< ಪ್ರಕಟಣೆ 14 >

1 ನಾನು ನೋಡಲಾಗಿ, ಕುರಿಮರಿ ಆಗಿರುವವರು ಚೀಯೋನ್ ಪರ್ವತದ ಮೇಲೆ ನಿಂತಿದ್ದರು. ಕುರಿಮರಿಯವರ ಜೊತೆಯಲ್ಲಿ ಒಂದು ಲಕ್ಷ ನಲವತ್ನಾಲ್ಕು ಸಾವಿರ ಮಂದಿ ಇದ್ದರು. ಅವರ ಹಣೆಯ ಮೇಲೆ ಕುರಿಮರಿಯವರ ಹೆಸರೂ ಕುರಿಮರಿಯವರ ತಂದೆಯ ಹೆಸರೂ ಬರೆಯಲಾಗಿದ್ದವು.
U me k'ban ya ni vren tanba k'ri ni tu tita Shiyona. He newu inddi dubu dari ni arba'in don zya wa ba nghan inde ma ni nde tima ni chi mba.
2 ಇದಲ್ಲದೆ ಪರಲೋಕದಿಂದ ಜಲ ಪ್ರವಾಹದಂತೆಯೂ ಮಹಾ ಗುಡುಗಿನ ಶಬ್ದದಂತೆಯೂ ಇದ್ದ ಶಬ್ದವನ್ನು ಕೇಳಿದೆನು. ನಾನು ಕೇಳಿದ ಆ ಶಬ್ದವು ಕಿನ್ನರಿಗಳನ್ನು ನುಡಿಸುತ್ತಿರುವ ಕಿನ್ನರರ ಶಬ್ದದಂತಿತ್ತು.
Mi wo lanri rji ni shu na ima wa a zren ni ne na yar zan ngari i'lan wa mi wo'a ahe ba bi zi gungu ba si zi gunguba.
3 ಅವರು ಸಿಂಹಾಸನದ ಮುಂದೆಯೂ ಆ ನಾಲ್ಕು ಜೀವಿಗಳ ಮತ್ತು ಹಿರಿಯರ ಮುಂದೆಯೂ ಹೊಸಹಾಡನ್ನು ಹಾಡಿದರು. ಭೂಲೋಕದೊಳಗಿಂದ ಕೊಂಡುಕೊಳ್ಳಲಾದ ಆ ಒಂದು ಲಕ್ಷ ನಲವತ್ನಾಲ್ಕು ಸಾವಿರ ಜನರೇ ಹೊರತು ಬೇರೆ ಯಾರೂ ಆ ಹಾಡನ್ನು ಕಲಿಯಲಾರರು.
U yose sa mi ko shishi kursiyin ni koshishi (rayayyun halittun) zya'a ni bi nikon, indiori na ya koya sea na se inddi 144, 000 bi wa na kpa la chu wo ni gbugblu'a.
4 ಸ್ತ್ರೀ ಸಹವಾಸದಿಂದ ಮಲಿನರಾಗದವರು ಇವರೇ. ಏಕೆಂದರೆ ಇವರು ಕನ್ಯೆಯರಂತೆ ನಿಷ್ಕಳಂಕರು. ಕುರಿಮರಿ ಆಗಿರುವವರು ಹೋದಡೆಯಲ್ಲೆಲ್ಲಾ ಅವರ ಹಿಂದೆ ಹೋಗುವವರು ಇವರೇ. ಇವರು ಮನುಷ್ಯರೊಳಗಿಂದ ಕೊಂಡುಕೊಳ್ಳಲಾಗಿ ದೇವರಿಗೂ ಕುರಿಮರಿಯಾಗಿರುವವರಿಗೂ ಪ್ರಥಮಫಲದಂತಾದರು.
A biyi bana kpa nsi tsatsra ni mi zren u kruga. a baki ba hu vren tanban hi ko nitse wa ani hi ba kpa chuwo ni mi nddi ni ndu ba kati iwhiri mumla ni tu Rji ni vren tanban.
5 ಇವರ ಬಾಯಲ್ಲಿ ಸುಳ್ಳು ಸಿಕ್ಕಲಿಲ್ಲ. ಇವರು ನಿರ್ದೋಷಿಗಳಾಗಿದ್ದಾರೆ.
