಿಯು ಮತ್ತೊಮ್ಮೆ ನನ್ನೊಂದಿಗೆ ಮಾತನಾಡಿ, “ನೀನು ಹೋಗಿ ಸಮುದ್ರದ ಮೇಲೆಯೂ ಭೂಮಿಯ ಮೇಲೆಯೂ ನಿಂತಿರುವ ದೇವದೂತನ ಕೈಯಲ್ಲಿರುವ ತೆರೆದ ಸುರುಳಿಯನ್ನು ತೆಗೆದುಕೋ,” ಎಂದು ಹೇಳಿತು.
And the voice that I heard from heaven was again speaking with me, and saying, Go, take the little book that has been opened in the hand of the agent who stands upon the sea and upon the earth.
9 ಆಗ ನಾನು ದೇವದೂತನ ಬಳಿ ಹೋಗಿ, ಅವನನ್ನು, ಆ ಚಿಕ್ಕ ಸುರುಳಿಯನ್ನು ಕೊಡುವಂತೆ ಕೇಳಿದೆನು. ಅವನು ನನಗೆ, “ಇದನ್ನು ತೆಗೆದುಕೊಂಡು ತಿನ್ನು. ಅದು ನಿನ್ನ ಹೊಟ್ಟೆಯಲ್ಲಿ ಕಹಿಯಾಗಿರುವುದು. ಆದರೆ ನಿನ್ನ ಬಾಯಲ್ಲಿ ಅದು ಜೇನಿನಂತೆ ಸಿಹಿಯಾಗಿರುವುದು,” ಎಂದು ಹೇಳಿದನು.
And I went to the agent, telling him to give me the little book. And he says to me, Take and eat it. And it will make thy belly bitter, but it will be sweet as honey in thy mouth.
10 ನಾನು ದೇವದೂತನ ಕೈಯಿಂದ ಆ ಚಿಕ್ಕ ಸುರುಳಿಯನ್ನು ತೆಗೆದುಕೊಂಡು ತಿಂದೆನು. ಇದರ ರುಚಿಯು ನನ್ನ ಬಾಯಲ್ಲಿ ಜೇನಿನಂತೆ ಸಿಹಿಯಾಗಿತ್ತು, ಆದರೆ ನಾನು ಅದನ್ನು ತಿಂದಾಗ, ನನ್ನ ಹೊಟ್ಟೆ ಕಹಿಯಾಯಿತು.
And I took the book out of the agent's hand, and ate it. And it was sweet as honey in my mouth, and when I had eaten it, my belly was made bitter.
11 ಆಗ ನನಗೆ, “ನೀನು ಅನೇಕ ಪ್ರಜೆ, ರಾಷ್ಟ್ರ, ಜನಾಂಗ, ಭಾಷೆ ಮತ್ತು ಅರಸರ ಮುಂದೆ ಪುನಃ ಪ್ರವಾದಿಸಬೇಕು,” ಎಂದು ಹೇಳಲಾಯಿತು.
And he says to me, Thou must prophesy again against many peoples, and against nations and tongues and kings.

< ಪ್ರಕಟಣೆ 10 >