< ಪ್ರಕಟಣೆ 11 >

1 ದಂಡದಂತಿದ್ದ ಒಂದು ಅಳತೆ ಕೋಲು ನನಗೆ ಕೊಡಲಾಯಿತು. ನನಗೆ ಹೀಗೆ ಹೇಳಲಾಯಿತು: “ನೀನೆದ್ದು ದೇವರ ಆಲಯವನ್ನೂ ಬಲಿಪೀಠವನ್ನೂ ಅಳತೆಮಾಡಿ, ಆಲಯದಲ್ಲಿ ಆರಾಧನೆ ಮಾಡುವವರನ್ನು ಎಣಿಸು.
And there was given unto me a reed, like unto a staff, saying—Rise, and measure the Sanctuary of God, and the altar, and them who are doing homage therein;
2 ಆಲಯಕ್ಕೆ ಹೊರಗಿರುವ ಅಂಗಳವನ್ನು ಅಳೆಯದೆ ಬಿಟ್ಟುಬಿಡು. ಏಕೆಂದರೆ ಅದು ಯೆಹೂದ್ಯರಲ್ಲದವರಿಗಾಗಿ ಬಿಟ್ಟಿದೆ. ಅವರು ಪರಿಶುದ್ಧ ಪಟ್ಟಣವನ್ನು ನಲವತ್ತೆರಡು ತಿಂಗಳು ತುಳಿದಾಡುವರು.
and, the court that is outside the Sanctuary, cast thou outside, and do not measure, it, because it hath been given unto the nations, and, the holy city, shall they tread under foot, forty and two months.
3 ನನ್ನ ಇಬ್ಬರು ಸಾಕ್ಷಿಗಳಿಗೆ ಗೋಣಿತಟ್ಟುಗಳನ್ನು ಹೊದ್ದುಕೊಂಡು, ಸಾವಿರದ ಇನ್ನೂರ ಅರವತ್ತು ದಿನಗಳ ತನಕ ಪ್ರವಾದಿಸುವಂತೆ ಮಾಡುವೆನು,”
And I will give unto my two witnesses, that they shall prophesy, a thousand two hundred and sixty days, arrayed in sackcloth.
4 ಇವರು, “ಎಣ್ಣೆಯ ಮರಗಳೂ ಭೂಲೋಕದ ಒಡೆಯ ಆಗಿರುವವರ ಮುಂದೆ ನಿಂತಿರುವ ಎರಡು ದೀಪಸ್ತಂಭಗಳೂ ಆಗಿದ್ದಾರೆ.”
These, are the two olive-trees, and the two lamps, which, before the Lord of the earth, do stand.
5 ಇವರಿಗೆ ಯಾವನಾದರೂ ಕೇಡನ್ನುಂಟುಮಾಡಬಯಸಿದರೆ, ಇವರ ಬಾಯೊಳಗಿಂದ ಬೆಂಕಿ ಹೊರಟು, ಇವರ ಶತ್ರುಗಳನ್ನು ದಹಿಸಿಬಿಡುವುದು. ಇವರಿಗೆ ಯಾವನಾದರೂ ಕೇಡನ್ನುಂಟುಮಾಡಬಯಸಿದರೆ, ಅವನಿಗೂ ಅದೇ ರೀತಿಯಾಗಿ ಕೊಲೆಯಾಗಬೇಕು.
And, if any one, upon them, chooseth to inflict injury, fire, cometh forth out of their mouth, and devoureth their enemies; and, if anyone shall choose, upon them, to inflict injury, thus, must he be slain.
6 ತಾವು ಪ್ರವಾದಿಸುತ್ತಿರುವ ದಿನಗಳಲ್ಲಿ, ಮಳೆ ಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಇವರಿಗೆ ಇರುವುದು. ಇದಲ್ಲದೆ ಇವರಿಗೆ ಬಯಸಿದಾಗೆಲ್ಲಾ ನೀರು ರಕ್ತವಾಗುವಂತೆ ಮಾಡುವುದಕ್ಕೂ ಸಕಲ ವಿಧವಾದ ಉಪದ್ರವಗಳಿಂದ ಭೂಮಿಯನ್ನು ಬಾಧಿಸುವುದಕ್ಕೂ ಅಧಿಕಾರ ಇರುತ್ತದೆ.
These, have authority to shut heaven, in order that, no rain, be moistening in the days of their prophesying; and, authority, have they, over the waters, to be turning them into blood, and to smite the land, with any manner of plague, as often as they will.