Bama to ba ni tiche ni nyu mbana, ikpi ri na sa'bana
6 ಮತ್ತೊಬ್ಬ ದೇವದೂತನು ಆಕಾಶದ ಮಧ್ಯದಲ್ಲಿ ಹಾರುತ್ತಿರುವುದನ್ನು ಕಂಡೆನು. ಭೂನಿವಾಸಿಗಳಾಗಿರುವ ಸಕಲ ರಾಷ್ಟ್ರ, ಹಿನ್ನಲೆ, ಭಾಷೆ ಹಾಗೂ ಪ್ರಜೆಗಳವರಿಗೂ ಸಾರಿ ಹೇಳುವುದಕ್ಕೆ ನಿತ್ಯ ಸುವಾರ್ತೆಯು ಅವನಲ್ಲಿತ್ತು. (aiōnios g166)
Mi to malukari asi bwa ni tsutsu shulu iwa ba ton indu ni tre ri ndindima u ka k'le na sun tutu ntru ni ndu ba hla ni bi sum ni gbu-ngbulu ni gbu ba wawu, ni lime ni inddi ba. (aiōnios g166)
7 ಅವನು, “ನೀವು ದೇವರಿಗೆ ಭಯಪಟ್ಟು ಅವರಿಗೆ ಮಹಿಮೆಯನ್ನು ಸಲ್ಲಿಸಿರಿ. ಏಕೆಂದರೆ ಅವರು ನ್ಯಾಯತೀರ್ಪು ಮಾಡುವ ಸಮಯ ಬಂದಿದೆ. ಭೂಪರಲೋಕಗಳನ್ನೂ ಸಮುದ್ರವನ್ನೂ ನೀರಿನ ಬುಗ್ಗೆಗಳನ್ನೂ ಉಂಟುಮಾಡಿದ ದೇವರನ್ನೇ ಆರಾಧಿಸಿರಿ!” ಎಂದು ಮಹಾಧ್ವನಿಯಿಂದ ಹೇಳಿದನು.
A yoba ni kikle lan “bika tisisir Rji ni kushu ni gban rju niwu. niwa iton ma u tron ye, ye hi ku shu gban rju niwu, wawu wa a ti shulu ni meme a ni teku ni zin ma.
8 ಅವನ ಹಿಂದೆ ಎರಡನೆಯವನಾದ ಒಬ್ಬ ದೇವದೂತನು ಬಂದು, “‘ಬಿದ್ದಳು, ಬಾಬಿಲೋನ್ ಮಹಾನಗರಿಯು ಬಿದ್ದಳು!’ ಆಕೆಯು ಸಕಲ ಜನಾಂಗಗಳಿಗೆ ತನ್ನ ಅತ್ಯಾಸಕ್ತಿಯ ಅನೈತಿಕತೆವೆಂಬ ದ್ರಾಕ್ಷಾರಸವನ್ನು ಕುಡಿಸಿದಳು,” ಎಂದು ಹೇಳಿದನು.
U maleka ri maleka u ha a huwu na treandi, “ajoku, Babila, ki k'le ma ajoku. wa ayo meme u lime ba wawu mba wu ndu ba so jibi utie ngwuu nghwuu”
9 ಅವರ ಹಿಂದೆ ಮೂರನೆಯವನಾದ ಒಬ್ಬ ದೇವದೂತನು ಬಂದು, “ಯಾವುದಾದರೂ ಮೃಗವನ್ನೂ ಅದರ ವಿಗ್ರಹವನ್ನೂ ಆರಾಧಿಸಿ ತನ್ನ ಹಣೆಯ ಮೇಲಾಗಲಿ, ಕೈಯ ಮೇಲಾಗಲಿ ಗುರುತು ಹಾಕಿಸಿಕೊಂಡರೆ,
U maleka utra-a hu ba ni lan gban gban na titre nddi' wa a hu Irji ri ni kpe ri kan ani kpa igbom- ni chi ma ko ni woma.
10 ಅವನೂ ಸಹ ದೇವರ ಕೋಪವೆಂಬ ಪಾತ್ರೆಯಲ್ಲಿ ಏನೂ ಬೆರೆಸದೆ ಹಾಕಿದ ಅವರ ಕೋಪವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೇವದೂತರ ಮುಂದೆಯೂ ಕುರಿಮರಿಯಾಗಿರುವವರ ಮುಂದೆಯೂ ಬೆಂಕಿಯಿಂದಲೂ ಗಂಧಕದಿಂದಲೂ ಯಾತನೆಪಡುವನು.
