< ಪ್ರಕಟಣೆ 12 >
1 ಪರಲೋಕದಲ್ಲಿ ಒಂದು ಮಹಾ ಸೂಚನೆಯು ಕಾಣಿಸಿತು: ಒಬ್ಬ ಸ್ತ್ರೀಯು ಸೂರ್ಯನನ್ನು ಧರಿಸಿಕೊಂಡಿದ್ದಳು, ಆಕೆಯ ಪಾದಗಳ ಕೆಳಗೆ ಚಂದ್ರನಿದ್ದನು. ಆಕೆಯ ತಲೆಯ ಮೇಲೆ ಹನ್ನೆರಡು ನಕ್ಷತ್ರಗಳುಳ್ಳ ಒಂದು ಕಿರೀಟವಿತ್ತು.
Na nebi se objevil nápadný úkaz: Žena oděná sluncem, s měsícem pod nohama a korunou z dvanácti hvězd na hlavě.
2 ಆಕೆಯು ಗರ್ಭಿಣಿಯಾಗಿದ್ದು, ಪ್ರಸವವೇದನೆಯಿಂದ ನರಳುತ್ತಾ ಕೂಗುತ್ತಿದ್ದಳು.
Byla těhotná a sténala, protože přicházely její porodní bolesti.
3 ಪರಲೋಕದಲ್ಲಿ ಮತ್ತೊಂದು ಸೂಚನೆಯು ಕಾಣಿಸಿತು. ಕೆಂಪಾದ ಮಹಾ ಘಟಸರ್ಪವಿತ್ತು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು. ಅದರ ತಲೆಯ ಮೇಲೆ ಏಳು ಮುಕುಟಗಳಿದ್ದವು.
Vzápětí další úkaz na obloze: Veliký ohnivě zbarvený drak se sedmi hlavami a deseti rohy, na každé hlavě korunu.
4 ಅದು ತನ್ನ ಬಾಲದಿಂದ ಆಕಾಶದ ನಕ್ಷತ್ರಗಳಲ್ಲಿ ಮೂರರಲ್ಲೊಂದು ಭಾಗವನ್ನು ಎಳೆದು ಭೂಮಿಗೆ ಚೆಲ್ಲಿತು. ಹೆರುತ್ತಿದ್ದ ಆ ಸ್ತ್ರೀಯು ಹೆತ್ತ ಕೂಡಲೇ, ಆಕೆಯ ಮಗುವನ್ನು ನುಂಗಿಬಿಡಬೇಕೆಂದು ಆ ಘಟಸರ್ಪವು ಅವಳ ಮುಂದೆ ನಿಂತುಕೊಂಡಿತ್ತು.
Ocasem smetl třetinu hvězd z nebe na zem. Postavil se před ženu a číhal, aby sežral její dítě, jakmile se narodí.
5 ಆಕೆ, “ರಾಷ್ಟ್ರಗಳನ್ನು ಕಬ್ಬಿಣದ ಕೋಲಿನಿಂದ ಆಳಬೇಕಾದ” ಒಂದು ಗಂಡು ಮಗುವನ್ನು ಹೆತ್ತಳು. ಆಕೆಯ ಕೂಸು ದೇವರ ಬಳಿಗೂ ಅವರ ಸಿಂಹಾಸನದ ಬಳಿಗೂ ಎತ್ತಲಾಯಿತು.
Porodila chlapce, který má vládnout všem národům železnou rukou. Bůh však vzal to dítě a přenesl je ke svému trůnu.
6 ಆ ಸ್ತ್ರೀಯು ಅರಣ್ಯಕ್ಕೆ ಓಡಿ ಹೋದಳು. ಅಲ್ಲಿ ಆಕೆಗೆ ಸಾವಿರದ ಇನ್ನೂರ ಅರವತ್ತು ದಿನಗಳವರೆಗೆ ಪೋಷಣೆಯಾಗಬೇಕೆಂದು ದೇವರು ಸ್ಥಳವನ್ನು ಸಿದ್ಧಮಾಡಿದ್ದರು.