7 ಇವರು ತಮ್ಮ ಸಾಕ್ಷಿಯನ್ನು ಹೇಳಿ ಮುಗಿಸಿದ ನಂತರ, ಪಾತಾಳದಿಂದ ಬರುವ ಮೃಗವು ಇವರ ಮೇಲೆ ಯುದ್ಧಮಾಡಿ, ಇವರನ್ನು ಜಯಿಸಿ ಕೊಲ್ಲುವುದು. (Abyssos g12)
And, as soon as they have completed their witnessing, the wild-beast that is to come up out of the abyss, will make war with them, and overcome them, and slay them. (Abyssos g12)
8 ಈ ಸಾಕ್ಷಿಗಳ ಶವಗಳು ಮಹಾ ಪಟ್ಟಣದ ಬೀದಿಯಲ್ಲಿ ಬಿದ್ದಿರುವವು. ಆ ಪಟ್ಟಣಗಳು ಸಾಂಕೇತಿಕವಾಗಿ ಸೊದೋಮ್ ಹಾಗೂ ಈಜಿಪ್ಟ್ ಎಂದೂ ಹೆಸರುಗಳಿರುವುದು. ಇವರ ಒಡೆಯ ಆಗಿರುವವರನ್ನು ಸಹ ಅಲ್ಲಿಯೇ ಶಿಲುಬೆಗೆ ಹಾಕಲಾಗಿತ್ತು.
And their dead bodies [lie] upon the broadway of the great city, the which is called, spiritually, Sodom and Egypt, where, their Lord also was crucified.
9 ಆಗ ಸಕಲ ಪ್ರಜೆ, ಕುಲ, ಭಾಷೆ, ಜನಾಂಗಗಳಿಗೆ ಸೇರಿದವರು, ಇವರ ಶವಗಳನ್ನು ಸಮಾಧಿಯಲ್ಲಿಡಲು ಅನುಮತಿಸದೆ, ಮೂರುವರೆ ದಿನಗಳವರೆಗೂ ನೋಡುತ್ತಾ ಇರುವರು.
And [some] of the peoples, and tribes, and tongues, and nations, see, their dead bodies three days and a half, and, their dead bodies, do they not suffer to be put into a tomb.
10 ಈ ಇಬ್ಬರು ಪ್ರವಾದಿಗಳು ಭೂನಿವಾಸಿಗಳನ್ನು ಪೀಡಿಸಿದ್ದರಿಂದ, ಇದರ ವಿಷಯವಾಗಿ ಭೂನಿವಾಸಿಗಳು ಸಂತೋಷಿಸಿ, ಹರ್ಷಗೊಂಡು ಒಬ್ಬರಿಗೊಬ್ಬರು ಉಡುಗೊರೆಗಳನ್ನು ಕಳುಹಿಸುವರು.
And, they who are dwelling upon the earth, rejoice over them, and make merry, and, gifts, will they send one to another, —because, these two prophets, tormented them that were dwelling upon the earth.
11 ಮೂರುವರೆ ದಿನಗಳಾದ ಮೇಲೆ ದೇವರಿಂದ ಜೀವಾತ್ಮವು ಬಂದು, ಆ ಶವಗಳಲ್ಲಿ ಪ್ರವೇಶಿಸಲು, ಅವು ಕಾಲೂರಿ ನಿಂತವು. ಅವರನ್ನು ಕಂಡವರಿಗೆ ಮಹಾ ಭಯವುಂಟಾಯಿತು.
And, after [the] three days and a half, a spirit of life from God, entered within them, and they stood upon their feet; and, great fear, fell upon them who were beholding them.
12 ಆಗ ಅವರಿಗೆ, “ಇಲ್ಲಿ ಮೇಲಕ್ಕೆ ಬನ್ನಿರಿ,” ಎಂದು ಮಹಾಧ್ವನಿಯು ಕೇಳಿಸಿತು. ಅವರು ಮೇಘದಲ್ಲಿ ಪರಲೋಕಕ್ಕೆ ಏರಿಹೋದರು. ಅವರ ಶತ್ರುಗಳು ಅವರನ್ನು ನೋಡುತ್ತಾ ಇದ್ದರು.
And they heard a loud voice out of heaven, saying unto them—Come up hither! And they went up into heaven, in the cloud, and, their enemies, beheld them.
13 ಅದೇ ಗಳಿಗೆಯಲ್ಲಿ, ಮಹಾ ಭೂಕಂಪ ಉಂಟಾಗಿ ಆ ಪಟ್ಟಣದ ಹತ್ತರಲ್ಲೊಂದು ಭಾಗವು ಬಿದ್ದುಹೋಯಿತು. ಆ ಭೂಕಂಪದಲ್ಲಿ ಏಳು ಸಾವಿರ ಮಂದಿ ಸತ್ತುಹೋದರು. ಉಳಿದವರು ಭಯಗ್ರಸ್ತರಾಗಿ ಪರಲೋಕದ ದೇವರಿಗೆ ಮಹಿಮೆಯನ್ನು ಸಲ್ಲಿಸಿದರು.