Wawu me ni so ni ima inabinifu u Rji ima inabin wa ba na suru ri wa ba ka zyi na suru ni Kofi u fu ma (inddi) wa a so'a ba gon ni lu ni luu hu'u babran ni shishi hi tsa tsra maleku Rji ni vren tanban.
11 ಅಂಥವರ ಯಾತನೆಯ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರುತ್ತಾ ಹೋಗುತ್ತದೆ. ಮೃಗವನ್ನು ಮತ್ತು ಅದರ ವಿಗ್ರಹವನ್ನು ಆರಾಧಿಸುವವರಿಗಾಗಲಿ, ಅದರ ಹೆಸರಿನ ಗುರುತನ್ನು ಹೊಂದಿದವರು ಹಗಲಿರುಳೂ ವಿಶ್ರಾಂತಿ ಪಡುವುದಿಲ್ಲಾ!” ಎಂದು ಮಹಾಶಬ್ದದಿಂದ ಹೇಳಿದನು. (aiōn g165)
I tsen lu u je mba a lunde ni hi shu tunturu hi ni tunturu, uba na he mi kusi na ichu ni Rji bi hu meme nama rju ni yuma (siffarsa) ni bi wa ba kpa gbam inde ma. (aiōn g165)
12 ಇದಕ್ಕಾಗಿಯೇ ದೇವರ ಆಜ್ಞೆಗಳನ್ನೂ ಯೇಸುವಿನಲ್ಲಿ ನಂಬಿಕೆಯನ್ನೂ ಕಾಪಾಡುವ ದೇವಜನರ ತಾಳ್ಮೆಯ ಸಹಿಷ್ಣುತೆ ಇದರಲ್ಲಿದೆ.
Iwayi ahi yo u vu sonron gbron gon ni hi wa ba he tsatsra. bi wa ba hu du u Rji ni yo sonron ni Yesu.
13 ಪರಲೋಕದಿಂದ ಒಂದು ಧ್ವನಿಯು ನನಗೆ, “ಇಂದಿನಿಂದ ಕರ್ತರಲ್ಲಿ ವಿಶ್ವಾಸವುಳ್ಳವರು ಧನ್ಯರು ಎಂಬುದಾಗಿ ಬರೆ!” ಎಂದು ಹೇಳಿತು. ಅದಕ್ಕೆ ಪವಿತ್ರಾತ್ಮ ದೇವರು, “ಹೌದು, ಅವರ ಪ್ರಯಾಸಗಳು ತೀರಿದವು ಅವರಿಗೆ ವಿಶ್ರಾಂತಿಯಾಗುವುದು, ಅವರ ಕೃತ್ಯಗಳು ಅವರನ್ನು ಹಿಂಬಾಲಿಸುತ್ತವೆ!” ಎಂದು ಹೇಳುತ್ತಾರೆ.
Miwo lan Rji ni shu ni tre andi “nha wa yi “babi lulu hi kwu wa ba kwu ni ubangiji” a hi Brji” e niwa ba kusi ni ya mba, niwa indu mba ni huba”
14 ನಾನು ನೋಡಲಾಗಿ, ಒಂದು ಬಿಳಿ ಮೇಘವನ್ನೂ ಆ ಮೇಘದ ಮೇಲೆ ಮನುಷ್ಯಪುತ್ರರಂತೆ ಒಬ್ಬರು ಕುಳಿತಿರುವುದನ್ನು ಕಂಡೆನು. ಅವರ ತಲೆಯ ಮೇಲೆ ಚಿನ್ನದ ಕಿರೀಟವೂ ಆತನ ಕೈಯಲ್ಲಿ ಹರಿತವಾದ ಕುಡುಗೋಲೂ ಇದ್ದವು.
Mi ya nito kpalu kiklan a kuson ni tu kpalu u inddi ri he na vren nddi a nyen pri zinariya ni tuma ni Rji u rima niwoma.
15 ಆಗ ಮತ್ತೊಬ್ಬ ದೂತನು ದೇವಾಲಯದೊಳಗಿಂದ ಬಂದು ಮೇಘದ ಮೇಲೆ ಕುಳಿತಿದ್ದವರಿಗೆ, “ಭೂಮಿಯ ಪೈರು ಮಾಗಿದೆ. ಕೊಯ್ಯುವ ಕಾಲ ಬಂದಿರುವುದರಿಂದ, ನಿನ್ನ ಕುಡುಗೋಲನ್ನು ಹಾಕಿ ಕೊಯ್ಯಿ!” ಎಂದು ಮಹಾಧ್ವನಿಯಿಂದ ಕೂಗಿದನು.