Žena utekla na poušť, kde ji Bůh ukrýval a pečoval o ni dvanáct set šedesát dní.
7 ಪರಲೋಕದಲ್ಲಿ ಯುದ್ಧನಡೆಯಿತು. ಮೀಕಾಯೇಲನೂ ಅವನ ದೂತರೂ ಘಟಸರ್ಪನ ಮೇಲೆ ಯುದ್ಧಮಾಡಿದರು. ಘಟಸರ್ಪನೂ ಅವನ ದೂತರೂ ಯುದ್ಧಮಾಡಿ ಸೋತುಹೋದರು.
V nebi se strhla bitva: Michael se svými anděly bojoval proti draku a jeho andělům.
8 ಅವರಿಗೆ ಸಾಕಷ್ಟು ಸಾಮರ್ಥ್ಯವಿಲ್ಲದ್ದರಿಂದ, ಪರಲೋಕದೊಳಗೆ ಅವರಿಗಿರುವ ಸ್ಥಾನವನ್ನು ಕಳೆದುಕೊಂಡರು.
Veliký drak se svou družinou byl poražen, vyhnán z nebe a svržen na zem. To je ten dávný had z ráje, nepřítel, pomlouvač a svůdce všech lidí.
9 ಭೂಲೋಕದವರನ್ನೆಲ್ಲಾ ವಂಚಿಸುತ್ತಿದ್ದ ಆ ಮಹಾ ಘಟಸರ್ಪನು ಎಂದರೆ ಪಿಶಾಚನೆಂತಲೂ ಸೈತಾನನೆಂತಲೂ ಕರೆಯಲಾದ ಪುರಾತನ ಸರ್ಪವನ್ನು ಭೂಮಿಗೆ ತಳ್ಳಲಾಯಿತು. ಅವನ ದೂತರನ್ನೂ ಅವನೊಂದಿಗೆ ತಳ್ಳಲಾಯಿತು.
10 ಆಗ ಪರಲೋಕದಲ್ಲಿ ಮಹಾಧ್ವನಿಯನ್ನು ಕೇಳಿದೆನು. ಅದು, “ರಕ್ಷಣೆಯೂ ಶಕ್ತಿಯೂ ರಾಜ್ಯವೂ ಈಗ ನಮ್ಮ ದೇವರದಾದವು. ದೇವರ ಕ್ರಿಸ್ತ ಆಗಿರುವವರ ಅಧಿಕಾರವು ಈಗ ಸ್ಥಾಪಿತವಾಯಿತು. ಹಗಲಿರುಳು ನಮ್ಮ ಸಹೋದರರ ಮೇಲೆ, ನಮ್ಮ ದೇವರ ಮುಂದೆ ದೂರು ಹೇಳುವ ದೂರುಗಾರನನ್ನು ತಳ್ಳಲಾಗಿದೆ.
Nebem zazněl mohutný hlas: „Nyní se dovršilo dílo záchrany. Bůh dokázal svoji plnou moc, nastolil svoje království a Kristus se ujal vlády. Je svržen žalobce, který dnem i nocí osočoval naše bratry před Bohem.
11 ಅವರು ಮರಣದವರೆಗೆ ತಮ್ಮ ಪ್ರಾಣವನ್ನು ಪ್ರೀತಿಸದೆ, ಕುರಿಮರಿಯಾಗಿರುವವರ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವನನ್ನು ಜಯಿಸಿದರು.
Zvítězili nad ním krví Krista, Beránka obětovaného za ně, a svým svědectvím o něm. Nemilovali svůj život natolik, aby se zalekli smrti.
12 ಆದ್ದರಿಂದ ಪರಲೋಕವೇ, ಅದರಲ್ಲಿ ವಾಸಮಾಡುವವರೇ ಹರ್ಷಗೊಳ್ಳಿರಿ. ಭೂಮಿಯೇ, ಸಮುದ್ರವೇ, ನಿಮಗೆ ದುರ್ಗತಿ! ಎನ್ನುತ್ತೇನೆ. ಏಕೆಂದರೆ, ಪಿಶಾಚನು ತನಗಿರುವ ಕಾಲವು ಕೊಂಚವೆಂದು ತಿಳಿದು, ಮಹಾ ರೋಷವುಳ್ಳವನಾಗಿ ನಿಮ್ಮ ಕಡೆಗೆ ಇಳಿದು ಬಂದಿದ್ದಾನೆ,” ಎಂಬುದಾಗಿ ಹೇಳಿತು.