And, in that hour, there came to be a great earthquake; and, the tenth of the city, fell, and there were slain, in the earthquake, names of men—seven thousand. And, the rest, became, greatly afraid, and gave glory unto the God of heaven.
14 ಎರಡನೆಯ ವಿಪತ್ತು ಕಳೆದುಹೋಯಿತು. ಮೂರನೆಯ ವಿಪತ್ತು ಬೇಗನೆ ಬರಲಿದೆ.
The second Woe, hath passed away, —lo! the third Woe, cometh speedily.
15 ಏಳನೆಯ ದೇವದೂತನು ತುತೂರಿಯನ್ನು ಊದಿದನು. ಆಗ ಪರಲೋಕದಲ್ಲಿ ಮಹಾ ಧ್ವನಿಗಳುಂಟಾಗಿ, ಹೀಗೆ ಹೇಳಿದವು: “ಲೋಕದ ರಾಜ್ಯವು ನಮ್ಮ ದೇವರ ಮತ್ತು ಅವರಿಗೆ ಸೇರಿದ ಕ್ರಿಸ್ತ ಯೇಸುವಿನ ರಾಜ್ಯವಾಯಿತು, ಈ ಕ್ರಿಸ್ತ ಯೇಸುವೇ ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವರು.” (aiōn g165)
And, the seventh messenger, sounded; and there came to be loud voices in heaven, saying—The kingdom of the world, hath become [the kingdom] of our Lord and of his Christ, and he shall reign unto the ages of ages. (aiōn g165)
16 ತರುವಾಯ ದೇವರ ಸನ್ನಿಧಿಯಲ್ಲಿ ತಮ್ಮ ಸಿಂಹಾಸನಗಳ ಮೇಲೆ ಕುಳಿತಿದ್ದ ಇಪ್ಪತ್ನಾಲ್ಕು ಮಂದಿ ಹಿರಿಯರು ದೇವರಿಗೆ ಅಡ್ಡಬಿದ್ದು,
And, the twenty-four elders who, before God, do sit upon their thrones, fell down upon their faces, and rendered homage unto God,
17 ಹೀಗೆ ಹೇಳಿದರು: “ಕರ್ತ ಆಗಿರುವ, ಸರ್ವಶಕ್ತರಾದ ದೇವರೇ, ಮೊದಲು ಇದ್ದು ಈಗಲೂ ಇರುವವರೂ, ನೀವು ನಿಮ್ಮ ಮಹಾ ಅಧಿಕಾರವನ್ನು ಪಡೆದು ಆಳಿದ್ದರಿಂದ ನಿಮಗೆ ಕೃತಜ್ಞತೆಗಳನ್ನು ಅರ್ಪಿಸುತ್ತೇವೆ.
saying—We give thanks unto thee, O Lord God, the Almighty, Who is, and Who was; because thou hast taken thy great power, and hast become king.
18 ರಾಷ್ಟ್ರಗಳು ಕೋಪಗೊಂಡವು, ನಿಮ್ಮ ರೋಷವು ಈಗ ಬಂದಿದೆ. ಸತ್ತವರು ತೀರ್ಪು ಹೊಂದುವ ಸಮಯ ಬಂದಿದೆ. ನೀವು ನಿಮ್ಮ ಸೇವಕರಾದ ಪ್ರವಾದಿಗಳಿಗೂ ದೇವಜನರಿಗೂ ನಿಮ್ಮ ನಾಮಕ್ಕೆ ಭಯಪಡುವ ದೊಡ್ಡವರಿಗೂ ಚಿಕ್ಕವರಿಗೂ ಪ್ರತಿಫಲವನ್ನು ಕೊಟ್ಟು, ಲೋಕ ನಾಶಕರನ್ನು ದಂಡಿಸುವಿರಿ.”
And, the nations, were angered; and thine anger, came, and the fit time of the dead, to be vindicated, and to give their reward unto thy servants the prophets, and unto the saints, and unto them who revere thy name—the small and the great, and to despoil them who were despoiling the earth.
19 ಆಗ ಪರಲೋಕದಲ್ಲಿರುವ ದೇವರ ಆಲಯವು ತೆರೆಯಿತು. ದೇವರ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು. ಇದಲ್ಲದೆ ಮಿಂಚುಗಳೂ ಸಪ್ಪಳಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆಲಿಕಲ್ಲಿನ ಮಳೆಯೂ ಉಂಟಾದವು.
And the sanctuary of God which is in heaven, was opened, and the ark of his covenant in his sanctuary, appeared, and there came to be lightnings, and voices, and thunderings, and an earthquake, and great hail.

< ಪ್ರಕಟಣೆ 11 >