U maleka ri rju rji ni haikalin na yo gu wa a sun ni kpalu, a gban, gban' me “bam Riji me ni soma han iton u nham a tsra ye, niwa bi gbungbunlu ba a weri ye”.
16 ಮೇಘದ ಮೇಲೆ ಕುಳಿತಿದ್ದವರು ತಮ್ಮ ಕುಡುಗೋಲನ್ನು ಭೂಮಿಯ ಮೇಲೆ ಹಾಕಿದರು. ಆಗ ಭೂಮಿಯ ಪೈರು ಕೊಯ್ಯಲಾಯಿತು.
U nddi wa a sun nitu kpalu'a a ta Rji yo ni tugbulu'a.
17 ಮತ್ತೊಬ್ಬ ದೂತನು ಪರಲೋಕದಲ್ಲಿರುವ ದೇವಾಲಯದೊಳಗಿಂದ ಬಂದನು. ಅವನ ಬಳಿಯೂ ಹರಿತವಾದ ಕುಡುಗೋಲು ಇತ್ತು.
U maleka ri la rju ni shu haikali, wawu me ahe ni Riji u ri pipreme.
18 ತರುವಾಯ ಬೆಂಕಿಗೆ ಅಧಿಕಾರಿಯಾದ ಇನ್ನೊಬ್ಬ ದೂತನು ಬಲಿಪೀಠದ ಬಳಿಯಿಂದ ಬಂದು, ಆ ಹರಿತವಾದ ಕುಡುಗೋಲಿನವನಿಗೆ, “ನಿನ್ನ ಹರಿತವಾದ ಕುಡುಗೋಲನ್ನು ಹಾಕಿ, ಭೂಮಿಯ ದ್ರಾಕ್ಷಿಯ ಗೊಂಚಲುಗಳನ್ನು ಕೊಯ್ಯಿ. ಅದರ ಹಣ್ಣುಗಳು ಪೂರ್ತಿಯಾಗಿ ಮಾಗಿವೆ!” ಎಂದು ಮಹಾಧ್ವನಿಯಿಂದ ಕೂಗಿದನು.
U maleka ri rju rji ni bagadin u gon tulare iwa ahe ni gbengbele ni tu lu na yo nddi wa'a nji Riji u ri ma gban'gban me “ban rji u ri ni hi kon weweri innabi ni chin inabi'ugbungbunlu'a, ni wa inabi a weri”
19 ಆಗ ಆ ದೂತನು ತನ್ನ ಕುಡುಗೋಲನ್ನು ಭೂಮಿಗೆ ಹಾಕಿ, ಭೂಮಿಯ ದ್ರಾಕ್ಷಿಹಣ್ಣನ್ನು ಕೂಡಿಸಿ, ದೇವರ ಕೋಪವೆಂಬ ದೊಡ್ಡ ದ್ರಾಕ್ಷಿಯ ತೊಟ್ಟಿಯಲ್ಲಿ ಹಾಕಿದನು.
Maleka a ta rijima yo ni gbungbuulu na kon inabi shuti u gbun gbulu'a na ka ba suru ni kikle bubu wa ba shibi ima inabi u fu Rji.
20 ಆಗ ಪಟ್ಟಣದ ಹೊರಗೆ ದ್ರಾಕ್ಷಿಯ ತೊಟ್ಟಿಯನ್ನು ತುಳಿಯಲಾಯಿತು. ಆ ತೊಟ್ಟಿಯೊಳಗಿಂದ ರಕ್ತವು ಹೊರಟು, ಕುದುರೆಗಳ ಕಡಿವಾಣವನ್ನು ಮುಟ್ಟುವಷ್ಟು ಮುನ್ನೂರು ಕಿಲೋಮೀಟರ್ ದೂರ ಹರಿಯಿತು.
U ba chan bubu wa ba shibi inabin ni kogon ni gbu, u iyi si gukbon rji ni bubu u shibi inabin, a tsara igbron rji rji u lo nyu in hama, ha mi dari hari.

< ಪ್ರಕಟಣೆ 14 >