Jásejte nebesa! Jásejte, vy na nebi! Ale běda zemi a moři. Vrhl se na vás ďábel a zuří – ví, jak málo času mu zbývá.“
13 ಘಟಸರ್ಪನು ತಾನು ಭೂಮಿಗೆ ತಳ್ಳಲಾಗಿರುವುದನ್ನು ಕಂಡಾಗ, ಅವನು ಗಂಡು ಮಗುವನ್ನು ಹೆತ್ತ ಸ್ತ್ರೀಯನ್ನು ಅಟ್ಟಿಸಿಕೊಂಡು ಹೋದನು.
Když se drak octl na zemi, začal pronásledovat tu ženu, která porodila toho chlapce.
14 ಆ ಸ್ತ್ರೀಯು ಅರಣ್ಯದಲ್ಲಿದ್ದ ತನ್ನ ಸ್ಥಳಕ್ಕೆ ಹಾರಿಹೋಗುವುದಕ್ಕಾಗಿ ಆಕೆಗೆ ದೊಡ್ಡ ಹದ್ದಿನ ಎರಡು ರೆಕ್ಕೆಗಳು ಕೊಡಲಾದವು. ಅಲ್ಲಿ ಆಕೆಯು ಒಂದುಕಾಲ, ಎರಡುಕಾಲ ಮತ್ತು ಅರ್ಧಕಾಲ ಸರ್ಪನಿಗೆ ಸಿಗದಂತೆ ಪೋಷಣೆ ಹೊಂದಿದಳು.
Ona však dostala orlí křídla, aby mohla uletět do pustiny, kde se před tím hadem ukrývala po tři a půl roku.
15 ಆ ಸರ್ಪನು ಪ್ರವಾಹದಿಂದ ಸ್ತ್ರೀಯನ್ನು ಸೆಳೆದುಕೊಂಡು ಹೋಗಬೇಕೆಂದು ಆಕೆಯ ಹಿಂದೆ ತನ್ನ ಬಾಯೊಳಗಿಂದ ನೀರನ್ನು ನದಿಯಂತೆ ಬಿಟ್ಟನು.
Had vychrlil z tlamy mohutný proud vody, aby ženu smetl.
16 ಆದರೆ ಭೂಮಿಯು ಆ ಸ್ತ್ರೀಗೆ ಸಹಾಯ ಮಾಡಿತು. ಅದು ಬಾಯಿತೆರೆದು, ಘಟಸರ್ಪನು ತನ್ನ ಬಾಯೊಳಗಿಂದ ಬಿಟ್ಟ ನದಿಯನ್ನು ನುಂಗಿಬಿಟ್ಟಿತು.
Země jí však přišla na pomoc: otevřela své útroby a proud pohltila.
17 ಆಗ ಘಟಸರ್ಪನು ಸ್ತ್ರೀಯ ಮೇಲೆ ಬಹುಕೋಪಗೊಂಡು, ಆಕೆಯ ಸಂತಾನದವರಲ್ಲಿ ಉಳಿದವರ ಮೇಲೆ ಎಂದರೆ, ದೇವರ ಆಜ್ಞೆಗಳನ್ನು ಕೈಗೊಂಡು ನಡೆದು, ಯೇಸುವಿನ ಸಾಕ್ಷಿಯನ್ನು ಹೊಂದಿದವರ ಮೇಲೆ ಯುದ್ಧಮಾಡುವುದಕ್ಕೆ ಹೊರಟನು.
Rozlícený drak se chtěl ženě pomstít, a tak rozpoutal boj proti jejím ostatním dětem, které zachovávají Boží přikázání a je jim svěřeno Ježíšovo poselství.